Breaking News

Yearly Archives: 2022

ಶಿಕ್ಷಣದಲ್ಲಿ ಕೇಸರೀಕರಣ ಇಲ್ಲ: ಬೊಮ್ಮಾಯಿ

ಕಲಬುರಗಿ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯದಾದ್ಯಂತ ವಿವೇಕ ಹೆಸರಿನ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ವಿವೇಕರ ಹೆಸರಿನಲ್ಲಿ ಕೊಠಡಿ ನಿರ್ಮಾಣ ಮಾಡುವುದು ಕೇಸರೀಕರಣವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ವಿವೇಕರ ಹೆಸರಿನಲ್ಲಿ ಕೊಠಡಿ ನಿರ್ಮಾಣ ಮಾಡುವುದು ಕೇಸರೀಕರಣವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಕಲಬುರಗಿ ವಿಮಾನ ನಿಲ್ದಾಣದ ಬಳಿ ಇರುವ ಮಡಿಹಾಳ ಗ್ರಾಮದಲ್ಲಿ ಸೋಮವಾರ ವಿವೇಕ ಹೆಸರಿನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದಿಂದ ಎರಡು ಎಕರೆ ಜಾಗ ಕೊಡಿ ಹುಕ್ಕೇರಿ ಹಿರೇಮಠ ಶ್ರೀ ಗೋವಾ ಸಿಎಂಗೆ ಮನವಿ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದಿಂದ ಎರಡು ಎಕರೆ ಜಾಗ ಕೊಡುವುದಾಗಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕಳೆದ ಬಾರಿ ಇದೇ ವೇದಿಕೆಯಲ್ಲಿ ಭರವಸೆ ನೀಡಿದ್ದರು. ಆದರೆ ಅದು ಈಡೇರಿಲ್ಲ ಎಂದು ಹುಕ್ಕೇರಿ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.   ಗೋವಾದ ಬಿಚೋಲಿಯ ಹೀರಾಬಾಯಿ ಸಭಾಗೃಹದಲ್ಲಿ ಕರ್ಮಭೂಮಿ ಕನ್ನಡ ಸಂಘ ಹಾಗೂ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ಕನ್ನಡಿಗರ 14 …

Read More »

ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ., ಕೋಲಾರದಿಂದ ಸ್ಪರ್ಧೆ ಮಾಡಿದರೂ ಸೋಲು ಖಚಿತ.: ಕಾರಜೋಳ

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಯಾವುದೇ ಕ್ಷೇತ್ರ ಸಿಗುವುದಿಲ್ಲ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ನಡೆಸಿದರೂ ಸೋಲುವುದು ಖಚಿತ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಸೋಮವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅವರು ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ. ಕೋಲಾರದಿಂದ ಸ್ಪರ್ಧೆ ಮಾಡಿದರೂ ಅವರ ಸೋಲು ಖಚಿತ. ಕಾಂಗ್ರೆಸ್ ಮುಳುಗುವ ಹಡಗು. ಕಾಂಗ್ರೆಸ್ ಪರಿಸ್ಥಿತಿ ಯಾವ ರೀತಿ ಬಂದಿದೆ …

Read More »

ಸತೀಶ ಜಾರಕಿಹೊಳಿ ಬೆಂಬಲಿಗರ ಶಕ್ತಿ ಪ್ರದರ್ಶನ ಬೃಹತ್ ಪ್ರತಿಭಟನಾ ರ್ಯಾಲಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಿಂದೂ ಹೇಳಿಕೆಯನ್ನು ಮುಂದಿಟ್ಟುಕೊಂಡು ಅವರ ವಿರುದ್ಧ ಸಮರ ಸಾರಿದ್ದ ಬಿಜೆಪಿ, ಹಿಂದೂಪರ ಸಂಘಟನೆಗಳ ವಿರುದ್ಧ ಇಂದು ಸತೀಶ ಬೆಂಬಲಿಗರು, ವಿವಿಧ ದಲಿತ ಸಂಘಟನೆಗಳು ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನ ಮಾಡಿದವು. ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವ ಮೂಲಕ ನಾವೆಲ್ಲಾ ಸತೀಶ ಜಾರಕಿಹೊಳಿ ಅವರ ಜೊತೆಗೆ ಇದ್ದೇವೆ ಎಂಬ ಸಂದೇಶವನ್ನು ವಿರೋಧಿಗಳಿಗೆ ರವಾನಿಸಿದ್ದಾರೆ. ಹೌದು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹಿಂದೂ ಹೇಳಿಕೆ ವಿರುದ್ಧ ಸಿಡಿದೆದ್ದಿದ್ದ ಬಿಜೆಪಿ …

