ಬೆಳಗಾವಿ : ಮನುಷ್ಯ ಭೂಮಿಯ ಮೇಲೆ ಹುಟ್ಟಿದ ಮೇಲೆ ತಂದೆ-ತಾಯಿಗಳು, ಗುರು, ಸಮಾಜದ ಋಣಗಳನ್ನು ತೀರಿಸಬೇಕು ಎಂದು ಕೆಆರ್‌ಇ ಸಂಸ್ಥೆಯ ಹೈಸ್ಕೂಲ್ ನಿವೃತ್ತಿ ಶಿಕ್ಷಕರಾದ ಸಿ.ಎಂ ಹಿರೇಮಠ್ ಅವರು ಹೇಳಿದರು. ಭಾನುವಾರ(ಡಿ.25) ಕಾಗವಾಡ ತಾಲೂಕಿನ ಐನಾಪುರ ಪಟ್ಟಣದ ವಿಶ್ವನಾಥ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಕೆ ಆರ್ ಇ ಎಸ್ ಸಂಸ್ಥೆಯ ಹೈಸ್ಕೂಲ್‌ನ 1996-97ನೇ ಸಾಲಿನ ಎಸ್ಸೆಸ್ಸೆಲ್ಸಿ ಬ್ಯಾಚಿನ 25ನೇ ಬೆಳ್ಳಿ ಹಬ್ಬ, ಗುರುವಂದನಾ ಹಾಗೂ ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮವನ್ನು ಉದ್ಗಾಟಿಸಿ, …
Read More »Yearly Archives: 2022
ಪರಿಷತ್ ಸದಸ್ಯರಿಗೆ ತಲಾ ₹ 25 ಕೋಟಿ ಅನುದಾನಕ್ಕೆ ಪ್ರಕಾಶ ಹುಕ್ಕೇರಿ ಆಗ್ರಹ
ಬೆಳಗಾವಿ: ವಿಧಾನ ಪರಿಷತ್‌ನ ಎಲ್ಲ ಸದಸ್ಯರಿಗೂ ಅಭಿವೃದ್ಧಿ ಕಾಮಗಾರಿಗಳಿಗಾಗಿ ತಲಾ ₹ 25 ಕೋಟಿ ಅನುದಾನ ನೀಡಬೇಕು ಎಂದು ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ವಿಧಾನ ಪರಿಷತ್‌ನಲ್ಲಿ ಸೋಮವಾರ ಒತ್ತಾಯಿಸಿದರು. ಪ್ರಶ್ನೋತ್ತರ ಕಲಾಪದ ಬಳಿಕ ವಿಷಯ ಪ್ರಸ್ತಾಪಿಸಿದ ಅವರು, ‘ವಿಧಾನಸಭೆಯ ಸದಸ್ಯರಿಗೆ ತಲಾ ₹ 50 ಕೋಟಿಯವರೆಗೂ ಅನುದಾನ ನೀಡಲಾಗಿದೆ. ಆದರೆ, ವಿಧಾನ ಪರಿಷತ್ ಸದಸ್ಯರಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ಅನುದಾನ ಒದಗಿಸಿಲ್ಲ. ಇದರಿಂದ ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು …
Read More »ನಗರದ ಜನತೆಗೆ ಗುಡ್ ನ್ಯೂಸ್: ವಸತಿ ಯೋಜನೆ ಸಹಾಯಧನ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ
ಬೆಳಗಾವಿ(ಸುವರ್ಣಸೌಧ): ವಸತಿ ಯೋಜನೆ ಸಹಾಯಧನ ಮೊತ್ತ ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕೆ.ಜಿ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವಿವಿಧ ವಸತಿ ಯೋಜನೆಗಳಡಿ ಮನೆ ನಿರ್ಮಿಸಿಕೊಳ್ಳಲು ಅರ್ಹ ಫಲಾನುಭವಿಗಳಿಗೆ ನೀಡುತ್ತಿರುವ ಸಹಾಯಧನದ ಮೊತ್ತವನ್ನು ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷ ರೂ. ಹಾಗೂ ನಗರ ಪ್ರದೇಶದಲ್ಲಿ 5 ಲಕ್ಷ ರೂ.ಗೆ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ರಾಜ್ಯ …
