ಬೆಂಗಳೂರು: 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು ಸಡಿಲಿಸಿ ವಯಸ್ಸಿನ ಮಿತಿಯನ್ನು 18 ವರ್ಷಗಳಿಗೆ ಇಳಿಕೆ ಮಾಡಲು ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ಕ್ಕೆ ತಿದ್ದುಪಡಿ ತರಲಾಗುತ್ತಿದೆ. ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆಯು ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಸೋಮವಾರ (ಜನವರಿ 9) ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ರ ಸೆಕ್ಷನ್ 10 (1) (ಇ) ಅಡಿಯಲ್ಲಿ …
Read More »Monthly Archives: ಜನವರಿ 2023
ಆಪ್ ಸರ್ಕಾರ ವೈದ್ಯರು, ಶಿಕ್ಷಕರಿಗೆ ಸಂಬಳ ನೀಡುತ್ತಿಲ್ಲ: ಬಿಜೆಪಿ ಗಂಭೀರ ಆರೋಪ
ನವದೆಹಲಿ : ಅರವಿಂದ್ ಕೇಜ್ರಿವಾಲ್ ಸರ್ಕಾರವು ಇದೀಗ ರದ್ದುಪಡಿಸಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣಗಳ ವಿರುದ್ಧ ಹೋರಾಡಲು 25 ಕೋಟಿ ರೂಪಾಯಿಗಳನ್ನು ಕಾನೂನು ಶುಲ್ಕವಾಗಿ ಪಾವತಿಸಿದೆ ಎಂದು ಬಿಜೆಪಿ ಬುಧವಾರ ಆರೋಪ ಮಾಡಿದೆ, ವೈದ್ಯರು ಮತ್ತು ಶಿಕ್ಷಕರ ಸಂಬಳ ನೀಡಲು ಹಣವಿಲ್ಲ, ಆದರೆ ಹಗರಣದ ಆರೋಪಿಗಳನ್ನು ರಕ್ಷಿಸಲು ಸಾರ್ವಜನಿಕ ಖಜಾನೆಯನ್ನು ಬಳಸುತ್ತಿದೆ ಎಂದು ಆರೋಪಿಸಿದೆ. ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಉಪ …
Read More »ಸುರಕ್ಷಾ ಕ್ರಮಗಳ ಮೇಲಿರಲಿ ಹೆಚ್ಚಿನ ಆದ್ಯತೆ
ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಮಂಗಳವಾರ ಇಬ್ಬರು ಅಮಾಯಕರು ಪ್ರಾಣ ಕಳೆದುಕೊಂಡಿದ್ದು, ತಾಯಿ ಮತ್ತು ಮಗುವಿನ ದಾರುಣ ಅಂತ್ಯಕ್ಕೆ “ನಮ್ಮ ಮೆಟ್ರೋ’ ದುಃಸಾಕ್ಷಿಯಾಗಿದೆ. ಇದು ಕಳಪೆ ಕಾಮಗಾರಿಯ ಪರಿಣಾಮ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಕಾಮಗಾರಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕೊರತೆ ಮತ್ತು ಕಾಮಗಾರಿಯ ನಿರ್ವಹಣೆಯ ಸ್ಥಾನಗಳಲ್ಲಿರುವವರ ಘೋರ ಅವಜ್ಞೆ ಇದಕ್ಕೆ ಪ್ರಮುಖ ಕಾರಣ. ಮೆಟ್ರೋ ಕಾಮಗಾರಿ ವೇಳೆ ದುರಂತ ಘಟಿಸಿ ಸಾವು-ನೋವು ಸಂಭ ವಿಸಿದ್ದು ಇದೇ …
Read More »ಕೋಟಿ ಕೈಗಳಿಗೆ ಕೆಲಸ ನೀಡಿದ ಬೆಳಗಾವಿ; ನರೇಗಾ ಮಾನವ ದಿನ ಸೃಜನೆಯಲ್ಲಿ ರಾಜ್ಯದಲ್ಲೇ ಪ್ರಥಮ
