ಬೆಳಗಾವಿ: ಲಂಚ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲೇ ಸಿಕ್ಕಿಬಿದ್ದ ಚನ್ನಮ್ಮನ ಕಿತ್ತೂರು ತಹಶೀಲ್ದಾರ್ ಮನೆ ಹಾಗೂ ಕಚೇರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ತಡರಾತ್ರಿಯೂ ಜಾಲಾಡಿದರು. ಹಲವು ದಾಖಲೆಗಳು ಹಾಗೂ ₹10 ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ ಅವರ ಮನೆಯಲ್ಲಿ ರಾತ್ರಿಯಿಡೀ ಶೋಧಕಾರ್ಯ ನಡೆಸಲಾಯಿತು. ಆರೋಪಿಗಳು ಬೆಳಗಾವಿಗೆ: ಶುಕ್ರವಾರ ₹2 ಲಕ್ಷ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಗುಮಾಸ್ತ …
Read More »Yearly Archives: 2022
ಗೋಕಾಕ ತಾಲೂಕಿನ ಖನಗಾವ ಗ್ರಾಮದ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅ ನ್ನಸಂತರ್ಪಣೆ ಕಾರ್ಯ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಖನಗಾವ ಗ್ರಾಮದ ಡಿ. ಜೀ. ಹಟ್ಟಿಯ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ವಿಧಾನಸಭಾ ಚುನಾವಣೆ: ಸಮಾವೇಶಗಳತ್ತ ಜನರ ನಿರಾಸಕ್ತಿ, ಚಿಂತೆಯಲ್ಲಿ ಬಿಜೆಪಿ!
ರಾಜ್ಯದಲ್ಲಿ ಬಿಜೆಪಿ ಆಯೋಜಿಸಿದ್ದ ಹಲವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಜನರ ಹಾಜರಾತಿ ಕಡಿಮೆಯಾಗಿರುವುದು ಪಕ್ಷವು ಚಿಂತೆಗೊಳಗಾಗುವಂತೆ ಮಾಡಿದೆ. ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಆಯೋಜಿಸಿದ್ದ ಹಲವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಜನರ ಹಾಜರಾತಿ ಕಡಿಮೆಯಾಗಿರುವುದು ಪಕ್ಷವು ಚಿಂತೆಗೊಳಗಾಗುವಂತೆ ಮಾಡಿದೆ. ಬಳ್ಳಾರಿಯಲ್ಲಿ ನಡೆದ ಪಕ್ಷದ ಎಸ್ಸಿ/ಎಸ್ಟಿ ಸಮಾವೇಶದಲ್ಲಿ ಜನಸಂದಣಿ ನಿರೀಕ್ಷೆಗಿಂತ ಐದನೇ ಒಂದು ಭಾಗಕ್ಕಿಂತ ಕಡಿಮೆ ಇತ್ತು. ನಿರೀಕ್ಷಿತ ಸಂಖ್ಯೆ ಸುಮಾರು 3 ರಿಂದ 4 ಲಕ್ಷದಷ್ಟಿದ್ದರೆ, 60,000 ಕ್ಕಿಂತ ಕಡಿಮೆ ಜನರು ಸಮಾವೇಶದಲ್ಲಿ ಹಾಜರಿದ್ದರು. …
Read More »ನಿಪ್ಪಾಣಿ, ಬೆಳಗಾವಿ ಬಿಟ್ಟುಕೊಟ್ಟರೆ, ಕೆಲ ಪ್ರದೇಶ ಕೊಡಲು ಯೋಚಿಸಬಹುದು: ಪವಾರ್
ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಎನ್‌ಸಿಪಿ ವರಿಷ್ಠ ಶರದ್ ಪವಾರ್, ‘ನಿಪ್ಪಾಣಿ, ಬೆಳಗಾವಿ ಸೇರಿದಂತೆ ಕೆಲ ಊರುಗಳನ್ನು ಬಿಟ್ಟು ಕೊಡಲು ಕರ್ನಾಟಕ ಒಪ್ಪಿದರೆ, ಅದಕ್ಕೆ ಪ್ರತಿಯಾಗಿ ಕೆಲ ಪ್ರದೇಶಗಳನ್ನು ಬಿಟ್ಟು ಕೊಡುವ ಬಗ್ಗೆ ನಾವೂ ಯೋಚಿಸಬಹುದು’ ಎಂದು ಹೇಳಿದ್ದಾರೆ. ‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದಿಂದ ಬಿಜೆಪಿ ಪಲಾಯನ ಮಾಡಲು ಸಾಧ್ಯವಿಲ್ಲ’ ಎಂದೂ ಅವರು ಪ್ರತಿಪಾದಿಸಿದರು. ವಿರೋಧ ಪಕ್ಷಗಳ ಈ ಟೀಕೆಗಳಿಗೆ ತಿರುಗೇಟು ನೀಡಿರುವ ಉಪಮುಖ್ಯಮಂತ್ರಿ …