Read More »ಮುಂಬಯಿಯಲ್ಲಿ ಎಷ್ಟು ಮರಾಠಿ ಭಾಷಿಕರಿದ್ದಾರೆಂದು ಠಾಕ್ರೆ ನೋಡಲಿ: ಅಶ್ವಥ ನಾರಾಯಣ ತಿರುಗೇಟು
ಹುಬ್ಬಳ್ಳಿ: ರಾಜ್ಯದ ಕೆಲವು ಪ್ರದೇಶಗಳನ್ನು ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಮುಂಬಯಿಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಇದನ್ನು ನಾವು ಪ್ರಶ್ನಿಸಿದರೆ ಅವರಿಗೇ ಸಮಸ್ಯೆಯಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಕೆ. ಅಶ್ವತ್ಥನಾರಾಯಣ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿವಿವಾದ ಮುಗಿದ ಅಧ್ಯಾಯ. ಆಗಾಗ ಈ ವಿಚಾರ ತೆಗೆಯುತ್ತ ಅವರಿಗೂ, ಜನರಿಗೂ ಸಮಸ್ಯೆ ತಂದಿಡುತ್ತಿದ್ದಾರೆ. …
Read More »ಸುವರ್ಣಸೌಧಕ್ಕೆ ನುಗ್ಗಲು ಪ್ರತಿಭಟನಾನಿರತ ವಕೀಲರ ಯತ್ನ: ಪೊಲೀಸರೊಂದಿಗೆ ನೂಕಾಟ-ತಳ್ಳಾಟ
ಬೆಳಗಾವಿ: ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಸಂಘದಿಂದ ನಡೆದಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಾರೆ ಈ ವೇಳೆ ರಾಷ್ಟ್ರೀಯ ಹೆದ್ದಾರಿ ಮೇಲೆ ಕಿಲೋಮೀಟರ್ ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿದೆ. ಸುವರ್ಣ ವಿಧಾನಸೌಧದ ಗೇಟಿನೆದುರು ವಕೀಲರು ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಗೇಟ್ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಗೇಟ್ ಮುಂದೆ ನೂಕುನುಗ್ಗಲು ನಡೆದಿದ್ದು, ತಳ್ಳಾಟ …
Read More »ಈಗಾಗಲೇ ಮಹಾಜನ ವರದಿ ಇತ್ಯರ್ಥ : ಸಿದ್ದರಾಮಯ್ಯ
ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸಿ ಕಾಂಗ್ರೆಸ್ ಸಿ ಎಲ್ ಪಿ ಅದ್ಯಕ್ಷ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಈಗಾಗಲೇ ಮಹಾಜನ್ ಆಯೋಗ ವರದಿ ಇತ್ಯರ್ಥ ಆಗಿದೆ ಆದರೆ ಮಹಾರಾಷ್ಟ್ರ ಸರ್ಕಾರ ನಮಗೆ ಸೇರಬೇಕು ಎಂದು ನಿರ್ಣಯ ಮಾಡಿದರೆ ಅದಕ್ಕೆ ಕಾನೂನು ಬಲ ಇಲ್ಲಾ, ನಾವು ನಮ್ಮ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಮಹಾರಾಷ್ಟ್ರ ವಿಧಾನಸಭೆ ನಿರ್ಣಯಕ್ಕೆ ಕವಡೆ ಕಾಸಿನಕಿಮ್ಮತ್ತು ಇಲ್ಲ ಎಂದರು.
