Breaking News

Yearly Archives: 2022

ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವ, ಇಂದು ನಡೆಯುತ್ತಾ?! ಕೆರಳಿದೆ ಭಾರಿ ಕುತೂಹಲ..

ಬಾಗಲಕೋಟೆ: ಈ ದೇವಸ್ಥಾನದಲ್ಲಿನ ರಥೋತ್ಸವ ಇತಿಹಾಸದಲ್ಲಿ ಎಂದೂ ರದ್ದಾದ ಉದಾಹರಣೆಯೇ ಇಲ್ಲ. ಆದರೆ ಇಂದು ರಥೋತ್ಸವ ನಡೆಯುತ್ತದೆಯೇ ಇಲ್ಲವೇ ಎಂಬುದು ಭಾರಿ ಕುತೂಹಲ ಕೆರಳಿಸಿದೆ. ಏಕೆಂದರೆ ಭಕ್ತರು ರಥೋತ್ಸವ ನೆರವೇರಿಸಲು ಕಂಕಣ ತೊಟ್ಟಿದ್ದರೆ, ಅತ್ತ ಪೊಲೀಸರು ಉತ್ಸವ ತಡೆಯಲು ರಣೋತ್ಸಾಹದಿಂದ ಕಾಯುತ್ತಿದ್ದಾರೆ. ಹೌದು.. ಇಂಥದ್ದೊಂದು ಸನ್ನಿವೇಶ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿಯಲ್ಲಿ ಸೃಷ್ಟಿಯಾಗಿದೆ. ಇಲ್ಲಿನ ಐತಿಹಾಸಿಕ ಬನಶಂಕರಿ ದೇವಸ್ಥಾನದ ರಥೋತ್ಸವ ನಡೆಯಬೇಕಿದೆ. ಆದರೆ ರಥೋತ್ಸವ ಜಾಗದ ಎಲ್ಲ ರಸ್ತೆಗಳಲ್ಲೂ …

Read More »

ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ: ಆರ್ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಜನರ ಹಿತದೃಷ್ಠಿಯಿಂದ, ಆರೋಗ್ಯದ ಹಿತದೃಷ್ಠಿಯಿಂದ ವೀಕೆಂಡ್ ( Weekend Curfew ), ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಲಾಗಿದೆ. ನಮಗೆ ಜನರ ಹಿತವನ್ನು ಕಾಪಾಡುವುದು ಮುಖ್ಯ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ( Minister R Ashok ) ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಬಸವರಾಜ ಬೊಮ್ಮಾಯಿ …

Read More »

ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿ‌ಸಿದ ಸಚಿವ ಉಮೇಶ್ ಕತ್ತಿ

ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿ‌ಸಿದರು .   ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.

Read More »

ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಬನದ ಹುಣ್ಣಿಮೆ ಸಾರ್ವಜನಿಕ ಪ್ರವೇಶ ಇಲ್ಲ.

ಸವದತ್ತಿ (ಬೆಳಗಾವಿ): ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಬನದ ಹುಣ್ಣಿಮೆ’ ಅಂಗವಾಗಿ ಸೋಮವಾರ (ಜ.17) ನಡೆಯಬೇಕಿದ್ದ ಜಾತ್ರೆಯನ್ನು ಕೋವಿಡ್ ಕಾರಣದಿಂದ ರದ್ದುಪಡಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮಗಳು ಸರಳವಾಗಿ ನಡೆಯಲಿವೆ. ಬೆಳಿಗ್ಗೆ ಮತ್ತು ಸಂಜೆ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಜರುಗಲಿದೆ. ಆದರೆ, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.   ದೇವಸ್ಥಾನಕ್ಕೆ ಸೀಮಿತವಾಗಿ ಅಧಿಕಾರಿಗಳು, ಅರ್ಚಕರು ಹಾಗೂ ಕೆಲವೇ ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಆಚರಣೆ ಕೈಗೊಳ್ಳಲಾಗುವುದು ಎಂದು ಯಲ್ಲಮ್ಮ ದೇವಸ್ಥಾನ ಅಧಿಕಾರಿಗಳು ತಿಳಿಸಿದ್ದಾರೆ.   ನಿಷೇಧದ …

