Breaking News

Monthly Archives: ಜನವರಿ 2023

ಕೇಂದ್ರದಿಂದ ಸವಾರರಿಗೆ ಬಿಗ್ ಶಾಕ್: 15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳ ನೋಂದಣಿ ರದ್ದು!

15 Year Old Vehicle Registration: ಮಾಲಿನ್ಯವನ್ನು ನಿಯಂತ್ರಿಸಲು ಮತ್ತು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು, ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿಯ ಅಧಿಸೂಚನೆಯನ್ನು ಹೊರಡಿಸಿತು.ಅದರ ಪ್ರಕಾರ 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ. ನೋಂದಣಿಯನ್ನು ನವೀಕರಿಸಿದ (15 ವರ್ಷಗಳ ನಂತರ) ವಾಹನಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಎಲ್ಲಾ ಹಳೆಯ ವಾಹನಗಳನ್ನು ನೋಂದಾಯಿತ ಸ್ಕ್ರ್ಯಾಪ್ ಕೇಂದ್ರದಲ್ಲಿ ವಿಲೇವಾರಿ ಮಾಡಬೇಕಾಗುತ್ತದೆ. ಕೇಂದ್ರ …

Read More »

ಬೆಂಗಳೂರು: ನಾಲ್ಕು ದಿಕ್ಕುಗಳಿಂದ ಬಿಜೆಪಿ ರಥಯಾತ್ರೆಗೆ ಸಿದ್ಧತೆ

ಬೆಂಗಳೂರು: ಫೆಬ್ರವರಿ ಅಂತ್ಯದ ವೇಳೆಗೆ ನಾಲ್ಕು ದಿಕ್ಕುಗಳಿಂದ ರಥಯಾತ್ರೆಯನ್ನು ಪ್ರಾರಂಭಿಸುವ ವಿಧಾನಗಳು ಮತ್ತು ಇತರ ವಿಷಯಗಳ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತಿಂಗಳು ಮತ್ತು ಮುಂದಿನ ತಿಂಗಳು ಕೈಗೊಳ್ಳಬೇಕಾದ ಕಾರ್ಯಕ್ರಮಗಳು, ಅಧಿವೇಶನದ ಜೊತೆಗೆ ಪಕ್ಷದ ಸಂಘಟನೆ, ಫೆಬ್ರವರಿಯೊಳಗೆ ಜನ ಸಂಕಲ್ಪ ಯಾತ್ರೆ ಪೂರ್ಣಗೊಳಿಸುವುದು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಚುನಾವಣಾ ಪ್ರಣಾಳಿಕೆ ತಯಾರಿಕೆ ಮತ್ತು ರಾಜ್ಯಕ್ಕೆ …

Read More »

ಯತ್ನಾಳ್‌ಗೆ ಶಿಸ್ತು ಸಮಿತಿ ಬುಲಾವ್; ಅಶಿಸ್ತಿನ ನಡವಳಿಕೆಯನ್ನು ಪಕ್ಷ ಸಹಿಸುವುದಿಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ಸರ್ಕಾರ, ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ನೀಡಿ ಅಶಿಸ್ತಿನಿಂದ ವರ್ತಿಸಿದ ಕಾರಣಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರಿಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ನೀಡಿ, ಸಮಿತಿ ಮುಂದೆ ಹಾಜರಾಗಲು ಸೂಚಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದರು.   ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದಲ್ಲಿ ‘ಬೂತ್ ವಿಜಯ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ ನೀಡಿದ ನಂತರ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಅಶಿಸ್ತಿನ ನಡವಳಿಕೆಯನ್ನು ಪಕ್ಷ ಸಹಿಸುವುದಿಲ್ಲ. ಯತ್ನಾಳ್‌ಗೆ ಬುಲಾವ್ ನೀಡಿರುವ …

Read More »

ಯಾವಾಗ ಆರಂಭವಾಗಲಿದೆ ಕ್ರಾಂತಿ ಬುಕಿಂಗ್ಸ್? ಮಲ್ಟಿಪ್ಲೆಕ್ಸ್ ಬುಕಿಂಗ್ ಯಾವಾಗ ಶುರು?

