Breaking News

Daily Archives: ಮಾರ್ಚ್ 2, 2023

ಬೆಳಗಾವಿಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ: ರಾಜಹಂಸಗಡದತ್ತ ಹೊರಟ ಸಿಎಂ ಬೊಮ್ಮಾಯಿ

ಬೆಳಗಾವಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜಹಂಸಗಡದತ್ತ ಸಿಎಂ ಬಸವರಾಜ ಬೊಮ್ಮಾಯಿ ಹೊರಟಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಾಜಹಂಸಗಡದತ್ತ ಹೊರಟಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ , ಗೋವಿಂದ ಕಾರಜೋಳ, ರಮೇಶ್‌ ಜಾರಕಿಹೊಳಿ ಸಾಥ್‌ ನೀಡಿದ್ದಾರೆ. ಶಿವಾಜಿ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಲಿದ್ದಾರೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಕನ್ನಡ …

Read More »

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆ ಮಾ. 8ಕ್ಕೆ ನಡೆಯಲಿದೆ.

ಬೆಂಗಳೂರು: ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಾಗೂ ತೀವ್ರ ಗೊಂದಲದಲ್ಲಿರುವ 75 ರಿಂದ 80 ಕ್ಷೇತ್ರಗಳ ಆಕಾಂಕ್ಷಿಗಳು ಹಾಗೂ ಸ್ಥಳೀಯ ಮುಖಂಡರ ಸಭೆ ಮಾ. 8ಕ್ಕೆ ನಡೆಯಲಿದೆ. ಬೆಂಗಳೂರು ಹೊರವಲಯದ ರೆಸಾರ್ಟೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುಜೇìವಾಲ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ.   ತೀವ್ರ ಕಗ್ಗಂಟಾಗಿರುವ ಕ್ಷೇತ್ರಗಳ ಟಿಕೆಟ್‌ ಆಕಾಂಕ್ಷಿಗಳನ್ನು ಸಭೆಗಳನ್ನು ಆಹ್ವಾನಿಸಲಾಗಿದೆ. ಕೆಲವು ಕ್ಷೇತ್ರಗಳಲ್ಲಿ ಎರಡರಿಂದ …

Read More »

ಇಂದು ಮೂರು ರಾಜ್ಯಗಳ ಫ‌ಲಿತಾಂಶ ಪ್ರಕಟ

ಹೊಸದಿಲ್ಲಿ: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ ರಾಜ್ಯಗಳ ಚುನಾವಣ ಫ‌ಲಿತಾಂಶ ಗುರುವಾರ ಹೊರಬೀಳಲಿದೆ. ತ್ರಿಪುರಾ, ನಾಗಾಲ್ಯಾಂಡ್‌ ಬಿಜೆಪಿ ತೆಕ್ಕೆಗೆ ಹೋಗಲಿದೆ, ನಾಗಾಲ್ಯಾಂಡ್‌ ಅತಂತ್ರವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.   ಫೆ. 16ರಂದು ತ್ರಿಪುರಾ ಮತ್ತು ಫೆ. 27ರಂದು ನಾಗಾಲ್ಯಾಂಡ್‌ ಹಾಗೂ ಮೇಘಾಲಯ ವಿಧಾನಸಭೆಗಳಿಗೆ ಚುನಾವಣೆ ನಡೆದಿತ್ತು. ತ್ರಿಪುರಾದಲ್ಲಿ ಪ್ರಾದೇಶಿಕ ಪಕ್ಷ ತಿಪ್ರ ಮೋಥಾ 42 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಮೇಘಾಲಯ ಹಾಗೂ ನಾಗಾಲ್ಯಾಂಡ್‌ಗಳಲ್ಲಿ …

Read More »

