Breaking News

Yearly Archives: 2022

ಪೊಲೀಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಅವರು ಫೋನ್ ಇನ್ ಕಾರ್ಯಕ್ರಮ ಇದೇ ನವೆಂಬರ್ 12ರಂದು 0831-2405204. ಎಸ್‍ಪಿ ರವರಿಗೆ ಕರೆ ಮಾಡಿ ಮಾತನಾಡಿ,

ಬೆಳಗಾವಿ ಜಿಲ್ಲಾ ಪೊಲೀಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಅವರು ಫೋನ್ ಇನ್ ಕಾರ್ಯಕ್ರಮವನ್ನು ಇದೇ ನವೆಂಬರ್ 12ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರ ಈಗ ಕೇವಲ ಒಂದು ಫೋನ್ ಕರೆಯ ದೂರದಲ್ಲಿ. ನೀವು ಇದ್ದಲ್ಲಿಂದ ಬೆಳಗಾವಿ ಎಸ್‍ಪಿ ರವರಿಗೆ ಕರೆ ಮಾಡಿ ಮಾತನಾಡಿ, ಈ ಕೆಳಕಂಡ ವಿಷಯಗಳ ಬಗ್ಗೆ ಮತ್ತು ಇನ್ನಿತರ ಯಾವುದೇ ವಿಷಯಗಳ ಕುರಿತಂತೆ ಕರೆ ಮಾಡಬಹುದು. …

Read More »

ಇಬ್ಬರು ಕುಖ್ಯಾತ ಅಂತರರಾಜ್ಯ ಮನೆಗಳ್ಳರನ್ನು ಬಂಧಿಸಿ, ಸುಮಾರು 1 ಕೋಟಿ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿಯ ಪೊಲೀಸರು ಯಶಸ್ವಿ

ಇಬ್ಬರು ಕುಖ್ಯಾತ ಅಂತರರಾಜ್ಯ ಮನೆಗಳ್ಳರನ್ನು ಬಂಧಿಸಿ, ಸುಮಾರು 1 ಕೋಟಿ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಬೆಳಗಾವಿ ನಗರದಲ್ಲಿ ಹಗಲಿನಲ್ಲಿಯೇ ಮನೆಗಳ ದರೋಡೆ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಪರಾಧ ಮತ್ತು ಸಂಚಾರ ಡಿಸಿಪಿ ಪಿ.ವ್ಹಿ.ಸ್ನೇಹಾ ಅವರ ನೇತೃತ್ವದಲ್ಲಿ ಎಸಿಪಿಗಳಾದ ನಾರಾಯಣ ಭರಮನಿ, ಚಂದ್ರಪ್ಪ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಸಿಪಿಐ ನಿಂಗನಗೌಡ ಪಾಟೀಲ್, ಕ್ಯಾಂಪ್ ಸಿಪಿಐ …

Read More »

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಒಟ್ಟು 6ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿ ಆದೇಶ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಒಟ್ಟು ೬ ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಮೇ ೨೧, ೧೯೯೧ ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಅವರನ್ನು ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ವೇಳೆ ರಾಜ್ಯಪಾಲರು ದೀರ್ಘಕಾಲದಿಂದ ಕ್ರಮಕೈಗೊಳ್ಳದಿದ್ದರೆ ನಾವು ತೆಗೆದುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ. ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಪೆರಾರಿವಾಲನ್ ಬಿಡುಗಡೆ ಆದೇಶವು …

Read More »

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಬೆಂಗಳೂರು: ‘ಪ್ರಗತಿಯ ಪ್ರತಿಮೆ’ ಎಂದೇ ಕರೆಯಲ್ಪಡುವ ನಾಡಪ್ರಭು ಕೆಂಪೇಗೌಡ ಅವರ 108 ಎತ್ತರದ ಪ್ರತಿಮೆಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. ಅದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ಟರ್ಮಿನಲ್ ಉದ್ಘಾಟಿಸಿದರು. ಈ ಸಮಯದಲ್ಲಿ ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿ ಹಲವರು …

Read More »

ಕರ್ನಾಟಕವನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಬೆಂಗಳೂರು: ಕೆಂಪೇಗೌಡರು ಹೇಗೆ ಕಲ್ಪನೆ ಮಾಡಿದ್ದರೋ ಹಾಗೆ ಬೆಂಗಳೂರಿನ ಅಭಿವೃದ್ಧಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಕರ್ನಾಟಕವು ಡಬಲ್ ಇಂಜಿನ್ ಬಲದಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಂದೇ ಭಾರತ್ ರೈಲು, ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ಉದ್ಘಾಟನೆ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ”ಕರ್ನಾಟಕ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು.” ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. …

Read More »

ಇಬ್ಬರು ಮಕ್ಕಳ ಕಿವುಡತನಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ: ಬೆಳಗಾವಿ K.L.E.

