ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಬಜೆಟ್ ಮಂಡನೆಯ ಅನಿವಾರ್ಯತೆ ಎದುರಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ “ಸಂಪನ್ಮೂಲವೇ ಸವಾಲ್’ ಆಗಿ ಪರಿಣಮಿಸಿದೆ. ಕೇಂದ್ರದಿಂದ ಲಭಿಸಬಹುದೆಂಬ ತೆರಿಗೆ ಪಾಲನ್ನು ಆಧರಿಸಿ “ಪರಪುಟ್ಟ ಬಜೆಟ್’ ರೂಪಿಸುವ ಸಾಧ್ಯತೆ ಇದೆ. ಆದರೆ ಸಂಪನ್ಮೂಲ ಸಂಗ್ರಹಣೆಯ ಸಾಂಪ್ರದಾಯಿಕ ಬಾಬ್ತುಗಳ ಮೇಲೆ ಹೆಚ್ಚಿನ ಹೊರೆ ಹೇರುವಂತಿಲ್ಲ. ಕರದಾತರ ಮೇಲೆ ಅತೀ ಕರುಣೆ ಬೀರಿದರೆ ಸಂಪನ್ಮೂಲ ಸಂಗ್ರಹಣೆ ಹಗ್ಗದ ಮೇಲಿನ ನಡಿಗೆ ಆಗಲಿದೆ. ಹೀಗಾಗಿ ಅಬಕಾರಿ ಆದಾಯ ಹೆಚ್ಚಳವನ್ನೇ …
Read More »Daily Archives: ಫೆಬ್ರವರಿ 3, 2023
ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ (ಫೆ.2) ರಾತ್ರಿಯೇ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಮಿತ್ ಶಾ ಅವರ ದೆಹಲಿಯ ನಿವಾಸದಲ್ಲಿ ಗುರುವಾರ ರಾತ್ರಿ 10:30ರ ಸಮಾಲೋಚನೆ ನಡೆಸಿದ ರಮೇಶ ಜಾರಕಿಹೊಳಿ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಬಳಿ 100ಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ ಮತ್ತು …
Read More »ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಬೆಂಗಳೂರು: ಗಡಿಭಾಗದಲ್ಲಿ ಶಿಕ್ಷಣ, ಕೈಗಾರಿಕೆ, ಮೂಲಭೂತ ಸೌಕರ್ಯ, ಕನ್ನಡ ಭಾಷಾ ಅಭಿವೃದ್ಧಿಗಳ ಬಗ್ಗೆ ಕೆಲಸ ಮಾಡುವ ಅವಶ್ಯಕತೆ ಇದ್ದು, ಗಡಿ ಅಭಿವೃದ್ಧಿ ಪ್ರಾಧಿಕಾರಕ್ಜೆ ಇದೇ ವರ್ಷದ ಮಾರ್ಚ್ 31 ರೊಳಗೆ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಈ ಅನುದಾನಕ್ಕೆ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಸಲ್ಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿರುವ “ ಗಡಿನಾಡ ಚೇತನ” ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ …
Read More »ಕಾಂಗ್ರೆಸ್ ಭದ್ರಕೋಟೆ ಛಿದ್ರಗೊಳಿಸಿದ ಬಿಜೆಪಿ
