Breaking News

Daily Archives: ಫೆಬ್ರವರಿ 19, 2023

ಬಿಜೆಪಿ ನಾಯಕರಿಗೆ ಈಗ ಆಪ್ತರಿಂದಲೇ ಆಪತ್ತು ಪ್ರಾರಂಭ

ಬೆಂಗಳೂರು :ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರಿಗೆ ಈಗ ಆಪ್ತರಿಂದಲೇ ಆಪತ್ತು ಪ್ರಾರಂಭವಾಗಲಾರಂಭಿಸಿದೆ. ಪ್ರಭಾವಿ ಸಚಿವರು ಹಾಗೂ ನಾಯಕರ ಸಮೀಪವರ್ತಿಗಳನ್ನೇ ಕಾಂಗ್ರೆಸ್‌ ಬಲೆಗೆ ಬೀಳಿಸಲಾರಂಭಿಸಿದೆ. ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಪ್ತ ತಮ್ಮಯ್ಯ ತಮ್ಮ ಬೆಂಬಲಿಗರ ಜತೆಗೆ ಕಾಂಗ್ರೆಸ್‌ ಸೇರಲು ನಿರ್ಧರಿಸಿರುವುದರ ಬೆನ್ನಲ್ಲೇ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಆಪ್ತ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್‌.ಕಿರಣ್‌ ಕುಮಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ …

Read More »

ಧರ್ಮಸ್ಥಳದಲ್ಲಿ ಭಕ್ತರಿಂದ ಭಕ್ತಿ‌ ಸಡಗರದಿಂದ ಅಹೋರಾತ್ರಿ ಶಿವರಾತ್ರಿ ಜಾಗರಣೆ

ಬೆಳ್ತಂಗಡಿ: ಜಗತ್ತಿನ ದೋಷ ಪರಿಹರಿಸಬಲ್ಲ ಏಕಮಾತ್ರ ದೇವ ವಿಷಕಂಠ. ನಮ್ಮ ಹೃದಯಶುದ್ಧವಾಗಿದ್ದಲ್ಲಿ ಭಾವನೆ, ಕೂಗು ಭಗವಂತನಿಗೆ ವ್ಯವಹರಿಸುತ್ತದೆ. ಪರಿಶುದ್ಧ ಮನ, ವಚನ, ಕಾಯದಿಂದ ನಿತ್ಯವೂ ಆರಾಧಿಸುವ ದೇವರ ಭಕ್ತಿಗೆ ಅಪಾರ ಶಕ್ತಿ ಪರಿಭ್ರಮಿಸುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನುಡಿದರು.   ಶಿವರಾತ್ರಿ ಜಾಗರಣೆ ಪ್ರಯುಕ್ತ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ಫೆ.18 ರಂದು ಸಂಜೆ 6.30 ಗಂಟೆಗೆ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ದೀಪ ಬೆಳಗಿ ಚಾಲನೆ ನೀಡಿ ಆಶೀರ್ವದಿಸಿದರು. ಈ …

Read More »

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿರುವ 47,001 ರೌಡಿಶೀಟರ್‌ಗಳ ಮೇಲೂ ಖಾಕಿ ಹದ್ದಿನ ಕಣ್ಣಿಟ್ಟಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿರುವ 47,001 ರೌಡಿಶೀಟರ್‌ಗಳ ಮೇಲೂ ಖಾಕಿ ಹದ್ದಿನ ಕಣ್ಣಿಟ್ಟಿದೆ. ಹಳೇ ಚಾಳಿ ಮುಂದುವರಿಸುತ್ತಿರುವ ರೌಡಿಗಳ ಹೆಡೆಮುರಿ ಕಟ್ಟಲು ಕಾರ್ಯಾಚರಣೆ ಶುರು ಹಚ್ಚಿಕೊಂಡಿದೆ. ವಿಧಾನಸಭೆ ಚುನಾವಣೆ ರಂಗೇರಲು ಕೆಲ ತಿಂಗಳುಗಳಷ್ಟೇ ಬಾಕಿಯಿದ್ದು, ಅಲ್ಲಲ್ಲಿ ಸದ್ದಿಲ್ಲದೇ ರೌಡಿ ಚಟುವಟಿಕೆಗಳು ನಡೆಯುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಸರ್ಕಾರವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದೆ. ಈ ನಿಟ್ಟಿನಲ್ಲಿ ಫ‌ುಲ್‌ ಅಲರ್ಟ್‌ ಆಗಿರುವ ರಾಜ್ಯ ಖಾಕಿ ಪಡೆ …

