Breaking News

Monthly Archives: ಜನವರಿ 2023

ಮೋಟಾರು ಅಪಘಾತದ ಕ್ಲೈಮ್‌ ಅನುಕೂಲಕ್ಕೆ ಪೊಲೀಸ್ ಠಾಣೆಗಳಲ್ಲಿ ವಿಶೇಷ ಘಟಕ : ಸುಪ್ರೀಂ

ನವದೆಹಲಿ: ಮೋಟಾರು ಅಪಘಾತ ಪ್ರಕರಣಗಳ ತನಿಖೆ ಮತ್ತು ಅನುಕೂಲಕ್ಕಾಗಿ ಮೂರು ತಿಂಗಳೊಳಗೆ ಪೊಲೀಸ್ ಠಾಣೆಗಳಲ್ಲಿ ವಿಶೇಷ ಘಟಕವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಸಾರ್ವಜನಿಕ ಸ್ಥಳದಲ್ಲಿ ಮೋಟಾರು ವಾಹನದಿಂದ ರಸ್ತೆ ಅಪಘಾತದ ಬಗ್ಗೆ ಸೂಚನೆಯನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್ ಹಲವಾರು ನಿರ್ದೇಶನಗಳನ್ನು ನೀಡಿತು, ಸಂಬಂಧಿಸಿದ ಎಸ್‌ಎಚ್‌ಒ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಸೆಕ್ಷನ್ 159 ರ ಪ್ರಕಾರ ಅಪಘಾತ ಮಾಹಿತಿ ವರದಿಯನ್ನು ಪೊಲೀಸರು ಮೂರು ತಿಂಗಳೊಳಗೆ ಕ್ಲೈಮ್ಸ್ ಟ್ರಿಬ್ಯೂನಲ್‌ಗೆ …

Read More »

ಹೈದರಾಬಾದ್: ಸಾರ್ವಜನಿಕ ಸಭೆಯೊಂದರಲ್ಲಿ ಹಿಂದೂಗಳ ಆರಾಧ್ಯ ದೇವರಾದ ಅಯ್ಯಪ್ಪ, ಶಿವ ಮತ್ತು ವಿಷ್ಣು ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ದಲಿತ ಮುಖಂಡ ಮತ್ತು ಭಾರತ ನಾಸ್ತಿಕ ಸಮಾಜದ ಮುಖ್ಯಸ್ಥ ಬೈರಿ ನರೇಶ್ ವಿರುದ್ಧ ಪೊಲೀಸ್ ಸೈಬರ್ ಕ್ರೈಂ ಸೆಲ್ ಪ್ರಕರಣ ದಾಖಲಿಸಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಲವಾರು ದಲಿತ ಸಂಘಟನೆಗಳ ಸಭೆಯಲ್ಲಿ ನರೇಶ್ ಅವರು ಅಯ್ಯಪ್ಪ ದೇವರ ಜನ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಮತ್ತು ಇತರ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೂಡಲೇ ಹೈದರಾಬಾದ್‌ನಲ್ಲಿ ಪ್ರತಿಭಟನೆಗಳು ನಡೆದಿದ್ದು, ನರೇಶ್ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಅಯ್ಯಪ್ಪ ಸ್ವಾಮಿಯ ಹಲವಾರು ಭಕ್ತರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕರಾಟೆ ಕಲ್ಯಾಣಿ ಎಂಬ ಮಹಿಳೆ ದೂರು ದಾಖಲಿಸಿದ್ದು, ಪ್ರಚಾರಕ್ಕಾಗಿ ಹಿಂದೂ ದೇವರನ್ನು ಅವಮಾನಿಸುವುದು ಫ್ಯಾಶನ್ ಆಗಿದ್ದು, ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ನರೇಶ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹಿಂದೂಗಳ ಭಾವನೆಗಳನ್ನು ಆಳವಾಗಿ ಘಾಸಿಗೊಳಿಸುವ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಸರ್ಕಾರದ ವಿರುದ್ಧ ಕಿಡಿಕಾರಿ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಹೈದರಾಬಾದ್: ಸಾರ್ವಜನಿಕ ಸಭೆಯೊಂದರಲ್ಲಿ ಹಿಂದೂಗಳ ಆರಾಧ್ಯ ದೇವರಾದ ಅಯ್ಯಪ್ಪ, ಶಿವ ಮತ್ತು ವಿಷ್ಣು ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ದಲಿತ ಮುಖಂಡ ಮತ್ತು ಭಾರತ ನಾಸ್ತಿಕ ಸಮಾಜದ ಮುಖ್ಯಸ್ಥ ಬೈರಿ ನರೇಶ್ ವಿರುದ್ಧ ಪೊಲೀಸ್ ಸೈಬರ್ ಕ್ರೈಂ ಸೆಲ್ ಪ್ರಕರಣ ದಾಖಲಿಸಿದೆ.   ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಲವಾರು ದಲಿತ ಸಂಘಟನೆಗಳ ಸಭೆಯಲ್ಲಿ ನರೇಶ್ ಅವರು ಅಯ್ಯಪ್ಪ ದೇವರ …

Read More »