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕ್ರಾಂತಿ ಬಿಡುಗಡೆ ಸಮೀಪಕ್ಕೆ ಬಂದಿದೆ. ನೆಚ್ಚಿನ ನಟ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಚಿತ್ರವನ್ನು ಬರೋಬ್ಬರಿ 22 ತಿಂಗಳುಗಳ ಬಳಿಕ ಬೆಳ್ಳಿತೆರೆ ಮೇಲೆ ನೋಡಿ ಸಂಭ್ರಮಿಸಲು ದರ್ಶನ್ ಅಭಿಮಾನಿಗಳು ಕಾತರರಾಗಿದ್ದಾರೆ. ಚಿತ್ರ ಮುಂದಿನ ವಾರದ ಗುರುವಾರದಂದೇ ಗಣರಾಜ್ಯೋತ್ಸವದ ಪ್ರಯುಕ್ತ ತೆರೆಗೆ ಬರಲಿದೆ. ಚಿತ್ರತಂಡ ಹಾಡುಗಳು ಹಾಗೂ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗುವಂತೆ ಮಾಡಿದೆ. ಟ್ರೈಲರ್ ವೀಕ್ಷಿಸಿದ …

Read More »

ಡಿ.ಕೆ.ಶಿ ಸಂಜೆ ಡಬಲ್ ಆಗ್ತಾರೆ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆ ಪಕ್ಷಕ್ಕೆ ಯಾರು ಹೋಗ್ತಾರೆ; ಶಾಸಕ ವಿರೂಪಾಕ್ಷಪ್ಪ ತಿರುಗೇಟು

ಹಾವೇರಿ: ಹಾವೇರಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ , ಡಿಕೆಶಿ ಸಂಜೆ ಡಬಲ್ ಆಗ್ತಾರೆ. ಸಾಯಂಕಾಲದ ವೇಳೆ ಅವರು ಮಾತನಾಡಿರಬಹುದು ಎಂದು ಲೇವಡಿ ಮಾಡಿದ್ದಾರೆ.   ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರು ಹೋಗ್ತಾರೆ? ಈ ಹಿಂದೆ ಕಾಂಗ್ರೆಸ್ ನಾಯಕರು ಟಿಕೆಟ್ ಕೊಡುತ್ತೇವೆ ಎಂದು ಮನೆ ಬಾಗಿಲಿಗೆ ಬಂದಿದ್ದರು. ಆ ಸಂದರ್ಭದಲ್ಲಿಯೇ ನಾನು ಕಾಂಗ್ರೆಸ್ ಗೆ …

Read More »

ವಿಜಯಪುರ: ತಡರಾತ್ರಿ ಅನಿರೀಕ್ಷಿತವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಜಡ್ಜ್

ವಿಜಯಪುರ: ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆಗಿರುವ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ ಶುಕ್ರವಾರ ತಡರಾತ್ರಿ ನಗರದ ಪೊಲೀಸ್ ಠಾಣೆಯೊಂದಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಗೆ ಶುಕ್ರವಾರ ತಡರಾತ್ರಿ 11ರ ಸುಮಾರಿಗೆ ಕಾನೂನು ಸೇವಾ ಪ್ರಾಧಿಕಾರದ ಸಹಾಯಕರಾದ ಅನಿಲ ದಶವಂತ ಅವರೊಂದಿಗೆ ಅನಿರೀಕ್ಷಿತ ಭೇಟಿ ಠಾಣೆಯ ವ್ಯವಸ್ಥೆ ಪರಿಶೀಲಿಸಿದರು. ಅಲ್ಲದೇ ಠಾಣೆಯ ರಾತ್ರಿ ಕರ್ತವ್ಯದಲ್ಲಿದ್ದ ಬಿ.ಎ.ನಿಡೋಣಿ ಅವರಿಂದ …

Read More »

ಕರ್ನಾಟಕ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ: ಸಮೀಕ್ಷೆ ಹೇಳಿದ್ದೇನು? ಗೆಲುವು ಯಾರಿಗೆ? ಪ್ರತಿ ಪ್ರದೇಶದ ಅಂಕಿಅಂಶ, ಮಾಹಿತಿ

