Breaking News

Daily Archives: ಮಾರ್ಚ್ 5, 2023

ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿವರ್ಷ 5 ಲಕ್ಷ ರೂಪಾಯಿ ಅನುದಾನ

ಬೆಳಗಾವಿ: ರಾಜ್ಯದಲ್ಲಿಯೇ ವಿಶಿಷ್ಟವಾಗಿ ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಗುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸುತ್ತಾರೆ. ರಾಜ್ಯೋತ್ಸವವನ್ನ ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅನುಕೂಲವಾಗುವಂತೆ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಪ್ರಕಟಿಸಿದರು. ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳು, ಯೋಜನೆಗಳು ಮತ್ತು ಜಿಲ್ಲೆಯ ಗಡಿ ಭಾಗಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದ್ದು, ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ (ಮಾ.4) ಆಯೋಜಿಸಲಾಗಿದ್ದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ವಿದ್ಯುನ್ಮಾನ ಮತ ಯಂತ್ರಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ …

Read More »