ಹೊಸಪೇಟೆ (ವಿಜಯನಗರ): ‘ತಮ್ಮದು ರೌಡಿ ಮತ್ತು ಗೂಂಡಾಗಳ ಪಕ್ಷವೆಂದು ಸ್ವತಃ ಬಿಜೆಪಿಯವರೇ ಒಪ್ಪಿಕೊಂಡಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದರು. ನಗರದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಪ್ರಜಾ ಧ್ವನಿ’ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಶಾಸಕ ಸಿ.ಪಿ. ಯೋಗೇಶ್ವರ ಅವರು ದೇಶದ ಗೃಹಮಂತ್ರಿ ಅಮಿತ್ ಶಾ ಅವರನ್ನು ಗೂಂಡಾ ಎಂದು ಹೇಳಿದ್ದಾರೆ. ರೌಡಿ, ಗೂಂಡಾಗಳ ಪಾರ್ಟಿ ಎಂದು ಅವರೇ ಒಪ್ಪಿಕೊಂಡಿದ್ದರೆ. …
Read More »Monthly Archives: ಜನವರಿ 2023
ಗುತ್ತಿಗೆದಾರರ ಸಂಘದ ನಾಮಫಲಕ ಕಾಂಗ್ರೆಸ್ ಕಚೇರಿ ಎಂದು ಬದಲಾಗಲಿ: ಮುನಿರತ್ನ
ಕೋಲಾರ: ‘ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಬೆಂಬಲಿಗರಂತೆ ನಡೆದುಕೊಳ್ಳುತ್ತಿದ್ದಾರೆ. ಅವರ ಕಚೇರಿಯ ಮೇಲಿರುವ ನಾಮಫಲಕವನ್ನು ಕಾಂಗ್ರೆಸ್ ಕಚೇರಿ ಎಂದು ಬದಲಾಯಿಸಿಕೊಳ್ಳಲಿ. ಅವರು ಯಾವತ್ತಾದರೂ ಗುತ್ತಿಗೆದಾರರ ಸಮಸ್ಯೆ ಆಲಿಸಿದ್ದಾರೆಯೇ? ಗುತ್ತಿಗೆದಾರರಿಗೆ ಒಳ್ಳೆಯದು ಮಾಡಿದ್ದಾರೆಯೇ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಪ್ರಶ್ನಿಸಿದರು. ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗುತ್ತಿಗೆದಾರರ ಸಂಘದ ಅಧ್ಯಕ್ಷರು ಎಷ್ಟು ಕಾಮಗಾರಿ ಮಾಡಿದ್ದಾರೆ, ಎಲ್ಲೆಲ್ಲಿ ಕಾಮಗಾರಿ ಮಾಡಿದ್ದಾರೆ ಎಂಬ ಪಟ್ಟಿ ನೀಡಲಿ’ ಎಂದು ಆಗ್ರಹಿಸಿದರು.
Read More »ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿ: ಎಂಇಎಸ್ ನಾಡವಿರೋಧಿ ಘೋಷಣೆ
ಬೆಳಗಾವಿ: ಇಲ್ಲಿನ ಹುತಾತ್ಮ ಚೌಕ್‌ನಲ್ಲಿ ಮಂಗಳವಾರ ನಡೆದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಕರ್ನಾಟಕ-ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಮಡಿದವರಿಗೆ ಗೌರವ ಸಲ್ಲಿಸಿದರು. ‘ರಾಜ್ಯದಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು’ ಎಂದು ಒತ್ತಾಯಿಸಿದ ಕಾರ್ಯಕರ್ತರು, ‘ಬೆಳಗಾವಿ, ಖಾನಾಪುರ, ನಿಪ್ಪಾಣಿ, ಬೀದರ್, ಭಾಲ್ಕಿ, ಕಾರವಾರ ಸಹ ಸಂಯುಕ್ತ ಮಹಾರಾಷ್ಟ್ರ ಝಾಲಾಚ್ ಪಾಹಿಜೆ’ ಎಂದು ನಾಡವಿರೋಧಿ ಘೋಷಣೆ ಕೂಗಿದರು. ‘ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು …
Read More »ಜನವರಿ 21 ರಿಂದ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನ: ಅಶ್ವತ್ಥನಾರಾಯಣ
