ಬೆಳಗಾವಿ: ಕೊರೊನಾ ಮತ್ತು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದ ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯಲ್ಲಿ ಯೋಜನೆಯಡಿ ಒಂದು ಕೋಟಿ ಮಾನವ ದಿನ ಸೃಜಿಸಿ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ. ರಾಯಚೂರು ಜಿಲ್ಲೆ 96.40 ಲಕ್ಷ ಮಾನವ ದಿನ ಸೃಜನೆಯೊಂದಿಗೆ 2ನೇ ಸ್ಥಾನದಲ್ಲಿದೆ. 71.91ಲಕ್ಷ ಮಾನವ ದಿನ ಸೃಜಿಸಿರುವ ಕೊಪ್ಪಳ 3ನೇ ಸ್ಥಾನದಲ್ಲಿದ್ದರೆ, ವಿಜಯನಗರ ಜಿಲ್ಲೆ 58.24 ಲಕ್ಷ ಮತ್ತು ಬಳ್ಳಾರಿ …
Read More »Daily Archives: ಜನವರಿ 12, 2023
ಶಿಕ್ಷಕರ ವರ್ಗಾವಣೆ: ಇಂದಿನಿಂದ ದಾಖಲೆಗಳ ಪರಿಶೀಲನೆ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮಾ.10ಕ್ಕೆ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಇಲಾಖೆ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆ ಬುಧವಾರ ಪ್ರಕಟಿಸಿದೆ. ಡಿ.28ರಂದು ಪ್ರಕಟಿಸಿದ್ದ ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯನ್ನು ಮರು ಪ್ರಕಟಿಸಿದ್ದು ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ. ಕರಡು ಪಟ್ಟಿಯಿಂದ ಸಮಸ್ಯೆಗೆ ಒಳಗಾದ ಶಿಕ್ಷಕರು ಜ.16 ಮತ್ತು …
Read More »ಹುಬ್ಬಳ್ಳಿ-ಧಾರವಾಡದಲ್ಲಿ ಯುವಜನೋತ್ಸವ ರಂಗು; ಪ್ರಧಾನಿ ಆಗಮನಕ್ಕೆ ವಾಣಿಜ್ಯನಗರಿ ಪುಳಕ
ಹುಬ್ಬಳ್ಳಿ: ಭಾರತೀಯ ಸಂಸ್ಕೃತಿ, ಪರಂಪರೆ, ಆಚರಣೆ, ಕಲೆ ಹಾಗೂ ಸಾಂಸ್ಕೃತಿಕ ಸಿರಿವಂತಿಕೆ ಲೋಕದ ಅನಾವರಣ, ವಿವಿಧತೆಯಲ್ಲಿ ಏಕತೆ ಭಾವದ ಯುವಶಕ್ತಿ ಸಂಗಮ, ದೇಶದ ಸಾಂಸ್ಕೃತಿಕ ರಾಯಭಾರಿಗಳಂತಿರುವ ಯುವ ಪ್ರತಿಭೆಗಳ ದಿಗ್ದರ್ಶನಕ್ಕೆ ವೇದಿಕೆಯಾಗಲು ಹಾಗೂ ಪ್ರೀತಿಯ ಆತಿಥ್ಯ ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಸಜ್ಜಾಗಿದೆ. ರಾಷ್ಟ್ರೀಯ ಯುವಜನೋತ್ಸವ ಸಂಭ್ರಮ ಒಂದು ಕಡೆಯಾದರೆ, ಉತ್ಸವಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವಿಕೆ ಮಹಾನಗರವನ್ನು ಪುಳಕಿತಗೊಳ್ಳುವಂತೆ ಮಾಡಿದೆ. ದೇಶದ ಯುವ ಸಾಂಸ್ಕೃತಿಕ ಜಗತ್ತು ಹುಬ್ಬಳ್ಳಿ-ಧಾರವಾಡದಲ್ಲಿ …
Read More »40 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಪಕ್ಷ ಗೆಲ್ಲಲಿದೆ: ಜನಾರ್ದನ ರೆಡ್ಡಿ
ಗಂಗಾವತಿ: ಅಭಿಮಾನಿಗಳ ಉತ್ಸಾಹ ನೋಡುತ್ತಿದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ರಾಜ್ಯದ 40 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಹಿಂದೂಗಳ ಪವಿತ್ರ ಶಕ್ತಿ ಕೇಂದ್ರ ಕಿಷ್ಕಿಂದಾ ಅಂಜನಾದ್ರಿಯನ್ನು ಸಮಗ್ರ ಅಭಿವೃದ್ಧಿ ತಮ್ಮ ವಿಷನ್ ಆಗಿದ್ದು ಯುವ ಕಾರ್ಯಕರ್ತರ ಬೆಂಬಲ ಸಹಕಾರದಿಂದ ಗಂಗಾವತಿ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಅವರು ಕನಕಗಿರಿ ರಸ್ತೆಯಲ್ಲಿ ತಮ್ಮ ನಿವಾಸದ ವೇದಿಕೆಯಲ್ಲಿ ಜನ್ಮದಿನದ ನಿಮಿತ್ತ ಅಭಿಮಾನಿಗಳಿಂದ …
Read More »ಸಂಸ್ಕೃತಿ, ಆಚಾರ, ವಿಚಾರ ಬಗ್ಗೆ ಮಾತಾಡಲು ಬಿಜೆಪಿಗೆ ಯಾವ ನೈತಿಕತೆಯಿದೆ: ದಿನೇಶ್ ಗುಂಡೂರಾವ್
ತಲೆ ಮರೆಸಿಕೊಂಡಿರುವ ಸ್ಯಾಂಟ್ರೋ ರವಿ ವಿಚಾರದಲ್ಲಿ ರಾಜಕೀಯ ಆರೋಪ- ಪ್ರತ್ಯಾರೋಪಗಳು ನಡೆಯುತ್ತಿದೆ. ಇದೀಗ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ಸಂಸ್ಕೃತಿ, ಆಚಾರ, ವಿಚಾರ ಬಗ್ಗೆ ಮಾತಾಡಲು ಬಿಜೆಪಿಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ. ಲಂಪಟರು, ನುಂಗುಬಾಕರು, ಲಂಚ-ಮಂಚ ಪ್ರಹಸನ ಶೂರರಿಂದ ಬಿಜೆಪಿ ತುಂಬಿ ತುಳುಕುತ್ತಿದೆ. …
Read More »