Read More »

ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿಯೇ ಪ್ಲ್ಯಾನ್

ಬೆಳಗಾವಿ: ರಂದು ರಮೇಶ್ ಮಾದಿಗರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಹತ್ಯೆಗೈದಿದ್ದ ಪತ್ನಿ ಶ್ರೀದೇವಿ ಮಾದಿಗರ(30) ಮತ್ತು ಪ್ರಿಯಕರ ಬಸವರಾಜ ಹರಿಜನ(20)ನನ್ನು ಬೆಳಗಾವಿ ಜಿಲ್ಲೆ ಕಿತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.   ಜನವರಿ 13ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಕ್ರಾಸ್ ಬಳಿ ರಮೇಶ್ ಮಾದಿಗರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆ ಕೊಲೆಯ ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ. ಪ್ರಿಯಕರನ ಜೊತೆ ಸೇರಿ …

Read More »

ಬಿಜೆಪಿ ಕಾರ್ಯಕರ್ತರೊಂದಿಗೆ ಜ.18ರಂದು ನಮೋ ಆ್ಯಪ್ ಮೂಲಕ ಆನ್​​ಲೈನ್ ಸಂವಾದ ನಡೆಸಲಿದ್ದಾರೆ ನರೇಂದ್ರ ಮೋದಿ

ವಾರಣಾಸಿ: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ತಮ್ಮ ಕ್ಷೇತ್ರ ವಾರಣಾಸಿಯಲ್ಲಿ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರೊಂದಿಗೆ ಮೊದಲ ಬಾರಿಗೆ ಸಂವಾದ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ನಮೋ ಆ್ಯಪ್  ಮೂಲಕ ಕಾಶಿಯಿಂದ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಸಂವಾದ ನಡೆಯಲಿದೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ ತಿಳಿಸಿದ್ದಾರೆ.  ಆ್ಯಪ್‌ನ ಕಾಮೆಂಟ್‌ಗಳ ವಿಭಾಗದಲ್ಲಿ …

Read More »

ಮೂವರು ಮಕ್ಕಳ ಸಾವಿಗೆ ಅಸಲಿ ಕಾರಣ ಬಿಚ್ಚಿಟ್ಟ ಲಸಿಕಾಧಿಕಾರಿ ಗಡಾದ್..!

ರಾಮದುರ್ಗ ತಾಲೂಕಿನಲ್ಲಿ ಮೂವರು ಮಕ್ಕಳ ನಿಗೂಢ ಸಾವು ಪ್ರಕರಣದಲ್ಲಿ ಮೂವರು ಕಂದಮ್ಮಗಳ ಸಾವಿನ ಅಸಲಿ ಕಾರಣ ಬೆಳಕಿಗೆ ಬಂದಿದೆ. ಆರೋಗ್ಯ ಸಿಬ್ಬಂದಿ ಯಡವಟ್ಟಿನಿಂದ ಮೂವರು ಕಂದಮ್ಮಗಳು ಬಲಿಯಾಗಿದ್ದು, ಲಸಿಕಾರಣದ ಮಾರ್ಗಸೂಚಿ ಉಲ್ಲಂಘನೆಯೇ ಮಕ್ಕಳ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಬೆಳಗಾವಿಯಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಲಸಿಕಾಧಿಕಾರಿ ಡಾ.ಈಶ್ವರ ಗಡಾದ ಅವರು ಜನೆವರಿ 10ರಂದು ಲಸಿಕೆಯನ್ನ ತೆಗೆದುಕೊಂಡು ಹೋಗಿದ್ದ ಸಾಲಹಳ್ಳಿ ಪ್ರಾಥಮಿಕ ಕೇಂದ್ರ …

Read More »

ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳಿಗೆ ಹೆಚ್ಚು ಕೊರೊನಾ ಕಾಣಿಸ್ತಿದೆ: ಪಾಲಕರೇ ಹುಷಾರ್..!