ಬೆಂಗಳೂರು: ಇದೇ 21 ರಿಂದ 29 ರವರೆಗೆ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನವನ್ನು ಬಿಜೆಪಿ ನಡೆಸಲಿದ್ದು, ಎರಡು ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ 39 ಸಂಘಟನಾ ಜಿಲ್ಲೆಗಳು, 312 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಸಭೆಗಳು ನಡೆಯಲಿವೆ ಎಂದು ಅವರು ತಿಳಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ …
Read More »ಶಿಸ್ತು ಸಮಿತಿಯಿಂದ ನೋಟಿಸ್ ಬಂದಿಲ್ಲ, ಭಯ ಹುಟ್ಟಿಸುವ ತಂತ್ರ: ಯತ್ನಾಳ
ವಿಜಯಪುರ: ‘ನನಗೆ ಬಿಜೆಪಿ ಹೈಕಮಾಂಡ್‌ನಿಂದ ಅಥವಾ ಪಕ್ಷದ ಶಿಸ್ತು ಸಮಿತಿಯಿಂದ ಇದುವರೆಗೆ ಯಾವುದೇ ನೋಟಿಸ್ ಬಂದಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ಪಕ್ಷದ ನಾಯಕರ ವಿರುದ್ಧ ಮಾತನಾಡಿದ ಕಾರಣಕ್ಕೆ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಹರಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನನಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ನೀಡಿದೆ ಎಂಬುದು ಕೇವಲ ವಿರೋಧಿಗಳ ಭಯ ಹುಟ್ಟಿಸುವ ತಂತ್ರ ಅಷ್ಟೇ, ನನಗೆ ನೋಟಿಸ್ ಬಂದಿಲ್ಲ, …
Read More »ಗಡ್ಕರಿಗೆ ಬೆದರಿಕೆ: ಜೈಲಿನೊಳಗೆ ಮೊಬೈಲ್ ಹೋಗಿದ್ದು ಹೇಗೆ? ಇನ್ನೂ ಸಿಗದ ಸುಳಿವು
ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್ ಪೂಜಾರಿ ಕೈಗೆ ಮೊಬೈಲ್ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ. ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ಶನಿವಾರ ಕರೆ ಮಾಡಿದ್ದ ಕೈದಿ, ತಾನು ಭೂಗತಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯ, ₹100 ಕೋಟಿ ನೀಡುವಂತೆ ಬೆದರಿಕೆ ಒಡ್ಡಿದ್ದ. ಈ ಬಗ್ಗೆ …
Read More »ಹೋಂಗಾರ್ಡ್ ವರ್ಗಾವಣೆಗೆ ಲಂಚ: ಕೊಪ್ಪಳ ಜಿಲ್ಲಾ ಕಮಾಂಡೆಂಟ್ ಲೋಕಾಯುಕ್ತ ಬಲೆಗೆ
ಕೊಪ್ಪಳ: ಹೋಂಗಾರ್ಡ್ ಒಬ್ಬರ ವರ್ಗಾವಣೆಗೆ 10 ಸಾವಿರ ರೂ. ಲಂಚದ ಬೇಡಿಕೆಯನ್ನಿಟ್ಟಿದ್ದ ಜಿಲ್ಲಾ ಕಮಾಂಡೆಂಟ್ ಗವಿಸಿದ್ದಪ್ಪ ಹಾಗೂ ತಾಲೂಕು ಕಮಾಂಡೆಂಟ್ ರುದ್ರಪ್ಪ ಪತ್ತಾರ್ ಅವರು ನಗರದ ಮಾನಸಿಕ ಆರೋಗ್ಯ ತಪಾಸಣಾ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮುನಿರಾಬಾದ್ ನ ಹೋಂಗಾರ್ಡ್ ಮಹೆಬೂಬ ಖಾನ್ ಅವರು ಮುನಿರಾಬಾದ್‌ನಿಂದ ಗಂಗಾವತಿಗೆ ವರ್ಗಾವಣೆ ಕೇಳಿಕೊಂಡಿದ್ದರು. ಇದಕ್ಕೆ ರುದ್ರಪ್ಪ ಪತ್ತಾರ ಹಾಗೂ ಗವಿಸಿದ್ದಪ್ಪ ಅವರು 10 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. …
