ಬೆಂಗಳೂರು: ಐಟಿ-ಬಿಟಿ ಮತ್ತು ಸಂಬಂಧಿತ ಉದ್ಯಮಗಳಿಗೆ ಉತ್ತೇಜನ ನೀಡುವ ಬೆಂಗಳೂರು ಟೆಕ್ ಶೃಂಗಸಭೆ (ಬಿಟಿಎಸ್)ಯ 25ನೇ ಆವೃತ್ತಿ ಬುಧವಾರ ಆರಂಭವಾಗಲಿದೆ. ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್‌ಟಿಪಿಐ) ಸಹಯೋಗ ದೊಂದಿಗೆ ಬೆಂಗಳೂರು ಅರಮನೆಯಲ್ಲಿ ಶೃಂಗ ಸಭೆ ನಡೆಸಲಾಗುತ್ತಿದೆ. ಶೃಂಗಸಭೆ ನ. 18ರ ವರೆಗೆ ನಡೆಯಲಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಅವರ ಧ್ವನಿಮುದ್ರಿತ ಸಂದೇಶದೊಂದಿಗೆ ಶೃಂಗಸಭೆಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಫಿನ್‌ಲ್ಯಾಂಡ್ ನ ವಿಜ್ಞಾನ …
Read More »Yearly Archives: 2022
ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸರಕಾರದ ಹಂತಕ್ಕೆ
ಬೆಂಗಳೂರು: ಲೈಂಗಿಕ ಹಗರಣದಲ್ಲಿ ಸಿಲುಕಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜೈಲು ಸೇರಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ ಈಗ ಸರ್ಕಾರದ ಹಂತಕ್ಕೆ ತಲುಪಿದೆ. ಮಠದ ಆಡಳಿತಾಧಿಕಾರಿ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಡತವನ್ನು ಸರ್ಕಾರ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದ್ದು, ಸರ್ಕಾರ ಶೀಘ್ರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಕಡತ ಈಗ ಕಂದಾಯ ಇಲಾಖೆ ಕಾರ್ಯದರ್ಶಿ ಕಚೇರಿಯನ್ನು ತಲುಪಿದ್ದು, …
Read More »ಮಕ್ಕಳ ಅಭಿವೃದ್ಧಿ ಮೇಲಿದೆ ದೇಶದ ಭವಿಷ್ಯ; ಮಲಿಕಜಾನ
ಬೆಳಗಾವಿ: ಪ್ರತಿಯೊಂದು ದೇಶದ ಭವಿಷ್ಯ ಅಲ್ಲಿಯ ಮಕ್ಕಳ ಸಮಗ್ರ ಅಭಿವೃದ್ಧಿಯ ಮೇಲೆ ನಿಂತಿದೆ. ಮಕ್ಕಳ ಅಭಿವೃದ್ಧಿಯು ಅವರ ಶಿಕ್ಷಣದ ಮೇಲಿದೆ. ಹೀಗಾಗಿ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಹೆಚ್ಚಿನ ಗಮನ ಕೊಡಬೇಕಿದೆ ಎಂದು ಶಿಕ್ಷಕ ಮಲಿಕಜಾನ ಗದಗಿನ ಹೇಳಿದರು. ಕಣಬರಗಿಯ ಶ್ರೀ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಮತಾ ಶಾಲೆಯಲ್ಲಿ ಜರುಗಿದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪಂಚ ವಾರ್ಷಿಕ ಯೋಜನೆಗಳ ಮೂಲಕ ಕೃಷಿ, ಕೈಗಾರಿಕೆ …
Read More »300ರಲ್ಲಿ 43 ಹುದ್ದೆ ಭರ್ತಿಗೆ ಪ್ರಸ್ತಾವ; ಉದ್ಯೋಗ ಆಕಾಂಕ್ಷಿಗಳ ಆಕ್ರೋಶ
ಬೆಂಗಳೂರು: ಕೆಎಎಸ್ (ಕಿರಿಯ ಶ್ರೇಣಿ) 40 ಹುದ್ದೆಗಳು ಸೇರಿದಂತೆ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 300ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದರೂ, ಕೇವಲ 43 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಪ್ರಸ್ತಾವ ಕಳುಹಿಸಿರುವುದು ಉದ್ಯೋಗ ಆಕಾಂಕ್ಷಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಪ್ರಸ್ತಾವದ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಸ್ಪಷ್ಟನೆ ಕೇಳಿರುವ ಕೆಪಿಎಸ್‌ಸಿ, ನ. 1ರಿಂದ …
Read More »ಸುರಕೋಡ: ಪ್ರೀತಿಸಿ ಮದುವೆಯಾದ ಜೋಡಿಗೆ ಸ್ವಜಾತಿಯವರಿಂದಲೇ ಬಹಿಷ್ಕಾರ
