Breaking News

Yearly Archives: 2022

ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ :ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರ ಖಡಕ್ ಎಚ್ಚರಿಕೆ

ಗೋಕಾಕ್‍ನಲ್ಲಿ ನಡೆಯುವ ಬೃಹತ್ ಪಂಚಮಸಾಲಿ ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು 2ಎ ಮೀಸಲಾತಿಗೆ ಆಗ್ರಹಿಸಿ ಗೋಕಾಕ್ ನಗರದ ನ್ಯೂ ಇಂಗ್ಲಿμï ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 1ಕ್ಕೆ ಬೃಹತ್ ಪಂಚಮಸಾಲಿ ಸಮಾವೇಶ ಆಯೋಜಿಸಲಾಗಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದ್ದು ರಾಜ್ಯಸಭಾ ಸದಸ್ಯ …

Read More »

ಬಿಜೆಪಿ ಅಭಿವೃದ್ದಿ ಕಾರ್ಯಕ್ರಮಗಳಿಂದ ಜೆಡಿಎಸ್ ನಾಯಕರಿಗೆ ಹೊಟ್ಟೆಕಿಚ್ಚು; ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಬಿಜೆಪಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ‌ ಹಾಗೂ ಸಾ.ರಾ. ಮಹೇಶ ಅವರಿಗೆ ಹೊಟ್ಟೆಕಿಚ್ಚಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿಯವರ ಕುಟುಂಬ ಸರ್ಕಾರದ ಹಲವು ಉನ್ನತ ಹುದ್ದೆಯಲ್ಲಿದ್ದರೂ ಸಹ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿರಲಿಲ್ಲ. ಯಾವುದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಬಿಜೆಪಿ ಅವರ ಅಭಿವೃದ್ಧಿ ಕಾರ್ಯ ಮಾಡುತ್ತಿರುವುದು ಅವರಿಗೆ ಸಹಿಸಲಾಗುತ್ತಿಲ್ಲ ಎಂದರು. ಕೆಂಪೆಗೌಡರ …

Read More »

ಮುತಾಲಿಕ್‌ ಹೇಳಿಕೆಗೆ ಸಿಎಂ ಉತ್ತರಿಸಲಿ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಎಲ್ಲೇ ಟಿಪ್ಪು ಸುಲ್ತಾನ್‌ ಪ್ರತಿಮೆ ಸ್ಥಾಪಿಸಿದರೂ ಅದನ್ನು ಧ್ವಂಸ ಮಾಡುತ್ತೇವೆಂಬ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.   ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಎಲ್ಲ ವರ್ಗದವರ ರಕ್ಷಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದ್ದು, ಅದು ಅವರ ಕರ್ತವ್ಯವೂ ಆಗಿದೆ ಎಂದರು

Read More »

ನಾಯಿ ಆಸೆಗೆ ಬಂದು ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮದ ಜನ

ಹುಣಸೂರು : ಜನ ಜಾನುವಾರುಗಳನ್ನು ಕಾಡುತ್ತಿದ್ದ ಸುಮಾರು 3 ವರ್ಷದ ಹೆಣ್ಣು ಚಿರತೆ ಕೊನೆಗೂ ಬೋನಿನಲ್ಲಿ ಬಂಧಿಯಾಗಿದೆ. ಹುಣಸೂರು ತಾಲೂಕಿನ ವಡ್ಡಂಬಾಳು ಗ್ರಾಮದ ಸಿದ್ದರಾಜು ಅವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದೆ.   ಈ ಬಗ್ಗೆ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಗಳು ಸಿದ್ದರಾಜುರವರ ಜಮೀನಿನಲ್ಲಿ ಬೋನ್ ಇರಿಸಿ ನಾಯಿ ಕಟ್ಟಿ ಹಾಕಿದ್ದರು. ಶನಿವಾರ ರಾತ್ರಿ ನಾಯಿ ಬೇಟೆಯಾಡುವ ಆಸೆಯಿಂದ ಬೋನ್ ಹೊಕ್ಕಿದ ಚಿರತೆಯು ಬೋನಿನಲ್ಲಿ ಬಂಧಿಯಾಗಿದೆ. …

Read More »

ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿ ಅಂದರ್

ಕಿತ್ತೂರು ಪೊಲೀಸ್ ಸಬ್‌ಇನ್ಸಪೇಕ್ಟರ್ ಎಚ್‌ಎಲ್ ಧರ್ಮಟ್ಟಿ, ಬೈಲಹೊಂಗಲ ಡಿಎಸ್‌ಪಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಖಾನಾಪೂರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಶಿವಾನಂದ ಶಿವನೆಪ್ಪ ಕಾದ್ರೋಳ್ಳಿಯನ್ನು ಬಂಧಿಸಿ ಸುಮಾರು ೬೦ ಸಾವಿರ ರೂಪಾಯಿ ಮೌಲ್ಯದ ೬ ಕಿಲೋ ಗಾಂಜಾ ಗಿಡಗಳನ್ನು ಮತ್ತು ಗಾಂಜಾ ಮಾರಾಟದಿಂದ ಬಂದ ೧ ಸಾವಿರ ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ. ಕಿತ್ತೂರು ಮತ್ತು ಖಾನಾಪೂರ ಪೊಲೀಸರ ಕಾರ್ಯವನ್ನು ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಪ್ರಶಂಸಿಸಿದ್ದಾರೆ.

Read More »

ವೀರಶೈವ, ಲಿಂಗಾಯತ ಒಂದೇ ನಾಣ್ಯದ ಮುಖಗಳು: ಈಶ್ವರ ಖಂಡ್ರೆ

ತುಮಕೂರು: ಎಲ್ಲ ಧರ್ಮ, ಜಾತಿಗಳಿಗೂ ಪ್ರಪಂಚದ ಮೊದಲ ಸಂಸತ್ತು ಎನಿಸಿಕೊಂಡಿರುವ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದವರು ಬಸವೇಶ್ವರರು. ಮೌಡ್ಯದಿಂದ ಸಮಾಜವನ್ನು ಹೊರತರಬೇಕೆಂಬುದು ಅವರ ಕನಸಾಗಿತ್ತು. ಇಂತಹ ಕನಸನ್ನು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗಬೇಕಿದೆ, ವೀರಶೈವ, ಲಿಂಗಾಯತ ಎಂಬುದು ಶರಣ ಸಮಾಜವೆಂಬ ಒಂದು ನಾಣ್ಯದ ಎರಡು ಮುಖಗಳು ಎಂದು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಈಶ್ವರ ಖಂಡ್ರೆ ಹೇಳಿದರು.   ನಗರದ ಶ್ರೀ …

Read More »

ಮೋದಿ ರಾಜ್ಯಕ್ಕೆ ಬಂದಷ್ಟು ಜೆಡಿಎಸ್‌ಗೆ ಒಳಿತು: ಇಬ್ರಾಹಿಂ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಬಾರಿ ರಾಜ್ಯಕ್ಕೆ ಬಂದು ಹೋದರೂ ಅದರಿಂದ ಜೆಡಿಎಸ್‌ಗೆ ಒಳ್ಳೆಯದಾಗುತ್ತದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯನ್ನು ಒಳಗೊಳಗೆ ಕಟ್ಟಿ ಗಟ್ಟಿಗೊಳಿಸಬೇಕಾದ ಬೇಗುದಿಯಿಂದ ಪ್ರಧಾನಿಯವರು ರಾಜ್ಯಕ್ಕೆ ಪದೇಪದೆ ಭೇಟಿ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.   ಕೆಂಪೇಗೌಡರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಸಂಪೂರ್ಣ ಬಿಜೆಪಿಮಯವಾಗಿತ್ತು ಎಂದು ದೂರಿದ ಅವರು, ಜೆಡಿಎಸ್‌ನ ಸರ್ವೋಚ್ಚ ನಾಯಕರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ …

Read More »

