ಹುಬ್ಬಳ್ಳಿ: ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿಯನ್ನು ಅಪಹರಿಸಿದ ಘಟನೆ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋಕುಲ ರಸ್ತೆ ಅಕ್ಷಯ ಪಾರ್ಕ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಂಜುನಾಥ ಎಂಬಾತ ಯುವತಿಯನ್ನು ಮಾತನಾಡಿಸಿದ್ದ. ಇದೇ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿತ್ತು. ಬಳಿಕ ನಾಲ್ವರು ಯುವಕರ ಗುಂಪು ವಿದ್ಯಾರ್ಥಿ ಮಂಜುನಾಥನನ್ನು ಅಪಹರಿಸಿ ಕುಸುಗಲ್ ರಸ್ತೆಯ ಮಿಡ್ ಮ್ಯಾಕ್ ಹಿಂಬದಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮನಸೋಇಚ್ಛೆ ಹಲ್ಲೆ ನಡೆಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಗೋಕುಲ …
Read More »Yearly Archives: 2022
ಕಾಂತಾರಾ ವೇಷದಲ್ಲಿ ಬಂದ ತಹಶೀಲ್ದಾರ್; ತಬ್ಬಿಬ್ಬಾದ ಅಧಿಕಾರಿಗಳು
ಹೈದರಾಬಾದ್: ರಿಷಬ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕನ್ನಡದ ಕಾಂತಾರ ಸಿನಿಮಾ ಪರಭಾಷೆಗಳಲ್ಲೂ ಮೋಡಿ ಮಾಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡಿಗರು ಮಾತ್ರವಲ್ಲ ತೆಲುಗು, ತಮಿಳು, ಮಲಯಾಳಂ, ಬಾಲಿವುಡ್ ಸಿನಿ ರಸಿಕರು ಕೂಡ ಕಾಂತಾರಾ ಮೋಡಿಗೆ ಒಳಗಾಗಿದ್ದಾರೆ. ಇಲ್ಲೊಬ್ಬ ತಹಶೀಲ್ದಾರ್ ಕಾಂತಾರಾ ವೇಷದಲ್ಲಿ ಆಗಮಿಸಿ ಅಧಿಕಾರಿಗಳನ್ನೇ ತಬ್ಬಿಬ್ಬುಗೊಳಿಸಿರುವ ಘಟನೆ ಆಂದ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ತೆರಿಗೆ ಇಲಾಖೆಯು ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗುಂಟೂರಿನ ನಾಗಾರ್ಜುನ ಯುನಿವೆರ್ಸಿಟಿಯಲ್ಲಿ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ವಿಜಯನಗರಂ ಜಿಲ್ಲೆಯ …
Read More »ದರ ಏರಿಕೆಗೆ ಬ್ರೇಕ್; ನಂದಿನಿ ಹಾಲು, ಮೊಸರು ದರ ಹೆಚ್ಚಳ ತೀರ್ಮಾನಕ್ಕೆ ಸಿಎಂ ತಡೆ
ಬೆಂಗಳೂರು: ಹಾಲು ದರ ಲೀಟರ್‌ಗೆ ಮೂರು ರೂಪಾಯಿ ಹೆಚ್ಚಳ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ತೀರ್ಮಾನವನ್ನು ತಡೆಹಿಡಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನ.20ರ ನಂತರ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹಾಲು ಮತ್ತು ಮೊಸರು ದರ ಏರಿಕೆ ಘೋಷಣೆ ಹೊರಬಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಜತೆ ದೂರವಾಣಿ ಮೂಲಕ ಮಾತನಾಡಿ ದರ ಏರಿಕೆ ತೀರ್ಮಾನ …