ಸಕಾರಣವಿಲ್ಲದೆ ತೆಗೆದು ಹಾಕಲಾಗಿದ್ದ ಮತದಾರರ ಹೆಸರು ಮರು ಸೇರ್ಪಡೆ

ಬೆಂಗಳೂರು ಕೇಂದ್ರ ಚುನಾವಣ ಆಯೋಗದ ನಿರ್ದೇಶನದಂತೆ ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಮರುಪರಿಶೀಲಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಪ್ರತಿಯೊಂದು ಕ್ಷೇತ್ರ ದಲ್ಲೂ ಅಂದಾಜು 20 ಸಾವಿರ ಹೆಸರುಗಳನ್ನು ಸಕಾರಣವಿಲ್ಲದೆ ತೆಗೆದುಹಾಕಿರುವುದನ್ನು ಪತ್ತೆಹಚ್ಚಿದೆ.   ಅಂತಿಮ ಮತದಾರರ ಪಟ್ಟಿಯಲ್ಲಿ 10 ಸಾವಿರ ಹೆಸರುಗಳು ತೆಗೆದುಹಾಕಿದ್ದರೆ (ಅಂದರೆ ಶೇ.4ಕ್ಕಿಂತ ಅಧಿಕ) ಅಂತಹ ಕ್ಷೇತ್ರಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಮರು ಪರಿಶೀಲಿಸುವಂತೆ ಚುನಾವಣ ಆಯೋಗ ನಿರ್ದೇಶಿಸಿತ್ತು. ಶೇ.4ಕ್ಕಿಂತ ಹೆಚ್ಚು …

Read More »

ಶಾಸಕರ ಆಪ್ತನ ಮಾತೋಶ್ರೀ ನಿಧನ ಇಂದು 10ಗಂಟೆಗೆ ಗೋಕಾಕ ನ ಭಗತ ಸಿಂಗ್ ಸರ್ಕಲ ನಲ್ಲಿರುವ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ

ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರ ಮಾತೋಶ್ರೀ ನಿಧನಗುರುವಾರದಂದು ಮುಂ. ೧೦ ಗಂಟೆಗೆ ಅಂತ್ಯಕ್ರಿಯೆ. ಗೋಕಾಕ್- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರ ಮಾತೋಶ್ರೀ ಗಂಗವ್ವ ಲಕ್ಷ್ಮಣ ಶೇಖರಗೋಳ (೮೨) ಅವರು ಬುಧವಾರ ದಿ. ೧.೩.೨೦೨೩ ರಂದು ಸಂಜೆ ೭.೪೫ ಗಂಟೆಗೆ ಅನಾರೋಗ್ಯದಿಂದ ನಿಧನರಾದರು. ಮೃತರಿಗೆ ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ. ಮೃತರ ಅಂತ್ಯಕ್ರಿಯೆಯು ನಾಳೆ …

Read More »

ಮುಂಬೈನಲ್ಲಿ ಎಂಇಎಸ್‌ ಕಿತಾಪತಿ; ಕರ್ನಾಟಕ ಸರ್ಕಾರದ ವಿರುದ್ಧ ಮಹಾರಾಷ್ಟ್ರದಲ್ಲಿ ಪ್ರತಿಭಟನೆ

ಬೆಳಗಾವಿ: ಈಗಾಗಲೇ ಎಲ್ಲ ಚುನಾವಣೆಯಲ್ಲಿಯೂ ಸೋತು ಸುಣ್ಣವಾಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಬಾಲ ಬಿಚ್ಚಿದ್ದು, ಕರ್ನಾಟಕದಲ್ಲಿ ಬೇಳೆ ಬೇಯುತ್ತಿಲ್ಲ ಎಂದು ಮುಂಬೈನಲ್ಲಿ ಮಹಾರಾಷ್ಟ್ರ ಸರ್ಕಾರದ ಬಾಗಿಲು ತಟ್ಟಿದೆ.   ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಬೇಕೆಂಬ ಹಠಕ್ಕೆ ಬಿದ್ದಿರುವ ಎಂಇಎಸ್‌ ಗಡಿ ವಿವಾದವನ್ನೇ ಅಸ್ತ್ರವಾಗಿ ಇಟ್ಟುಕೊಂಡು ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಮಂಗಳವಾರ ಆಂದೋಲನ ನಡೆಸಿದೆ. ಬೆಳಗಾವಿಯಲ್ಲಿ ನಾಲ್ಕು ಸ್ಥಾನ ಗೆಲ್ಲಲು ಪ್ಲಾನ್‌ ಮಾಡಿಕೊಂಡು …

Read More »

