ಈ ಬಾರಿ ಗಣರಾಜ್ಯೋತ್ಸವಕ್ಕೂ ಕೊರೋನಾ ಕರಿನೆರಳು ಆವರಿಸಿದೆ. ಹೆಚ್ಚು ಜನರು ಸೇರುವಂತಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆಗೂ ಬ್ರೇಕ್ ಬಿದ್ದಿದೆ. ಈ ನಡುವೆ ದೆಹಲಿ ರಾಜಪಥನ್ನಿಂದ ನ್ಯಾಷನಲ್ ಸ್ಟೇಡಿಯಂವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ರಾಜ್ಯಗಳ ಜಾನಪದ ಕಲಾ ಪ್ರದರ್ಶನ ಜತೆಗೆ ಬಾನಂಗಳದಲ್ಲಿ ವಿಮಾನಗಳ ಹಾರಾಟ ನಡೆಯಲಿದೆ. ಇನ್ನು ಕೊರೋನಾ ಕಾರಣದಿಂದ ದೆಹಲಿಯಲ್ಲೂ ಕಟ್ಟೆಚ್ಚರವಹಿಸಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಎರಡೂ ಡೋಸ್ ವ್ಯಾಕ್ಸಿನೇಷನ್ ಕಡ್ಡಾಯಗೊಳಿಸಲಾಗಿದ್ದು, 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಷವನ್ನು ನಿಷೇಧಿಸಲಾಗಿದೆ. ಹೀಗಾಗಿ …
Read More »Yearly Archives: 2022
ಸರ್ಕಾರದ ಹಾಗೂ ನಾಡಿನ ಜನರ ಬಗ್ಗೆ ರಾಜ್ಯಪಾಲರು ಮೆಚ್ಚುಗೆಯ ನುಡಿ
ಬೆಂಗಳೂರು : ಕೊರನಾ ನಿಯಂತ್ರಿಸಲು ವೈದ್ಯರು, ನರ್ಸ್‌ಗಳು ಅವಿರತ ಸೇವೆ ಸಲ್ಲಿಸಿದ್ದಾರೆ. ಪೊಲೀಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ವಾರಿಯರ್ಸ್‌ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಉಂಟಾದ ಅತಿವೃಷ್ಟಿಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಅಮೃತ ಮಹೋತ್ಸವ ಸಂದರ್ಭದಲ್ಲಿ ಹಲವು ಯೋಜನೆ, ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. ಅಮೃತ ಗ್ರಾಮಪಂಚಾಯತಿಗಳ ಅಮೃತ ರೈತ, ಅಮೃತ ಗ್ರಾಮೀಣ ವಸತಿ ಯೋಜನೆ, ಅಮೃತ ನಿರ್ಮಲ, ಅಮೃತ …
Read More »ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯದ ಎಡಿಜಿಪಿಗಳು ಸೇರಿದಂತೆ 21 ಪೊಲೀಸರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ. ಗಣರಾಜ್ಯೋತ್ಸವ ದಿನಾದಂದು ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ. ಪದಕ ಪಡೆದವರ ವಿವರ ಇಲ್ಲಿದೆ. ಗಣರಾಜ್ಯೋತ್ಸವ ದಿನಾದಂದು ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ. ಪದಕ ಪಡೆದವರ ವಿವರ ಇಲ್ಲಿದೆ. 2022ನೇ ಸಾಲಿನ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ: ಬಿ.ದಯಾನಂದ, ಎಡಿಜಿಪಿ, ರಾಜ್ಯ ಗುಪ್ತದಳ ಆರ್. ಹಿತೇಂದ್ರ, ಎಡಿಜಿಪಿ, ಅಪರಾಧ ಮತ್ತು …
Read More »ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲು
ಬೆಳಗಾವಿ: ಕೋವಿಡ್ 3ನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಔಷಧಿಗಳೂ ಲಭ್ಯ ಇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಜ.1ರಿಂದ ಆರಂಭವಾದ ಅಲೆ ವೇಗವಾಗಿ ಹರಡುತ್ತಿದೆ. ನಿಯಂತ್ರಣಕ್ಕೆ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 1,05,233 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ …
Read More »ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ
ನವದೆಹಲಿ : ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆಮಾಡಿದೆ. 1949ರ ನವೆಂಬರ್ 26ರಂದು ರಚಿಸಲಾದ ದೇಶದ ಸಂವಿಧಾನವನ್ನು 1950ರ ಜನವರಿ 26ರಂದು ಅಂಗೀಕರಿಸಲಾಯಿತು. ಈ ದಿನವನ್ನು ದೇಶದ ಗಣರಾಜ್ಯೋತ್ಸವ ಎಂದು ಆಚರಿಸಲಾಗುತ್ತದೆ. ಭಾರತದ ಗಣರಾಜ್ಯೋತ್ಸವವು ಕೇವಲ ಆಚರಣೆಯಾಗಿರದೆ, ಅದು ದೇಶದ ರಾಜತಾಂತ್ರಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ಈ ಬಾರಿ ಮಹಾಮಾರಿ ಕೊರೊನಾ ನಡುವೆಯೂ ಗಣತಂತ್ರ ದಿನದ ಆಚರಣೆಗೆ ಇಡೀ ದೇಶ ಸನ್ನದ್ಧವಾಗಿದೆ. ಈ ದಿನದ ಇಂದು ಭಾರತೀಯ ಸೇನಾ ಪಡೆಗಳು ಮತ್ತು …
Read More »ಬೆಳಗಾವಿ ಜಿಲ್ಲೆಯಲ್ಲಿ ಸಿಡಿದ ಕೊರೊನಾ ಬಾಂಬ್: ಇಂದು 977 ಪಾಸಿಟಿವ್, 4 ಸಾವು
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ. ಇಂದು ಹೊಸದಾಗಿ 977 ಹೊಸ ಕೊರೊನಾ ಕೇಸ್‍ಗಳು ಪತ್ತೆಯಾಗಿವೆ. ಅದೇ ರೀತಿ ನಾಲ್ವರು ಸಾವನ್ನಪ್ಪಿದ್ದಾರೆ.ಮಂಗಳವಾರ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ 977 ಹೊಸ ಕೇಸ್‍ಗಳು ಕಾಣಿಸಿಕೊಂಡಿವೆ. ಅದೇ ರೀತಿ ಇಂದು ನಾಲ್ವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ 36 ವರ್ಷ ವ್ಯಕ್ತಿ, 64 ವರ್ಷದ ವೃದ್ಧ, 73 …
Read More »ನಾನು ಯಾವ ಕಡೆ ಇಲ್ಲ: ಬಿಜೆಪಿ ಪಕ್ಷದ ಪರವಾಗಿ ಇದ್ದೇನೆ: ದುರ್ಯೋಧನ ಐಹೊಳೆ
ನಾನಂತು ಸಚಿವಗಿರಿಗಾಗಿ ಗುಂಪುಗಾರಿಕೆ, ಜಗಳ ಮಾಡಲ್ಲ. ಸಚಿವ ಸ್ಥಾನ ಕರೆದು ಕೊಟ್ಟರೇ ನಿಭಾಯಿಸುತ್ತೇವೆ. ಸಚಿವ ಸ್ಥಾನ ಬೇಕು ಎಂದು ಹಠ ಮಾಡಲ್ಲ. ನಮ್ಮ ನಾಯಕರಾದ ಗೋವಿಂದ ಕಾರಜೋಳ ಅವರು ಇರೋ ತನ ನಾವು ಮಂತ್ರಿ ಸ್ಥಾನ ಕೇಳುವುದಿಲ್ಲ ಎಂದು ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ದುರ್ಯೋಧನ ಐಹೊಳೆ ಬಿಜೆಪಿ ಪಕ್ಷದ ಚಿಹ್ನೆ ಮೇಲೆ ಮೂರು ಬಾರಿ …
Read More »ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು …
Read More »ಗೋವಾದಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪಣಜಿ: ಗೋವಾ ಚುವಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯ ಸಾಧಿಸಲಿದ್ದು, ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಚುನಾವಣೆ ವೀಕ್ಷಕ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗೋವಾ ರಾಜ್ಯದ ಮಡಗಾವನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗೋವಾದಲ್ಲಿ 40 ವಿಧಾನಸಭಾ ಕ್ಷೇತ್ರಗಳಿದ್ದು, 37 ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂದು ತಿಳಿಸಿದರು. ಗೋವಾ ಮತ್ತು ಬೆಳಗಾವಿಗೆ ಉತ್ತಮ ನಂಟು ಹೊಂದಿದ್ದು, …
Read More »ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ- ದೃಶ್ಯ ಮೊಬೈಲ್‌ನಲ್ಲಿ ಸೆರೆ
ಮೈಸೂರು: ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆವೊಂದರಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ದೃಶ್ಯ ಅದೇ ಶಾಲೆಯ ವಿದ್ಯಾರ್ಥಿಗಳ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡ್ತಿದ್ದು, ವಿಡಿಯೋ ಬಗ್ಗೆ ತಿಳಿಯುತ್ತಿದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿನಿಯ ಪೋಷಕರು ಹೆಚ್.ಡಿ ಕೋಟೆ ಬಿಇಓ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ …
Read More »