Read More »ಕಾಂಗ್ರೆಸ್ ಟಿಕೆಟ್ ಗೆ ಅರ್ಜಿಗಳ ಮಹಾಪೂರ ಸುಮಾರು 300 ಕ್ಕೂ ಹೆಚ್ಚು ಜನರು ಇದುವರೆಗೆ ಅರ್ಜಿ
ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಅರ್ಜಿ ಸಲ್ಲಿಕೆಗೆ ಇನ್ನು ಒಂದೇ ದಿನ ಬಾಕಿ ಇದ್ದು ಇಂದು ಆಕಾಂಕ್ಷಿಗಳು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಮುಗಿಬಿದ್ದರು. ಸುಮಾರು 300 ಕ್ಕೂ ಹೆಚ್ಚು ಜನರು ಇದುವರೆಗೆ ಅರ್ಜಿ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಕೆಲವರು ಜನ-ಧನ ಬಲದ ಶಕ್ತಿ ಪ್ರದರ್ಶನ ನಡೆಸಿದರು. ನೂರಾರು ಬೆಂಬಲಿಗರ ಜೊತೆಗೆ ಬಂದು ಆಕಾಂಕ್ಷಿಗಳು ಟಿಕೆಟ್ ಗೆ ಅರ್ಜಿ ಸಲ್ಲಿಸಿದರು. ಕೆಲವರು ಈ ಸಂದರ್ಭದಲ್ಲಿ ಮುಹೂರ್ತಕ್ಕೂ ಆದ್ಯತೆ ನೀಡಿದ್ದರು. ಮಂಡ್ಯ,ಶಿವಮೊಗ್ಗ, ರಾಯಚೂರು, …
Read More »ಸಿದ್ದರಾಮಯ್ಯ ಅವರನ್ನು ಸ್ವಪಕ್ಷದವರೇ ಸೋಲಿಸುತ್ತಾರೆ: H.D.K.
ಬೆಂಗಳೂರು: ಮುಂಬರುವ ಚುನಾವಣೆಗೆ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ- ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಅವರು. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್‌ಗೆ ಬಿಜೆಪಿ ಬೆಂಬಲ ಎಂದು ಕೆಲವೆಡೆ ವರದಿ ಆಗಿದೆ. ಯಾವುದೇ ಕಾರಣಕ್ಕೂ ಆ ಪಕ್ಷದ ಜತೆ …
Read More »ದಿಲ್ಲಿ – ಹುಬ್ಬಳ್ಳಿ ನಡುವೆ ನಿತ್ಯ ವಿಮಾನ ಸೇವೆಗೆ ಚಾಲನೆ
ಹುಬ್ಬಳ್ಳಿ: ಬಹು ದಿನಗಳ ಬೇಡಿಕೆಯಾಗಿದ್ದ ದಿಲ್ಲಿ – ಹುಬ್ಬಳ್ಳಿ ವಿಮಾನಯಾನಕ್ಕೆ ಸೋಮವಾರ ಕೇಂದ್ರ ನಾಗರಿಕರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹಸುರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಇದೇ ವಿಮಾನದಲ್ಲಿ ಪ್ರಹ್ಲಾದ ಜೋಷಿ ದಿಲ್ಲಿಗೆ ತೆರಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನೂತನ ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಹ್ಲಾದ ಜೋಷಿ, ಹುಬ್ಬಳ್ಳಿ-ದಿಲ್ಲಿ ನಡುವೆ ನೇರ ವಿಮಾನ …
Read More »ಈ ಬಾರಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ: ಶಿಕ್ಷಣ ಇಲಾಖೆ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಪ್ರಸಕ್ತ ವರ್ಷದಿಂದ ಪುನರಾರಂಭಿಸಲು ಶಿಕ್ಷಣ ಇಲಾಖೆ ಅನುಮತಿ ಕೊಟ್ಟಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆ ನವೀಕರಿಸಿಕೊಂಡಿರುವ ಖಾಸಗಿ ಶಾಲೆಗಳು ಮಾತ್ರ ಪ್ರವಾಸ ಕೈಗೊಳ್ಳಬಹುದಾಗಿದೆ. ಮಾನ್ಯತೆ ನವೀಕರಿಸಿಕೊಳ್ಳದ ಶಾಲೆಗಳಿಗೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯಲು ಅವಕಾಶ ನೀಡಲಿಲ್ಲ. ಪ್ರವಾಸದ ಸಮಯದಲ್ಲಿ ಅವಘಡ ಸಂಭವಿಸಿದರೆ ಶಾಲೆಯ ಮುಖ್ಯಸ್ಥರೇ ಹೊಣೆಗಾರರಾಗಿರುತ್ತಾರೆ. ಇಲಾಖೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು …
Read More »ಮಕ್ಕಳ ದಿನಾಚರಣೆ: ಮಕ್ಕಳ ಕಲ್ಯಾಣ ಕಾರ್ಯ ನಿರ್ವಹಣೆ ನಮ್ಮೆಲ್ಲರ ಹೊಣೆ: ರಾಜ್ಯಪಾಲರು
ಬೆಂಗಳೂರು: ಮಕ್ಕಳ ಮಾನಸಿಕ, ಬೌದ್ಧಿಕ ಮತ್ತು ದೈಹಿಕ ಬೆಳವಣಿಗೆ ಹಾಗೂ ಶಿಸ್ತಿನ ದೃಷ್ಟಿಯಿಂದ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ರಾಜ್ಯಪಾಲರು ಥಾವರ್ ಚಂದ್ ಗೆಹಲೋತ್ ಹೇಳಿದರು. ಸೋಮವಾರ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಮಗುವಿಗೆ ತನ್ನ ಮನೆಯೇ ಶಿಕ್ಷಣ, ಸಂಸ್ಕೃತಿ ಹಾಗೂ ಇಡೀ ಜೀವನ ಸಾಮರ್ಥ್ಯದ ಅಡಿಪಾಯ. ಆದ್ದರಿಂದ ಬಾಲ್ಯದಲ್ಲಿ ಹೇಳಿದ ಸ್ಪೂರ್ತಿದಾಯಕ ಕಥೆಗಳು, ಬೋಧನೆಗಳು ಮತ್ತು ಜ್ಞಾನವು ಮಗುವಿನ ಜೀವನದುದ್ದಕ್ಕೂ ಮಾರ್ಗದರ್ಶನ …
Read More »ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮತ್ತೆ ಇಡಿ ಮುಂದೆ ಹಾಜರಾದ ಡಿ.ಕೆ.ಶಿ.
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಮತ್ತೆ ದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಫೆಡರಲ್ ಏಜೆನ್ಸಿ ಅವರ ಹೇಳಿಕೆಯನ್ನು ದಾಖಲಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ”ತನಿಖೆಗೆ ಸಂಬಂಧಿಸಿದಂತೆ ಸಂಸ್ಥೆಯು ಕೇಳಿದ ಎಲ್ಲಾ ದಾಖಲೆಗಳನ್ನು …
Read More »ವಾಹನ ಕೆಟ್ಟು ನಿಂತು ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರದಂದು ವಾರಾಂತ್ಯ ದಿನವಾದ್ದರಿಂದ ಚಾರ್ಮಾಡಿ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಪೊಲೀಸ್ ಡಿಆರ್ ವಾಹನ ಕೆಟ್ಟು ನಿಂತು ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ ರಸ್ತೆಗೆ ಕೆಟ್ಟು ನಿಂತಿದ್ದರಿಂದ ಪ್ರವಾಸಿಗರು ಪರದಾಡುವಂತಾಯಿತು.ಎರಡು ಬದಿಯಿಂದ ವಾಹನಗಳು ಏಕಕಾಲದಲ್ಲಿ ಸಂಚರಿಸಲಾಗದೇ ಕಿ.ಮೀ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನ ಕೆಟ್ಟು ನಿಂತಿದ್ದರಿಂದ ಒಂದು ಬದಿ ವಾಹನ ಸಾಗಲು ಹರಸಾಹಸ ಪಡಬೇಕಾಯಿತು.ವಾರಾಂತ್ಯ ಆದುದರಿಂದ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು.ಸಂಜೆ …
Read More »