ಬೆಂಗಳೂರು, ಜನವರಿ 21: ಕರ್ನಾಟಕ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಉಳಿದಿದೆ. ಮತದಾರರನ್ನು ಸೆಳೆಯುವಲ್ಲಿ ಮೂರು ಪಕ್ಷಗಳು ಹಲವಾರು ಕಸರತ್ತು ನಡೆಸಿವೆ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ಪಂಚರತ್ನ ಯಾತ್ರೆ ನಡೆಸುತ್ತಿದೆ. ಆಡಳಿತಾರೂಢ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರತವಾಗಿದೆ. ಕಾಂಗ್ರೆಸ್‌ ಪಕ್ಷವು ಪ್ರಜಾಧ್ವನಿ ಯಾತ್ರೆಯನ್ನು ಕೈಗೊಂಡಿದೆ. ಈ ಬಾರಿಯ ಚುನಾವಣೆ ಮೂರು ಪಕ್ಷಗಳಿಗೆ ಅಗ್ನಿಪರೀಕ್ಷೆಯಾಗಲಿದೆ. ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬಂದು ಹೋಗುತ್ತಿದ್ದಾರೆ. ಇತ್ತ ಕಾಂಗ್ರೆಸ್‌ನಿಂದಲೂ ಪ್ರಿಯಾಂಕಾ ಗಾಂಧಿ …

Read More »

ಜನಾರ್ಧನ ರೆಡ್ಡಿ ವಾಪಸ್ ಬಿಜೆಪಿಗೆ.? ವರಿಷ್ಠರು ನಿರ್ಧರಿಸಲಿ :B.L. ಸಂತೋಷ್

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ವಿರುದ್ಧ ಅಸಮಾಧಾನಗೊಂಡು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸ್ಥಾಪನೆ ಮಾಡಿರುವ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ನಾಯಕರು ಜನಾರ್ಧನ ರೆಡ್ಡಿ ಮನವೊಲಿಕೆಗೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ರಾಜ್ಯ ಬಿಜೆಪಿ ನಾಯಕರ ಸಭೆಯಲ್ಲಿ ಜನಾರ್ಧನ ರೆಡ್ದಿ ಅವರನ್ನು ವಾಪಸ್ ಕರೆತರಬೇಕು ಎಂದು ಬಿಜೆಪಿ ನಾಯಕರು ಬಿ.ಎಲ್. ಸಂತೋಷ್ ಅವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಭೆಯಲ್ಲಿ ಮಾತನಾಡಿದ ಬಿ.ಎಲ್. ಸಂತೋಷ್, ಜನಾರ್ಧನ …

Read More »

ಮುಂದಿನ ತಿಂಗಳಿನಿಂದ ಪಡಿತರ ಪುನಃ 10 ಕೆಜಿಗೆ ಹೆಚ್ಚಳ : ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಬರುವ ತಿಂಗಳಿನಿಂದ ಪಡಿತರೆ ವಿತರಣೆ ಪ್ರಮಾಣವನ್ನು ಪುನಃ 10 ಕೆಜಿಗೆ ಹೆಚ್ಚಿಸಲಾಗುವುದುಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಸಹಯೋಗದಲ್ಲಿ ಇಂದು ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ರಾಗಿಯ ರಾಶಿಪೂಜೆ ಸಲ್ಲಿಸಿ,ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು, ಬಡ ನಿವೇಶನ ರಹಿತರ ಹಕ್ಕುಗಳನ್ನು ಕಾಯಲು …

Read More »

ಈಬಾರಿಯು ಯಾರೇ ಬಂದರೂ ಕೋಲಾರದಲ್ಲಿ ನಾನೇ ಗೆಲ್ಲುವುದು ಎಂದ ಸಿದ್ದರಾಮಯ್ಯ

ಹಿಂದಿನ ಚುನಾವಣೆಯಲ್ಲಿಯೂ ನನ್ನನ್ನು ಸೋಲಿಸಲು ಬಾದಾಮಿಗೆ ಸ್ವತ: ಅಮಿತ್ ಶಾ ಅವರೇ ಬಂದಿದ್ದರು. ನನ್ನ ವಿರುದ್ಧ ಶ್ರೀರಾಮುಲು ಅವರನ್ನು ಕಣಕ್ಕಿಲಿಸಿದರು. ಆದರೂ ಬಾದಾಮಿಯಲ್ಲಿ ಜನರು ನನ್ನನ್ನು ಗೆಲ್ಲಿಸಿದರು. ಈಬಾರಿಯು ಯಾರೇ ಬಂದರೂ ಕೋಲಾರದಲ್ಲಿ ನಾನೇ ಗೆಲ್ಲುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಾರೇ ಬಂದರೂ ಕೋಲಾರದಲ್ಲಿ ನಾನೇ ಗೆಲ್ಲುತ್ತೇನೆ. ಬಾದಾಮಿಯಲ್ಲಿ ನನ್ನನ್ನು ಸೋಲಿಸಲು ಕೇಂದ್ರ ಸಚಿವ ಅಮಿತ್ ಶಾ ಬಂದಿದ್ದರು. ಅಶೋಕ್ …

Read More »