Breaking News

Daily Archives: ಫೆಬ್ರವರಿ 1, 2023

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಧಾರವಾಡ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆ ಮಾಡುತ್ತಿದ್ದು ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟಿರುವುದು ವಿಶೇಷ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ.   ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ …

Read More »

ತಾಂತ್ರಿಕ ಸಮಸ್ಯೆ: ವಿದ್ಯಾರ್ಥಿಗಳು ಅತಂತ್ರ

ಬೆಳಗಾವಿ: ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್)‌ ಸ್ಟೂಡೆಂಟ್‌ ಪೋರ್ಟಲ್‌ನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ಸಮಸ್ಯೆ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ವಿದ್ಯಾರ್ಥಿಗಳನ್ನು ಹೈರಾಣಾಗಿಸಿದೆ.   ಆರ್‌ಸಿಯು ವ್ಯಾಪ್ತಿಯಲ್ಲಿ 400 ಪದವಿ ಕಾಲೇಜುಗಳಿದ್ದು, 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಿ.ಎ, ಬಿಬಿಎ, ಬಿಸಿಎ, ಬಿ.ಎಸ್ಸಿ, ಬಿಎಸ್‌ಡಬ್ಲ್ಯು 1, 3 ಮತ್ತು 5ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಂದ ಪರೀಕ್ಷಾ ಅರ್ಜಿ ಆಹ್ವಾನಿಸಲಾಗಿದ್ದು, ಜ.6ರಿಂದ 31ರವರೆಗೆ ಈ …

Read More »

ಕಾಂಗ್ರೆಸ್‌ ಟಿಕೆಟ್: 130 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧ?

ಬೆಂಗಳೂರು: ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಗುರುವಾರ (ಫೆ. 2) ನಡೆಯಲಿದ್ದು, ಅದಕ್ಕೂ ಮೊದಲೇ 120ರಿಂದ 130 ಕ್ಷೇತ್ರಗಳಿಗೆ ಪಕ್ಷದ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್‌ ನಿರ್ಧರಿಸಿದೆ.   ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಚರ್ಚೆ ನಡೆಸಲಿದ್ದಾರೆ. ‘ಸುರ್ಜೇವಾಲಾ ಅವರು ಬೆಳಿಗ್ಗೆ …

Read More »

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ

ಧಾರವಾಡ: ಇಂದು ಸ್ಥಿತಿವಂತರೂ ಮತ ಮಾರಿಕೊಳ್ಳುವ ಕೆಟ್ಟ ಪರಿಸ್ಥಿತಿಗೆ ಬಂದಿದ್ದೇವೆ. ರಾಜಕಾರಣ ಹಾಗೂ ರಾಜಕಾರಣಿಗಳು ಇಂದಿನ ಜನರನ್ನು ಭ್ರಷ್ಟಗೊಳಿಸಿದೆ. ಜನರೂ ಭ್ರಷ್ಟರಾಗಿದ್ದಾರೆ. ಚುನಾವಣೆಗೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಲಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಸಂಜೆ ಜರುಗಿದ ಕಾರ್ಯಕ್ರಮದಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 127 ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ ವತಿಯಿಂದ ಕೊಡ …

Read More »

ಇಂದು ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಬಜೆಟ್ ಮಂಡನೆ ಇಂದಿನಿಂದ ಏನೇನು? ಬದಲಾವಣೆ? ಇಲ್ಲಿದೆ ಕೆಲವೊಂದು ಮಾಹಿತಿ

ಡಿಟಿಎಚ್‌, ಕೇಬಲ್‌ ಟಿವಿ ದರ ದುಬಾರಿ ಟಿವಿ ಚಾನೆಲ್‌ಗ‌ಳ ದರ ನಿಗದಿಗೆ ಸಂಬಂಧಿಸಿ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್‌)ದ ಹೊಸ ಆದೇಶ ಇಂದಿನಿಂದ ಚಾಲ್ತಿಗೆ ಬರಲಿದೆ. ಅದರಂತೆ ಗ್ರಾಹಕರು ಟಿವಿ ಚಾನೆಲ್‌ಗ‌ಳಿಗೆ ಸುಮಾರು ಶೇ.30ರಷ್ಟು ಹೆಚ್ಚು ಶುಲ್ಕ ತೆರಬೇಕಾಗುತ್ತದೆ ಎಂದು ಡಿಟಿಎಚ್‌ ಮತ್ತು ಕೇಬಲ್‌ ಆಪರೇಟರ್‌ಗಳು ಸುಳಿವು ನೀಡಿದ್ದಾರೆ. ದರ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳುತ್ತೇವೆಂಬ ಭೀತಿಯನ್ನೂ ಅವರು ವ್ಯಕ್ತಪಡಿಸಿದ್ದಾರೆ. ಹೆಚ್ಚುವರಿ ಶುಲ್ಕ ಕ್ರೆಡಿಟ್‌ ಕಾರ್ಡ್‌ ಮೂಲಕ ನೀವು ಬಾಡಿಗೆ ಪಾವತಿಸುತ್ತಿದ್ದರೆ ಇನ್ನು …

Read More »