Read More »

ಸರಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯಬೇಕು ರಮೇಶ ಜಾರಕಿಹೊಳಿ

ಬೆಳಗಾವಿ: ಐತಿಹಾಸಿಕ ರಾಜಹಂಸಗಢ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉದ್ಘಾಟನೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಸಂಘರ್ಷ ಆರಂಭವಾಗಿದೆ. ರಾಜಹಂಸಗಢ ಕೋಟೆಯಲ್ಲಿ 43 ಅಡಿ ಎತ್ತರದ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಕಾಮಗಾರಿ ಬಹುತೇಕ ಮುಗಿದಿದೆ.   ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಉದ್ಘಾಟನಾ ಸಮಾರಂಭ ನಿಗದಿಗೊಳಿಸಿದ್ದು, ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಸರಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. …

Read More »

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ: ಕಾರ್ಯಕರ್ತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ

ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಕಾರ್ಯಕರ್ತರು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಶುಕ್ರವಾರ ಸಂಜೆ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ …

Read More »

ಶಿವರಾತ್ರಿ ಹಬ್ಬದಂದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಪ್ರೇಮಿಗಳು

ಯಾದಗಿರಿ: ಈ ಪ್ರೇಮಿಗಳು ಶಿವರಾತ್ರಿ ಹಬ್ಬದಂದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಶಹಾಪರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ನಡೆದಿದ್ದು ಮೃತರನ್ನು ಸುವರ್ಣ(20), ಈಶಪ್ಪ(22) ಎಂದು ಗುರುತಿಸಲಾಗಿದೆ. ಇಬ್ಬರೂ ಶಹಾಪುರದ ಉರುಸಗುಂಡಗಿ ಗ್ರಾಮದವರಾಗಿದ್ದು ಐದಾರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. 2 ವರ್ಷದ ಹಿಂದೆ ಪ್ರೀಯತಮೆ ಮದುವೆಯಾಗಿದ್ದ ಸುವರ್ಣ, ಬೆಂಗಳೂರಿನಲ್ಲಿ ತನ್ನ ಗಂಡನ ಜೊತೆ ವಾಸವಿದ್ದಳು. ನಿನ್ನೆ ಗಂಡನಿಗೆ ಹೇಳದೇ ಬೆಂಗಳೂರಿನಿಂದ ಹುರುಸಗುಂಡಗಿ ಗ್ರಾಮಕ್ಕೆ ಈಕೆ ಬಂದಿದ್ದಳು. ಇಡೀ ರಾತ್ರಿ ಒಂದೆಡೆ …

Read More »

ದೇವಾಲಯದಲ್ಲಿ ಭಕ್ತರಿಗೆ ಕೊಡುವ ಲಡ್ಡು ಪೊಟ್ಟಣಗಳ ಮೇಲೂ ರೌಡಿ ಸುನೀಲನ ಚಿತ್ರ!

ಕೆಲವು  ದಿನಗಳ ಹಿಂದೆ ರಕ್ತದಾನ ಶಿಬಿರದಲ್ಲಿ ಬಿಜೆಪಿಯ ಶಾಸಕರು, ಸಂಸದರೊಂದಿಗೆ ವೇದಿಕೆ ಹಂಚಿಕೊಂಡು ಸುದ್ದಿಯಾಗಿದ್ದ ನಗರದ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ ಮತ್ತೊಮ್ಮೆ ಸುದ್ದಿಯಲ್ಲಿದ್ದಾನೆ. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ದೇವಾಲಯಗಳಲ್ಲಿ ಭಕ್ತರಿಗೆ ಸೈಲೆಂಟ್ ಸುನಿಲನ ಕಡೆಯಿಂದ ಲಡ್ಡು ವಿತರಣೆ ಜೋರಾಗಿ ನಡೆದಿದೆ.   ಸದ್ಯ ರೌಡಿಸಂ ಬಿಟ್ಟಿರುವುದಾಗಿ ಹೇಳುತ್ತಲೇ ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವ ಸೈಲೆಂಟ್ ಸುನೀಲ ಭಕ್ತರಿಗೆ ಲಡ್ಡು ಪ್ರಸಾದ ಹಂಚಿದ್ದಾನೆ. ಲಡ್ಡು ಪ್ರಸಾದದ ಕವರ್‌ ಮೇಲೆ ಸೈಲೆಂಟ್ ಸುನೀಲನ …

