ಬಳ್ಳಾರಿ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸುವ ಮೂಲಕ ಡಿ.25ರಂದು ರಾಜ್ಯ ಬಿಜೆಪಿಗೆ ಗಾಲಿ ಜನಾರ್ದನ ರೆಡ್ಡಿ ಶಾಕ್ ಕೊಟ್ಟಿದ್ದರು. ಇದೀಗ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್ ಅವರು ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪಥನವಾಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ದಮ್ಮೂರು …
Read More »Yearly Archives: 2022
ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ಶೇ.5ರಷ್ಟು ಡಿಎ, ಫಿಟ್ಮೆಂಟ್ ಅಂಶ ಹೆಚ್ಚಳ, ಸ್ಯಾಲರಿ ಹೆಚ್ಚಳ
ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮನೆ ಬಾಡಿಗೆ ಭತ್ಯೆ, ಡಿಎ ಹೆಚ್ಚಳ, ಡಿಎ ಬಾಕಿ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಫಿಟ್ಮೆಂಟ್ ಫ್ಯಾಕ್ಟರ್ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಶೀಘ್ರದಲ್ಲೇ ನಿರ್ಧಾರಗಳನ್ನ ತೆಗೆದುಕೊಳ್ಳುವ ಸಾಧ್ಯತೆಯಿದೆ. ದೀರ್ಘಕಾಲದಿಂದ, ಕೇಂದ್ರ ಸರ್ಕಾರಿ ನೌಕರರು ಫಿಟ್ಮೆಂಟ್ ಅಂಶವನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ವರದಿಗಳನ್ನ ನಂಬುವುದಾದ್ರೆ, ಫಿಟ್ಮೆಂಟ್ ಫ್ಯಾಕ್ಟರ್’ನ ದೀರ್ಘಕಾಲದ ಬೇಡಿಕೆಯ ಬಗ್ಗೆ ಕೇಂದ್ರವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇನ್ನು ವರದಿಗಳ …
Read More »ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಪ್ಯಾಕೆಜ್
ಹುಬ್ಬಳ್ಳಿ : ನಮ್ಮ ರಾಜ್ಯದ ಬಾರ್ಡರ್ ಈಗಾಗಲೇ ಸೀಲ್ ಆಗಿದೆ. ಮಹಾರಾಷ್ಟ್ರ ಹಳ್ಳಿಗಳು ನಮಗೆ ಬೇಡ, ಮಹಾರಾಷ್ಟ್ರದ ಮಂತ್ರಿಗಳು ನಾಯಕರು ಮುಖಂಡರು ಬೆಳಗಾವಿ ಪ್ರವೇಶ ಮಾಡದೇ ಇದ್ದರೆ ಸಾಕು. ಜನ ನೆಮ್ಮದಿಯಿಂದ ಜೀವನ ಮಾಡ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಿಕ್ಕೆ ಬರುತ್ತದೆ. ಬೆಳಗಾವಿ ಮತ್ತು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡುತ್ತೇವೆ. ಜನಕ್ಕೆ …
