Breaking News

Daily Archives: ಫೆಬ್ರವರಿ 24, 2023

ಬೆಳಗಾವಿ: ಪ್ರಧಾನಿ ಮೋದಿ ಆಗಮನಕ್ಕೆ ವಾಹನ ನೀಡಲು ಅಧಿಕಾರಿಗಳ ನಿರಾಕರಣೆ!

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ. 27ರಂದು ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಕರ್ತವ್ಯಕ್ಕಾಗಿ ಸರ್ಕಾರಿ ಇಲಾಖೆಯ ವಾಹನಗಳು ಅಗತ್ಯ ಇವೆ. ಆದರೆ ಸಂಬಂಧಿಸಿದ ಇಲಾಖೆಯಿಂದ ವಾಹನಗಳನ್ನು ಬಿಡುಗಡೆ ಮಾಡಲು ಅಧಿಕಾರಿಗಳು ನಿರಾಸಕ್ತಿ ತೋರುತ್ತಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ 70ಕ್ಕೂ ಹೆಚ್ಚು ಇನ್ನೋವಾ ಹಾಗೂ ಸುಮೋ, ಬೊಲೆರೋ ಸೇರಿದಂತೆ ಇತರೆ ವಾಹನಗಳ ಅಗತ್ಯವಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಡಾ. ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಆದರೆ …

Read More »

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಭಾಗ-2 ಶೀಘ್ರದಲ್ಲೇ ತೆರೆಗೆ

ಬೆಂಗಳೂರು: ಇತ್ತೀಚೆಗೆ, ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ನಿರ್ಮಾಪಕರು ಚಿತ್ರದ ಭಾಗ-2 ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ ಎಂದು ಖಚಿತಪಡಿಸಿದ್ದಾರೆ ಮತ್ತು ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಪ್ರಸ್ತುತ ಭರದಿಂದ ಸಾಗುತ್ತಿವೆ.   ಈ ಮಧ್ಯೆ, ಕಾಂತಾರ ಭಾಗ-2ರಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲು ಚಿತ್ರತಂಡ ರಜನಿಕಾಂತ್ ಅವರನ್ನು ಸಂಪರ್ಕಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಹಾಗಾಗಿ ಚಿತ್ರತಂಡದಿಂದ ಅಧಿಕೃತ ಪ್ರಕಟಣೆ …

Read More »

ಕನ್ನಡಕ್ಕೆ ಅಗ್ರಸ್ಥಾನ: ಮಸೂದೆ ಅಂಗೀಕಾರ

ಬೆಂಗಳೂರು: ರಾಜ್ಯದಲ್ಲಿ ಕನ್ನಡಕ್ಕೆ ಅಗ್ರಸ್ಥಾನ, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶ ಕಲ್ಪಿಸಲು ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ-2022’ ರೂಪಿಸುವ ಉದ್ದೇಶದಿಂದ ಸರ್ಕಾರ ಮಂಡಿಸಿದ ಮಸೂದೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು.   ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಮಸೂದೆಯನ್ನು ಮಂಡಿಸಿದರು. ಸೆಪ್ಟೆಂಬರ್‌ನಲ್ಲಿ ನಡೆದ ಅಧಿವೇಶನದಲ್ಲಿ ಇದೇ ಮಸೂದೆಯನ್ನು ಮಂಡಿಸಲಾಗಿತ್ತು. ಆಗ ಸಾರ್ವಜನಿಕ ವಲಯದಿಂದ ಕೆಲವು ಆಕ್ಷೇಪಣೆಗಳು, ಸಲಹೆಗಳು ಬಂದ ಕಾರಣ, ಅದರಲ್ಲಿನ ಕೆಲವು …

Read More »

ಹಗರಣ ಮುಚ್ಚಿಕೊಳ್ಳಲು ಬೊಮ್ಮಾಯಿಯಿಂದ ಸುಳ್ಳು ಆರೋಪ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ‘ಬಿಜೆಪಿ ಸರ್ಕಾರದ ವಿರುದ್ಧದ ಶೇಕಡ 40ರಷ್ಟು ಕಮಿಷನ್‌ ಆರೋಪ ಹಾಗೂ ಸಾಲು ಸಾಲಾಗಿ ಹೊರಬರುತ್ತಿರವ ಹಗರಣಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಸದನದಲ್ಲಿ ಅವರು ಮಾಡಿರುವ ಯಾವ ಆರೋಪಗಳಿಗೂ ಆಧಾರವಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.   ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅರ್ಕಾವತಿ ಬಡಾವಣೆ ನಿರ್ಮಾಣ ಪ್ರಾರಂಭವಾದದ್ದು 2003ರಲ್ಲಿ. ನಾನು ಅಧಿಕಾರಕ್ಕೆ ಬರುವ ಮೊದಲೇ 2,750 …

Read More »

ಧಾರವಾಡದಲ್ಲಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತ್ಯು

ಧಾರವಾಡ : ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯ ತೇಗೂರ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದ ಭೇಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯಿಂದ ಧಾರವಾಡದ ಕಡೆಗೆ ಬರುತ್ತಿದ್ದ ಕಾರು ಲಾರಿಗೆ ಹಿಂಬದಿಯಿಂದ ಗುದ್ದಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.   ಮೃತ ದುರ್ದೈವಿಗಳು ನಾಗಪ್ಪ ಈರಪ್ಪ ಮುದ್ದೊಜಿ(29)ಮಹಂತೇಶ್ ಬಸಪ್ಪ ಮುದ್ದೊಜಿ (40) ಬಸವರಾಜ್ ಶಿವಪುತ್ರಪ್ಪ ನರಗುಂದ(35) ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ (05) …

