Breaking News

Daily Archives: ಮಾರ್ಚ್ 9, 2023

ನಟ-ನಿರ್ದೇಶಕ ಸತೀಶ್ ಕೌಶಿಕ್ ನಿಧನ

ಮುಂಬೈ: ನಟ-ನಿರ್ದೇಶಕ ಸತೀಶ್ ಕೌಶಿಕ್ ನಿಧನರಾದರು. ಅವರಿಗೆ 66 ವರ್ಷವಾಗಿತ್ತು. ನಟ ಅನುಪಮ್ ಖೇರ್ ಅವರು ಸತೀಶ ಕೌಶಿಕ್ ಅವರ ನಿಧನ ಕುರಿತು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “45 ವರ್ಷಗಳ ಸ್ನೇಹಕ್ಕೆ ಅಂತಹ ಹಠಾತ್ ಪೂರ್ಣ ವಿರಾಮ! ನೀವು ಇಲ್ಲದೆ ಜೀವನವು ಎಂದಿಗೂ ಒಂದೇ ಆಗುವುದಿಲ್ಲ!”ಎಂದು ಅನುಪಮ್ ಖೇರ್ ಹೇಳಿದ್ದಾರೆ.     ನಟಿ ಕಂಗನಾ ರಣಾವತ್ ಕೂಡ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಈ ಭಯಾನಕ ಸುದ್ದಿಯಿಂದ ಎಚ್ಚರವಾಯಿತು. ಅವರು ನನ್ನ …

Read More »

ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭ

ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಮಾಜಿ ಡಿಸಿಎಂ ಲಕ್ಷ್ಮನ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವೈಮನಸ್ಸು ಇರುವುದು ಗೊತ್ತಿರುವ ವಿಚಾರ. ಈಗ ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭವಾಗಿದೆ. ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದ ಜನರು ನಾನು ಸ್ಪರ್ಧೆ ಮಾಡಲಿ ಎಂದು ಹೇಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ …

Read More »

ಮೈಸೂರು -ಬೆಂಗಳೂರು- ಮಾರ್ಗ ಬದಲಾವಣೆ

ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ದಶಪಥ ರಸ್ತೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಲಿದ್ದು, ಅಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ದಶಪಥ ರಸ್ತೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಅಲ್ಲಿಯೇ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬೆಳಿಗ್ಗೆ …

Read More »

ಕಾನೂನು ಅರಿವಿನಿಂದ ಮಾತ್ರ ಮಹಿಳೆಯರು ಮುಖ್ಯವಾಹಿನಿಗೆ ಬರಲು ಸಾಧ್ಯ : ನ್ಯಾಯವಾದಿ ಪ್ರೀತಿ ಕುಕಡೆ

ಕಾನೂನು ಅರಿವಿನಿಂದ ಮಾತ್ರ ಮಹಿಳೆಯರು ಮುಖ್ಯವಾಹಿನಿಗೆ ಬರಲು ಸಾಧ್ಯ : ನ್ಯಾಯವಾದಿ ಪ್ರೀತಿ ಕುಕಡೆ ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಯಲ್ಲಿ ಕಾನೂನಿನ ಅರಿವು ಇಲ್ಲದೆ ವಿವಿಧ ರೀತಿಯ ದೌರ್ಜನ್ಯಕ್ಕೆ ಮಹಿಳೆಯರು ಒಳಗಾಗುತ್ತಿದ್ದಾರೆ.ಆದ್ದರಿಂದ ಮಹಿಳೆಯರಲ್ಲಿ ಕಾನೂನು ಅರಿವು ಮೂಡಿದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು.ಜೊತೆಗೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಬಹುದು ಎಂದು ಸಮಾಜ ಸೇವಕಿ ಹಾಗೂ ನ್ಯಾಯವಾದಿ ಪ್ರೀತಿ ಕುಕಡೆ ಹೇಳಿದರು. ಮೇದಾರ ಓಣಿ ಬೆಳಗಾವಿಯಲ್ಲಿ ಇಂದು ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ …

Read More »

ಲಂಚ ಪ್ರಕರಣ: ಪ್ರಶಾಂತ್‌ ಮಾಡಾಳ್‌ ವಿರುದ್ಧ ಮತ್ತೆರಡು ಎಫ್‌ಐಆರ್‌

ಬೆಂಗಳೂರು: ಖಾಸಗಿ ಕಚೇರಿಯಲ್ಲಿ ₹ 1.62 ಕೋಟಿ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್‌ ಮಾಡಾಳ್‌ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಬುಧವಾರ ಎರಡು ಎಫ್‌ಐಆರ್‌ ದಾಖಲಿಸಿದ್ದಾರೆ.   ಕೆಎಸ್‌ಡಿಎಲ್‌ ಕಚ್ಚಾವಸ್ತು ಖರೀದಿ ಟೆಂಡರ್‌ ಅಂತಿಮಗೊಳಿಸುವ ಸಂಬಂಧ ₹ 40 ಲಕ್ಷ ಲಂಚ ಪಡೆಯುತ್ತಿದ್ದಾಗ ಮಾರ್ಚ್‌ 2ರಂದು ಪ್ರಶಾಂತ್‌ ಮಾಡಾಳ್‌ ಅವರನ್ನು ಬಂಧಿಸಲಾಗಿತ್ತು. ಕೆಎಸ್‌ಡಿಎಲ್‌ ಅಧ್ಯಕ್ಷರೂ …

Read More »