ಬೆಳಗಾವಿ: ಕೊರೊನಾ ಮತ್ತು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದ ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯಲ್ಲಿ ಯೋಜನೆಯಡಿ ಒಂದು ಕೋಟಿ ಮಾನವ ದಿನ ಸೃಜಿಸಿ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ. ರಾಯಚೂರು ಜಿಲ್ಲೆ 96.40 ಲಕ್ಷ ಮಾನವ ದಿನ ಸೃಜನೆಯೊಂದಿಗೆ 2ನೇ ಸ್ಥಾನದಲ್ಲಿದೆ. 71.91ಲಕ್ಷ ಮಾನವ ದಿನ ಸೃಜಿಸಿರುವ ಕೊಪ್ಪಳ 3ನೇ ಸ್ಥಾನದಲ್ಲಿದ್ದರೆ, ವಿಜಯನಗರ ಜಿಲ್ಲೆ 58.24 ಲಕ್ಷ ಮತ್ತು ಬಳ್ಳಾರಿ …
Read More »ಶಿಕ್ಷಕರ ವರ್ಗಾವಣೆ: ಇಂದಿನಿಂದ ದಾಖಲೆಗಳ ಪರಿಶೀಲನೆ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮಾ.10ಕ್ಕೆ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಇಲಾಖೆ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆ ಬುಧವಾರ ಪ್ರಕಟಿಸಿದೆ. ಡಿ.28ರಂದು ಪ್ರಕಟಿಸಿದ್ದ ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯನ್ನು ಮರು ಪ್ರಕಟಿಸಿದ್ದು ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ. ಕರಡು ಪಟ್ಟಿಯಿಂದ ಸಮಸ್ಯೆಗೆ ಒಳಗಾದ ಶಿಕ್ಷಕರು ಜ.16 ಮತ್ತು …
Read More »ಹುಬ್ಬಳ್ಳಿ-ಧಾರವಾಡದಲ್ಲಿ ಯುವಜನೋತ್ಸವ ರಂಗು; ಪ್ರಧಾನಿ ಆಗಮನಕ್ಕೆ ವಾಣಿಜ್ಯನಗರಿ ಪುಳಕ
ಹುಬ್ಬಳ್ಳಿ: ಭಾರತೀಯ ಸಂಸ್ಕೃತಿ, ಪರಂಪರೆ, ಆಚರಣೆ, ಕಲೆ ಹಾಗೂ ಸಾಂಸ್ಕೃತಿಕ ಸಿರಿವಂತಿಕೆ ಲೋಕದ ಅನಾವರಣ, ವಿವಿಧತೆಯಲ್ಲಿ ಏಕತೆ ಭಾವದ ಯುವಶಕ್ತಿ ಸಂಗಮ, ದೇಶದ ಸಾಂಸ್ಕೃತಿಕ ರಾಯಭಾರಿಗಳಂತಿರುವ ಯುವ ಪ್ರತಿಭೆಗಳ ದಿಗ್ದರ್ಶನಕ್ಕೆ ವೇದಿಕೆಯಾಗಲು ಹಾಗೂ ಪ್ರೀತಿಯ ಆತಿಥ್ಯ ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಸಜ್ಜಾಗಿದೆ. ರಾಷ್ಟ್ರೀಯ ಯುವಜನೋತ್ಸವ ಸಂಭ್ರಮ ಒಂದು ಕಡೆಯಾದರೆ, ಉತ್ಸವಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವಿಕೆ ಮಹಾನಗರವನ್ನು ಪುಳಕಿತಗೊಳ್ಳುವಂತೆ ಮಾಡಿದೆ. ದೇಶದ ಯುವ ಸಾಂಸ್ಕೃತಿಕ ಜಗತ್ತು ಹುಬ್ಬಳ್ಳಿ-ಧಾರವಾಡದಲ್ಲಿ …
Read More »40 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಪಕ್ಷ ಗೆಲ್ಲಲಿದೆ: ಜನಾರ್ದನ ರೆಡ್ಡಿ
ಗಂಗಾವತಿ: ಅಭಿಮಾನಿಗಳ ಉತ್ಸಾಹ ನೋಡುತ್ತಿದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ರಾಜ್ಯದ 40 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಹಿಂದೂಗಳ ಪವಿತ್ರ ಶಕ್ತಿ ಕೇಂದ್ರ ಕಿಷ್ಕಿಂದಾ ಅಂಜನಾದ್ರಿಯನ್ನು ಸಮಗ್ರ ಅಭಿವೃದ್ಧಿ ತಮ್ಮ ವಿಷನ್ ಆಗಿದ್ದು ಯುವ ಕಾರ್ಯಕರ್ತರ ಬೆಂಬಲ ಸಹಕಾರದಿಂದ ಗಂಗಾವತಿ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಅವರು ಕನಕಗಿರಿ ರಸ್ತೆಯಲ್ಲಿ ತಮ್ಮ ನಿವಾಸದ ವೇದಿಕೆಯಲ್ಲಿ ಜನ್ಮದಿನದ ನಿಮಿತ್ತ ಅಭಿಮಾನಿಗಳಿಂದ …