Read More »

ಉದ್ಧವ್ ಠಾಕ್ರೆ ಕುಟುಂಬದಿಂದ ಕೈಜಾರಿದ ಶಿವಸೇನೆ; ಸಿಎಂ ಶಿಂಧೆ ಬಣ ಮೇಲುಗೈ

ನವದೆಹಲಿ ಶೀವಸೇನೆಯ ಬಿಲ್ಲು ಮತ್ತು ಬಾಣ ಚಿಹ್ನೆಯ ನಿಜವಾದ ವಾರಸುದಾರ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಬಣ ಎಂದು ಕೇಂದ್ರ ಚುನಾವಣಾ ಆಯೋಗ ಆದೇಶಿಸುವ ಮೂಲಕ ಬಾಳಾ ಸಾಹೇಬ್ ಠಾಕ್ರೆ ಸ್ಥಾಪಿಸಿದ್ದ ಶಿವಸೇನೆ ಪಕ್ಷ ಠಾಕ್ರೆ ಕುಟುಂಬದಿಂದ ಅಧಿಕೃತವಾಗಿ ಕೈಜಾರಿದಂತಾಗಿದೆ.   ಬಾಳಾ ಸಾಹೇಬ್ ಠಾಕ್ರೆ ರಾಜಕೀಯ ಬಳುವಳಿ ಮುಂದುವರಿಸುವ ಜವಾಬ್ದಾರಿ ಹೊತ್ತರೂ ಬಿಜೆಪಿ ಜತೆ ಮುನಿಸಿಕೊಂಡು ಕಾಂಗ್ರೆಸ್-ಎನ್​ಸಿಪಿ ಜತೆ ಮೈತ್ರಿ ಮಾಡಿಕೊಂಡು ಸಿಎಂ ಕುರ್ಚಿಗೇರಿದ್ದ ಉದ್ಧವ್ ಠಾಕ್ರೆ, ಎರಡೇ …

Read More »

ಹಗಲು ಶಿವನಾಮ ಜ‍ಪ, ರಾತ್ರಿ ಜಾಗರಣೆ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಶನಿವಾರ ಮಹಾಶಿವರಾತ್ರಿಯ ಸಡಗರ ಮನೆ ಮಾಡಿತು. ನಸುಕಿನಿಂದಲೇ ಹಲವು ಭಕ್ತರು ಶಿವಾಲಯಗಳ ಮುಂದೆ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ನಗರದ ಕಪಿಲೇಶ್ವರ ಮಂದಿರ, ಮಿಲಿಟರಿ ಮಹಾದೇವ ಗುಂಡಿ, ಕೆಎಲ್‌ಇ ಶಿವಾಲಯ, ಕಣಬರಗಿಯ ಸಿದ್ಧೇಶ್ವರ ದೇವಾಲಯ, ಶಿವಾಜಿನಗರದ ವೀರಭದ್ರೇಶ್ವರ ದೇವಸ್ಥಾನ, ಪೊಲೀಸ್ ಕೇಂದ್ರ ಸ್ಥಾನದಲ್ಲಿರುವ ವೀರಭದ್ರೇಶ್ವರ ದೇವಸ್ಥಾನ, ಶಹಾಪುರದ ಮಹಾದೇವ, ಶಾಹುನಗರ ಶಿವ ಮಂದಿರ, ಮಹಾಂತೇಶ ನಗರದ ಶಿವಾಲಯ, ಶಿವಶಕ್ತಿ ಕಾಲೊನಿ, ಸದಾಶಿವ …

Read More »