Read More »ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕ
ಪಣಜಿ: ರಜೆ ಇದ್ದ ಕಾರಣಕ್ಕೆ ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಗೋವಾದಲ್ಲಿ ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಬಸ್ …
Read More »ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ಒಂದಿಂಚೂ ಜಾಗ ಕೊಡುವುದಿಲ್ಲ ಎಂದ ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ
ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ಒಂದಿಂಚೂ ಜಾಗ ಕೊಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ಹೇಳಿದರು. ಮಹಾರಾಷ್ಟ್ರ ರಾಜ್ಯದವರು ವಿನಾಕಾರಣ ರಾಜಕೀಯ ದುರುದ್ದೇಶದಿಂದ ಹೀಗೆ ಮಾಡ್ತಾ ಇದ್ದಾರೆ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಒಂದಿಂಚೂ ಜಾಗ ಕೂಡ ಮಹಾರಾಷ್ಟ್ರಕ್ಕೆ ಹೋಗೋದು ಸಾಧ್ಯವಿಲ್ಲ ಎಂದು ಮಾದ್ಯಮಗಳಿಗೆ ಮಾಹಿತಿ ನೀಡಿದರು.
Read More »ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು”ಎಂದ ಏಕನಾಥ ಶಿಂಧೆ
ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ, ಭಾಲ್ಕಿ ಸಹಿತ ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು”ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ ಸರ್ವಾನುಮತದ ನಿರ್ಣಯವನ್ನು ಇಂದು ಮಂಗಳವಾರ ಮಧ್ಯಾಹ್ನ ಮಹಾರಾಷ್ಟ್ರದ ನಾಗ್ಪೂರದಲ್ಲಿ ನಡೆದಿರುವ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಅಧಿವೇಶನದಲ್ಲಿ ಗಡಿವಿವಾದ ಕುರುತು ವ್ಯಾಪಕ ಚರ್ಚೆ ನಡೆಯಿತು. ಮಹತ್ವದ ಅಂಶಗಳು ಇಲ್ಲಿವೆ; 1) ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಕರ್ನಾಟಕದ ಗಡಿಭಾಗದಲ್ಲಿ ನಡೆದ ಚಳವಳಿಯಲ್ಲಿ ಮಡಿದ ಮರಾಠಿ ಭಾಷಿಕರನ್ನು ಹುತಾತ್ಮರೆಂದು ಪರಿಗಣಿಸಿ …
Read More »ಪೋಲಿಸ್ ಇನ್ಸಪೇಕ್ಟರ ರನ್ನು ಗದರಿಸಿದ ಶಾಸಕ
ಸುವರ್ಣಸೌಧ ವಿ ಐ ಪಿ ಗೇಟ ಮುಂದೆ ನಿಂತಿದ್ದ ಕುಣಿಗಲ್ ಶಾಸಕ ರಂಗನಾಥ ಮತ್ತು ಅವರ ಸಂಗಡಿಗರನ್ನು ಪೋಲಿಸ್ ಇನ್ಸಪೇಕ್ಟರ ದೂರು ಸರಿಯಿರಿ ಎಂದು ಗದರಿಸಿದರು ಕೂಡಲೇ ಗರಂ ಆದ ಶಾಸಕ ರಂಗನಾಥ ಇನ್ಸಪೇಕ್ಟರ ರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತಗೆದುಕೊಂಡರು. ನನಗೆ ನೀವು ಯಾರು ಎಂದು ಗೊತ್ತಾಗಿಲ್ಲಾ ಎಂದು ಇನ್ಸಪೇಕ್ಟರ, ಗೋತ್ತಾಗದಿದ್ದರೆ ಗೋತ್ತು ಮಾಡಿಕೋಳ್ಳ ಬೇಕು , ಎಲ್ಲಾ ಶಾಸಕರನ್ನು ಹೀಗೆ ಕೇಳ್ತಿರಾ ಎಂದು ಗದರಿಸಿದರು.
Read More »