Breaking News

Daily Archives: ಫೆಬ್ರವರಿ 25, 2023

ಶಿಕಾರಿಪುರಕ್ಕೆ ವಿಜಯೇಂದ್ರ ಅಭ್ಯರ್ಥಿ: ಯಡಿಯೂರಪ್ಪ

ಬೆಂಗಳೂರು: ಚುನಾವಣ ರಾಜಕಾರಣದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಿಸಿರುವ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ತಮ್ಮ ಕಾರ್ಯಕ್ಷೇತ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರಕ್ಕೆ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಮತ್ತೆ ಘೋಷಣೆ ಮಾಡಿದ್ದಾರೆ. ವಿಧಾನಸಭೆ ಕಲಾಪದ ಬಳಿಕ ಅಂಬೇಡ್ಕರ್‌ ಪ್ರತಿಮೆ ಹಾಗೂ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ವಿಧಾನಸೌಧದಿಂದ ನಡೆದುಕೊಂಡೇ ಬಂದು ಗಾಂಧಿ ಪ್ರತಿಮೆಗೆ ಅವರು ನಮನ ಸಲ್ಲಿಸಿದರು. ಶಿಕಾರಿಪುರಕ್ಕೆ ಬಹುತೇಕ ವಿಜಯೇಂದ್ರ ಅವರೇ …

Read More »

ಬೊಮ್ಮಾಯಿಯವರು ಕಣ್ಣು ಬಿಡಲು ಇನ್ನೆಷ್ಟು ಶಿಕ್ಷಕರ ಹೆಣ ಬೀಳಬೇಕು?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಶ್ರೀ ಬಸರಿಶಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   https://www.instagram.com/reel/CpEyv87Dkf5/?igshid=NDk5N2NlZjQ= ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »

ನಗರಸಭೆ: ₹7.32 ಲಕ್ಷ ಉಳಿತಾಯ ಬಜೆಟ್‌

ಗೋಕಾಕ: ಇಲ್ಲಿನ ನಗರಸಭೆಯ 2023-24ನೇ ಸಾಲಿನ ₹7.32 ಲಕ್ಷದ ಉಳಿತಾಯದ ಬಜೆಟ್ ಅನ್ನು ಪ್ರಭಾರಿ ಪೌರಾಯುಕ್ತ ಶಿವಾನಂದ ಹಿರೇಮಠ ಅವರು, ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಂಡಿಸಿದರು. ನಗರದ ಸ್ವಚ್ಛತೆಗಾಗಿ 19 ಜನ ಪೌರಕಾರ್ಮಿಕರ ನೇಮಕ ಪ್ರಕ್ರಿಯೆ ನಡೆದಿದ್ದು, ಉಳಿದ ಕಾರ್ಮಿಕರನ್ನು ಹೊರಗುತ್ತಿಗೆ ಹಾಗೂ ನೇರ ಪಾವತಿ ಆಧಾರದ ಮೇಲೆ ಸೇವೆಯನ್ನು ಪಡೆಯುವ ಉದ್ದೇಶಕ್ಕೆ ₹3.84 ಕೋಟಿ ಅವಶ್ಯ ನಿಗದಿ ಮಾಡಿರುವುದಾಗಿ ತಿಳಿಸಿದರು.   …

Read More »

ಬೆಳಗಾವಿಯಲ್ಲಿ ಫೆ. 27ರಂದು 8 ಕಿ.ಮೀ ರೋಡ್‌ ಶೋ ನಡೆಸಲಿರುವ ಪ್ರಧಾನಿ ಮೋದಿ

ಬೆಳಗಾವಿ: ‘ನಗರದಲ್ಲಿ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು 8 ಕಿ.ಮೀ.ವರೆಗೆ ರೋಡ್‌ ಶೋ ನಡೆಸಲಿದ್ದಾರೆ. ಇದನ್ನು ನೋಡಲು 3 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.   ‘ಅಂದು ಮಧ್ಯಾಹ್ನ 1ರ ಸುಮಾರಿಗೆ ‍ಪ್ರಧಾನಿ ನಗರಕ್ಕೆ ಆಗಮಿಸಲಿದ್ದಾರೆ. ಜಿಲ್ಲೆಯ ಜನ ಮೋದಿ ಅವರನ್ನು ನೋಡಲು ಕಾತರರಾಗಿದ್ದಾರೆ. ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ವಿಶಾಲವಾದ ರಸ್ತೆಗಳಲ್ಲಿ ಇದೊಂದು ಐತಿಹಾಸಿಕ ರೋಡ್‌ …

Read More »