Breaking News

Yearly Archives: 2022

ರವಿ ಡಿ ಚೆನ್ನಣ್ಣನವರ ವಿರುದ್ಧದ ಅಕ್ರಮ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಮೈಸೂರು: ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ ವಿರುದ್ಧ ಕೇಳಿಬಂದಿರುವ ಅಕ್ರಮ ಆಸ್ತಿ ಸಂಪಾದನೆ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ನಗರದ ಕರ್ನಾಟಕ ಪೊಲೀಸ್​ ಅಕಾಡೆಮಿಯಲ್ಲಿ 228 ಪ್ರೊಬೆಷನರಿ ಪಿಎಸ್ಐ ಗಳ ಪಥ ಸಂಚಲನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ ವಿರುದ್ಧ ಕೇಳಿಬಂದ ಆರೋಪದ ದೂರಿನ ಹಿನ್ನೆಲೆಯಲ್ಲಿ ತನಿಖೆ ಶುರುವಾಗಿದೆ. ಯಾರು …

Read More »

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಪೊಲೀಸ್‌ ಇಲಾಖೆ; ಟೋಯಿಂಗ್‌ಗೆ ಶೀಘ್ರದಲ್ಲೇ ಹೊಸ ರೂಲ್ಸ್..!

ಬೆಂಗಳೂರು: ಇತ್ತೀಚಿನ ಕೆಲ ಘಟನೆಗಳ ನಂತರ ನಗರದಲ್ಲಿ ಸದ್ಯ ಟೋಯಿಂಗ್ ಮಾಡುತ್ತಿಲ್ಲ. ಟೋಯಿಂಗ್ ಅನ್ನು ಕಟ್ಟುನಿಟ್ಟಿನ ನಿಯಮಗಳೊಂದಿಗೆ ಆರಂಭಿಸಲಾಗುತ್ತದೆ ಅಂತ ಪೊಲೀಸ್ ಇಲಾಖೆ ಹೇಳುತ್ತಿದೆ. ಹಾಗಾದರೆ ಟೋಯಿಂಗ್ ಪುನಾರಂಭ ಆದರೆ ಯಾವೆಲ್ಲ ನಿಯಮಗಳು ಇರಲಿವೆ ಎಂಬುದರ ಮಾಹಿತಿ‌ ಇಲ್ಲಿದೆ. ಇತ್ತೀಚಿಗೆ ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ನಡೆದುಕೊಳ್ಳುವ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಜನಾಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಸದ್ಯ ಟೋಯಿಂಗ್ ನಿಲ್ಲಿಸಿರುವ ಬೆಂಗಳೂರು ಸಂಚಾರಿ ಪೊಲೀಸರು ಪುನಃ ಟೋಯಿಂಗ್ ಆರಂಭಿಸಲು …

Read More »

ಶಶಿಕಲಾರಿಂದ ಲಂಚ ಪಡೆದ ಆರೋಪ ಪ್ರಕರಣ.. ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದ ಎಸಿಬಿ

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆಯಡಿ ಜೈಲು ಶಿಕ್ಷೆ ಅನುಭವಿಸಿರುವ ತಮಿಳುನಾಡಿನ ಮಾಜಿ‌ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಶಶಿಕಲಾ ಹಾಗೂ ಜೈಲಾಧಿಕಾರಿಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೈಲಿನಲ್ಲಿ ರಾಜಾತಿಥ್ಯ ಕಲ್ಪಿಸಲು ಶಶಿಕಲಾರಿಂದ ಲಂಚ ಪಡೆದ ಆರೋಪ ಪ್ರಕರಣದ ತನಿಖೆ ಕೈಗೊಂಡಿದ್ದ ಎಸಿಬಿ ಇದೀಗ ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಶಿಕಲಾ, ಇಳವರಸಿಯಿಂದ ಹಣ ಪಡೆದು‌ ರಾಜಾತಿಥ್ಯ ಕಲ್ಪಿಸಿದ ಆರೋಪದಡಿ ಆಗಿನ ಜೈಲಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ …

Read More »

ಬಿಎಸ್‌ವೈ ಯುಗ ಅಂತ್ಯವಾಗಿದೆ, ಇನ್ನೂ ಮೂರ್ನಾಲ್ಕು ಜನರ ಯುಗ ಮುಗಿಯಲಿದೆ : ಶಾಸಕ ಯತ್ನಾಳ್

ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ನಂತರ ಕೇಂದ್ರದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ. ಕ್ರಿಯಾಶೀಲವಾಗಿ ಕೆಲಸ ಮಾಡುವ ಎರಡನೇ ನಾಯಕತ್ವ ರಾಜ್ಯಕ್ಕೆ ಬೇಕಾಗಿದೆ. ಬಿಎಸ್‌ವೈ ಯುಗ ಅಂತ್ಯವಾಗಿದೆ. ಅವರ ಸಮಕಾಲೀನ ಇನ್ನೂ ಮೂರ್ನಾಲ್ಕು ಜನರದ್ದು ಯುಗ ಮುಗಿಯಲು ಬಂದಿದೆ. ಬಸವರಾಜ ಬೊಮ್ಮಾಯಿ …

Read More »

ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮುಧೋಳದ ವೈದ್ಯ: ಕೂಲಿ ಮಾಡಿ ಓದಿಸಿದ ತಂದೆಗೆ ಸನ್ಮಾನ

