Breaking News

Yearly Archives: 2022

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆ, ತಾಲ್ಲೂಕುಗಳಿಗೆ ಅನುದಾನ ಬಿಡುಗಡೆ

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ ಗಣರಾಜ್ಯೋತ್ಸವ ದಿನದ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ರಾಜಧಾನಿ ಬೆಂಗಳೂರು ನಗರಕ್ಕೆ 25 ಲಕ್ಷ ರೂ, ಉಳಿದಂತೆ ಪ್ರತಿ ಜಿಲ್ಲೆಗೆ ತಲಾ 1 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ತಾಲ್ಲೂಕು ಮಟ್ಟದ ಕಾರ್ಯಕ್ರಮಗಳಿಗೆ ತಲಾ 20 ಸಾವಿರ ರೂ. ಬಿಡುಗಡೆ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗಣರಾಜ್ಯೋತ್ಸವ ಟ್ಯಾಬ್ಲೋ; ಇಳಕಲ್ ಸೀರೆ, ಗುಳೇದಗುಡ್ಡದ ಖಣ ಆಯ್ಕೆ …

Read More »

ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ.. ಅಪಾರ ವನಸಂಪತ್ತು ನಾಶ

ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ವನಸಂಪತ್ತು ನಾಶವಾಗಿದೆ. ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದು ಸುಮಾರು 2 ಕಿ.ಮೀ ವಾಪ್ತಿವರೆಗೂ ಬೆಂಕಿ ಆವರಿಸಿದೆ. ಇನ್ನು, ನವಿಲು, ಚಿರತೆ, ಜಿಂಕೆಗಳು ಸೇರಿದಂತೆ ಅನೇಕ ಪ್ರಾಣಿಗಳು ಅಗ್ನಿಗೆ ಆಹುತಿಯಾಗಿವೆ ಅಂತಾ ಹೇಳಲಾಗ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ತೆರಳಲು ಸಾಧ್ಯವಾಗದ ಸ್ಥಳದಲ್ಲಿ ಬೆಂಕಿ ಆವರಿಸಿಕೊಂಡಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.  

Read More »

ರಾಜ್ಯದ ಇಂದಿನ ಕೊರೋನಾ ವರದಿ

ಬೆಂಗಳೂರು- ಕರ್ನಾಟಕದಲ್ಲಿ ಇಂದು 40,499 ಹೊಸ ಪ್ರಕರಣಗಳು ಕಂಡು ಬಂದಿವೆ.   ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು: 24,135 ರಾಜ್ಯದಲ್ಲಿ ಧನಾತ್ಮಕ ದರ: 18.80% ಬಿಡುಗಡೆಗಳು: 23,209 ಸಕ್ರಿಯ ಪ್ರಕರಣಗಳು ರಾಜ್ಯ: 2,67,650 (ಬೆಂಗಳೂರಿನಲ್ಲಿ- 184000) ಸಾವುಗಳು: 21 (ಬೆಂಗಳೂರು- 05) ಪರೀಕ್ಷೆಗಳು: 2,15,312 ಕೋವಿಡ್ ನಿರ್ಬಂಧ ಸಡಿಲಿಕೆ: ತಜ್ಞರ ಸಭೆ ನಂತರ ತೀರ್ಮಾನ.  

Read More »

ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು

ದಾವಣಗೆರೆ: ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಸಾರ್ವಜನಿಕ ಆಸ್ಪತ್ರೆ ಎದುರು ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಸರ್ಕಾರಿ ಆಸ್ಪತ್ರೆ ಮುಂದೆ ಬಾಲಕನ ಮೃತದೇಹ ಇಟ್ಟು ಪಾಲಕರ ಪ್ರತಿಭಟನೆ ಮಹೇಶ್​​-ನೇತ್ರಾವತಿ ದಂಪತಿ ಪುತ್ರ ಮಗ ಭರತ್ (13) ಮೃತ ಬಾಲಕ. ಅನಾರೋಗ್ಯದಿಂದ ಬಳಲುತ್ತಿದ್ದ ಭರತ್​​ನನ್ನು ಪಾಲಕರು ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದರು. ಕರ್ತವ್ಯದಲ್ಲಿದ್ದ ವೈದ್ಯರು ಸಕಾಲಕ್ಕೆ ಬಾಲಕನಿಗೆ ಚಿಕಿತ್ಸೆ ನೀಡದ …

Read More »

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 89 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್​ ತಗುಲಿದೆ.

