Breaking News

Daily Archives: ಜನವರಿ 8, 2023

ಮುಂದಿನ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ: ಡಾ ಮಹೇಶ್ ಜೋಶಿ

ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಾವೇರಿ: ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ …

Read More »

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ 22 ಲಕ್ಷ ಜೋಳದ ರೊಟ್ಟಿ

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಭಾನುವಾರದಿಂದ ಆರಂಭವಾಗಿದ್ದು, ಜಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರ ಸಾಗರವೇ ಹರಿದು ಬರುತ್ತಿದೆ. ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಭಾನುವಾರದಿಂದ ಆರಂಭವಾಗಿದ್ದು, ಜಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರ ಸಾಗರವೇ ಹರಿದು ಬರುತ್ತಿದೆ. ಮುಂದಿನ 15 ದಿನಗಳಲ್ಲಿ ಜಿಲ್ಲೆಗೆ 10-12 ಲಕ್ಷ ಭಕ್ತರು ಭೇಟಿ ನೀಡುವ ನಿರೀಕ್ಷೆಗಳಿದ್ದು, ದಾಸೋಹದ ಅಡುಗೆಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ 22 ಲಕ್ಷ ಜೋಳದ …

Read More »

ಪ್ರತಿಭಟನೆ ಹಿಂಪಡೆದಿರುವ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಸಂಘವು ಶನಿವಾರದಿಂದ ತಮ್ಮ ಕಾರ್ಯಾಚರಣೆಯನ್ನು ಆರಂಭ

  ಬೆಂಗಳೂರು: ಪ್ರತಿಭಟನೆ ಹಿಂಪಡೆದಿರುವ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಸಂಘವು ಶನಿವಾರದಿಂದ ತಮ್ಮ ಕಾರ್ಯಾಚರಣೆಯನ್ನು ಆರಂಭ ಮಾಡಿದ್ದಾರೆ. ಕ್ವಾರಿ ಮಾಲೀಕರು ಡಿಸೆಂಬರ್ 21 ರಿಂದ ಮುಷ್ಕರ ಆರಂಭಿಸಿದ್ದರು, 2,800 ಕಲ್ಲು ಕ್ವಾರಿಗಳು ಮತ್ತು 1,980 ಸ್ಟೋನ್ ಕ್ರಷರ್ ಘಟಕಗಳಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದವು. ಇದರಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೇಲೆ ಪರಿಣಾಮ ಬೀರಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶುಕ್ರವಾರ …

Read More »

ಬಿಜೆಪಿ ಸುಳ್ಳಿಗೆ ಬಲಿಯಾಗಬೇಡಿ. ಬಿಜೆಪಿಗೆ ಸುಳ್ಳೇ ಮನೆ ದೇವರು.

ಚಿತ್ರದುರ್ಗ: ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಸಮಾಜದವರು ಅಧಿಕಾರಕ್ಕೆ ಬಂದಂತೆ. ಈ ಐಕ್ಯತಾ ಸಮಾವೇಶ ಇಡೀ ದೇಶಕ್ಕೆ ಸಂದೇಶ ರವಾನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಚಿತ್ರದುರ್ಗದಲ್ಲಿ ನಡೆದ ಐಕ್ಯತಾ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರು ಈ ನೆಲದಲ್ಲಿ ಭಾರತ ಜೋಡೋ ಯಾತ್ರೆ ಮಾಡಿದರು. ಆಗ ನೀವು ತೋರಿದ ಪ್ರೀತಿ, ವಿಶ್ವಾಸ ದೇಶಾದ್ಯಂತ ಶಕ್ತಿ ತುಂಬಿದೆ. …

Read More »

ವಿಧಾನ ಸಭೆ ಚುನಾವಣೆ ಗೆ ಸ್ವಾಮೀಜಿ ಗಳಿಗೆ ಟಿಕೆಟ್ ಕೊಡ್ತಾರಾ ಬೊಮ್ಮಾಯಿ ಹೇಳಿದ್ದೇನು..?

