Breaking News

Yearly Archives: 2022

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರವೇ ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ …

Read More »

BJP&RSS ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಎಂದೂ ಒಪ್ಪಿಕೊಂಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಇಂದು ವಿಧಾನ ಸಭಾ ಕಲಾಪದಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಬಿಗ್ ಪೈಟ್ ನಡೆದಿದೆ. ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ ಹಾಕಿದ್ದು, ಸರ್ಕಾರಿ ನಿವಾಸದೆದುರು ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಹೃತ್ಪೂರ್ವಕವಾಗಿ ಎಂದೂ ಒಪ್ಪಿಕೊಂಡಿಲ್ಲ. ದೇವರು, ಧರ್ಮ, ದೇಶಪ್ರೇಮ, ರಾಷ್ಟಧ್ವಜ, ರಾಷ್ಟ್ರಗೀತೆ ಎಲ್ಲವೂ ಬೆಜೆಪಿ ರಾಜಕೀಯದ …

Read More »

ಫೋಟೋಶೂಟ್‍ಗೆಂದು ನದಿಗೆ ಹಾರಿ ಪ್ರಾಣ ಬಿಟ್ಟ ಯುವಕ

ಚಿಕ್ಕೋಡಿ: ಜಲಾಶಯದ ಬಳಿ ಫೋಟೋಶೂಟ್‍ಗೆ ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಆಯತಪ್ಪಿ ನದಿಯಲ್ಲಿ ಬಿದ್ದು, ಮುಳಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ಲ ಜಲಾಶಯದ ಬಳಿ ನಡೆದಿದೆ. ಜಿಹಾದ ಮಸೂದ್ ಶರೀಫ (20) ಮೃತ ಯುವಕ. ಹುಕ್ಕೇರಿ ತಾಲೂಕಿನ ಯಮಕನಮರಡಿ ನಿವಾಸಿಯಾಗಿದ್ದಾನೆ. ನೀಡಸೊಸಿ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದನು.ಇಂದು ಘಟಪ್ರಭಾ ನದಿಯ ಹಿಡಕಲ್ಲ ಜಲಾಶಯದ ಬಳಿ ಗೆಳೆಯರೊಂದಿಗೆ ಫೋಟೋಶೂಟ್ ಮಾಡಲು ಹೋಗಿದ್ದ. ಈ ವೇಳೆ ಯುವಕ ನದಿಯಲ್ಲಿ ಈಜಲು …

Read More »

ಕಾಂಗ್ರೆಸ್ ಇಂದು ಸದನದಲ್ಲಿ ಟ್ರೈಲರ್ ತೋರಿಸಿದೆ: H.D.K.

ಬೆಂಗಳೂರು : ಕಾಂಗ್ರೆಸ್ ನಾಯಕರು ಇಂದು ಸದನದ ಕಲಾಪದಲ್ಲಿ ಟ್ರೈಲರ್ ಮೂಲಕ ಮುಂದೆ 2023 ರಲ್ಲಿ ಏನಾಗುತ್ತೆ ಎಂಬುದನ್ನ ತೋರಿಸಿದ್ದಾರೆ, ಜನ ಇದರಿಂದ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿ, .ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸಬಹುದು ಎಂದು ಹೇಳಿದ್ದ ಈಶ್ವರಪ್ಪ ಅವರ ಬಗ್ಗೆ ಕಾಂಗ್ರೆಸ್ ನಾಯಕರು ನಿಲುವಳಿ ಸೀಮಿತಗೊಳಿಸಿದ್ದಾರೆ. ಜೆಡಿಎಸ್ ನಿಂದಲೂ ನಿಲುವಳಿ ಮಂಡಿಸಲಾಗಿತ್ತು. ಕಾನೂನು ಸಚಿವರು ಪ್ರತ್ಯುತ್ತರ ಕೊಟ್ಟರು. ಇದು …

Read More »

ಗೋಕಾಕ : ತಾಲೂಕಾ ಅಧ್ಯಕ್ಷರಾಗಿ ನೇಮಕಗೊಂಡ ಬಸವರಾಜ ದೇಶನೂರ ಅವರನ್ನು ಅಭಿನಂದಿಸುತ್ತಿವದು.

ಗೋಕಾಕ ಫೆ 16 : ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಬುಧವಾದಂದು ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ರಶೀದ್ ಮಕಾಂದಾರ ಅವರು ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ, ಉಪಾಧ್ಯಕ್ಷರಾಗಿ ಕೃಷ್ಣಾ ಖಾನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಖಂಡ್ರಿ, ಖಜಾಂಚಿಯಾಗಿ ಇಮ್ರಾನ್ ಗೊಟೇದ ಹಾಗೂ ಸಂಚಾಲಕರನ್ನಾಗಿ ಮುಗುಟ ಪೈಲವಾನ, ಬಸವರಾಜ ಬ್ಯಾಡರಟ್ಟಿ, ರವಿಕಾಂತ ರಾಜಾಪೂರ ನೇಮಕಮಾಡಲಾಗಿದೆ. …

Read More »

ಪೊಲೀಸ್ ಪೇದೆ ದಾಂಪತ್ಯದಲ್ಲಿ ಕಲಹ – ಪತ್ನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ-ಹೆಂಡತಿ ಜಗಳವಾಡಿದ್ದು, ಪರಿಣಾಮ ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಸುರೇಂದ್ರ ಅವರ ಪತ್ನಿ ಸ್ನೇಹಾ(25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸುರೇಂದ್ರ ಸಹ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಸ್ತುತ ಸುರೇಂದ್ರ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ಸ್ನೇಹಾ ಮೃತದೇಹವನ್ನು ಚಿಕ್ಕಬಳ್ಳಾಪುರ …