ಬಾಗಲಕೋಟೆ: ವಿಶ್ವಗುರು ಬಸವಣ್ಣನವರ ಐಕ್ಯಸ್ಥಳ ಕೂಡಲಸಂಗಮದಿಂದ ಬಸವನಾಡು ಎಂಬ ಖ್ಯಾತಿ ಪಡೆದರೆ, ಆಲಮಟ್ಟಿ ಜಲಾಶಯದಿಂದ ಆವರಿಸಿದ ಹಿನ್ನೀರಿನಿಂದ ಮುಳುಗಡೆಗೊಂಡು ಮುಳುಗಡೆ ಜಿಲ್ಲೆ ಎಂಬ ಹಣೆಪಟ್ಟಿಯೂ ಈ ಜಿಲ್ಲೆ ಕಟ್ಟಿಕೊಂಡಿದೆ. ಇದೆಲ್ಲದರ ನಡುವೆ ರಾಜಕೀಯ ಕ್ಷೇತ್ರದಲ್ಲಿ ಸದಾ ಗಮನ ಸೆಳೆಯುವ ವೈಶಿಷ್ಟ್ಯತೆ ಮೆರೆದಿದೆ. ಅದಕ್ಕೆ ಕಾರಣ ಹಲವು. ನಾಡಿನ ಮುಖ್ಯಮಂತ್ರಿ, ದೇಶಕ್ಕೆ ರಾಷ್ಟ್ರಪತಿ (ಹಂಗಾಮಿ)ಯಾಗಿದ್ದ ಬಿ.ಡಿ. ಜತ್ತಿ ಅವರನ್ನು ಜಮಖಂಡಿ ಕ್ಷೇತ್ರ ನೀಡಿದ್ದರೆ; ರಾಜಕೀಯ ಲೆಕ್ಕಾಚಾರದ ಲಾಭ-ನಷ್ಟಗಳ ಮಧ್ಯೆಯೇ ಹುನಗುಂದ ಕ್ಷೇತ್ರದ ಎಸ್.ಆರ್. …
Read More »ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್ : `ಗ್ರಾಚ್ಯುಟಿ’ ಘೋಷಣೆ ಮಾಡಿ ರಾಜ್ಯ ಸರ್ಕಾರ
ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರಾಚ್ಯುಟಿ ಘೋಷಣೆ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಸರ್ಕಾರ ಸ್ಪಂದಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಸಭೆ ನಡೆಸಿ ಗ್ರಾಚ್ಯುಟಿ ಭರವಸೆ ನೀಡಿದ್ದರು. ಇದರ ಬೆನ್ನಲ್ಲೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು …
Read More »ಫೆ. 17ರಂದು ಸಿಎಂ ಬೊಮ್ಮಾಯಿ ಬಚಾವೋ ಬಜೆಟ್: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಕಲಬುರಗಿ: ರಾಜ್ಯದಲ್ಲಿ ಫೆ.17ರಂದು ಮಂಡನೆಯಾಗಲಿರುವುದು ಜನಸಾಮಾನ್ಯರ ಬದುಕು ಭದ್ರ ಮಾಡುವ ಬಜೆಟ್ ಅಲ್ಲ. ಅದು ಬಸವರಾಜ ಬೊಮ್ಮಾಯಿ ಬಚಾವೋ ಬಜೆಟ್ ಆಗಿರಲಿದೆ ಎಂದು ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಕೇಂದ್ರ ಸರಕಾರದ ಬಜೆಟ್ ಮಾದರಿ ನೋಡಲಾಗಿದೆ. ಅದೊಂದು ಕೇವಲ ಮೋಡಿ ಮಾಡುವ ಮೋದಿ ರಂಜಿತ ಬಜೆಟ್ ಆಗಿದೆ. ಜನ ಸಾಮಾನ್ಯರಿಗೆ, ರೈತಾಪಿ ವರ್ಗಕ್ಕೆ ಯಾವುದೇ ಸೌಕರ್ಯಗಳನ್ನು ಕೊಡುವಲ್ಲಿ …
Read More »ಹಳ್ಳಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತ್ಯು. ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ
ಕುರುಗೋಡು: ಕುರುಗೋಡು: ಗುತ್ತಿಗನೂರು ಗ್ರಾಮದಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಹಳ್ಳದಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗುತ್ತಿಗನೂರು ಗ್ರಾಮದ ಕುರುಬ ಸಮುದಾಯದ ತಂದೆ ಮಲ್ಲಿಕಾರ್ಜುನ ತಾಯಿ ಲಕ್ಷ್ಮಿ ಅವರ ಮೊದಲನೇ ಮಗ ಮತ್ತು ಕೊನೆಯ ಮಗ ಬೇರೆ ಗ್ರಾಮಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಮಂಗಳವಾರ ಗ್ರಾಮದಲ್ಲಿ ಅಂಬಾದೇವಿ ಜಾತ್ರಾ ಮಹೋತ್ಸವ ಇದ್ದ ಕಾರಣಕ್ಕೆ ಗ್ರಾಮಕ್ಕೆ ಬಂದಿದ್ದಾರೆ, ಗುರುವಾರ ಮಧ್ಯಾಹ್ನ ಗ್ರಾಮದ ಹಳ್ಳದ ತೀರಕ್ಕೆ …