ಬಾಗಲಕೋಟೆ: ಮುಧೋಳ ತಾಲೂಕಿನ ಬೆಳಗಲಿ ಗ್ರಾಮದ ವಿದ್ಯಾರ್ಥಿ ಡಾ.ಚಿದಾನಂದ ಕುಂಬಾರ ಬೆಳಗಲಿ ನೀಟ್ ಪಿಜಿ ಪರೀಕ್ಷೆಯಲ್ಲಿ 759 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಚಿದಾನಂದ ಕುಂಬಾರ ಅವರು ಮಾಡಿದ ಈ ಸಾಧನೆಗೆ ಅವರ ತಂದೆ ಕಲ್ಲಪ್ಪ ಕುಂಬಾರಗೆ ಬೆಳಗಲಿ ಗ್ರಾಮದ ಮುಖಂಡರು ಸನ್ಮಾನಿಸಿದ್ದಾರೆ. ಈ ವೇಳೆ ಮಾತನಾಡಿದ ಕಲ್ಲಪ್ಪ ಕುಂಬಾರ, ಗ್ರಾಮೀಣ ಭಾಗದ ಯುವಕನೊಬ್ಬ ಈ ಮಟ್ಟಿಗೆ ಉನ್ನತ ಸ್ಥಾನಕ್ಕೆ ಏರಿದ್ದು, ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. …

Read More »

88 ಯೋಜನೆಗಳಿಗೆ ಅನುಮೋದನೆ ನೀಡಿದ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿ, ರಾಜ್ಯದಲ್ಲಿ ಒಟ್ಟು 10,904 ಉದ್ಯೋಗ ಸೃಷ್ಟಿ : ಸಚಿವ ನಿರಾಣಿ

ಬೆಂಗಳೂರು : ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಡಿ ಒಟ್ಟು 2367.99 ಕೋಟಿ ರೂ. ಮೊತ್ತದ 88 ಯೋಜನೆಗಳಿಗೆ ಅನುಮೋದನೆ ನೀಡಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಒಟ್ಟು 88 ಯೋಜನೆಗಳಿಂದ 2367.99 ಕೋಟಿ ರೂ. …

Read More »

ನನ್ನ ವಿರುದ್ಧ ದೂರು ಕೊಟ್ಟವರು ಎಂಟಿಆರ್ ಫುಡ್ ಇರ್ಬೇಕು: ಸ್ವಪಕ್ಷೀಯರಿಗೆ ರೇಣುಕಾಚಾರ್ಯ ಟಾಂಗ್

ದಾವಣಗೆರೆ: ಯಾರು ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ. ಅವರು ಎಂಟಿಆರ್ ಫುಡ್ ಇರ್ಬೇಕು. ಆದ್ರೆ ನಾನು ಎಂಟಿಆರ್ ಫುಡ್ ಅಲ್ಲವೆಂದು ಹೇಳುವ ಮೂಲಕ ಸ್ವಪಕ್ಷೀಯ ಸಚಿವರಿಗೆ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಹೋರಾಟ ಮಾಡಿಯೇ ಮೂರು ಬಾರಿ ಶಾಸಕನಾಗಿದ್ದೇನೆ. ಬೀದಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ರೇ ಸಚಿವ ಸ್ಥಾನ ಸಿಗುತ್ತಾ ಎಂದು ಪಕ್ಷದ ಸಚಿವರ ವಿರುದ್ಧ …

Read More »

ದೆಹಲಿಗೆ ಹಾರಲಿದ್ದಾರಂತೆ ರಮೇಶ್​ ಜಾರಕಿಹೊಳಿ

ಬೆಳಗಾವಿ : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವಾಕಾಂಕ್ಷಿಗಳ ಕಸರತ್ತು ಮುಂದುವರೆದಿದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಲ ಶಾಸಕರು ಈಗಾಗಲೇ ಗುಪ್ತ ಸಭೆ, ಮಾತುಕತೆಯಲ್ಲಿ ತೊಡಗಿದ್ದಾರೆ. ಈ ನಡುವೆ ಮತ್ತೆ ಸಚಿವರಾಗಬೇಕೆಂದು ತೆರೆಮರೆಯಲ್ಲಿ ಕಸರತ್ತು ಮುಂದುವರೆಸಿರುವ ಮಾಜಿ ಮಂತ್ರಿ ರಮೇಶ್​ ಜಾರಕಿಹೊಳಿ ದೆಹಲಿಗೆ ಹಾರಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಗೋವಾಕ್ಕೆ ತೆರಳಿರುವ ಮಾಜಿ ಸಚಿವ ಜಾರಕಿಹೊಳಿ, ಅಲ್ಲಿಂದ ದೆಹಲಿಗೆ ತೆರಳಿ ಹೈಕಮಾಂಡ್​ ಭೇಟಿಗೆ ಮುಂದಾಗಲಿದ್ದಾರೆ. ಆ ಮೂಲಕ ಮತ್ತೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು …

Read More »

ಫೆ.7ರಿಂದ ಬಜೆಟ್‌ ಪೂರ್ವಭಾವಿ ಸಿದ್ಧತೆ- ಇಲಾಖಾವಾರು ಚರ್ಚೆಯ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ಫೆ.7 ರಿಂದ ಇಲಾಖಾವಾರು ಚರ್ಚೆಯ ವೇಳಾಪಟ್ಟಿ ನಿಗದಿ ಮಾಡಲಾಗಿದ್ದು, ಫೆ.10 ಮಧ್ಯಾಹ್ನ 12ಕ್ಕೆ ಸಚಿವ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು …

Read More »

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …

Read More »