ಬಿಜೆಪಿ ವಿರುದ್ಧ ಖಾನಾಪುರದಲ್ಲಿ ದಲಿತರ ಪ್ರತಿಭಟನೆ

ಖಾನಾಪೂರದಲ್ಲಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಸತೀಶ ಜಾರಕಿಹೊಳಿ ಅವರ ವಿರುದ್ಧ ಮಾಡಿದ ಪ್ರತಿಭಟನೆ ಖಂಡಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು. ದಿನಾಂಕ ೧೧ ರಂದು ಖಾನಾಪೂರ ತಾಲೂಕಿನ ಬಿಜೆಪಿ ಸಂಘ ಪರಿವಾರದವರು ಎಲ್ಲ ಹಿಂದೂ ಪರ ಸಂಘಟನೆಗಳು ಒಂದಾಗಿ ಖಾನಾಪೂರ ಪಟ್ಟಣದ ಶಿವಸ್ಮಾರಕದ ಎದುರು ಸತೀಶ್ ಅಣ್ಣಾ ಜಾರಕಿಹೊಳಿಯವರ ವಿರುದ್ಧ ಅವರ ಪ್ರತಿಕೃತಿಯನ್ನು ದಹಿಸಿ ಅವರ ಭಾವಚಿತ್ರಕ್ಕೆ ಅವಮಾನ ಮಾಡೋವ ಮೂಲಕ ಇಡೀ ದಲಿತ ಸಮಾಜಕ್ಕೆ ಧಕ್ಕೆ …

Read More »

ರಾಘವೇಂದ್ರ ಹುಣಸೂರು ವಿರುದ್ಧ ಭಟ್ರು ಗರಂ!

ಕನ್ನಡ ಚಲನಚಿತ್ರರಂಗದ ಯಶಸ್ವಿ ನಿರ್ದೇಶಕರಲ್ಲಿ ಓರ್ವರಾದ ಯೋಗರಾಜ್ ಭಟ್ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದಂತಹ ಪಕ್ಕಾ ಕ್ಲಾಸ್ ಡೈರೆಕ್ಟರ್. ಚಿತ್ರದ್ದಾಗಲಿ ಅಥವಾ ವೈಯಕ್ತಿಕ ಜೀವನದಲ್ಲಾಗಲಿ ಯೋಗರಾಜ್ ಭಟ್ ವಿವಾದ ಮಾಡಿಕೊಂಡು ಎಡವಿದ ಉದಾಹರಣೆಗಳಿಲ್ಲ. ಪುನೀತ್ ರಾಜ್‌ಕುಮಾರ್, ಸುದೀಪ್ ಹಾಗೂ ಗಣೇಶ್ ರೀತಿಯ ಸ್ಟಾರ್ ನಟರಿಗೆ ಚಿತ್ರ ನಿರ್ದೇಶಿಸಿರುವ ಯೋಗರಾಜ್ ಭಟ್ ನಿರ್ದೇಶನದ ಜತೆಗೆ ಓರ್ವ ಉತ್ತಮ ಚಿತ್ರಸಾಹಿತಿಯೂ ಹೌದು ಹಾಗೂ ಕಿರುತೆರೆ ರಿಯಾಲಿಟಿ ಶೋಗಳ ಜಡ್ಜ್ ಕೂಡ ಹೌದು.   ಜೀ …

Read More »

2000 ರೂ. ಮುಖಬೆಲೆಯ ನೋಟುಗಳು ಕಣ್ಮರೆಯಗುತ್ತಿವೆಯೇ?

ನವದೆಹಲಿ: 2000 ರೂಪಾಯಿ ನೋಟು ಎಲ್ಲಿ ಹೋಯಿತು? ಈ ಪ್ರಶ್ನೆಯು ಇತ್ತೀಚೆಗೆ ಎಲ್ಲರಲ್ಲೂ ಕಾಡುತ್ತಿದೆ. ಅದಕ್ಕೆ RTI ಉತ್ತರ ನೀಡಿದೆ. RTI ಉತ್ತರದ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಳೆದ ಎರಡು ವರ್ಷಗಳಲ್ಲಿ ಒಂದೇ ಒಂದು ಹೊಸ 2,000 ರೂ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಮುದ್ರಿಸಿಲ್ಲ.   ಆರ್‌ಬಿಐ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಾನ್‌ನಿಂದ ಪಡೆದ ಆರ್‌ಟಿಐ ಉತ್ತರದ ಪ್ರಕಾರ, 2019-20, 2020-21 ಮತ್ತು …

Read More »