Read More »

ಬೆಂಗಳೂರಿನ ವಿಮಾನ ನಿಲ್ದಾಣದ ಮೇಲೆ ಅದಾನಿ ಕಣ್ಣು!

ಬೆಂಗಳೂರು, ನ. 14: ಮಂಗಳೂರು, ಅಹಮದಾಬಾದ್, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗ ನಂತರ ಈಗ ಅದಾನಿ ಗ್ರೂಪ್ ಕಣ್ಣು ಬೆಂಗಳೂರು ವಿಮಾನ ನಿಲ್ದಾಣದ ಮೇಲೂ ಬಿದ್ದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉಸ್ತುವಾರಿ, ಕಾರ್ಯ ನಿರ್ವಹಣೆ ಮಾಡುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಬಿಐಎಎಲ್) ಪಾಲನ್ನು ತೆಗೆದುಕೊಳ್ಳುವ ಬಗ್ಗೆ ಅದಾನಿ ಗ್ರೂಪ್ ಚಿಂತಿಸುತ್ತಿದೆ ಎಂದು ಈ ಬಗ್ಗೆ ತಿಳಿದಿರುವ ಉನ್ನತ ಮೂಲಗಳು ಮಾಹಿತಿ ನೀಡಿವೆ.   ”ಅದಾನಿ …

Read More »

ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್‌ಗೆ ಅಭಿನಂದನೆ ಸಲ್ಲಿಸಿದ ಸಚಿನ್ ತೆಂಡೂಲ್ಕರ್

ಟಿ20 ವಿಶ್ವಕಪ್‌ನ ಹೊಸ ಚಾಂಪಿಯನ್ ಆಗಿ ಇಂಗ್ಲೆಂಡ್ ತಂಡ ಹೊರಹೊಮ್ಮಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಪಾಕಿಸ್ತಾನ ತಂಡವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸುವ ಮೂಲಕ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಎರಡನೇ ಬಾರಿಗೆ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ 2010ರಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿಯೂ ಇಂಗ್ಲೆಂಡ್ ಚಾಂಪಿಯನ್ ಆಗಿತ್ತು. ಇಂಗ್ಲೆಂಡ್ ತಂಡದ ಈ ಸಾಧನೆಗೆ ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ …

Read More »

ಭೀಕರ ಅಪಘಾತ: 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ ಪಲ್ಟಿ!

ಗದಗ: ಭೀಕರ ಅಪಘಾತವೊಂದು ಸಂಭವಿಸಿದ್ದು, 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ಸೊಂದು ಪಲ್ಟಿಯಾಗಿದೆ. ಗದಗ ಜಿಲ್ಲೆಯಯಲ್ಲಿ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಗದಗ ತಾಲೂಕಿನ ಹಿರೇಕೊಪ್ಪ ಹಾಗೂ ಹುಯಿಲಗೋಳ ಗ್ರಾಮದ ನಡುವಿನ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಾರಿಗೆ ಸಂಸ್ಥೆಯೊಂದಕ್ಕೆ ಸೇರಿದ ಈ ಬಸ್, ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿದೆ. ಗದಗ ನಗರದಿಂದ ಬಳಗಾನೂರ ಗ್ರಾಮದತ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ …

Read More »