Read More »ಸಂಸ್ಕೃತಿ, ಆಚಾರ, ವಿಚಾರ ಬಗ್ಗೆ ಮಾತಾಡಲು ಬಿಜೆಪಿಗೆ ಯಾವ ನೈತಿಕತೆಯಿದೆ: ದಿನೇಶ್ ಗುಂಡೂರಾವ್
ತಲೆ ಮರೆಸಿಕೊಂಡಿರುವ ಸ್ಯಾಂಟ್ರೋ ರವಿ ವಿಚಾರದಲ್ಲಿ ರಾಜಕೀಯ ಆರೋಪ- ಪ್ರತ್ಯಾರೋಪಗಳು ನಡೆಯುತ್ತಿದೆ. ಇದೀಗ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ಸಂಸ್ಕೃತಿ, ಆಚಾರ, ವಿಚಾರ ಬಗ್ಗೆ ಮಾತಾಡಲು ಬಿಜೆಪಿಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ. ಲಂಪಟರು, ನುಂಗುಬಾಕರು, ಲಂಚ-ಮಂಚ ಪ್ರಹಸನ ಶೂರರಿಂದ ಬಿಜೆಪಿ ತುಂಬಿ ತುಳುಕುತ್ತಿದೆ. …
Read More »ನಿನ್ನನ್ನು ನಕಲಿ ಎನ್ಕೌಂಟರ್ನಲ್ಲಿ ಮುಗಿಸುತ್ತಾರೆ, ನ್ಯಾಯಾಲಯಕ್ಕೆ ಶರಣಾಗು’ ಎಂದು ಸ್ಯಾಂಟ್ರೋ ರವಿಗೆ ಬಹಿರಂಗ ಪತ್ರ..!
ಬೆಂಗಳೂರು: ಸ್ಯಾಂಟ್ರೋ ರವಿ ಪ್ರಕರಣ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದ್ದು ಪೊಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಆತನನ್ನು ಹುಡುಕುತ್ತಿದ್ದಾರೆ. ಇದೀಗ ಕೃಷ್ಣ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಬೇಗನೇ ಶರಣಾಗುವಂತೆ ಸ್ಯಾಂಟ್ರೋ ರವಿಗೆ ಸಲಹೆ ನೀಡಿ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು ಒಳಗಡೆ ತಮ್ಮ ಪರಿಚಯ ಹೇಳಿಕೊಂಡ ಕೃಷ್ಣ, ಸ್ಯಾಂಟ್ರೋ ರವಿಗೆ ಯಾರೆಲ್ಲ ಏನೇನು ಮಾಡಲಿದ್ದಾರೆ ಎನ್ನುವ ಬಗ್ಗೆ ಎಚ್ಚರಿಸಿದ್ದಾರೆ. ಅದಲ್ಲದೇ ನ್ಯಾಯಾಲಯಕ್ಕೆ ಶರಣಾಗುವಂತೆ ಕೂಡ ಸಲಹೆ ನೀಡಿದ್ದಾರೆ. …
Read More »ಬಿಜೆಪಿಗೆ ಬಿಗ್ ಶಾಕ್ : ಹಳ್ಳಿ ಹಕ್ಕಿ ‘ವಿಶ್ವನಾಥ್’ ಕಾಂಗ್ರೆಸ್ ಸೇರ್ಪಡೆಗೆ ಮಹೂರ್ತ ಫಿಕ್ಸ್..!
ರಾಯಚೂರು : ಬಿಜೆಪಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ (H.Vishwanath ) ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್ ತೊರೆದು ಶಾಸಕರಾಗಿ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದ ಪತನದ ಸಮಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಇದೀಗ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ . ಈ ಕುರಿತು ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು ನನ್ನ ರಕ್ತವೇ ಕಾಂಗ್ರೆಸ್ ಎಂದಿದ್ದಾರೆ. ಉತ್ತರಾಯಣದಂದು …
Read More »