ಕಳೆದ ಎರಡು ದಿನಗಳಿಂದ ಮಕ್ಕಳಲ್ಲಿ ಒಮಿಕ್ರಾನ್ ಹೆಚ್ಚಾಗಿದ್ದು, ಶೇ. 100 ಮಕ್ಕಳಲ್ಲಿ 20 ರಿಂದ 30 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗಿದೆ.ಡಿ.ಎಚ್.ಓ ಮುನ್ಯಾಳ ಮಾತನಾಡಿ ಜನೇವರಿ 1 ರಿಂದ 3 ನೇ ಅಲೆಯ ಪ್ರಭಾವ ವಾಗಿ ಮಕ್ಕಳಲ್ಲಿ ಅಷ್ಟೊಂದು ಪಾಸಿಟಿವಿಟಿ ಇರಿಲಿಲ್ಲ ಕಳೆದ ಎರಡು ದಿನಗಳಿಂದ ನಿರತಂರವಾಗಿ ಓಮಿಕ್ರಾನ್ ಪ್ರಭಾವ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ 100 ಮಕ್ಕಳು ಕೋವಿಡ್ ಪರೀಕ್ಷೆಗೆ ಒಳಪಟ್ಟರೆ 20 ರಿಂದ 30 ಮಕ್ಕಳಲ್ಲಿ ಸೊಂಕು …

Read More »

ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಗೋಕಾಕ : ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಒತ್ತಾಯ ಮಾಡಿದ್ದಾರೆ.   ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಚ್ಚು ಮದ್ದು ಪಡೆದ ಮಕ್ಕಳ ಸಾವಿಗೆ ಕೆಳವರ್ಗದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. …

Read More »

ಕೋವಿಡ್ ಟೆಸ್ಟ್ ವರದಿ ಪಡೆಯಲು ಹೋಗಿದ್ದ ನರ್ಸ್ ಮೇಲೆ ಅತ್ಯಾಚಾರ..!

ತಿರುವನಂತಪುರಂ : ಕೋವಿಡ್‌ ಸೋಂಕಿತೆ ಮೇಲೆ ಆಯಂಬುಲೆನ್ಸ್‌ ಚಾಲಕನೋರ್ವ ಅತ್ಯಾಚಾರ ಎಸಗಿದ ಘಟನೆ ಬೆನ್ನಲ್ಲೇ, ಕೇರಳದಲ್ಲಿ ಮತ್ತೊಂದು ರೇಪ್‌ ಪ್ರಕರಣ ವರದಿಯಾಗಿದೆ. ಸಂತ್ರಸ್ತೆ ಮಲಪ್ಪುರಂನಲ್ಲಿ ಹೋಮ್‌ನರ್ಸ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ರಜೆ ಮೇಲೆ ಮನೆಗೆ ಮರಳಿದ್ದರು. ಈ ವೇಳೆ ಅವರಿಗೆ ಕೊರೋನಾ ಟೆಸ್ಟ್‌ ಮಾಡಿಸಿ, ಹೋಂ ಕ್ವಾರಂಟೈನ್‌ಗೆ ಒಳಗಾಗುವಂತೆ ಆರೋಗ್ಯ ಅಧಿಕಾರಿ ಸೂಚಿಸಿದ್ದರು. ಈ ಪ್ರಕಾರ ಆಯಂಟಿಜೆನ್‌ ಟೆಸ್ಟ್‌ಗೆ ಒಳಗಾಗಿದ್ದರು. ವರದಿಯಲ್ಲಿ ನೆಗೆಟಿವ್‌ ರಿಪೋರ್ಟ್‌ ಬಂದಿತ್ತು. ವರದಿಯ ದಾಖಲೆಯನ್ನು ತೆಗೆದುಕೊಂಡು ಹೋಗಲು ಬಾರಂತೂರಿನ …

Read More »