R.S.S. ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ : ಭದ್ರತೆ ಹೆಚ್ಚಳ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೇಂದ್ರ ಕಚೇರಿಯನ್ನು ಶನಿವಾರ ಅಪರಿಚಿತರು ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   “ಪೊಲೀಸ್ ಕಂಟ್ರೋಲ್ ರೂಂಗೆ ಮಧ್ಯಾಹ್ನ 1 ಗಂಟೆಗೆ ಫೋನ್ ಕರೆ ಬಂದಿದ್ದು, ಮಹಲ್ ಪ್ರದೇಶದಲ್ಲಿನ ಆರ್‌ಎಸ್‌ಎಸ್ ಕೇಂದ್ರ ಕಚೇರಿಯನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ ಎಂದು ವಲಯ ಡಿಸಿಪಿ ಗೋರಖ್ ಭಮ್ರೆ ಹೇಳಿದ್ದಾರೆ. ಬಾಂಬ್ ಪತ್ತೆ ಮತ್ತು …

Read More »

ಸಿದ್ದೇಶ್ವರ ಶ್ರೀಗಳ ದರ್ಶನ ಪಡೆದು ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ ; ಕರೆ ಮಾಡಿದ ಪ್ರಧಾನಿ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ರಾತ್ರಿ ನಗರಕ್ಕೆ ಆಗಮಿಸಿ ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ರಾತ್ರಿ 10-30 ರ‌ ಸುಮಾರಿಗೆ ನಗರದ ಜ್ಞಾನಯೋಗಾಶ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಶ್ರೀಗಳ ದರ್ಶನ ಪಡೆದರು.   ಬಳಿಕ ಕನ್ಹೇರಿ ಕಾಡಸಿದ್ದೇಶ್ವರ ಮಠದ ಶ್ರೀಗಳು, ಜ್ಞಾನಯೋಗಾಶ್ರಮದ ಮುಖ್ಯಸ್ಥರಾದ ಬಸವಲಿಂಗ ಶ್ರೀಗಳೊಂದಿಗೆ ಸಿದ್ದೇಶ್ವರ ಶ್ರೀಗಳ ಆರೋಗ್ಯದ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು. ನಂತರ ಸಿದ್ದೇಶ್ವರ …

Read More »

ನ್ನಡ ಭಾಷೆ-ಅನ್ನದ ಭಾಷೆ ಎಂಬ ಸತ್ಯವನ್ನು ಮನವರಿಕೆ ಮಾಡುವ ಕೆಲಸವಾಗಬೇಕು: ಈಶ್ವರ ಸಂಪಗಾವಿ

ಖಾನಾಪುರ: ಗಡಿಭಾಗದ ಕನ್ನಡೇತರರಿಗೂ ಕನ್ನಡ ಭಾಷೆ-ಅನ್ನದ ಭಾಷೆ ಎಂಬ ಸತ್ಯವನ್ನು ಮನವರಿಕೆ ಮಾಡುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಈಶ್ವರ ಸಂಪಗಾವಿ ಹೇಳಿದರು. ಅವರು ಪಟ್ಟಣದ ಶನಯಾ ಪಾಮ್ಸ್‌ ಕಲ್ಯಾಣ ಮಂಟಪದಲ್ಲಿ ನಡೆದ 8ನೇ ತಾಲೂಕಾ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.   ಗಡಿ ಭಾಗದಲ್ಲಿ ಸಾಹಿತ್ಯ ಪರಸ್ಪರ ವಿನಿಮಯಗೊಳ್ಳುವುದರ ಮೂಲಕ ಭಾವನೆಗಳನ್ನು ಬೆಸೆಯುವ ಕಾರ್ಯವಾಗಬೇಕು. ಅನ್ಯ ಭಾಷೆ ವ್ಯಾಮೋಹದಲ್ಲಿ ಮಾತೃಭಾಷೆ ಕೊಚ್ಚಿ ಹೋಗದಂತೆ ಮಕ್ಕಳಲ್ಲಿ ಸ್ವಾಭಿಮಾನ ಬೆಳೆಸಬೇಕು. ತಾಲೂಕಲ್ಲಿ …

Read More »

ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ

ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಸಂತೋಷ ಕೊರಡಿ (೩೦) ಎಂಬಾತನೇ ಬೆಂಕಿಹಚ್ಚಿಕೊಂಡಾತ. ತನಗೆ ವಯಸ್ಸಾದರೂ ಮದುವೆಗೆ ಕನ್ಯೆ ಸಿಗಲಿಲ್ಲವೆಂದು ಮನನೊಂದಿದ್ದು, ಅಲ್ಲದೇ ಮಾನಸಿಕ ಅಸ್ವಸ್ಥನಾಗಿದ್ದ ಯುವಕ ಅಮ್ಮಿನಬಾವಿ ಗ್ರಾಮದ ಸ್ಮಶಾನದಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೆನ್ನಲಾಗಿದೆ. ಸಂತೋಷನಿಗೆ ದೇಹದ ಶೇಕಡಾ ಅರ್ಧದಷ್ಟು ಭಾಗ ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರ ಗಾಯಗೊಂಡ ಹಿನ್ನಲೆ ಹುಬ್ಬಳ್ಳಿ ಕಿಮ್ಸ್ …

Read More »