Breaking News

Daily Archives: ಜನವರಿ 15, 2023

ಒಂದೇ ಬಾರಿಗೆ 4 ಕರುಗಳಿಗೆ ಜನ್ಮನೀಡಿ ಅಚ್ಚರಿ ಮೂಡಿಸಿದ ಹಸು!

ಬಾಗಲಕೋಟೆ: ಪ್ರಪಂಚದಲ್ಲಿ ಪ್ರತಿದಿನವೂ ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಲ ವಿಷಯಗಳನ್ನು ನಂಬಲು ಸಹ ಸಾಧ್ಯವಾಗುವುದಿಲ್ಲ. 2 ಮುಖ, 5 ಕಾಲಿನ ಕರುಗಳು ಮತ್ತು ಪ್ರಾಣಿಗಳನ್ನು ನೀವು ನೋಡೇ ಇರುತ್ತೀರಿ. ಒಂದೇ ಬಾರಿಗೆ 2 ಕರುಗಳಿಗೆ ಜನ್ಮನೀಡಿದ ಹಸುಗಳನ್ನೂ ನೀವು ಕಂಡಿರುತ್ತೀರಿ. ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಹಸುವೊಂದು ಒಂದೇ ಬಾರಿಗೆ 4 ಕರುಗಳಿಗೆ ಜನ್ಮ ನೀಡಿದ್ದು, ಅಚ್ಚರಿ ಮೂಡಿಸಿದೆ. ಹೌದು, ಅಚ್ಚರಿಯಾದರೂ ಇದು ನಿಜ.ಬಾಗಲಕೋಟೆಜಿಲ್ಲೆಯ ಆಸಂಗಿ ಗ್ರಾಮದಲ್ಲಿ ಹಸುವೊಂದು ಒಂದೇ ಬಾರಿಗೆ …

Read More »

ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. C.M.

ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, …

Read More »

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿದ್ಯಾರ್ಥಿನಿ- ಶಿಕ್ಷಕನ ‘ಖಾಸಗಿ’ ವಿಡಿಯೊ

ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಡ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಪ್ರೌಢಶಾಲೆಯ ಶಿಕ್ಷಕ, ವಿದ್ಯಾರ್ಥಿನಿಯ ಜತೆಗೆ ಇರುವ ‘ಖಾಸಗಿ ವಿಡಿಯೊ’ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ‘ಖಾಸಗಿ ಪ್ರೌಢಶಾಲೆಯ ಶಿಕ್ಷಕ ಅದೇ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಜತೆಗೆ ಸಲುಗೆ ಬೆಳೆಸಿದ್ದ. ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಪ್ರೀತಿಯಲ್ಲಿ ಬೀಳಿಸಿಕೊಂಡಿದ್ದ. ಕೆಲವು ತಿಂಗಳಿಂದ ಶಾಲಾ ಸಮಯದ ಬಳಿಕವೂ ವಿದ್ಯಾರ್ಥಿನಿಯನ್ನು ಶಾಲೆಯಲ್ಲೇ ಇರಿಸಿಕೊಳ್ಳುತ್ತಿದ್ದ. ಈಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿನಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ಆ ಸಂದರ್ಭದಲ್ಲಿ ಇಬ್ಬರೂ …

Read More »

ಗಾಂಧಿ-ಗೋಡ್ಸೆ ಟ್ರೇಲರ್ ಬಿಡುಗಡೆ; ಕುತೂಹಲ ಮೂಡಿಸಿರುವ ರಾಜ್​ಕುಮಾರ್ ಸಂತೋಷಿ ಸಿನಿಮಾ

ಘಾಯಲ್’, ‘ದಾಮಿನಿ’, ‘ಬರ್ಸಾತ್’, ‘ಖಾಕೀ’ ಸೇರಿದಂತೆ ಹಲವು ಬಾಲಿವುಡ್ ಚಿತ್ರಗಳನ್ನು ನಿರ್ದೇಶಿಸಿರುವ ರಾಜ್​ಕುಮಾರ್ ಸಂತೋಷಿ ಆಕ್ಷನ್ ಕಟ್ ಹೇಳಿರುವ ಸಿನಿಮಾ ‘ಗಾಂಧಿ ಗೋಡ್ಸೆ : ಏಕ್ ಯುದ್ಧ್’. ಕೆಲವು ದಿನಗಳ ಹಿಂದಷ್ಟೇ ಟೀಸರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರ, ಇದೀಗಿ ಟ್ರೇಲರ್ ಮುಖೇನ ಮತ್ತೊಮ್ಮೆ ಸುದ್ದಿಯಲ್ಲಿದೆ. ಅದಕ್ಕೆ ಕಾರಣ, ಚಿತ್ರದಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ನಾಥೂರಾಮ್ ಗೋಡ್ಸೆ ನಡುವಿನ ಸೈದ್ಧಾಂತಿಕ ಸಂಘರ್ಷ, ವೈಚಾರಿಕ ಭಿನ್ನಾಭಿಪ್ರಾಯಗಳ ಬಗ್ಗೆ ನೇರವಾಗಿ ಬೆಳಕು …