ಮೋದಿ ಸಾವು ಯಾರೂ ಬಯಸಿಲ್ಲ ಸಾವಿಗೆ ಕಾಂಗ್ರೆಸ್‌ ಜಪ ಮಾಡುತ್ತಿದೆ ಎಂಬುದು ದೊಡ್ಡ ಸುಳ್ಳು: ಸಿದ್ದರಾಮಯ್ಯ

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಸಾವಿಗೆ ಕಾಂಗ್ರೆಸ್‌ ಜಪ ಮಾಡುತ್ತಿದೆ ಎಂಬುದು ದೊಡ್ಡ ಸುಳ್ಳು. ಈ ರೀತಿ ಯಾರೂ ಎಲ್ಲಿಯೂ ಹೇಳಿಲ್ಲ. ತಮ್ಮಷ್ಟಕ್ಕೆ ತಾವೇ ಇಂಥ ಭಾವುಕ ಸನ್ನಿವೇಶ ಹುಟ್ಟುಹಾಕುವುದು ಅವರಿಗೆ ಕರಗತ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.   ‘ಸಿದ್ದರಾಮಯ್ಯನನ್ನು ಮುಗಿಸಿಬಿಡಿ ಎಂದು ಅಶ್ವತ್ಥನಾರಾಯಣ ಬಹಿರಂಗವಾಗಿ ಹೇಳಿದರು. ನಮ್ಮ ಭಾವನೆಗಳು ಅವರಷ್ಟು ಕೆಟ್ಟದಾಗಿಲ್ಲ. ಪ್ರಧಾನಿ ಆರೋಗ್ಯವಾಗಿರಲಿ, ಹೆಚ್ಚು ಕಾಲ ಬದುಕಲಿ’ ಎಂದು ಅವರು ನಗರದಲ್ಲಿ ಬುಧವಾರ ಮಾಧ್ಯಮದವರ …

Read More »

ಶಿವಮೂರ್ತಿ ಶರಣರ ಅರ್ಜಿ ವಿಚಾರಣೆ ಇಂದು

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿದ ರಿಟ್‌ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಏಕಸದಸ್ಯನ್ಯಾಯಪೀಠದ ಮುಂದೆ ಗುರುವಾರಕ್ಕೆ (ಮಾ.2) ನಿಗದಿ ಮಾಡಲಾಗಿದೆ. ಈ ಸಂಬಂಧ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಎಚ್‌.ಎಂ.ವಿಶ್ವನಾಥ್‌ ಮತ್ತು ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ರಿಟ್‌ ಅರ್ಜಿ ಸಂಖ್ಯೆ 25316/2022ರ ಮುಂದುವರಿದ ವಿಚಾರಣೆ ಮಧ್ಯಾಹ್ನ …

Read More »

ಅಪ್ಪ ಜೈಲಿಗೆ ಹೋಗಿದ್ದ ಕರಾಳ ದಿನಗಳ ಪುಸ್ತಕ ಬಿಡುಗಡೆ: ಬಿಎಸ್‌ವೈ ಪುತ್ರಿ

ಶಿವಮೊಗ್ಗ : ‘ನಮ್ಮ ತಂದೆ (ಬಿ.ಎಸ್‌.ಯಡಿಯೂರಪ್ಪ) ಜೈಲಿಗೆ ಹೋಗಿದ್ದು ಕರಾಳ ದಿನಗಳು. ಅವರ ಕುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು ಮಾಡಿದ್ದರು ಎಂಬುದನ್ನು ಅವರು ಜೈಲಿನಲ್ಲಿದ್ದಾಗ ಡೈರಿ ಬರೆದಿಟ್ಟಿದ್ದಾರೆ. ಸಂದರ್ಭ ಬಂದಾಗ ಬಹಿರಂಗಪಡಿಸಲಾಗುವುದು’ ಎಂದು ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರಿ ಬಿ.ವೈ.ಅರುಣಾದೇವಿ ಹೇಳಿದರು. ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆ ಸಂದರ್ಭದಲ್ಲಿ ಅದೊಂದು ರಾಜಕೀಯ ಅಸಹ್ಯ ಅನ್ನಿಸಿತ್ತು. ಡೈರಿಯಲ್ಲಿ ಪ್ರತಿಯೊಂದು ಘಟನೆಯನ್ನು ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧ …

Read More »