ಬೆಳಗಾವಿ: ರಾಜ್ಯದಲ್ಲಿ ಕೋವಿಡ್​ ಅಬ್ಬರ ಮುಂದುವರೆದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 89 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲೇ 39 ಮಂದಿಗೆ ಸೋಂಕು ತಗುಲಿದೆ. ಬೆಳಗಾವಿ ಎಪಿಎಂಸಿ ಠಾಣೆಯ 11 ಸಿಬ್ಬಂದಿ, ಶಹಾಪುರ ಠಾಣೆಯ ಮೂವರು ಸಿಬ್ಬಂದಿ, ಟಿಳಕವಾಡಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ. ಓರ್ವ ಇನ್ಸ್‌ಪೆಕ್ಟರ್, ಇಬ್ಬರು ಪಿಎಸ್‌ಐ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ 39 ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್​ ಕಂಡುಬಂದಿದೆ. ಉಳಿದಂತೆ ಡಿಎಆರ್, ಸಿಎಆರ್, …

Read More »

ವಿದ್ಯಾರ್ಥಿಗಳಿಂದ ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ.

ಹುಬ್ಬಳ್ಳಿ: ‘ಬಡ, ನಿರ್ಗತಿಕ ಹಾಗೂ ದಾಸೋಹ ಕೈಂಕರ್ಯ ನಡೆಸುತ್ತಿರುವ ಮಠಗಳಿಗೆ ವಿತರಿಸುವುದಕ್ಕಾಗಿ, ನಗರದ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್‌) ವಿದ್ಯಾರ್ಥಿಗಳು ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ ಆರಂಭಿಸಿದ್ದಾರೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಡಿ.ವಿ. ಹೊನಗಣ್ಣವರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 50 ವಿದ್ಯಾರ್ಥಿಗಳು ಜ. 1ರಿಂದ 20ರವರೆಗೆ ಹಮ್ಮಿಕೊಂಡಿರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಇದುವರೆಗೆ 25 ಕೆ.ಜಿ.ಯ 200ಕ್ಕೂ ಹೆಚ್ಚು ಅಕ್ಕಿ ಚೀಲಗಳು ಸಂಗ್ರಹವಾಗಿವೆ. …

Read More »

ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.   ಜಮೀನಿಗೆ ಆಕಳು ಮೇಯಿಸಲು ಬಿಟ್ಟಿದ್ದಿಯಾ ಎಂದು ಜಗಳ ತೆಗೆದು ಶ್ರೀಕಾಂತ ಕಟಾಬಳಿ ಎನ್ನುವ ಯುವಕನ ಮೇಲೆ ಲಕ್ಷ್ಮಣ್ ದಡ್ಡಿ, ಲಕ್ಷ್ಮಣ್ ಪುತ್ರ ಸಚಿನ್ ಹಾಗೂ ರಂಜಿತ್‌ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಶ್ರೀಕಾಂತ ಕಟಾಬಳಿ ತಲೆಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.   ದಡ್ಡಿ …

Read More »

ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಗೆ ಚುನಾವಣೆ ಮುಗಿದು, ನೂತನ ಸದಸ್ಯರು ಚುನಾಯಿತರಾಗಿ ಬರೋಬ್ಬರಿ ಐದು ತಿಂಗಳುಗಳೇ ಕಳದಿದ್ದರೂ ಅವರಿಗೆ ಅಧಿಕಾರದ ಭಾಗ್ಯ ಸಿಕ್ಕಿಲ್ಲ. ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ ಮುಂದುವರಿದಿದೆ.   ಮಹಾನಗರಪಾಲಿಕೆ ಚುನಾವಣೆ ಮತದಾನ ಸೆ.3ರಂದು ನಡೆದಿತ್ತು. .6ರಂದು ಫಲಿತಾಂಶ ಪ್ರಕಟವಾಗಿತ್ತು. ಆಗಿನಿಂದಲೂ ಸದಸ್ಯರು ಪ್ರಮಾಣವಚನ ಸ್ವೀಕರಿಸುವ ಪ್ರಕ್ರಿಯೆಯೇ ನಡೆಯದಿರುವುದು ಅವರು ಅಧಿಕೃತವಾಗಿ ಅಧಿಕಾರ ಚಲಾಯಿಸುವುದಕ್ಕೆ ಅಡ್ಡಿಯಾಗಿ ಪರಿಣಮಿಸಿದೆ. ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಚುರುಕುಗೊಳಿಸುವುದಕ್ಕೆ ಅವರಿಂದ ಸಾಧ್ಯವಾಗಿಲ್ಲ. ಈಚೆಗೆ ವಾಲ್ವ್‌ಮನ್‌ಗಳ ಮುಷ್ಕರದಿಂದ …

Read More »

ಬೆಳಗಾವಿಯಲ್ಲಿ ಚುಚ್ಚುಮದ್ದು ಪಡೆದ ಮೂರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ.

ಬೆಳಗಾವಿ: ಚುಚ್ಚುಮದ್ದು ಪಡೆದು ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ತನಿಖಾ ವರದಿಯನ್ನು ಸಿಎಂಗೆ ಕಳುಹಿಸಿ ಕೊಟ್ಟಿದ್ದೇವೆ. ಜಿಲ್ಲಾ ಲಸಿಕಾಕರಣ ಅನುಷ್ಠಾನ ಅಧಿಕಾರಿ ಡಾ.ಈಶ್ವರ್ ಗಡಾದ್ ಪರಿಶೀಲನೆ ನಡೆಸಿ, ವರದಿ ಕೊಟ್ಟಿದ್ದಾರೆ. ಟೆಕ್ನಿಕಲ್ ವರದಿ ಇರುವ ಕಾರಣ ಅದರಲ್ಲಿರುವ …

Read More »

ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ

ತೆಲಸಂಗ: ಅರಟಾಳ ಗ್ರಾಮ ಪಂಚಾಯ್ತಿಯಿಂದ ಮಂಗಳವಾರ ನಡೆದ ಗ್ರಾಮಸಭೆಯಲ್ಲಿ ಜನರು ಗ್ರಾಮ ಲೆಕ್ಕಾಧಿಕಾರಿ ವಿರುದ್ದ ಆರೋಪಗಳ ಸುರಿಮಳೆಗೈದರು.   ಶಿವಾನಂದ ಭಂಡಾರಿ, ಅಶೋಕ ಆನಗೊಂಡಿ, ಭೀಮಪ್ಪ ಭಂಡಾರಿ ಮಾತನಾಡಿ, ‘ಗ್ರಾಮ ಲೆಕ್ಕಾಧಿಕಾರಿ ಇರ್ಫಾನ್‌ ಆಲಗೂರ ಪ್ರತಿಯೊಂದಕ್ಕೂ ಹಣ ಕೇಳುತ್ತಾರೆ. ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ. ಅವರನ್ನು ವರ್ಗಾಯಿಸಿ ದಕ್ಷ ಅಧಿಕಾರಿ ಹಾಕಬೇಕು’ ಎಂದು ಒತ್ತಾಯಿಸಿದರು.   ‘ಗ್ರಾಮ ಲೆಕ್ಕಾಧಿಕಾರಿಯಿಂದ ಯಾವುದೇ ದಾಖಲಾತಿ ಪಡೆಯಲು …

Read More »