Read More »

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಕೊಪ್ಪಳ: ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಯುವಕ ಮತ್ತು ಯುವತಿ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಬಳಿಗೇರಿ ಗ್ರಾಮದ ಸುಮಾ ಮತ್ತು ಪ್ರಕಾಶ ಭಜಂತ್ರಿ ಮೃತ ದುರ್ದೈವಿಗಳು. ಇಂದು(ಶನಿವಾರ) ಮಧ್ಯಾಹ್ನ ಇವರಿಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಪ್ರೀತಿ ಮಾಡುವಂತೆ ಸುಮಾಳ ಹಿಂದೆ ಪ್ರಕಾಶ ಭಜಂತ್ರಿ ದುಂಬಾಲು ಬಿದ್ದಿದ್ದ. ಈ ವಿಷಯ ಹುಡುಗಿ ಮನೆಯವರಿಗೂ ತಿಳಿದಿತ್ತು. ಇದಕ್ಕೆ ಮನೆಯವರು …

Read More »

ವೇಷದ ಜತೆಗೆ ಭಾಷೆಯನ್ನೂ ಬದಲಾಯಿಸಿದ್ದ ಸ್ಯಾಂಟ್ರೋ ರವಿ! ಈತನ ಮಾತು ಕೇಳಿ ಪೊಲೀಸರೇ ಅರೆಕ್ಷಣ ಗಲಿಬಿಲಿ

ಮೈಸೂರು: ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಗುಜರಾತ್​ನ ಅಹಮದಾಬಾದ್​ನಲ್ಲಿ ತಲೆಮರೆಸಿಕೊಂಡಿದ್ದ. 11 ದಿನದ ಬಳಿಕ ಪೊಲೀಸರು ಆತನನ್ನು ಪತ್ತೆ ಮಾಡಿ ಮೈಸೂರಿಗೆ ಕರೆತಂದಿದ್ದಾರೆ. ಬಂಧನದ ವೇಳೆಯೂ ಅಹಮದಾಬಾದ್​ನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ್ದ. ಪೊಲೀಸರಿಗೆ ತನ್ನ ಗುರುತು ಸಿಗಬಾರದು ಎಂಬ ಕಾರಣಕ್ಕೆ ಆತ ತನ್ನ ವೇಷ ಬದಲಾಯಿಸಿದ್ದು ಮಾತ್ರವಲ್ಲದೆ ಭಾಷೆಯನ್ನೂ ಬದಲಾಯಿಸಿದ್ದ! ತಲೆಯ ವಿಗ್​ ತೆಗೆದು ಮೀಸೆ ಬೋಳಿಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ಗುರುತಿರುಸುವುದು ಕಷ್ಟವಾಗಿತ್ತು. …

Read More »

ಸ್ಯಾಂಟ್ರೋ ರವಿ ಸೇರಿ ಮೂವರು ಜೈಲುಪಾಲು

ಮೈಸೂರು: ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್​ ಮಂಜುನಾಥ್​ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸ್ಯಾಂಟ್ರೋ ರವಿ ಜೊತೆಗೆ ಸಹಚರರಾದ ರಾಮ್ ಜೀ ಸತೀಶ್ ಕೂಡ ಜೈಲು ಪಾಲಾಗಿದ್ದಾರೆ. ಎಫ್​ಐಆರ್​ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿ ಗುಜರಾತ್​ನ ಅಹಮದಾಬಾದ್​ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ 11 ದಿನದ ಬಳಿಕ ಅಂದರೆ ನಿನ್ನೆ(ಜ.13) ಕರ್ನಾಟಕ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿ ಮೈಸೂರಿಗೆ ಕರೆತಂದಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿ …

Read More »

