Breaking News

Daily Archives: ಫೆಬ್ರವರಿ 8, 2023

ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ: ಸಿಎಂ ಬೊಮ್ಮಾಯಿ

ಶಿವಮೊಗ್ಗ:ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಯಿ ಅವರು ಬುಧವಾರ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ದಲ್ಲಿ ವಿವಿಧ ಕಾರ್ಯಕ್ರಮ‌ ಉದ್ಘಾಟನೆ ಗೆ ಬಂದಿದ್ದೇನೆ,ವಿಐಎಸ್‌ಎಲ್ ಅವರ ನಿಯೋಗ ನನ್ನ‌ ಬಳಿ ಬಂದಿತ್ತು. ಕೇಂದ್ರದ ಸಚಿವರಿಗೂ ಕೂಡ ಮಾಹಿತಿ ರವಾನೆ ಮಾಡಲಾಗಿದೆ. ಇದೇ ವಾರದಲ್ಲಿ ಸಭೆ ಕರೆಯುತ್ತೇನೆ. ಖಾಸಗಿ ಯವರ ಜೊತೆ ಕೂಡ ಮಾತನಾಡುತ್ತೇನೆ. ಪರಿಹಾರ ಕೊಡುವಂತಹ ಕೆಲಸವನ್ನು ಮಾಡುತ್ತೇವೆ. …

Read More »

ಗರ್ಭಿಣಿ ಎಂದು ಘೋಷಿಸಿದ್ದ ಕೇರಳದ ತೃತೀಯಲಿಂಗಿ ದಂಪತಿಗಳಿಗೆ ಮಗುವಿನ ಜನನ!

ಕೋಝಿಕ್ಕೋಡ್ : ಇತ್ತೀಚೆಗೆ ಗರ್ಭಿಣಿ ಎಂದು ಘೋಷಿಸಿದ ಕೇರಳದ ತೃತೀಯಲಿಂಗಿ ದಂಪತಿಗಳು ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ಪಡೆದಿದ್ದಾರೆ, ಇದು ದೇಶದಲ್ಲೇ ಮೊದಲ ಪ್ರಕರಣ ಎಂದು ಪರಿಗಣಿಸಲಾಗಿದೆ. “ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಬೆಳಗ್ಗೆ 9.30 ರ ಸುಮಾರಿಗೆ ಮಗು ಜನಿಸಿತು” ಎಂದು ತೃತೀಯಲಿಂಗಿ ದಂಪತಿಗಳಲ್ಲಿ ಒಬ್ಬರಾದ ಜಿಯಾ ಪಾವಲ್ ಪಿಟಿಐಗೆ ತಿಳಿಸಿದ್ದಾರೆ.   ಮಗು ಮತ್ತು ಮಗುವಿಗೆ ಜನ್ಮ ನೀಡಿದ ಆಕೆಯ ಸಂಗಾತಿ ಜಹ್ಹಾದ್ ಇಬ್ಬರೂ …

Read More »

ಇಂಡಿ ಜಿಲ್ಲೆ ಮಾಡಿಯೇ ತೀರುತ್ತೇನೆ: ಶಾಸಕ ಯಶವಂತ್ರಾಯಗೌಡ

ವಿಜಯಪುರ: ರಾಜಕೀಯವಾಗಿ ಬಹಳ ದಿನ ಅಧಿಕಾರದಲ್ಲಿ ಇರಲು ಬಯಸದ ನಾನು, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಜಯಪುರ ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ, ಇಂಡಿ ಜಿಲ್ಲಾ ಕೇಂದ್ರ ಮಾಡಿಯೇ ತೀರುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪ್ರತಿಜ್ಞೆ ಮಾಡಿದರು.   ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಗವನ್ನು ನೀರಾವರಿ ಇಂಡಿ ನಗರಸಭೆ, ಜಿಲ್ಲಾ ಕೇಂದ್ರ ಮಾಡುವುದು ನನ್ನ ರಾಜಕೀಯ ಭವಿಷ್ಯದ ಕನಸು. ನಂಜುಂಡಪ್ಪ ವರದಿ ಕೂಡ ಸಣ್ಣ ಜಿಲ್ಲೆಗಳ …

Read More »

ಬೊಮ್ಮಾಯಿ ಬಸವ ಚಿಂತಕರಲ್ಲ, ಮೋಸಗಾರ ಸಿಎಂ : ರೇವುನಾಯಕ ಬೆಳಮಗಿ

ವಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಣ್ಣನ ಚಿಂತನೆ ಹೊಂದಿದ್ದಾರೆ. ಎಲ್ಲರಿಗೂ ನ್ಯಾಯ ಕೊಟ್ಟು ಸಮಾನತೆ ಕೊಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ಇತರರಂತೆ ಮೋಸಗಾರ ಸಿಎಂ ಆಗಿದ್ದಾರೆ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಆರೋಪಿಸಿದರು.   ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ತಾಂಡಾಗಳಲ್ಲಿ ವಾಸಿಸುವ ಬಂಜಾರಾ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ನಾಟಕ ಇತ್ತೀಚೆಗೆ …

Read More »