Read More »ಜನಾರ್ದನ ರೆಡ್ಡಿಯೇ ನಿಂತರೂ ಬಿಜೆಪಿಯಿಂದ ನಾನು ಸ್ಪರ್ಧಿಸುತ್ತೇನೆ: ಸೋಮಶೇಖರ ರೆಡ್ಡಿ
ಬಳ್ಳಾರಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿಯವರೇ ಸ್ವತಃ ಬಂದು ನಿಂತರೂ ನಾನು ಸ್ಪರ್ಧಿಸುವೆ ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಸವಾಲು ಹಾಕುವ ಮೂಲಕ ಬಹಿರಂಗವಾಗಿ ರಣಕಹಳೆ ಮೊಳಗಿಸಿದರು. ರಾಜ್ಯ ಸರ್ಕಾರ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸ್ವಲ್ಪ ತಾಳ್ಮೆ ವಹಿಸಿದ್ದರೆ ಜನಾರ್ದನ ರೆಡ್ಡಿ ಪರಿಸ್ಥಿತಿ ಈ …
Read More »ಚುನಾವಣೆ ಸುಗ್ಗಿ ಆರಂಭ: ಇಂದು “ನಾ ನಾಯಕಿ’ ಕಾರ್ಯಕ್ರಮಕ್ಕಾಗಿ ಪ್ರಿಯಾಂಕಾ ಆಗಮನ
ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆ ಬಿರುಸುಗೊಳ್ಳುತ್ತಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ವಿಧಾನಸಭೆ ಚುನಾವಣೆಗಾಗಿ ಭರದ ಸಿದ್ಧತೆ ನಡೆಯುತ್ತಿದೆ. ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದ್ದು, ಇದರಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ನಾಯಕರು ದಿಲ್ಲಿಗೆ ತೆರಳಲಿದ್ದಾರೆ. ಮಹಿಳೆಯರಿಗಾಗಿ ಸೋಮವಾರ ಕಾಂಗ್ರೆಸ್ ‘ನಾ ನಾಯಕಿ’ ಸಮಾವೇಶ ಏರ್ಪಡಿಸಿದ್ದು, ಪ್ರಿಯಾಂಕಾ ವಾದ್ರಾ ಭಾಗವಹಿಸಲಿದ್ದಾರೆ. ‘ರೈತ ಚೈತನ್ಯ’ ಕಾರ್ಯಕ್ರಮ ಹಮ್ಮಿಕೊಂಡಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ‘ರೈತ ಸಂಕ್ರಾಂತಿ’ …
Read More »ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ವರಿಷ್ಠರ ಬುಲಾವ್
ಬೆಂಗಳೂರು: ಪಂಚಮಸಾಲಿ ಮೀಸಲು ಹೋರಾಟಕ್ಕೆ ಸಂಬಂಧಪಟ್ಟಂತೆ ರಾಜ್ಯ ನಾಯಕತ್ವದ ವಿರುದ್ಧವೇ ಸಿಡಿದು ನಿಂತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ರಾಷ್ಟ್ರೀಯ ನಾಯಕರು ದಿಲ್ಲಿಗೆ ಬುಲಾವ್ ನೀಡಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ದಿಲ್ಲಿಗೆ ಬರುವಂತೆ ಸೂಚಿಸಿದ್ದಾರೆ. ಯತ್ನಾಳ್‌ಗೆ ಕಾರಣ ಕೇಳಿ ವರಿಷ್ಠರು ನೋಟಿಸ್ ನೀಡಿ ದ್ದಾರೆ ಎಂಬುದು ಸೋಮವಾರ ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿತ್ತು. ಆದರೆ ವಿಜಯ ಪುರದಲ್ಲಿ ಖುದ್ದು ಯತ್ನಾಳ್ ಅವರೇ ಈ ಸಂಗತಿಯನ್ನು ನಿರಾಕರಿಸಿದ್ದಾರೆ. ಆ ಬಳಿಕ ನಡೆದ ಬೆಳವಣಿಗೆಯಲ್ಲಿ ವರಿಷ್ಠರೇ …
Read More »