Breaking News

Daily Archives: ಫೆಬ್ರವರಿ 3, 2023

ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾಡಿರುವ ಆರೋಪಗಳಲ್ಲಿ ಸತ್ಯವಿದೆ:ಅಶ್ವತ್ಥನಾರಾಯಣ

ರಾಮನಗರ: ಸಿ.ಡಿ. ಪ್ರಕರಣದ ಕುರಿತು ಡಿ.ಕೆ. ಶಿವಕುಮಾರ್ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾಡಿರುವ ಆರೋಪಗಳಲ್ಲಿ ಸತ್ಯವಿದೆ. ಈ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಬಿಡದಿಯಲ್ಲಿ ಗುರುವಾರ ಬಿಜೆಪಿ ಪ್ರಮುಖರ ಸಭೆ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ಕಾಂಗ್ರೆಸ್ ಅನ್ನು ಬ್ಲಾಕ್‌ಮೇಲರ್‌ಗಳ ಪಕ್ಷ, ಸಿ.ಡಿ. ‍ಪಕ್ಷ ಎನ್ನುತ್ತಾರೆ. ವಿಶೇಷವಾಗಿ ಕೆಪಿಸಿಸಿ ಅಧ್ಯಕ್ಷರು ಅದರಲ್ಲಿ ಪರಿಣತರು. ಎಲ್ಲರ ಸಿ.ಡಿ. …

Read More »

ಬಿಜೆಪಿ ಸರ್ಕಾರ ಹೆಸರು ಬದಲಾವಣೆ ಬಿಟ್ಟರೆ ಏನೂ ಮಾಡಿಲ್ಲ.

ಬೀದರ್: ‘ಬಿಜೆಪಿ ಸರ್ಕಾರ ಹೆಸರು ಬದಲಾವಣೆ ಬಿಟ್ಟರೆ ಏನೂ ಮಾಡಿಲ್ಲ. ಬಿಜೆಪಿಗೆ ಲೂಟಿ ಹೊಡೆಯುವುದು ಬಿಟ್ಟರೆ ಬೇರೆ ಕೆಲಸವಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ‘ಬಿಜೆಪಿ ಸರ್ಕಾರ ಜನರ ರಕ್ತ ಹೀರಲು ಶುರು ಮಾಡಿದೆ. ಕಮಿಷನ್‌ ಕೊಡಲು ಸಾಧ್ಯವಾಗದೇ ಬೆಳಗಾವಿ, ಬೆಂಗಳೂರು, ತಮಕೂರಿನ ಗುತ್ತಿಗೆದಾರರು ಮೃತಪಟ್ಟರು. ಒಬ್ಬರು ದಯಾ ಮರಣ ಕೋರಿದರು. ಗುತ್ತಿಗೆದಾರರ ಸಂಘದವರು ನೇರವಾಗಿ ಪ್ರಧಾನಮಂತ್ರಿಗೆ ಪತ್ರ ಬರೆದರು. ಲಂಚ ಕೊಡದೆ ಯಾವ ಕೆಲಸವೂ …

Read More »

ಆಪ್‌ ಕೌನ್ಸಿಲರ್‌ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ :ಕೇಜ್ರಿವಾಲ್‌

ನವದೆಹಲಿ: 2022 ರ ಡಿ.4ರಂದು ನಡೆದಿದ್ದ ದೆಹಲಿ ಪಾಲಿಕೆ ಚುನಾವಣೆಯ 250 ಸ್ಥಾನಗಳಲ್ಲಿ 134 ಸ್ಥಾನಗಳನ್ನು ಗೆಲ್ಲುವ ಮೂಲಕ ಆಮ್‌ ಆದ್ಮಿ ಪಾರ್ಟಿ ಬಿಜೆಪಿ ಪಾಳಯವನ್ನು ನಡುಗಿಸಿತ್ತು. ಆದರೆ ಇದೀಗ ಈ ಕಿಚ್ಚು ಮೇಯರ್‌ ಚುನಾವಣೆಗೂ ತಟ್ಟಿದೆ.   ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ದೆಹಲಿ ಲೆಫ್ಟಿನಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ ನಡುವಿನ ಭಾರೀ ಕೆಸರೆರಚಾಟದಿಂದಾಗಿ ಎರಡು ಬಾರಿ ಮುಂದೂಡಲ್ಪಟ್ಟಿದ್ದ ದೆಹಲಿ ಪಾಲಿಕೆ ಮೇಯರ್‌ ಚುನಾವಣೆ ಫೆ.6 ಕ್ಕೆ ನಡೆಯಲಿದೆ. …

