Breaking News

Monthly Archives: ಜನವರಿ 2023

ದಯಾಮರಣಕ್ಕೆ 16 ಅಭ್ಯರ್ಥಿಗಳ ಅರ್ಜಿ

ಗದಗ: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 2,692 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಕಳೆದ 7 ವರ್ಷಗಳಿಂದ ಭರ್ತಿ ಮಾಡದೇ ಇರುವುದರಿಂದ ವಯೋಮಿತಿ ಮೀರುತ್ತಿರುವ ಹಲವು ಅಭ್ಯರ್ಥಿಗಳು ದಯಾಮರಣಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ.   ರಾಜ್ಯದಲ್ಲಿ 2,500 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 8,871 ಉಪಕೇಂದ್ರಗಳಿವೆ. ಒಂದು ಉಪ ಕೇಂದ್ರಕ್ಕೆ ಒಬ್ಬ ಪುರುಷ ಆರೋಗ್ಯ ಸಹಾಯಕರಂತೆ ಒಟ್ಟು 8,871 ಹುದ್ದೆಗಳ ಅವಶ್ಯಕತೆಯಿದೆ. ಆದರೆ, 2016ರಕ್ಕೂ ಪೂರ್ವದಲ್ಲಿ 5,827 ಹುದ್ದೆಗಳು ಮಂಜೂರಾಗಿದ್ದು, …

Read More »

ಬೆಳಗಾವಿ: ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತ; 6 ಮಂದಿ ಮೃತ್ಯು

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತಕ್ಕೆ ತುತ್ತಾಗಿ ಆರು ಜನ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ಜ.4 ರ ಮಧ್ಯರಾತ್ರಿ ನಡೆದಿದೆ. ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹನುಮವ್ವ ಮ್ಯಾಗಾಡಿ (25), ದೀಪಾ (31), ಸವಿತಾ (17), ಸುಪ್ರೀತಾ (11), ಮಾರುತಿ (42) ಮತ್ತು ಇಂದ್ರವ್ವ(24) ಮೃತಪಟ್ಟವರು ಎಂದು ಗುರುತಿಸಲಾಗಿದೆ.   ವಾಹನವು ಆಲದ ಮರಕ್ಕೆ ಢಿಕ್ಕಿ ಹೊಡೆದಿದ್ದರಿಂದ …

Read More »

ಹುಲಕುಂದ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವಾಗ ವಾಹನ ಅಪಘಾತದಿಂದ ಆರು ಮಂದಿ ಮೃತಪಟ್ಟಿದ್ದು, 16 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.   ವಾಹನ ಅಪಘಾತದಲ್ಲಿ16 ಕ್ಕೂ ಹೆಚ್ಚು ಗಾಯಗೊಂದಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ, …

Read More »

ಮೋದಿ ಬಳಿ ನಾಯಿಮರಿಯಂತೆ ಇರ್ತಾರೆ’ : ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಬಳ್ಳಾರಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಎದುರು ನಾಯಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ವಿಪಕ್ಷ ನಾಯಕ ಸಿದ್ದರಾಮಯ್ಯರ ವ್ಯಕ್ತಿತ್ವ ತೋರಿಸುತ್ತೆ. ನಾಯಿ ನಿಯತ್ತಿನ ಪ್ರಾಣಿ ಎಂಬುದು ಅವರಿಗೆ ಗೊತ್ತಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ. ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ. ಸಿದ್ದರಾಮಯ್ಯ ರೀತಿ ಸುಳ್ಳು ಹೇಳಿಕೊಂಡು …

Read More »

83 ವರ್ಷದ ಹಿಂದಿನ ಕರೆಂಟ್‌ ಬಿಲ್ ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್

ಸಾಮಾನ್ಯವಾಗಿ ಮನೆಯ ಕರೆಂಟ್‌ ಬಿಲ್‌ ಎಷ್ಟು ಬರುತ್ತೆ ಗಮನಿಸಿದ್ದಿರಾ? 500, ಸಾವಿರ ರೂಪಾಯಿ ಬರುತ್ತೆ. ಆದರೆ ಈ ಬಿಲ್ ನೋಡಿ, ಜಸ್ 5 ರೂಪಾಯಿ ಅಷ್ಟೆ. ಅಷ್ಟು ಕಡಿಮೆ ಕರೆಂಟ್‌ ಬಿಲ್ ಯಾರದಪ್ಪಾ ಅಂತ ಕನ್ಫ್ಯೂಸ್ ಆದ್ರೋ ಹೇಗೆ. ಇದು 1940ರ ಕಾಲದ ಕರೆಂಟ್‌ಬಿಲ್ ಇದೇ ಕರೆಂಟ್ ಬಿಲ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.   ಅಸಲಿಗೆ ಇದು ಸ್ವಾತಂತ್ರ್ಯ ಪೂರ್ವದ ವಿದ್ಯುತ್‌ಬಿಲ್, ಅಂದರೆ ಸುಮಾರು 83 ವರ್ಷದ …