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ: ಗೋವಾ ಸಿಎಂ

ಮಂಗಳೂರು: ಕರ್ನಾಟದಲ್ಲಿ ಬಿಜೆಪಿ ಸರಕಾರದಿಂದ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಇದರಿಂದಾಗಿ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸರಕಾರವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಬುಧವಾರ ಮಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣ ಕನಸಿಗೆ ಕರ್ನಾಟಕವೂ ಕೈಜೋಡಿಸಿದೆ. ಇಲ್ಲಿನ ಡಬಲ್‌ ಎಂಜಿನ್‌ ಸರಕಾರ ಪ್ರಧಾನ ಮಂತ್ರಿಗಳ ಆಶಯಕ್ಕೆ ಪೂರಕವಾಗಿ …

Read More »

ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಚಿಕ್ಕೋಡಿ: ಸಂಬಂಧಿಕ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 18 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಅಥಣಿ ತಾಲೂಕಿನ ತೇವರಟ್ಟಿ ಗ್ರಾಮದ ಆರೋಪಿ ಭೀಮಣ್ಣಾ ಭರಮು ಚಿಪ್ಪರಗಿ ಇತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ. ಕಳೆದ 2007 ರಂದು ಅಣ್ಣಪ್ಪ ನೇಮಣ್ಣಾ ಚಿಪ್ಪರಗಿ ಕೊಲೆಯಾದ ವ್ಯಕ್ತಿ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …

Read More »

ವೈದ್ಯಕೀಯ ನಿರ್ಲಕ್ಷ್ಯ: ಪ್ರಸೂತಿ ತಜ್ಞೆಗೆ ₹11 ಲಕ್ಷ ದಂಡ

ಧಾರವಾಡ: ವಾಸ್ತವಾಂಶವನ್ನು ಮರೆಮಾಚಿ ಅಂಗವಿಕಲ ಮಗುವಿನ ಜನನಕ್ಕೆ ಕಾರಣವಾದ ಇಲ್ಲಿನ ಮಾಳಮಡ್ಡಿಯ ಪ್ರಶಾಂತ ನರ್ಸಿಂಗ್ ಹೋಮ್‌ನ ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ಮತ್ತು ಪರಿಹಾರವಾಗಿ ₹11.10ಲಕ್ಷ ವಿಧಿಸಿದೆ.   ಇಲ್ಲಿನ ಶ್ರೀನಗರ ಬಡಾವಣೆಯ ಭಾವಿಕಟ್ಟಿ ಪ್ಲಾಟ್ ನಿವಾಸಿ ಪರಶುರಾಮ ಘಾಟಗೆ ಎಂಬುವವರು ತಮ್ಮ ಪತ್ನಿ ಪ್ರೀತಿ ಅವರನ್ನು ಪ್ರಶಾಂತ ನರ್ಸಿಂಗ್ ಹೋಮ್‌ನಲ್ಲಿ 2018ರ ಜುಲೈ 12ರಿಂದ 2019ರ ಜನೆವರಿವರೆಗೆ ತಪಾಸಣೆ ನಡೆಸಿದ್ದಾರೆ. …

Read More »

ಕರ್ನಾಟಕ ವಿದ್ಯಾವರ್ಧಕ ಸಂಘ: 12 ಲೇಖಕಿಯರಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಹಿಳಾ ಸಾಹಿತ್ಯಕ್ಕೆ ನೀಡುವ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನವು ನಾಲ್ಕು ವರ್ಷಗಳ ಅವಧಿಗೆ 12 ಲೇಖಕಿಯರಿಗೆ ಲಭಿಸಿದೆ. 2018ರಿಂದ 2021ರವರೆಗೆ ಒಟ್ಟು 115 ಕೃತಿಗಳು ಆಯ್ಕೆಯಾಗಿ ಬಂದಿದ್ದವು. ನಿರ್ಣಾಯಕರು ಪ್ರತಿ ಸಾಲಿನಲ್ಲಿ ಮೂರು ಕೃತಿಗಳಂತೆ ಆಯ್ಕೆ ಮಾಡಿ ಒಟ್ಟು 12 ಕೃತಿಗಳಿಗೆ ಬಹುಮಾನ ನೀಡಿದ್ದಾರೆ. 2018ನೇ ಸಾಲಿನಲ್ಲಿ ಬೆಂಗಳೂರಿನ ಉಮಾ ಮುಕುಂದ ಅವರ ‘ಕಡೆ ನಾಲ್ಕು ಸಾಲು’ ಕವನ ಸಂಕಲನ, ಕೊಪ್ಪದ ದೀಪಾ …

Read More »

 ಫೆ. 24ರಿಂದ ಬೆಳಗಾವಿ ಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಪ್ರವಾಸ:

ಗೋಕಾಕ: ಫೆ. 24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ. 28 ರಂದು ಸಂಜೆ ಗೋಕಾಕನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ …

Read More »

ಹೊಸಪೇಟೆಯಿಂದ ಸ್ಪರ್ಧಿಸಿದರೆ 1 ಕೋಟಿ ಕೊಡುವುದಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯನವರ ಅಭಿಮಾನಿ

ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.

Read More »