Read More »

ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ಸುತ್ತ ಮುತ್ತ ಸೂಕ್ತವಾದ ಪ್ರದೇಶ ನೀಡಿದರೆ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು. ಸಾಧ್ಯವಾದರೆ ಇದೇ ಬಜೆಟ್‌ನಲ್ಲಿ ಜವಳಿ ಪಾರ್ಕಗೆ ಅವಕಾಶ ನೀಡಲಾಗುವುದು ಎಂದು ರಾಜ್ಯ ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.   ಶುಕ್ರವಾರ ಬನಹಟ್ಟಿ ಎಸ್‌ಆರ್‌ಎ ಮೈದಾನದಲ್ಲಿ ದೇವರದಾಸಿಮಯ್ಯ ಹಟಗಾರ ಜಗದ್ಗುರು ಚಿಕ್ಕರೇವಣಸಿದ್ಧ ಶಿವಶರಣರ ಪೀಠಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಜವಳಿ ಪಾರ್ಕ್ ನಿರ್ಮಾಣದಿಂದ ಈ ಭಾಗದ ೨೫ ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗವಕಾಶ ಕಲ್ಪಿಸಲಾಗುವುದು. …

Read More »

ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    *ಗೋಕಾಕ*: ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು ಇತ್ತಿಚೇಗೆ ತಾಲೂಕಿನ ಕಳ್ಳಿಗುದ್ದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನವಾಗಿ ನಿರ್ಮಿಸಿದ ಎರಡನೇ ಮಹಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿಯಲ್ಲಿ ಪ್ರಾಥಮಿಕ …

Read More »

ಬೆಂಗಳೂರು : ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್‌ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಫೆ.23ರಂದು ಪ್ರಥಮ ಭಾಷಾ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ ಎಲ್ಲವೂ 100 ಅಂಕಗಳು), 24ರಂದು ದ್ವಿತೀಯ ಭಾಷೆ ಇಂಗ್ಲಿಷ್‌, ಕನ್ನಡ (80 ಅಂಕಗಳು), 25ರಂದು ತೃತೀಯ ಭಾಷಾ ವಿಷಯಗಳು (80 ಅಂಕಗಳು), 27ರಂದು ಗಣಿತ, 28ರಂದು ವಿಜ್ಞಾನ, ಮಾರ್ಚ್‌ 1ರಂದು ಸಮಾಜ ವಿಜ್ಞಾನ (ತಲಾ 80 ಅಂಕಗಳು) ಪರೀಕ್ಷೆಗಳು ನಡೆಯಲಿವೆ. ಎಲ್ಲ ಪರೀಕ್ಷೆಗಳನ್ನೂ ಪ್ರತಿದಿನ ಬೆಳಿಗ್ಗೆ 10.30ರಿಂದ 1.30ರವರೆಗೆ ನಡೆಸಬೇಕು. ಜೆಟಿಎಸ್‌ ಸೇರಿದಂತೆ ಪರ್ಯಾಯ ವಿಷಯಗಳಿಗೆ ಶಾಲಾ ಹಂತದದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿಕೊಂಡ,ಪರೀಕ್ಷೆ ಗಳನ್ನು ನಡೆಸಲು ಮುಖ್ಯ ಶಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಮಂಡಳಿ ನಿರ್ದೇಶಕರು ಸೂಚಿಸಿದ್ದಾರೆ.

ಬೆಂಗಳೂರು : ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್‌ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಫೆ.23ರಂದು ಪ್ರಥಮ ಭಾಷಾ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ ಎಲ್ಲವೂ 100 ಅಂಕಗಳು), 24ರಂದು ದ್ವಿತೀಯ ಭಾಷೆ ಇಂಗ್ಲಿಷ್‌, ಕನ್ನಡ (80 ಅಂಕಗಳು), 25ರಂದು ತೃತೀಯ ಭಾಷಾ ವಿಷಯಗಳು (80 ಅಂಕಗಳು), …

Read More »