ಹಾವೇರಿ:  ಗೋಷ್ಠಿ, ವಿಚಾರಗಳನ್ನು ಸಮ್ಮೇಳನದ ಅಧ್ಯಕ್ಷರ ಮೂಲಕ ಪಡೆದು ಕನ್ನಡ ಸಾಹಿತ್ಯ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಸಮಾರೋಪಗೊಳ್ಳುತ್ತಿದೆ. ಕಳೆದ ಎರಡು ದಿನಗಳಿಂದ ಸಾಹಿತ್ಯದ ಕಂಪು ಇಡೀ ಕರ್ನಾಟಕಕ್ಕೆ ಪಸರಿಸಿದೆ. ಎರಡು ಲಕ್ಷಕ್ಕೂ ಹೆಚ್ಚು ಜನ …

Read More »

ದೇಶದ ಪ್ರತಿಯೊಬ್ಬರೂ ತನ್ನನ್ನು ಆರಾಧಿಸಬೇಕೆಂದು ಮೋದಿ ಬಯಸುತ್ತಾರೆ; ರಾಹುಲ್ ಗಾಂಧಿ

ಕುರುಕ್ಷೇತ್ರ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ಜನರು ತಮ್ಮನ್ನು ಆರಾಧಿಸಬೇಕೆಂದು ಬಯಸುತ್ತಾರೆ, ಆದರೆ ಕಾಂಗ್ರೆಸ್‌ನ ಗಮನವು ತಪಸ್ಸು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಭಾರತ್ ಜೋಡೋ ಯಾತ್ರೆಯು ಸಮಾಜದಲ್ಲಿ ಹರಡುತ್ತಿರುವ ದ್ವೇಷ ಮತ್ತು ಭಯದ ವಿರುದ್ಧವಾಗಿದೆ. ಯಾತ್ರೆಯು ಸಂಯಮ ಮತ್ತು ಸ್ವಯಂ ಧ್ಯಾನದ ಬಗ್ಗೆ ಸೂಚಿಸುತ್ತದೆ. ಅವರು ಪಾದಯಾತ್ರೆಯನ್ನು ತಪಸ್ಸು ಎಂದು ನೋಡುತ್ತಾರೆ ಎಂದರು. ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಗುರಿಯಾಗಿಸಿ, ಜನರು ಸಂಪತ್ತನ್ನು ಬಳಸಿ, …

Read More »

ಕಾನೂನಾತ್ಮಕ ಅನುಮತಿ ಪಡೆದು ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣ: ಕವಟಗಿಮಠ

ಚಿಕ್ಕೋಡಿ: ಚಿಕ್ಕೋಡಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಕಿತ್ತೂರ ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣಕ್ಕೆ ಕೆಲವು ರಾಜಕೀಯ ಹಿತಾಸಕ್ತಿಗಳು ವಿರೋಧ ಮಾಡುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ. ಪುತ್ಥಳಿ ನಿರ್ಮಾಣಕ್ಕೆ ಬೇಕಾದ ಅನುಮತಿ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ ಯಾರು ದೃತಿಗೆಡಬಾರದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.   ಚಿಕ್ಕೋಡಿ ನಗರದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣದ ತಡೆಯಾಜ್ಞೆ ಹಿನ್ನಲ್ಲೆಯಲ್ಲಿ ಪುರಸಭೆ ಮುಂಭಾಗದಲ್ಲಿ …

Read More »