Read More »

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

ಬೆಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ( S.M Krishna) ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, …

Read More »

ರಾಜ್ಯದಲ್ಲಿ ಮತ್ತೆ ಐಟಿ ಸದ್ದು; ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

ಚಿತ್ರದುರ್ಗ: ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಐಟಿ ಸದ್ದು ಮತ್ತೊಮ್ಮೆ ಮೊಳಗಿದೆ. ಅರ್ಥಾತ್, ರಾಜ್ಯದ ಮಾಜಿ ಸಚಿವರೊಬ್ಬರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಐಟಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.   ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿನ ಜಿಲ್ಲಾ ಕಾಂಗ್ರೆಸ್​ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಆತನ ಸಹೋದರ, ಗುತ್ತಿಗೆದಾರನೂ ಆಗಿರುವ ತಿಪ್ಪೇಸ್ವಾಮಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು …

Read More »

ಬಿಜೆಪಿ ಉತ್ತರ ಕರ್ನಾಟಕ ಗೆದ್ದಾಯಿತೆ? : ಸಿದ್ದರಾಮಯ್ಯ ಪ್ರಶ್ನೆ

ತುಮಕೂರು: ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಹಳೆ ಮೈಸೂರು ಪ್ರದೇಶವನ್ನು ಕೇಂದ್ರೀಕರಿಸಿರುವ ಬಿಜೆಪಿಯವರು, ಉತ್ತರ ಕರ್ನಾಟಕದ ಎಲ್ಲಾ ಪ್ರದೇಶಗಳನ್ನು ಗೆದ್ದಾಯಿತೆ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ತುರುವೇಕೆರೆಯಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. ಹಳೆ ಮೈಸೂರು ಪ್ರದೇಶಗಳನ್ನು ಗೆಲ್ಲುತ್ತೇವೆ ಎಂದು ಬೀಗುತ್ತಿದ್ದಾರೆ. ಇಲ್ಲಿನ ಜನರು ಬಿಜೆಪಿ ಮಾತಿಗೆ ಮಣೆ ಹಾಕುವುದಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಯಾರೇ …

Read More »

ಜ.11ರಿಂದ ಕಾಂಗ್ರೆಸ್‌ ‘ಪ್ರಜಾಧ್ವನಿ’ ಬಸ್‌ ಯಾತ್ರೆ

ಬೆಳಗಾವಿ: ‘ಜನರಿಗೆ ಉತ್ತಮ ಆಡಳಿತ ಒದಗಿಸುವಲ್ಲಿ ವಿಫಲವಾದ ಉಭಯ ಸರ್ಕಾರಗಳ ವಿರುದ್ಧ ಆಂದೋಲನ ಮಾದರಿಯಲ್ಲಿ ‘ಪ್ರಜಾಧ್ವನಿ’ ಬಸ್‌ ಯಾತ್ರೆ ಹಮ್ಮಿಕೊಂಡಿದ್ದೇವೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಸವರಾಜ ರಾಯರೆಡ್ಡಿ ಹೇಳಿದರು.   ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜ.11ರಂದು ಇಲ್ಲಿನ ವೀರಸೌಧದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಯಾತ್ರೆಗೆ ಚಾಲನೆ ನೀಡಲಾಗುವುದು. ಅಂದು ಬೆಳಿಗ್ಗೆ ಚಿಕ್ಕೋಡಿ ಮತ್ತು ಮಧ್ಯಾಹ್ನ ಬೆಳಗಾವಿಯ ಅಂಜುಮನ್‌-ಎ-ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು. ಜ.27ರವರೆಗೆ ನಡೆಯಲಿರುವ …

Read More »

ಕೆಪಿಟಿಸಿಎಲ್‌ ಅಕ್ರಮ: ಮತ್ತೆ ಮೂವರ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಬುಧವಾರ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈವರೆಗೆ ಬಂಧಿತರಾದವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಗೋಕಾಕ ತಾಲ್ಲೂಕಿನ ಮಲ್ಲಾಪುರ ಪಿ.ಜಿ. ಗ್ರಾಮದ ಅಣ್ಣಪ್ಪ ಕೆಂಪಣ್ಣ ಮಾರವಾಡಿ(31), ಶಿವಾಪುರದ ಜಾನ್‌ರಾಬರ್ಟ್ ಯಶವಂತ ಬಂಗೆನ್ನವರ(26), ಮೂಡಲಗಿ ತಾಲ್ಲೂಕಿನ ರಾಜಾಪುರದ ಚಿದಾನಂದ ಚಿನ್ನಪ್ಪ ಮಾಡಲಗಿ(27) ಬಂಧಿತರು. ‘ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ಬಳಸಿ, ಮೂವರು ಆರೋಪಿಗಳು ಪರೀಕ್ಷೆ ಬರೆದಿದ್ದರು. ಅವರಿಂದ ಅಕ್ರಮಕ್ಕೆ …

Read More »