Read More »

ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಗಾಯಕಿ ಸಂಧ್ಯಾ ಮುಖರ್ಜಿ ನಿಧನ

ಕೋಲ್ಕತ್ತಾ: ಹಿರಿಯ ಗಾಯಕಿ ಸಂಧ್ಯಾ ಮುಖೋಪಾಧ್ಯಾಯ ಎಂದೇ ಚಿರಪರಿಚಿತರಾಗಿರುವ, ಲೆಜೆಂಡರಿ ಬೆಂಗಾಲಿ ಗಾಯಕಿ ಸಂಧ್ಯಾ ಮುಖರ್ಜಿ ನಿಧನರಾಗಿದ್ದಾರೆ. ಸಂಧ್ಯಾ ಮುಖರ್ಜಿ ಇಂದು ಸಂಜೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಅವರು ದಾಖಲಾಗಿದ್ದ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೋವಿಡ್ -19 ಪಾಸಿಟಿವ್ ಬಂದಿತ್ತು. ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಹೃದಯದ ಕಾಯಿಲೆ, ಬಹು-ಅಂಗಾಂಗಗಳ ವೈಫಲ್ಯ ಮೂಳೆಯಲ್ಲಿ ಮುರಿತವಾಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು …

Read More »

ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

ಚಂಡೀಗಢ: ಉತ್ತರಪ್ರದೇಶ, ಬಿಹಾರದವರನ್ನು ಪಂಜಾಬ್‍ಗೆ ಪ್ರವೇಶಿಸಲು ಬಿಡಬೇಡಿ ಎಂಬ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿಕೆಗೆ ಬಿಜೆಪಿ ಹಾಗೂ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ. ಉತ್ತರಪ್ರದೇಶ ಮತ್ತು ಬಿಹಾರದ ಜನರನ್ನು ಪಂಜಾಬ್‍ನ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವಮಾನಿಸಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು …

Read More »

13 ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವನ್ನು ಎಸೆಗಿ 8 ವಿದ್ಯಾರ್ಥಿಯನ್ನು ಗರ್ಭಿಣಿಮಾಡಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ!

ಜಕಾರ್ತ: ಶಿಕ್ಷಕನೊಬ್ಬನು 13 ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವನ್ನು ಎಸೆಗಿ 8 ವಿದ್ಯಾರ್ಥಿಯನ್ನು ಗರ್ಭಿಣಿ ಮಾಡಿರುವ ಭಯಾನಕ ಘಟನೆ ಇಂಡೋನೇಷ್ಯಾದ ಧಾರ್ಮಿಕ ಬೋರ್ಡಿಂಗ್ ಶಾಲೆಯಲ್ಲಿ ನಡೆದಿದ್ದು, ಆರೋಪಿಯು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ. ಹೆರ್ರಿ ವಿರಾವನ್(36) ಆರೋಪಿ. ಈತ ತನ್ನ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಸ್ಕಾಲರ್‍ಶಿಪ್ ಸೇರಿ ಇನ್ನಿತರ ಆಮಿಷ ಒಡ್ಡುತ್ತಿದ್ದ. ಹೀಗಾಗಿ ಸ್ವಲ್ಪ ಬಡವರಾದವರು ತಮ್ಮ ಮಕ್ಕಳನ್ನು ಅಲ್ಲಿಯೇ ಸೇರಿಸಲು ಮುಂದಾಗುತ್ತಿದ್ದರು. ಇದರಿಂದಲೇ ಈ 13 ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ್ದು, …

Read More »

ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್

ನವದೆಹಲಿ: ಗ್ರಾಹಕರ ಸೇವೆಯಲ್ಲಿ ಏರ್ ಇಂಡಿಯಾ ಅತ್ಯುತ್ತಮವಾಗಬೇಕೆಂದು ನಾವು ಬಯಸುತ್ತೇವೆ. ಏರ್ ಇಂಡಿಯಾ ವಿಶ್ವದಲ್ಲೇ ತಾಂತ್ರಿಕವಾಗಿ ಮುಂದುವರಿದ ಸಂಸ್ಥೆಯಾಗಬೇಕೆಂದು ನಾವು ಬಯಸುತ್ತೇವೆ ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಕರನ್ ತಿಳಿಸಿದ್ದಾರೆ. ಚಂದ್ರಶೇಖರನ್ ಇತ್ತೀಚೆಗೆ ಸಂದೇಶವನ್ನು ನೀಡಿದ್ದು, ಏರ್ ಇಂಡಿಯಾವನ್ನು ವಿಶ್ವ ದರ್ಜೆಗೆ ತರಲು ಟಾಟಾ ಗ್ರೂಪ್ ಬದ್ಧವಾಗಿದೆ. ಗ್ರಾಹಕರ ಸೇವೆಯಲ್ಲಿ ಏರ್ ಇಂಡಿಯಾವನ್ನು ಅತ್ಯುತ್ತಮವಾಗಿಸಲು ಕಂಪನಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ. ಏರ್ ಇಂಡಿಯಾವನ್ನು ಜನವರಿ 27ರಂದು ಟಾಟಾ ಗ್ರೂಪ್‌ಗೆ …

Read More »