ಕೀಳುಮಟ್ಟದ ಕಾಮೆಂಟ್; ಗೋವಾದಲ್ಲಿ ವಿದೇಶಿ ಪ್ರಯಾಣಿಕರಿಬ್ಬರನ್ನು ಇಳಿಸಿದ ವಿಮಾನ

ಮುಂಬಯಿ : ಮಹಿಳಾ ಕ್ಯಾಬಿನ್ ಸಿಬಂದಿಯ ಮೇಲೆ ಕೀಳುಮಟ್ಟದ ಕಾಮೆಂಟ್‌ಗಳನ್ನು ಮಾಡಿದ ಮತ್ತು ಸಹ ಪ್ರಯಾಣಿಕರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಗೋವಾದಿಂದ ಮುಂಬೈಗೆ ಹೋಗುವ ಗೋ ಫಸ್ಟ್ ಫ್ಲೈಟ್ ನಿಂದ ಡಿಬೋರ್ಡ್ ಮಾಡಲಾಗಿದೆ ಎಂದು ಏರ್‌ಲೈನ್‌ನ ವಕ್ತಾರರು ಶನಿವಾರ ತಿಳಿಸಿದ್ದಾರೆ.   ಈ ವಿಷಯವನ್ನು ವಾಯುಯಾನ ಸುರಕ್ಷತಾ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ಗೂ ವರದಿ ಮಾಡಲಾಗಿದೆ. ವಿದೇಶಿ ಪ್ರಜೆಗಳು ರಷ್ಯಾದಿಂದ ಬಂದವರು …

Read More »

ಹಾವೇರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆರು ನಿರ್ಣಯ

ಹಾವೇರಿ: ಸಂಪ್ರದಾಯದಂತೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೂ ಕೂಡ ಒಟ್ಟು ಆರು ನಿರ್ಣಯಗಳನ್ನು ತೆಗೆದುಕೊಂಡು ಇವುಗಳನ್ನು ಕೂಡಲೇ ಈಡೇರಿಸುವಂತೆ ಸಾಹಿತ್ಯ ಸಮ್ಮೇಳನದ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ಅವರು ನಿರ್ಣಯ ಮಂಡಿಸಿದರು. ಸಮ್ಮೇಳನದ ಸರ್ವಾಧ್ಯಕ್ಷ ಡಾ.ದೊಡ್ಡರಂಗೇಗೌಡ ಅವರು ಅನುಮೋದಿಸಿದರು. ಮೊದಲನೇದಾಗಿ ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೆಯಕ ಕೂಡಲೇ ಸುಗ್ರೀವಾಜ್ಞೆ ಮೂಲಕ ಕಾನೂನಿನ ರೂಪ ಪಡೆದು ಶಿಕ್ಷಣ, ನ್ಯಾಯಾಂಗ, ಆಡಳಿತದಲ್ಲಿ …

Read More »

ವಿವಿಧ ಮುಖಂಡರ ಮನೆಗಳಿಗೆ ಭೇಟಿ ಆರಂಭಿಸಿದ ಜನಾರ್ದನ ರೆಡ್ಡಿ

ಗಂಗಾವತಿ: ನೂತನ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸ್ಥಾಪಿಸಿ ಗಂಗಾವತಿ ಸೇರಿ ರಾಜ್ಯದ ವಿವಿಧೆಡೆ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಿದ್ದತೆಯಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ರವಿವಾರ ತಾಲೂಕಿನ ಹೇರೂರು ಗ್ರಾಮದಲ್ಲಿ ವಿವಿಧ ಜನಾಂಗ ಮತ್ತು ಪಕ್ಷಗಳ ಮುಖಂಡ ಮನೆಗಳಿಗೆ ಭೇಟಿ ನೀಡಿ ಬೆಂಬಲ ಕೋರಿದರು.   ಜಿ.ಪಂ.ಮಾಜಿ ಉಪಾಧ್ಯಕ್ಷ ವಿರೂಪಾಕ್ಷಗೌಡ ಹೇರೂರು, ಮುಖಂಡರಾದ ಲಿಂಗನಗೌಡ, ವಿರೂಪಾಕ್ಷಗೌಡ ನಾಯಕ ಸೇರಿ ವಿವಿಧ ಮುಖಂಡರ ಮನೆಗಳಿಗೆ ತೆರಳಿ ಮಾತುಕತೆ ನಡೆಸಿ ಕಲ್ಯಾಣ …

Read More »