Read More »ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮತ್ತೊಂದು ಗುಡ್ ನ್ಯೂಸ್ : 1,915 ಕೋಟಿ ರೂ. `GST’ ಹಣ ಬಿಡುಗಡೆ
ನವದೆಹಲಿ: ಕೇಂದ್ರ ಸರ್ಕಾರವು 2022 ರ ಏಪ್ರಿಲ್ ನಿಂದ ಜೂನ್ ವರೆಗಿನ ಉಳಿದ ಜಿಎಸ್ಟಿ ಪರಿಹಾರಕ್ಕಾಗಿ ನವೆಂಬರ್ 25 ರಂದು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2022-23ನೇ ಸಾಲಿನಲ್ಲಿ ಮೇಲೆ ತಿಳಿಸಿದ ಮೊತ್ತ ಸೇರಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ ಬಿಡುಗಡೆಯಾದ ಒಟ್ಟು ಪರಿಹಾರದ ಮೊತ್ತ ಈಗ 1,15,662 ಕೋಟಿ ರೂ ಆಗಿದೆ. ಇದೇ ವೇಳೆಕರ್ನಾಟಕಕ್ಕೆ 1,915 ಕೋಟಿ GST ಹಣ …
Read More »ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಮರಾಠ ಅಭ್ಯರ್ಥಿಯೇ ಸಜ್ಜಾಗಿದ್ದಾರೆ.: ರಮೇಶ ಜಾರಕಿಹೊಳಿ
ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿಯಿಂದ ಮರಾಠ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಜ್ಜಾಗಿದ್ದಾರೆ. ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ ಅವರು, ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ ಮನ್ನೋಳಕರ ಅವರನ್ನು ಜತೆಗೆ ಕರೆದೊಯ್ದು ಮರಾಠ ಸಮಾಜದ ಮುಖಂಡನೆಂದು ಪರಿಚಯಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಾಠ ಸಮುದಾಯ ಮತಗಳು ನಿರ್ಣಾಯಕವಾಗಿದ್ದು, ಸುಮಾರು ಒಂದೂವರೆ ಲಕ್ಷದಷ್ಟು ಮರಾಠಿ ಮತದಾರರು ಇರುವ …
Read More »ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪ್ರಕರಣ: ತರಬೇತಿ ಕೇಂದ್ರದ ಮಾಲೀಕನ ಸೆರೆ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕರ ಹುದ್ದೆ ಲಿಖೀತ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗೋಕಾಕನ ಕೋಚಿಂಗ್ ಸೆಂಟರ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ, ಗೋಕಾಕನ ಅಗಸ್ತ್ಯ ಕೋಚಿಂಗ್ ಸೆಂಟರ್ ಮಾಲೀಕ ಬಾಳೇಶ ಕೆಂಚಪ್ಪ ಕಟ್ಟಿಕಾರ(26) ಎಂಬಾತನನ್ನು ಬಂ ಧಿಸಲಾಗಿದೆ. ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕರ ಹುದ್ದೆ ಪರೀಕ್ಷೆ ವೇಳೆ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ಕೊಟ್ಟು ಉತ್ತರಗಳನ್ನು ಹೇಳಿ ಬರೆಯಿಸುತ್ತಿದ್ದ ಆರೋಪದ ಮೇಲೆ ಬಾಳೇಶನನ್ನು ಬಂಧಿಸಲಾಗಿದೆ. ಪರೀಕ್ಷೆ …