Read More »

ಕಾಂಗ್ರೆಸ್ ಪ್ರಮುಖ ಸಭೆಗೆ ಗಾಂಧಿ ಕುಟುಂಬದ ಗೈರು; ಖರ್ಗೆಗೆ ಫುಲ್ ಪವರ್

ಹೊಸದಿಲ್ಲಿ: ಛತ್ತೀಸ್‌ಗಡದ ರಾಯ್ಪುರದಲ್ಲಿ ಇಂದು ನಡೆಯುವ ಕಾಂಗ್ರೆಸ್ ನ ಹಾಥ್‌ ಸೇ ಹಾಥ್‌ ಜೋಡೋ ಅಧಿವೇಶನದ ಪ್ರಮುಖ ಸಭೆಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಗೈರಾಗಲಿದ್ದಾರೆ ಎಂದು ವರದಿಯಾಗಿದೆ.   ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಪೂರ್ಣ ಸ್ವಾತಂತ್ಯ ನೀಡುವ ಉದ್ದೇಶದಿಂದ ಗಾಂಧಿ ಕುಟುಂಬ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ. ಆದಾಗ್ಯೂ ಸಮಾವೇಶದ ಉಳಿದ ಭಾಗಕ್ಕೆ ಹಾಜರಾಗುತ್ತಾರೆ. …

Read More »

ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್‌ ಪಾಟೀಲ್‌ ಅವರ ಪತಿ ನಿಧನ

ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್‌ ಪಾಟೀಲ್‌ ಅವರ ಪತಿ ದೇವಿಸಿಂಗ್‌ ರಣಸಿಂಗ್‌ ಪಾಟೀಲ್‌ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಪ್ರತಿಭಾ ದೇವಿ ಸಿಂಗ್‌ ಪಾಟೀಲ್‌, ಪುತ್ರ, ಕಾಂಗ್ರೆಸ್‌ ನಾಯಕ ರಾಜೇಂದ್ರ ಸಿಂಗ್‌ ಶೆಖಾವತ್‌ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.   ಫೆ.12 ರಂದು ತನ್ನ ಪುಣೆಯ ನಿವಾಸದಲ್ಲಿ ಹುಲ್ಮಾಲುಹಾಸಿನ ಮೇಲೆ ಕುಸಿದುಬಿದ್ದಿದ್ದರು ಎಂದು ಹೇಳಲಾಗಿದೆ. ಆ ಬಳಿಕ …

Read More »

ಕಾಂಗ್ರೆಸ್ ಮೂರನೇ ಗ್ಯಾರಂಟಿ: ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಮೂರನೇ ಗ್ಯಾರಂಟಿಯನ್ನು ಪ್ರಕಟಿಸಿದ್ದು, ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಎರಡು ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಈಗ ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ …

Read More »

ಬರ್ಬರವಾಗಿ ಹೆಂಡತಿಯನ್ನೇ ಕೊಲೆಗೈದ ಗಂಡ

ರಾಯಚೂರು: ಪತ್ನಿಯ ಶೀಲ ಶಂಕಿಸಿ ಪತಿ ಮಹಾಶಯ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ. ಪವಿತ್ರಾ ಅಲಿಯಾಸ್ ಮಮತಾ (22) ಮೃತ ಮಹಿಳೆ. ಆರೋಪಿ ನಾಗರಾಜ್ ಪತ್ನಿಯನ್ನೇ ಕೊಂದ ಪತಿ. ಕಳೆದ ವರ್ಷವಷ್ಟೇ ವಿವಾಹವಾಗಿದ್ದ ಮಮತಾ ಹಾಗೂ ನಾಗರಾಜ್ ಮಾನ್ವಿ ಬಳಿಯ ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ನಾಗರಾಜ್ ಗೆ ಪತ್ನಿ ಮಮತಾ ಮೇಲೆ ಅನುಮಾನ. ಅನುಮಾನ ವಿಪರೀತಕ್ಕೆ ಹೋಗಿ ಈಗ ಹೆಂಡತಿಯನ್ನೇ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾ ರೋಹಣ ಕಾರ್ಯಕ್ರಮ

ಹಿರೆನಂದಿ: ಸಂತೋಷ್ ಜಾರಕಿಹೊಳಿ ಅವರ ನೇತೃತ್ವದ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ, ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗಿ, ಹಾಗೂ ಜೊತೆಗೆ ಸೂರ್ಯ ಶ್ರೇಷ್ಠ ಜಾರಕಿಹೊಳಿ ಸಣ್ಣ ಸಾಹುಕಾರರು ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ, ಹಾಗೂ ಜಯಶ್ರೀ ನಾಯಿಕ ಈ ಒಂದು ಸಮಾರಂಭಕ್ಕೆ ಹಾಜರ್ ಇದ್ದರೂ ಹೌದು ತಮ್ಮ ಫ್ಯಾಕ್ಟರಿ ಆವರಣ ದಲ್ಲಿ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಅಧ್ಬ್ಬೂತ …

Read More »