Breaking News

Daily Archives: ಫೆಬ್ರವರಿ 22, 2023

ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯಿಂದಲೇ ಹೆಂಡತಿ, ಮಕ್ಕಳ ಹತ್ಯೆ!

ಚಿಕ್ಕಬಳ್ಳಾಪುರ: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಸೇರಿ ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದು ವಿಷ ಸೇವಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿಡ್ಲಘಟ್ಟ ತಾಲೂಕಿನ ಯೆಣ್ಣೂರು ಗ್ರಾಮದಲ್ಲಿ ನಡೆದಿದೆ. ವರ್ಷಿತಾ(12), ಸ್ನೇಹಾ(9) ಇಬ್ಬರು ಪುತ್ರಿಯರು, ಪತ್ನಿ ನೇತ್ರಾವತಿ(37) ಹತ್ಯೆಗೀಡಾದ ದುರ್ದೈವಿಗಳು. ಇವರಿಗೆ ಬೆಂಕಿ ಹಚ್ಚಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಸೊನ್ನೇಗೌಡ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.   ಪತ್ನಿಯ ಅಕ್ರಮ …

Read More »

ಬಂಡೂರಿ ಯೋಜನೆಗೆ 22 ಹೆಕ್ಟೇರ್ ಅರಣ್ಯ ಬಳಕೆ

ನವದೆಹಲಿ: ಮಹದಾಯಿ ಯೋಜನೆಯ ಬಂಡೂರಿ ನಾಲಾ ತಿರುವು ಯೋಜನೆಗೆ 22.80 ಹೆಕ್ಟೇರ್‌ ಅರಣ್ಯವನ್ನು ಬಳಸಿಕೊಳ್ಳಲು ಅನುಮೋದನೆ ನೀಡುವಂತೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾ‍‍ಪಮಾನ ಬದಲಾವಣೆ ಸಚಿವಾಲಯಕ್ಕೆ ಕರ್ನಾಟಕ ಸರ್ಕಾರ ‍ಪ್ರಸ್ತಾವನೆ ಸಲ್ಲಿಸಿದೆ. ಮಹದಾಯಿ ನದಿ ನೀರು ವಿವಾದ ನ್ಯಾಯಾಧೀಕರಣವು 2018ರ ಆಗಸ್ಟ್‌ 14ರಂದು ಕಳಸಾ- ಬಂಡೂರಿ ಯೋಜನೆಗೆ 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿದೆ. ಇದರಲ್ಲಿ ಬಂಡೂರಿ ನಾಲಾ ತಿರುವು ಯೋಜನೆಗೆ 2.18 ಟಿಎಂಸಿ ಅಡಿ ಮೀಸಲಿಡಲಾಗಿದೆ. …

Read More »

ಸುರಕ್ಷಾ ಆಯಪ್‌: ಅರ್ಜಿ ವಿಲೇವಾರಿ

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ರಾಜ್ಯ ಪೊಲೀಸ್ ಇಲಾಖೆಯು ‘ಸುರಕ್ಷಾ’ ಎಂಬ ಮೊಬೈಲ್ ಆಪ್‌ ಪರಿಚಯಿಸಿದ್ದು, 112 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಅಥವಾ ಸುರಕ್ಷಾ ಆಯಪ್ ಮೂಲಕ ನೆರವು ಪಡೆದುಕೊಳ್ಳಬಹುದಾದ ವ್ಯವಸ್ಥೆ ರೂಪಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.   ‘ಅಪಘಾತ ಹಾಗೂ ಮತ್ತಾವುದೇ ಅವಘಡ ಉಂಟಾದ ಸಂದರ್ಭಗಳಲ್ಲಿ ಪೊಲೀಸ್ ಇಲ್ಲವೇ ಅಗತ್ಯ ತುರ್ತು ಸೇವೆಗಳ ಸೌಲಭ್ಯ ಪಡೆಯಲು ಸಿದ್ಧಪಡಿಸಲಾಗಿರುವ 112ರ ತುರ್ತು ಕರೆ ದೂರವಾಣಿ …

Read More »

ಮೇಕೆದಾಟು ಯೋಜನೆಗೆ ಹಣ ಇಡುತ್ತೇವೆ: ಕಾರಜೋಳ

ಬಜೆಟ್‌ ಪ್ರತಿಯಲ್ಲಿ ಮೇಕೆದಾಟು, ಎತ್ತಿನಹೊಳೆ ಯೋಜನೆಗಳಿಗೆ ಹಣ ಇಟ್ಟಿಲ್ಲ ಎಂಬ ನಿಮ್ಮ ಆರೋಪದಲ್ಲಿ ಹುರುಳಿಲ್ಲ. ನೀರಾವರಿಗಾಗಿ ಒಟ್ಟು ₹22,854 ಕೋಟಿ ಇಟ್ಟಿದ್ದು, ಇಲಾಖೆಯ ಕ್ರಿಯಾ ಯೋಜನೆ ರೂಪಿಸುವಾಗ ಇವೆರಡೂ ಯೋಜನೆಗಳಿಗೂ ಹಣ ಇಡುತ್ತೇವೆ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.   ‘ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳಿಗೆ ಹಣವಿಟ್ಟಿಲ್ಲ’ ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ‘ಯಾವ ಯೋಜನೆಗಳಿಗೆ ಎಷ್ಟು ಹಣ ಇಟ್ಟಿದ್ದೇವೆ ಎಂಬುದನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲು …

Read More »