Read More »ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಎರಡು ಹೆಜ್ಜೆ ಮುಂದೆ ಹೋಗಿದ್ದೇವೆ: ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದ ಕುರಿತು ಹೈಕಮಾಂಡ್ ಜೊತೆ ವಿಸ್ತೃತ ಚರ್ಚೆ ನಡೆದಿದ್ದು, ಕಳೆದ ಬಾರಿಗಿಂತ ಎರಡು ಹೆಜ್ಜೆ ಮುಂದೆ ಹೋಗಿದ್ದೇವೆ. ಸಂಪುಟ ವಿಸ್ತರಣೆ ವಿಷಯ ಅಂತಿಮ ಹಂತಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಒಂದು ಪ್ರಕ್ರಿಯೆ, ಇದೀಗ ಈ ವಿಷಯದಲ್ಲಿ ಕಳೆದ ಬಾರಿಗಿಂತ ಎರಡು …
Read More »ಸರ್ ಕೊಲೆ ಮಾಡ್ತಾರೆ ಬದುಕಿಸಿ: ಪೊಲೀಸರಿಗೆ ಗೋಗರೆದು ಶರಣಾದ ರೌಡಿ ಶೀಟರ್ ಸ್ಟಾರ್ ನವೀನ್
ಬೆಂಗಳೂರು : ಬೆಂಗಳೂರು ಸಿಸಿಬಿ ಮತ್ತು ಸೌಥ್ ಪೊಲೀಸರು ಹುಡುಕಾಡುತ್ತಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಸ್ಟಾರ್ ಇದ್ದಕ್ಕಿದ್ದಂತೆ ಸಿದ್ದಾಪುರ ಪೊಲೀಸರಿಗೆ ಕರೆ ಮಾಡಿ ಸರ್ ನನ್ನ ಉಳಿಸಿ, ಇಲ್ಲದಿದ್ದರೆ ನನ್ನ ಕೊಲೆ ಮಾಡುತ್ತಾರೆ ಎಂದು ಗೋಗರೆದಿದ್ದ. ಇನ್ನೂ ನವೀನ ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಫಾಲೋ ಮಾಡಿದ ಗ್ಯಾಂಗ್‌ನಿಂದ ಈತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಮೈಸೂರಿಗೆ ಎದುರಾಳಿಗಳಿಗೆ ಮೆಸೇಜ್ ಪಾಸ್ ಮಾಡಿದ್ದ ವಿಷಯ ಕೇಳಿಸಿಕೊಂಡು ಜಾಗೃತನಾದ ರೌಡಿಶೀಟರ್ ನವೀನ ತಕ್ಷಣ ಸಿಸಿಬಿ …
Read More »8 ತಿಂಗಳು ತಿರುಪತಿ ತಿಮ್ಮಪ್ಪನ ದರ್ಶನ ಬಂದ್.?
ತಿರುಪತಿ: ಗರ್ಭಗುಡಿ ಮೇಲಿನ ಗೋಪುರದ ಚಿನ್ನದ ಲೇಪನ ಕಾರ್ಯ ಕೈಗೊಳ್ಳುವುದರಿಂದ ಎಂಟು ತಿಂಗಳ ಕಾಲ ತಿರುಪತಿ ತಿರುಮಲದಲ್ಲಿ ತಿಮ್ಮಪ್ಪನ ದರ್ಶನ ಬಂದ್ ಆಗಲಿದೆ. ತಾತ್ಕಾಲಿಕವಾಗಿ ಗರ್ಭಗುಡಿ ನಿರ್ಮಿಸಿ ಭಕ್ತರಿಗೆ ದರ್ಶನ ಕಲ್ಪಿಸಲು ಚಿಂತನೆ ನಡೆದಿದೆ. ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಾರ್ಷಿಕ ಒಂದು ಕೋಟಿಗೂ ಅಧಿಕ ಭಕ್ತರು ಬರುತ್ತಾರೆ. ಗರ್ಭಗುಡಿಯನ್ನು ಕನಿಷ್ಠ ಆರರಿಂದ ಎಂಟು ತಿಂಗಳ ಕಾಲ ಮುಚ್ಚುವ ಸಾಧ್ಯತೆ ಇದ್ದು, ಗರ್ಭಗುಡಿಯ ಮೇಲೆ ಮೂರು ಅಂತಸ್ತಿನ …
Read More »ವಿಧಾನಸಭೆಯಲ್ಲಿ `SC-ST’ ಮೀಸಲಾತಿ ಹೆಚ್ಚಳ ಮಸೂದೆ ಪಾಸ್
ಬೆಳಗಾವಿ : ಪರಿಶಿಷ್ಟ ಜಾತಿ (SC) ಮತ್ತು ಪಂಗಡದ (ST) ವರ್ಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಹೆಚ್ಚಿಸುವ ಮಸೂದೆಗೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ನೀಡಿದೆ. ಈ ಮೂಲಕ ಎಸ್ ಸಿ ಗೆ ಪ್ರಸ್ತುತ ಶೇ. 15 ರಷ್ಟು ಇದ್ದ ಮೀಸಲು 17 ಕ್ಕೆ ಹಾಗೂ ಎಸ್ ಟಿ ಗೆ ಇದ್ದ ಶೇ. 3 ರಷ್ಟು ಮೀಸಲು ಶೇ. 7 ಕ್ಕೆ ಹೆಚ್ಚಾಗಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ …
Read More »ವರಿಷ್ಠರ ಸಮ್ಮತಿ ದೊರೆಯದ ಕಾರಣ ಮತ್ತೆ ಸಂಪುಟ ವಿಸ್ತರಣೆ ಠುಸ್ ಆಗಿದೆ? ಸಿ.ಎಂ ಬೊಮ್ಮಾಯಿ
ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ ಹೊತ್ತು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಎರಡೂವರೆ ಗಂಟೆಗಳ ಕಾಲ ಸಭೆ ನಡೆಸಿದರು. ಆದರೆ ವರಿಷ್ಠರ ಸಮ್ಮತಿ ದೊರೆಯದ ಕಾರಣ, ಸಂಪುಟ ವಿಸ್ತರಣೆ ಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್, ಕರ್ನಾಟಕ ಉಸ್ತುವಾರಿ ಅರುಣ್ …
Read More »ಮಾಳಿ ಸಮುದಾಯದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ
ಮುಗಳಖೋಡ: ‘ಮಾಳಿ/ ಮಾಲಗಾರದಂತಹ ಸಣ್ಣ ವೃತ್ತಿಪರ ಸಮುದಾಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹400 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದಲ್ಲಿ ಸೋಮವಾರ ನಡೆದ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮುದಾಯದ ರಾಜ್ಯಮಟ್ಟದ ದ್ವಿತೀಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ‘ಕಂಬಾರ, ಕುಂಬಾರ, ಪತ್ತಾರ, ಕ್ಷೌರಿಕ, ನೇಕಾರ ಸೇರಿದಂತೆ ಹಲವು ಸಣ್ಣ ಸಮಯದಾಯಗಳು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ. ಸರ್ಕಾರ ಸದಾ ನಿಮ್ಮೊಂದಿಗೆ ಇರುತ್ತದೆ. ಮುಂದಿನ ದಿನಗಳಲ್ಲಿ ನಿಮ್ಮ …
Read More »ಕೆಪಿಟಿಸಿಎಲ್ ಮಾದರಿ ಪಿಎಸ್‌ಐಗೆ ಏಕಿಲ್ಲ? PSI ನೇಮಕಾತಿ ಪರೀಕ್ಷೆ ಪಾಸಾದವರ ಅಳಲು
ಬೆಳಗಾವಿ: ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪಿಗಳನ್ನು ಬಿಟ್ಟು, ಉಳಿದವರಿಗೆ ನೇಮಕಾತಿ ಆದೇಶ ನೀಡಲು ರಾಜ್ಯ ಸಾರ್ಕಾರ ನಿರ್ಧರಿಸಿದೆ. ಇದೇ ರೀತಿಯ ನಿಲುವನ್ನು 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆದವರ ಬಗ್ಗೆ ಏಕೆ ತಾಳುತ್ತಿಲ್ಲ ಎಂದು ಅಭ್ಯರ್ಥಿಗಳು ಪ್ರಶ್ನೆ ಎತ್ತಿದ್ದಾರೆ. ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ, ಒಎಂಆರ್ ಶೀಟ್ ತಿದ್ದುವ ಮೂಲಕ ಅಕ್ರಮ ಎಸಗಲಾಗಿದೆ. ಇದೇ ಮಾದರಿಯ ಅಕ್ರಮಗಳು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯಲ್ಲೂ ನಡೆದಿವೆ. …
Read More »