ನರಗುಂದ (ಗದಗ ಜಿಲ್ಲೆ): ಪ್ರೀತಿಸಿ ಮದುವೆಯಾದ ಒಂದೇ ಜಾತಿಯ ಯುವಕ, ಯುವತಿ 14 ವರ್ಷಗಳ ನಂತರ ಗ್ರಾಮಕ್ಕೆ ಬಂದಿದ್ದು, ಅವರ ಕುಟುಂಬವನ್ನು ಅದೇ ಜಾತಿಯವರು ಬಹಿಷ್ಕರಿಸಿದ ಪ್ರಕರಣ ತಾಲ್ಲೂಕಿನ ಸುರಕೋಡದಲ್ಲಿ ನಡೆದಿದೆ. ಶೋಭಾ ಮತ್ತು ಶಿವಾನಂದ ಅವರ ಕುಟುಂಬ ಬಹಿಷ್ಕಾರಕ್ಕೊಳಗಾಗಿದೆ. ಶೋಭಾ ಮತ್ತು ಶಿವಾನಂದ ಅವರ ಕುಟುಂಬ ಬಹಿಷ್ಕಾರಕ್ಕೊಳಗಾಗಿದೆ. ‘ಶೋಭಾ ಮನೆಯವರು ಕೆಲವರೊಂದಿಗೆ ಬಂದು ಶಿವಾನಂದ ಸುರಕೋಡ (ಮಾದರ) ಅವರ ತಂದೆ ಸಾಬಣ್ಣನವರ ಮನೆಗೆ ಕೀಲಿ ಹಾಕಿ ಕುಟುಂಬವನ್ನು ಹೊರಹಾಕಿದ್ದಾರೆ. …
Read More »ಚಿತ್ರದುರ್ಗ ಮಠದ ಮಾಜಿ ಆಡಳಿತಾಧಿಕಾರಿಗೆ ನ್ಯಾಯಾಂಗ ಬಂಧನ
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಪೋಕ್ಸೊ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಆರೋಪದಡಿ ಬಂಧಿತರಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಅವರಿಗೆ ಜಿಲ್ಲಾ ನ್ಯಾಯಾಲಯ ನ.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿದ ಪರಿಣಾಮ ತನಿಖಾ ತಂಡ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿತು. ಪೊಲೀಸ್ ವಿಚಾರಣೆ ಪೂರ್ಣಗೊಂಡಿದ್ದರಿಂದ ಇಬ್ಬರು …
Read More »ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ: ಬಿಜೆಪಿ ಮುಖಂಡ ಬಂಧನ, ಬಿಡುಗಡೆ
ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ನಗರದ ಬ್ರಹ್ಮಪುರ ಠಾಣೆಯ ಪೊಲೀಸರು ಹೈದರಾಬಾದ್‌ನಲ್ಲಿ ಭಾನುವಾರ ರಾತ್ರಿ ಬಂಧಿಸಿದರು. ಬಳಿಕ ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು. ‘ಸಾಯಲು ಸಿದ್ಧ, ಶೂಟ್ ಮಾಡಲು ಸಿದ್ಧ’ ಎಂಬ ಹೇಳಿಕೆ ನೀಡಿ ಪ್ರಿಯಾಂಕ್ ಖರ್ಗೆ ಅವರಿಗೆ ಜೀವಬೆದರಿಕೆ ಒಡ್ಡಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ತಿಪ್ಪಣ್ಣಪ್ಪ ದೂರು ನೀಡಿದ್ದರು. 9 …
Read More »ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ಜತೆ ಮೈತ್ರಿಯಿಲ್ಲ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಮನೆಗೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿಯು ಜೆಡಿಎಸ್‌ಗೆ ಬೆಂಬಲ ನೀಡಲಿದೆ ಎಂದು …
Read More »ಬಸವಲಿಂಗ ಶ್ರೀ ಆತ್ಮಹತ್ಯೆ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ರಾಮನಗರ: ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 29ರವರೆಗೆ ವಿಸ್ತರಿಸಿ ನ್ಯಾಯಾಲಯವು ಮಂಗಳವಾರ ಆದೇಶಿಸಿತು. ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ ಮಾಗಡಿ ಜೆಎಂಎಫ್ ಸಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಅವರ ಎದುರು ಹಾಜರುಪಡಿಸಿದರು. ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ …
Read More »ಕ್ರಿಕೆಟ್ ತಾರೆ ರಾಜೇಶ್ವರಿ ಗಾಯಕವಾಡಗೆ ಗೌರವ ಡಾಕ್ಟರೇಟ್ ಪ್ರದಾನ
ವಿಜಯಪುರ: ಮಹಿಳಾ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ವಿಜಯಪುರದ ಹೆಮ್ಮೆಯ ಕ್ರೀಡಾಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಉದಯಪುರ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ರಾಜೇಶ್ವರಿ ಗಾಯಕವಾಡ ಅವರಿಗೆ ಎಸ್.ಪಿ.ಎಸ್.ಯು ಅಧ್ಯಕ್ಷರಾದ ಡಾ.ಪದ್ಮಕಲಿ ಬ್ಯಾನರ್ಜಿ ಹಾಗೂ ಡಾ.ನಿಧಿಪತಿ ಸಿಂಗಾನಿಯಾ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯೊಬ್ಬರಿಗೆ ಈ ಗೌರವ ಡಾಕ್ಟರೇಟ್ ದೊರೆತಿದೆ.
Read More »