Breaking News

Daily Archives: ಫೆಬ್ರವರಿ 3, 2023

ಗಾಂಜಾ ಪ್ರಕರಣ ಮುಚ್ಚಿಹಾಕಲಾಗಿದೆ ಎಂಬ ಆರೋಪ, ಟಿಳಕವಾಡಿ ಪೊಲೀಸ್ ಠಾಣೆ ಅಧಿಕಾರಿಗಳು &ಸಿಬ್ಬಂದಿ ವಿಚಾರಣೆ : ಅಲೋಕ್‌ ಕುಮಾರ್

ಬೆಳಗಾವಿ: ಗಾಂಜಾ ಪ್ರಕರಣ ಮುಚ್ಚಿಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಇಲ್ಲಿನ ಟಿಳಕವಾಡಿ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್‌ಕುಮಾರ್ ಟ್ವೀಟ್‌ ಮಾಡಿದ್ದಾರೆ.   ‘ನಗರದ ಕೆಲವು ಶಾಲೆ- ಕಾಲೇಜು ಸುತ್ತ ಗಾಂಜಾ ಮಾರಾಟ ನಡೆಯುತ್ತಿದೆ. ಜ.28ರಂದು ರಾತ್ರಿ ಗಾಂಜಾದೊಂದಿಗೆ ಸಿಕ್ಕಿಬಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಟಿಳಕವಾಡಿ ಠಾಣೆ ಪೊಲೀಸ್‌ ಅಧಿಕಾರಿಗಳು ಪ್ರಕರಣ ದಾಖಲಿಸಿಲ್ಲ’ ಎಂದು ಶ್ರೀರಾಮ ಸೇನೆ ಹಿಂದೂಸ್ತಾನ್ …

Read More »

ಮನಸೂರೆಗೊಂಡ ರಾಣಿ ಚನ್ನಮ್ಮ ನಾಟಕ

ಚಿಕ್ಕೋಡಿ: ಮಬ್ಬುಗತ್ತಲು ಆವರಿಸುತ್ತಿದ್ದಂತೆಯೇ ಅ‍ಪಾರ ಸಂಖ್ಯೆಯಲ್ಲಿ ಜಮಾಯಿಸಿದ ಜನ. ಸ್ವತಂತ್ರ್ಯ ಹೋರಾಟದ ಬೆಳ್ಳಿಚುಕ್ಕಿ, ವೀರರಾಣಿ ಕಿತ್ತೂರು ಚನ್ನಮ್ಮನ ಹೋರಾಟದ ಮರುಸೃಷ್ಟಿಯ ಮೆಗಾ ನಾಟಕ ಕಣ್ತುಂಬಿಕೊಳ್ಳುವ ಕಾತರ. ನೂರಾರು ಕಲಾವಿದರು, ಆನೆ, ಒಂಟೆ, ಕುದುರೆಗಳನ್ನು ಒಳಗೊಂಡ ಅದ್ಧೂರಿ ರಂಗಸಜ್ಜಿಕೆ. ಆಕರ್ಷಕ ಧ್ವನಿ ಮತ್ತು ಬೆಳಕಿನ ಸಂಯೋಜನೆಯಲ್ಲಿ ಮೂಡಿ ಬಂದ ನಾಟಕವನ್ನು ವೀಕ್ಷಿಸಿ, ಪುಳಕಿತಗೊಂಡ ಪ್ರೇಕ್ಷಕ ಗಣ… ಪಟ್ಟಣದ ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಹಾಗೂ ಸೋಮವಾರ ‘ವೀರರಾಣಿ ಕಿತ್ತೂರು ಚನ್ನಮ್ಮ’ ನಾಟಕ …

Read More »

‘ಅತಿಥಿ ಶಿಕ್ಷಕರ ₹49.27 ಲಕ್ಷ ಸಂಬಳ ಪಾವತಿ’

ಗೋಕಾಕ: ‘ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರದಿರಲಿ ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ತರುವ ಇದ್ದೇಶದಿಂದ 232 ಸರ್ಕಾರಿ ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರ ಸಂಭಾವನೆಯನ್ನು ನಾನೇ ನೀಡಿದ್ದೇನೆ’ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಸಮೀಪದ ದುರದುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಜರುಗಿದ ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿ ಮಾತನಾಡಿದ ಅವರು, ‘ಶಿಕ್ಷಕರು ಲಭ್ಯವಾಗಿರುವ …

Read More »

ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ

ರಾಮದುರ್ಗ: ಹುಟ್ಟಿರುವ ಪ್ರತಿಯೊಬ್ಬರು ಸಮಾಜಕ್ಕೆ ತಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿಕೊಳ್ಳಬೇಕು. ಉತ್ತಮ ಕೊಡುಗೆ ನೀಡಲು ಯತ್ನಿಸಬೇಕು ಎಂದು ನ್ಯಾಯಾಧೀಶ ವೆಂಕಣ್ಣ ಹೊಸಮನಿ ಹೇಳಿದರು. ಪಟ್ಟಣದ ಸಿ.ಡಿ. ಹಲ್ಯಾಳ ಪ್ರವಢಶಾಲೆಯ 1990 ರಿಂದ 1993ನೇ ಸಾಲಿನ ವಿದ್ಯಾರ್ಥಿಗಳು ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಶಾಲೆಯಲ್ಲಿ ಕಲಿತವರು ವಿವಿಧ ಹುದ್ದೆಗಳಿದ್ದಾರೆ. ಈ ಸಮ್ಮಿಲನ ಎಲ್ಲರು ಒಂದೆಡೆ ಸೇರಲು ಮತ್ತು ಶಿಕ್ಷಕರ ಆಶೀರ್ವಾದ ಪಡೆಯಲು ಸಹಕಾರಿಯಾಗಿದೆ ಎಂದು ತಿಳಿಸಿದರು. ವಿದ್ಯೆ …

Read More »