ಸರ್ವಾಧಿಕಾರಿ ಶಕ್ತಿಗಳಿಗೆ ಸೋಲಾಗಲಿ. ಎನ್ನುತ್ತಲೇ ಕಾಂಗ್ರೆಸ್​ ಸೇರ್ಪಡೆಯಾದ ವೈಎಸ್‌ವಿ ದತ್ತ, ಎಚ್​.ನಾಗೇಶ್​

ಬೆಂಗಳೂರು: ಜೆಡಿಎಸ್​ನ ಮಾಜಿ ಶಾಸಕ ವೈಎಸ್‌ವಿ ದತ್ತಾ, ಪಕ್ಷೇತರ ಶಾಸಕ ಎಚ್.ನಾಗೇಶ್, ‌ಮೈಸೂರು ಮೂಡ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಅವರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾದರು. ಇವರನ್ನು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.   ಈ ವೇಳೆ ಕಾರ್ಯಕರ್ತರು ಪಟಾಕಿ ಸಿಡಿಸಿ ಜೈಕಾರ ಕೂಗಿದರು. ವೈಎಸ್​ವಿ ದತ್ತ ಮಾತನಾಡಿ, ಇದು ಮಾತನಾಡುವ ಸಮಯವಲ್ಲ, ಕೆಲಸ ಮಾಡುವ ಸಮಯ. ಕಳೆದ ಹಲವು …

Read More »

ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರತಂಡದಿಂದ ಸಂಕ್ರಾಂತಿಗೆ ಡಿಫರೆಂಟ್ ವಿಷ್!

ಬೆಂಗಳೂರು: ಯಾವಾಗಲೂ ತನ್ನ ವೈಶಿಷ್ಟ್ಯದೊಂದಿಗೇ ಗಮನ ಸೆಳೆಯುವ ನಟ-ನಿರ್ದೇಶಕ ಉಪೇಂದ್ರ, ಇದೀಗ ತಮ್ಮ ನಿರ್ದೇಶನದ ಹೊಸ ಸಿನಿಮಾ ‘ಯುಐ’ ತಂಡದಿಂದ ಸಂಕ್ರಾಂತಿ ಶುಭಾಶಯ ಕೋರುವುದರಲ್ಲೂ ಡಿಫರೆಂಟ್ ಎನಿಸಿಕೊಂಡಿದ್ದಾರೆ. ರಿಯಲ್​ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾದ ಟೈಟಲ್​ಗಳೇ ಡಿಫರೆಂಟ್ ಆಗಿರುತ್ತವೆ. ಅದೇ ರೀತಿ ಅವರು ನಿರ್ದೇಶನ ಮಾಡುತ್ತಿರುವ ನೂತನ ಸಿನಿಮಾ ಹೆಸರೇ ‘ನಾಮ’ದ ರೂಪದಲ್ಲಿದ್ದು ಘೋಷಣೆ ಆದಾಗಲೇ ಭಾರಿ ಗಮನ ಸೆಳೆಯಲಾಗಿತ್ತು. ದೇವರ ನಾಮದ ರೂಪದಲ್ಲಿ ವಿನ್ಯಾಸ ಮಾಡಲಾಗಿರುವ ಈ ಚಿತ್ರದ ಶೀರ್ಷಿಕೆಯನ್ನು …

Read More »

ನಾಲ್ವರು ಉಗ್ರರರಿಗೆ ಏಳು ವರ್ಷ ಜೈಲು; ಉಗ್ರ ಚಟುವಟಿಕೆಗೆ ಡಕಾಯಿತಿ-ಸುಲಿಗೆಯಿಂದ ಹಣ ಸಂಗ್ರಹ

ಬೆಂಗಳೂರು: ಉಗ್ರ ಚುಟವಟಿಕೆಗೆ ಹಣ ಕ್ರೋಡೀಕರಿಸಲು ಡಕಾಯಿತಿ, ದರೋಡೆ ಮಾಡಿದ್ದ ಪಶ್ಚಿಮ ಬಂಗಾಳ ನಾಲ್ವರು ಉಗ್ರರರಿಗೆ ನಗರದ ಎನ್‌ಐಎ ವಿಶೇಷ ಕೋರ್ಟ್ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಎನ್‌ಐಎ ದಾಖಲಿಸಿದ್ದ ಪ್ರಕರಣವನ್ನು ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ. ಗಂಗಾಧರ, ನಾಲ್ವರು ಅಪರಾಧಿಗಳಿಗೆ ಜೈಲು ಶಿಕ್ಷೆ ಜೊತೆಗೆ ತಲಾ 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ಕದೋರ್ …

Read More »