ಅಕ್ರಮ ಗಣಿಗಾರಿಕೆ: ವಾರ್ಷಿಕ ₹20 ಸಾವಿರ ಕೋಟಿ ನಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ಸುಮಾರು ₹ 18 ಸಾವಿರ ಕೋಟಿಯಿಂದ ₹ 20 ಸಾವಿರ ಕೋಟಿಯಷ್ಟು ರಾಜಧನ ವರಮಾನ ನಷ್ಟವಾಗುತ್ತಿದೆ. ಅದನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಸರ್ಕಾರಕ್ಕೆ ಶಿಫಾರಸು ಮಾಡಿದೆ.   ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಮಹಾಲೇಖಪಾಲರು 2017-18ನೇ ಸಾಲಿನ ವರದಿಯಲ್ಲಿ ಗಣಿ ಗುತ್ತಿಗೆ ಕುರಿತು ಉಲ್ಲೇಖಿಸಿದ್ದ ಅಂಶಗಳ ಕುರಿತು ವಿಧಾನಸಭೆಯಲ್ಲಿ …

Read More »

ಪಿಎಸ್‌ಐ ಹಗರಣ: ಜಾಮೀನು ತಿರಸ್ಕೃತ

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ 30ನೇ ಆರೋಪಿಯಾದ ಪೊಲೀಸ್‌ ಇಲಾಖೆಯ ಕೇಂದ್ರ ಕಚೇರಿಯ ಸೂಪರಿಂಟೆಂಡೆಂಟ್‌ ಆರ್.ಮಂಜುನಾಥ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಆರ್‌.ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಏಕಸದಸ್ಯ ಪೀಠ ಮಂಗಳವಾರ ಪ್ರಕಟಿಸಿತು. ‘ಅಭ್ಯರ್ಥಿ ಯಶವಂತಗೌಡ ಲಿಖಿತ ಪರೀಕ್ಷೆ ಬರೆದ ನಂತರ ಬಳಸಿದ್ದ ಪೆನ್ನಿನಲ್ಲೇ ಒಎಂಆರ್‌ ಶೀಟ್‌ ತಿದ್ದಲು ಸಹಾಯ ಮಾಡಿದ ಆರೋಪವನ್ನು ಆರ್.ಮಂಜುನಾಥ್‌ ಎದುರಿಸುತ್ತಿದ್ದಾರೆ.

Read More »

ವೆಂಕಟಾಪೂರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕೆಎಂಎಫ್ ನಿಂದ ೧೨ ಲಕ್ಷ ರೂಪಾಯಿ ನೆರವು-

ಮೂಡಲಗಿ- ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ೧೨ ಲಕ್ಷ ರೂ. ನೆರವು ನೀಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ವೆಂಕಟಾಪೂರ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಮಾತನಾಡಿದ ಅವರು, ಇದರಲ್ಲಿ ಕೆಎಂಎಫ್ ನಿಂದ ೧೦ ಲಕ್ಷ ರೂ ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ೨ ಲಕ್ಷ ರೂ. ಗಳ ನೆರವು ನೀಡುವ ಭರವಸೆಯನ್ನು ನೀಡಿದರು.   ವೆಂಕಟಾಪೂರ ಗ್ರಾಮದ ಹಣಮಂತ ದೇವರ …

Read More »

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಘಟಪ್ರಭಾದ ಯೂ ಟ್ಯೂಬ್ ಚಾನೇಲ್‍ನ ಸಂಪಾದಕರು ಸುದ್ಧಿ ವಿಮರ್ಶೆ ಮಾಡುವಾಗ …

Read More »

ಬಿಜೆಪಿಗೆ ಸಿದ್ದಾಂತವಿಲ್ಲ, ಜೆ.ಪಿ.ನಡ್ಡಾಗೆ ರಾಜಕೀಯ ಜ್ಞಾನವೂ ಇಲ್ಲ: ಸಿದ್ದರಾಮಯ್ಯ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟಿಲ್‌ಗೆ ರಾಜಕೀಯ ಪರಿಜ್ಞಾನ ಇಲ್ಲ ಅಂದುಕೊಂಡಿದ್ದೆ. ಆದರೆ ಈಗ ಅರ್ಥವಾಗುತ್ತಿದೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ರಾಜಕೀಯ ಜ್ಞಾನ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.   ‘ಕಾಂಗ್ರೆಸ್ ಪಕ್ಷಕ್ಕೆ ಸಿದ್ಧಾಂತ ಇಲ್ಲ. ಸಿದ್ದರಾಮಯ್ಯ ಕಡು ಭ್ರಷ್ಟ’ ಎಂಬ ಜೆ.ಪಿ.ನಡ್ಡಾ ಅವರ ಆರೋಪಕ್ಕೆ ಇಲ್ಲಿನ ಖಾಸಗಿ ಹೆಲಿಪ್ಯಾಡ್‌ನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಬಿಜೆಪಿಗೆ ಸಿದ್ದಾಂತ …

Read More »

ಮಾಂಸದೂಟ ಸೇವಿಸಿ ನಾಗಬನಕ್ಕೆ ಭೇಟಿ ನೀಡಿದ ಸಿ.ಟಿ.ರವಿ,

ಭಟ್ಕಳ: ಫೆ.19ರಂದು ಪಟ್ಟಣಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ಮನೆಯಲ್ಲಿ ಮಾಂಸದೂಟ ಸೇವಿಸಿ ಸಂಜೆ ಪಟ್ಟಣದಲ್ಲಿ ಪುನರ್ ಸ್ಥಾಪಿಸಿದ ರಾಜಾಂಗಣ ನಾಗಬನಕ್ಕೆ ಭೇಟಿ ನೀಡಿ ನಾಗದೇವರ ದರ್ಶನ ಪಡೆದ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.   ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸದೂಟ ಮಾಡಿ ಧರ್ಮಸ್ಥಳ ದರ್ಶನ ಮಾಡಿರುವ ದೃಶ್ಯ ರಾಜ್ಯಾದ್ಯಂತ ವ್ಯಾಪಕ …

Read More »