Read More »ಅಮಿತ್ ಶಾ ಭೇಟಿಗಾಗಿ ದಿಲ್ಲಿಯಲ್ಲಿ ರಮೇಶ್ ಜಾರಕಿಹೊಳಿ; ಕುತೂಹಲ
ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ದಿಲ್ಲಿಗೆ ತೆರಳಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಳಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳ 100ಕ್ಕೂ ಹೆಚ್ಚು ಸಿಡಿಗಳಿದ್ದು, ಸಿಬಿಐ ತನಿಖೆಯಲ್ಲಿ ಹೊರ …
Read More »ಗಾಂಧಿನಗರ ಕ್ಷೇತ್ರ: ಕಾಂಗ್ರೆಸ್ ಭದ್ರಕೋಟೆಗೆ ನುಗ್ಗಲು ಬಿಜೆಪಿ, ಜೆಡಿಎಸ್ ಯತ್ನ
ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಗಾಂಧಿನಗರ ವಿಧಾನಸಭಾ ಕ್ಷೇತ್ರ ವಾಣಿಜ್ಯ ಚಟುವಟಿಕೆಗಳಿಂದ ಕೂಡಿರುವ, ಸದಾ ಜನಸಂದಣಿಯಿಂದ ಗಿಜಿಗುಡುವ ಕ್ಷೇತ್ರ. ಕಾಂಗ್ರೆಸ್‌ನ ಭದ್ರಕೋಟೆ ಎನಿಸಿರುವ ಇಲ್ಲಿ ದಿನೇಶ್ ಗುಂಡೂರಾವ್ ಈ ಬಾರಿಯೂ ಟಿಕೆಟ್ ಆಕಾಂಕ್ಷಿ. ಅವರು 5 ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಇವರನ್ನು ಸೋಲಿಸಿ ಕ್ಷೇತ್ರವನ್ನು ಗೆದ್ದುಕೊಳ್ಳುವ ಛಲವನ್ನು ಬಿಜೆಪಿ ತೊಟ್ಟಿದೆ. ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ವಿ.ನಾರಾಯಣಸ್ವಾಮಿ ಅವರಿಗೆ ಜೆಡಿಎಸ್ ಪಕ್ಷ ಟಿಕೆಟ್ ಘೋಷಿಸಿದೆ. …
Read More »ಕುಷ್ಠರೋಗಕ್ಕೆ ಔಷಧೋಪಚಾರವಿದೆ, ಪಡುವ ಅಗತ್ಯವಿಲ್ಲ : ಡಾ.ಮಹೇಶ ಕೋಣಿ
ಬೆಳಗಾವಿ: ಕುಷ್ಠರೋಗಕ್ಕೆ ಈಗ ಸೂಕ್ತ ಔಷಧೋಪಚಾರವಿದೆ. ಜನರು ಇದಕ್ಕೆ ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಕೋಣಿ ಹೆಳಿದರು. ಸ್ಪರ್ಶ ಕುಷ್ಠರೋಗ ಜಾಗೃತಿ ಅರಿವು ಆಂದೋಲನ- 2023ರ ಅಂಗವಾಗಿ ಆಯೋಜಿಸಿದ ಜಾಗೃತಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಕುಷ್ಠರೋಗದ ವಿರುದ್ಧ ಹೋರಾಡೋಣ ಮತ್ತು ಕುಷ್ಠರೋಗವನ್ನು ಇತಿಹಾಸವಾಗಿಸೋಣ’ ಎಂಬುದು ಈ ಬಾರಿಯ ಘೋಷಣೆಯಾಗಿದೆ’ ಎಂದರು. ಕುಷ್ಠರೋಗಕ್ಕೆ ಎಲ್ಲ ಸರ್ಕಾರಿ …
Read More »