ಕೇಂದ್ರ ಸರ್ಕಾರದ ಬಜೆಟ್ ಸ್ವತಃ ಬಿಜೆಪಿ ಸಂಸದರಿಗೇ ಅರ್ಥವಾಗಿಲ್ಲ: ಕಾಂಗ್ರೆಸ್ ಟೀಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ ಸ್ವತಃ ಬಿಜೆಪಿ ಸಂಸದರಿಗೇ ಅರ್ಥವಾಗಿಲ್ಲ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಹೇಳಿಕೆ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸ್ವತಃ ಬಿಜೆಪಿ ಸಂಸದರಿಗೇ ಕೇಂದ್ರ ಸರ್ಕಾರದ ಬಜೆಟ್ ಅರ್ಥವಾಗಿಲ್ಲ, ತಮ್ಮದೇ ಪಕ್ಷದವರನ್ನು ಮೆಚ್ಚಿಸಲಾಗದ ಬಜೆಟ್ ಜನ ಸಾಮಾನ್ಯರನ್ನು ತಲುಪುವುದೇ? ಬಜೆಟ್ ದಿನಸಿ ಅಂಗಡಿ ಮಾಲೀಕನೊಬ್ಬ ಕೊಡುವ ಬಿಲ್‌ನಂತಿದೆ ಎಂದು ಸುಬ್ರಹ್ಮಣ್ಯ ಸ್ವಾಮಿ ಹೇಳಿದ್ದಾರೆ. ಇದು …

Read More »

25 ದೇವಸ್ಥಾನಗಳಲ್ಲಿ ಮಾಸ್ಟರ್‌ಪ್ಲಾನ್ ಶೀಘ್ರ ಜಾರಿ: ಶಶಿಕಲಾ ಜೊಲ್ಲೆ

ಬೆಳಗಾವಿ: ‘ಮುಜರಾಯಿ ಇಲಾಖೆಗೆ ಸೇರಿದ ರಾಜ್ಯದ 25 ಎ-ಗ್ರೇಡ್‌ ದೇವಸ್ಥಾನಗಳಲ್ಲಿ ‘ಮಾಸ್ಟರ್‌ ಪ್ಲಾನ್‌’ ಜಾರಿಗೆ ಸಿದ್ಧತೆ ನಡೆಸಲಾಗಿದೆ. ಬಜೆಟ್‌ ಅಧಿವೇಶನ ಮುಗಿದ ತಕ್ಷಣ ಇದನ್ನು ಕಾರ್ಯಗತ ಮಾಡಲಾಗುವುದು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ‘ಬೆಂಗಳೂರು ನಗರವೂ ಸೇರಿದಂತೆ ರಾಜ್ಯದ ಹಲವೆಡೆ ದೇವಸ್ಥಾನಗಳ ಜಾಗ ಅತಿಕ್ರಮಣವಾಗಿದೆ. ಮುಜರಾಯಿ ಹಾಗೂ ವಕ್ಫ್‌ ಭೂಮಿ ಅತಿಕ್ರಮಣವನ್ನು ‘ಮಾಸ್ಟರ್‌ ಪ್ಲಾನ್‌’ ಮೂಲಕ ತೆರವು ಮಾಡಲಾಗುವುದು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ …

Read More »

ಮುಂದಿನ 50 ದಿನಗಳ ನಂತರ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲಡಿ.ಕೆ.ಶಿ

ಬೆಂಗಳೂರು: ‘ಮುಂದಿನ 50 ದಿನಗಳ ನಂತರ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ. ಎಲ್ಲ ಕ್ಷೇತ್ರಗಳಲ್ಲಿ ಎರಡು- ಮೂರು ಸಮೀಕ್ಷೆ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ 136 ಶಾಸಕರು ಗೆಲ್ಲುವುದು ಖಚಿತ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.   ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಆರಂಭಕ್ಕೆ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, `ರಾಮನಗರ ಹಾಗೂ ಬೀದರ್ ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಧ್ವನಿ …

Read More »

ಟ್ರಾಫಿಕ್‌ ದಂಡ ಪಾವತಿಗೆ ಭರ್ಜರಿ ರಿಯಾಯಿತಿ

ಬೆಂಗಳೂರು: ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಇ-ಚಲನ್‌ ಮೂಲಕ ವಿಧಿಸಿದ ದಂಡ ಪಾವತಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯಿತಿ ಕೊಟ್ಟಿದ್ದು, ಫೆ.11ರೊಳಗೆ ಇತ್ಯರ್ಥಪಡಿಸಿಕೊಳ್ಳುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ಶೇ.50ರಷ್ಟು ರಿಯಾಯಿತಿ ಸಿಗಲಿದೆ.   ಹೈಕೋರ್ಟ್‌ ಹಿರಿಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸಾರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ. …

Read More »