Read More »ಸಂಸದ ಸಂಜಯ್ ರಾವತ್ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಭೇಟಿ
ಮುಂಬಯಿ: ಠಾಕ್ರೆ ಗುಂಪಿನ ನಾಯಕ ಸಂಸದ ಸಂಜಯ್ ರಾವತ್ ಅವರು ಶುಕ್ರವಾರ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾದರು. ಭೇಟಿಯ ಸಂದರ್ಭದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಲಾಯಿತು. ಅಲ್ಲದೆ, ಉದ್ಧವ್ ಠಾಕ್ರೆ ನೀಡಿರುವ ಮಹಾರಾಷ್ಟ್ರ ಬಂದ್ ಕರೆಗೆ ಎನ್‌ಸಿಪಿ ಬೆಂಬಲ ಘೋಷಿಸಿದ್ದು, ಹಾಗಾಗಿ ರಾಜ್ಯಪಾಲರ ಹೇಳಿಕೆ ವಿವಾದ ಭುಗಿಲೇಳುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ರಾಜ್ಯಪಾಲ ಭಗತ್ ಸಿಂಗ್ …
Read More »ಮಹಾರಾಷ್ಟ್ರ ಗಡಿ ವಿಚಾರ ಮುಂದಿನ ವಾರ ಸರ್ವಪಕ್ಷ ಸಭೆ: ಸಿಎಂ
ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಇರುವ ಪ್ರಕರಣಗಳಲ್ಲಿ ರಾಜ್ಯಕ್ಕೆ ಗಟ್ಟಿಯಾದ ಕಾನೂನು ನೆಲೆಗಟ್ಟಿದೆ. ಈ ವಿಷಯದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಗಡಿ ವಿಚಾರವಾದ್ದರಿಂದ ಮುಂದಿನ ವಾರ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಗಡಿ ವಿಚಾರವಾದ್ದರಿಂದ ಮುಂದಿನ ವಾರ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ವಪಕ್ಷಗಳ ಸಭೆಯಲ್ಲಿ ಮತ್ತಷ್ಟು ಸಂಗತಿಗಳನ್ನು ಚರ್ಚಿಸಲಾಗುವುದು ಎಂದರು. ಮಹಾರಾಷ್ಟ್ರದ ಕೆಲ …
Read More »ಲಂಚ ಪಡೆಯುತ್ತಿದ್ದ ಕಿತ್ತೂರು ತಹಶೀಲ್ದಾರ ಲೋಕಾಯುಕ್ತ ಬಲೆಗೆ
ಬೆಳಗಾವಿ: ತಂದೆ ಹೆಸರಿನಲ್ಲಿದ್ದ ಜಮೀನನ್ನು ಮಗನ ಹೆಸರಿಗೆ ಬದಲಾವಣೆ ಮಾಡಲು ಲಂಚ ಪಡೆಯುತ್ತಿದ್ದ ಚನ್ನಮ್ಮನ ಕಿತ್ತೂರು ತಹಶೀಲ್ದಾರ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚನ್ನಮ್ಮನ ಕಿತ್ತೂರು ತಹಶೀಲ್ದಾರ ಸೋಮಲಿಂಗಪ್ಪ ಹಾಲಗಿ ಹಾಗೂ ಕಚೇರಿ ಭೂ ಸುಧಾರಣಾ ವಿಷಯಗಳ ನಿರ್ವಾಹಕ ಪ್ರಸನ್ನ ಜಿ. ಎಂಬವರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ ಲಂಚ ಸಮೇತ ಖೆಡ್ಡಾಕ್ಕೆ ಬೀಳಿಸಿದ್ದಾರೆ. ಕಿತ್ತೂರು ತಾಲೂಕಿನ ಖೋದನಾಪುರ ಗ್ರಾಮದ ರಾಜೇಂದ್ರ ಬಾಪುಸಾಹೇಬ ಇನಾಮದಾರ ಎಂಬವರ ಪಹಣಿ …
Read More »