ಬೆಳಗಾವಿಯ ಕೆಎಲ್‍ಇ ಡಾ.ಪ್ರಭಾಕರ್ ಕೋರೆ ಆಸ್ಪತ್ರೆಯ ಎಮ್‍ಆರ್‍ಸಿ, ಇಎನ್‍ಟಿ ಮತ್ತು ಎಚ್‍ಎನ್‍ಎಸ್ ವಿಭಾಗವು ರಾಯಬಾಗ ಮತ್ತು ಬೆಳಗಾವಿಯಿಂದ ಬಂದಿದ್ದ ಇಬ್ಬರು ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡುವ ಮೂಲಕ ಸುಧಾರಿತ ವೈದ್ಯಕೀಯ ಚಿಕಿತ್ಸೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಹೌದು ಮಕ್ಕಳಲ್ಲಿ ಶಾಶ್ವತವಾಗಿ ಬಾಲ್ಯದಿಂದ ಇದ್ದ ಕಿವುಡುತನ ನಿವಾರಣೆಗಾಗಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಶ್ರವಣ ಸಾಧನಗಳ ಪ್ರಯೋಜನವನ್ನು ಪಡೆಯದ ಅಂತಹ ಮಕ್ಕಳಿಗೆ ಈ ಶಸ್ತ್ರಚಿಕಿತ್ಸೆಯು ಏಕೈಕ ಭರವಸೆಯಾಗಿದೆ. ಕೆಎಲ್‍ಇ …

Read More »

ಒಂದು ವೇಳೆ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು‌ ಹಾಕುತ್ತೇವೆ

ಮೈಸೂರಿನಲ್ಲಿ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಒಂದು ವೇಳೆ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು‌ ಹಾಕುತ್ತೇವೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಗುಡುಗಿದರು. ಇಲ್ಲಿನ ಈದ್ಗಾ ಮೈದಾನದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಶಾಸಕ ತನ್ವೀರ್ ಶೇಟ್ ಟಿಪ್ಪು ಪುತ್ಥಳಿ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ಅವಕಾಶ ನೀಡಬಾರದು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ …

Read More »

ನನಗೆ ಇನ್ನು 75 ವರ್ಷ ಆಗಿಲ್ಲ ,25 ವರ್ಷ ಶುರುವಾಗಿದೆ: ಪ್ರಭಾಕರ್ ಕೋರೆ

ನನಗೆ ಇನ್ನು 75 ವರ್ಷ ಆಗಿಲ್ಲ ಎನ್ನುವುದು ನನ್ನ ಅಭಿಪ್ರಾಯ. ಯಾಕೆಂದರೆ ಇಷ್ಟೇಲ್ಲಾ ಆಶೀರ್ವಾದ ಇದ್ದ ಮೇಲೆ ಈಗ ನನಗೆ 25 ವರ್ಷ ಶುರುವಾಗಿದೆ ಎಂದು ಕೆಎಲ್‍ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಅವರು ಹರ್ಷ ವ್ಯಕ್ತಪಡಿಸಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಮಠಾಧಿಪತಿಗಳು ವಿಷಯ ಮೇಲೆ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಮತ್ತು ಡಾ.ಪ್ರಭಾಕರ್ ಕೋರೆಯವರ ಅಮೃತ ಮಹೋತ್ಸವದ …

Read More »

ನ.20ರೊಳಗೆ ಕಬ್ಬಿಗೆ ಹೆಚ್ಚುವರಿ ಬೆಂಬಲ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರದ ಕಬ್ಬು ಖರೀದಿ ನಿಯಂತ್ರಣ ಮಂಡಳಿ ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ತೀರ್ಮಾನಮಾಡಿದ್ದಾರೆ. ಎಫ್‌ಆರ್‌ಪಿ ಹೆಚ್ಚುವರಿ ದರ ನಿಗದಿಗೆ ಸಕ್ಕರೆ ಆಯುಕ್ತರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಮಿತಿ ಐದು ದಿನದಲ್ಲಿ ವರದಿ ಕೊಡಲು ಸೂಚನೆ, 20ರ ಒಳಗಾಗಿ ವರದಿ ಆಧರಿಸಿ ಮುಖ್ಯಮಂತ್ರಿಗಳು ಹೆಚ್ಚುವರಿ ಬೆಲೆ ಘೋಷಣೆ ಮಾಡಲಿದ್ದಾರೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೆನ ಕೊಪ್ಪ ಸಬೆ ನಂತರ ತಿಳಿಸಿದರು ಕಳೆದ 11 ದಿನದಿಂದ …

Read More »

ಎರಡೇ ವಾರಕ್ಕೆ ನರ್ತಕಿಯಿಂದ ‘ಗಂಧದ ಗುಡಿ’ ಎತ್ತಂಗಡಿ: ಅಭಿಮಾನಿಗಳ ಬೇಸರ!

ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಕೊನೆಯ ಸಿನಿಮಾ ‘ಗಂಧದ ಗುಡಿ’ ಎಲ್ಲಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಪ್ಪು ಕನಸಿನ ಚಿತ್ರವನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳುತ್ತಿದ್ದಾರೆ. ಆದರೆ ಎರಡೇ ವಾರಕ್ಕೆ ಈ ಚಿತ್ರವನ್ನು ನರ್ತಕಿ ಚಿತ್ರಮಂದಿರದಿಂದ ತೆಗೆದು ಅಲ್ಲಿ ‘ರಾಣಾ’ ಚಿತ್ರವನ್ನು ಹಾಕುತ್ತಿರುವುದು ಕೆಲವರ ಬೇಸರಕ್ಕೆ ಕಾರಣವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪಿಆರ್‌ಕೆ ಪ್ರೊಡಕ್ಷನ್ಸ್ ಹಾಗೂ ಮಡ್‌ಸ್ಕಿಪರ್‌ ಜಂಟಿಯಾಗಿ ಈ ಡಾಕ್ಯೂ ಡ್ರಾಮಾ ಸಿನಿಮಾವನ್ನು ನಿರ್ಮಾಣ ಮಾಡಿವೆ. ಕರ್ನಾಟದ …

Read More »