ಪ್ರವಾಸದ ಹೊತ್ತಲ್ಲೇ ಸಿಎಂ ಬೊಮ್ಮಾಯಿಗೆ ಮುಜುಗರ ತರಲು ರಾತ್ರೋರಾತ್ರಿ ಪೇಸಿಎಂ ಪೋಸ್ಟರ್ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರ್ಗಿ ಪ್ರವಾಸ ಹಿನ್ನೆಲೆಯಲ್ಲಿ ಮತ್ತೆ ಪೇಸಿಎಂ ಪೋಸ್ಟರ್ ಪ್ರತ್ಯಕ್ಷವಾಗಿವೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧ ಮತ್ತೆ ಕಾಂಗ್ರೆಸ್ ನಿಂದ ಪೇಸಿಎಂ ಅಸ್ತ್ರ ಪ್ರಯೋಗಿಸಲಾಗಿದೆ. ಕಲಬುರ್ಗಿ ನಗರದ ಹಲವು ಕಡೆ ಪೇಸಿಎಂ ಪೋಸ್ಟರ್ ಅಂಟಿಸಲಾಗಿದೆ. ರಾತ್ರೋರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರ್ಗಿ ನಗರದ ಹಲವಡೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಾರೆ. ಸಂಗಮೇಶ್ವರ ಕಾಲೋನಿ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಪೋಸ್ಟರ್ ಗಳನ್ನು ಹಚ್ಚಲಾಗಿದೆ. ಸಿಎಂಗೆ ಮುಜುಗರ ಉಂಟು …

Read More »

ರಾತ್ರೋರಾತ್ರಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ರನ್ನು ಹೈದ್ರಾಬಾದ್​ನಲ್ಲಿ ಕಲಬುರಗಿಯ ಬ್ರಹ್ಮಪುರ ಪೊಲೀಸರು ಬಂಧಿಸಿದ್ದು, ನಿನ್ನೆ(ಭಾನುವಾರ) ತಡ ರಾತ್ರಿಯೇ ಕಲಬುರಗಿಗೆ ಕರೆತಂದಿದ್ದಾರೆ. ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡುವುದಾಗಿ ಮಣಿಕಂಠ ರಾಠೋಡ್​ ಹೇಳಿಕೆ ನೀಡಿದ್ದರು. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಜೆಪಿ ಮುಖಂಡನ ಬಂಧನಕ್ಕೆ‌ ಆಗ್ರಹಿಸಿ ಕಲಬುರಗಿ ಎಸ್​ಪಿ ಕಚೇರಿ ಮುಂಭಾಗ ಕಾಂಗ್ರೆಸ್​ ಬೃಹತ್ ಪ್ರತಿಭಟನೆ ಕೂಡ ನಡೆಸಿತ್ತು. ಇಂದು(ಸೋಮವಾರ) ಕಲಬುರಗಿಗೆ …

Read More »

ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್​ಗೆ ಸಿಕ್ಕಿ ದೇಹ ಛಿದ್ರ..

ಬಾಗಲಕೋಟೆ: ಕೃಷಿ ಸಂಬಂಧಿತ ಚಟುವಟಿಕೆಗಳ ಸಂದರ್ಭ ಸಣ್ಣ ಎಡವಟ್ಟಿನಿಂದಾಗಿ ಅಂಥ ಕೆಲಸಗಾರರು ಪ್ರಾಣ ಕಳೆದುಕೊಂಡ ಪ್ರಕರಣಗಳು ಸಾಕಷ್ಟು ಸಂಭವಿಸಿವೆ. ಇಂದು ಅಂಥದ್ದೇ ಇನ್ನೊಂದು ಪ್ರಕರಣ ಸಂಭವಿಸಿದ್ದು, ಕೃಷಿ ಚಟುವಟಿಕೆ ವೇಳೆ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.   ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಈ ದುರಂತದಲ್ಲಿ ರೇಣುಕಾ ಮಾದರ (45) ಎಂಬಾಕೆ ಸಾವಿಗೀಡಾಗಿದ್ದಾರೆ. ಈಕೆ ಕೂಲಿ ಕೆಲಸಕ್ಕಾಗಿ ಬೇರೆ ಕಡೆಯಿಂದ ಬಂದಿದ್ದರು.   ಕೆಲಸದ ವೇಳೆ ಇವರು ಗೋವಿನಜೋಳ ರಾಶಿ …

Read More »