ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್), ಬೆಸ್ಕಾಂ, ಸೆಸ್ಕ್, ಹೆಸ್ಕಾಂ, ಮೆಸ್ಕಾಂ ಮತ್ತು ಜೆಸ್ಕಾಂಗಳ ಆಡಳಿತ ವ್ಯಾಪ್ತಿಯ ಕಚೇರಿಗಳಲ್ಲಿ ಖಾಲಿ ಇರುವ 1,492 ವಿವಿಧ ಹುದ್ದೆಗಳ ನೇಮಕಾತಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆಗೆ ನಿಗದಿಪಡಿಸಿದ ಅಂಕಗಳಿಸಿದ ಅಭ್ಯರ್ಥಿಗಳ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಂಗಳವಾರ ಪ್ರಕಟಿಸಿದೆ. ಆದರೆ, ಸಹಾಯಕ ಎಂಜಿನಿಯರ್ (ವಿದ್ಯುತ್) 505 ಹುದ್ದೆಗಳಿಗೆ (ಉಳಿಕೆ ವೃಂದದ 393, ಬ್ಯಾಕ್‌ಲಾಗ್ 6 , …
Read More »Daily Archives: ಜನವರಿ 4, 2023
‘ಕೈ’ ಟಿಕೆಟ್: ಡಿಕೆಶಿ ಇಂದು ದೆಹಲಿಗೆ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸುಮಾರು 150 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಂಕ್ರಾಂತಿ (ಜ.14) ಕಳೆಯುತ್ತಿದ್ದಂತೆ ಘೋಷಿಸಲು ತಯಾರಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ವರಿಷ್ಠರ ಜೊತೆ ಸಮಾಲೋಚಿಸಲು ಬುಧವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ‘ಬುಧವಾರ ಬೆಳಿಗ್ಗೆ ತುರುವೇಕೆರೆಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಳಿಕ ದೆಹಲಿಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು …
Read More »ಶಾಲಾ ಪಠ್ಯದಲ್ಲಿ ಸಿದ್ಧೇಶ್ವರ ಸ್ವಾಮೀಜಿ ಜೀವನಗಾಥೆ: ಸಿ.ಎಂ ಬೊಮ್ಮಾಯಿ
ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ‘ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.
Read More »