ಬೆಳಗಾವಿ: ‘ಗಂಡ ಸಾಲ ಮಾಡಿ ಓಡಿಹೋದ. ಸಾಲ ಕೊಟ್ಟವರು ದಿನವೂ ಕಾಡತೊಡಗಿದರು. ಎಳೆಯ ಮಕ್ಕಳು ಹಸಿವಿನಿಂದ ಅಳುತ್ತಿದ್ದವು. ಹೆಣ್ಣು ಹೆತ್ತಿದ್ದೇನೆ ಎಂಬ ಕಾರಣಕ್ಕೆ ಅತ್ತೆ-ಮಾವನೂ ದೂರ ಮಾಡಿದ್ದಾರೆ. ತವರಿನಲ್ಲೂ ಕಷ್ಟವಿದೆ. ಬದುಕು ಬೀದಿಗೆ ಬಿತ್ತು. ಈ ಜೀವ ಇಟ್ಟು ಇನ್ನೇನು ಮಾಡುವುದು ಎಂದು ಸಾಯಲು ಹೊರಟೆ. ನಾನು ಹೋದ ಮೇಲೆ ಮಕ್ಕಳು ಹಸಿವಿನಿಂದ ಸಾಯಬಾರದು ಎಂದು ಅವರಿಗೂ ಫಿನೈಲ್ ಕುಡಿಸಿದೆ…’ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ತಮ್ಮ …
Read More »Daily Archives: ಮಾರ್ಚ್ 10, 2023
ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ರಚನೆ: ಬೊಮ್ಮಾಯಿ ಅಧ್ಯಕ್ಷ, ಬಿಎಸ್‌ವೈ ಸದಸ್ಯ
ಬೆಂಗಳೂರು: ಬಿಜೆಪಿ ವಿಧಾನಸಭಾ ಚುನಾವಣಾ ಪ್ರಚಾರ ಸಮಿತಿಯನ್ನು ರಚಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಚುನಾವಣಾ ಪ್ರಚಾರ ಸಮಿತಿಯ ಸದಸ್ಯರು: ಬಿ.ಎಸ್.ಯಡಿಯೂರಪ್ಪ, ನಳಿನ್‌ಕುಮಾರ್ ಕಟೀಲ್, ಡಿ.ವಿ.ಸದಾನಂದಗೌಡ, ಜಗದೀಶಶೆಟ್ಟರ್, ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ,ಬಿ.ಶ್ರೀರಾಮುಲು, ಆರ್.ಅಶೋಕ, ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಪ್ರಭು ಚವ್ಹಾಣ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಿ.ಟಿ.ರವಿ, ವಿ.ಶ್ರೀನಿವಾಸಪ್ರಸಾದ್, …
Read More »ಮಾಡಾಳು ಬಂಧನಕ್ಕೆ ರಚಿಸಿದ್ದ 7 ತಂಡ ಸಿಎಂ ಮನೆಯಲ್ಲಿ ಠಿಕಾಣಿ ಹೂಡಿದ್ದವೇ: ಕಿಮ್ಮನೆ
ಶಿವಮೊಗ್ಗ: ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನಕ್ಕೆ ನಿಯೋಜಿಸಿದ್ದ ಲೋಕಾಯುಕ್ತ ಪೊಲೀಸರ ಏಳು ತಂಡಗಳು ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಠಿಕಾಣಿ ಹೂಡಿದ್ದವೇ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಪ್ರಶ್ನಿಸಿದರು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಶುಕ್ರವಾರ ಇಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾಮೀನು ಸಿಕ್ಕ ಅರ್ಧ ಗಂಟೆಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಮೆರವಣಿಗೆಯಲ್ಲಿ ಬರುತ್ತಾರೆ. ಪ್ರಕರಣದಲ್ಲಿ ಎ1 ಆರೋಪಿ ಅವರು. ಆದರೂ ಜಾಮೀನು …
Read More »ಕಿಡ್ನಿ ಆರೋಗ್ಯಕ್ಕೆ ಕಾಳಜಿ ವಹಿಸಿ: ಡಾ.ನಿತಿನ್ ಗಂಗಾನೆ
ಬೆಳಗಾವಿ: ‘ಇಡೀ ದೇಹದ ಅಂಗಾಗಂಗಳಲ್ಲಿ ಕಿಡ್ನಿ ಅತ್ಯಂತ ಹೆಚ್ಚು ಕೆಲಸಗಳನ್ನು ಮಾಡುತ್ತದೆ. ಕಿಡ್ನಿ ಆರೋಗ್ಯವಾಗಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಜೀವನಪೂರ್ತಿ ಅನಾರೋಗ್ಯ ಕಾಡುತ್ತದೆ’ ಎಂದು ಕಾಹೆರ್‌ನ ಕುಲಪತಿ ಡಾ.ನಿತಿನ್ ಗಂಗಾನೆ ಹೇಳಿದರು. ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನೆಪ್ರೊಲಾಜಿ ವಿಭಾಗವು ಗುರುವಾರ ಏರ್ಪಡಿಸಿದ್ದ ವಿಶ್ವ ಮೂತ್ರಪಿಂಡ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಕಿಡ್ನಿ ಆರೋಗ್ಯದ ಕುರಿತು ಸಾಮಾನ್ಯರಿಗೂ ತಿಳಿಯುವ ರೀತಿಯಲ್ಲಿ ಜಾಗೃತಿ ಮೂಡಿಸಬೇಕು. …
Read More »ಮಿಶ್ರ ಬೇಸಾಯದತ್ತ ಒಲವು ಬೆಳೆಸಿಕೊಂಡ ನೇಸರಗಿ ರೈತ ಈಶಪ್ರಭು ಬಾಬಾಗೌಡ ಪಾಟೀಲ, ‘ಬೆವರು ಹರಿಸಿದರೆ, ಒಕ್ಕಲುತನ ಕೈಹಿಡಿಯುತ್ತದೆ’ ಎಂದ
ನೇಸರಗಿ: ಮಿಶ್ರ ಬೇಸಾಯದತ್ತ ಒಲವು ಬೆಳೆಸಿಕೊಂಡ ನೇಸರಗಿ ಹೋಬಳಿ ವ್ಯಾಪ್ತಿಯ ಚಿಕ್ಕಬಾಗೇವಾಡಿ ಗ್ರಾಮದ ರೈತ ಈಶಪ್ರಭು ಬಾಬಾಗೌಡ ಪಾಟೀಲ, ತಮ್ಮ ಜಮೀನಿನಲ್ಲಿ ವಿವಿಧ ಬೆಳೆ ಬೆಳೆದು ಉತ್ತಮ ಆದಾಯ ಗಳಿಸುತ್ತಿದ್ದಾರೆ. ‘ಬೆವರು ಹರಿಸಿದರೆ, ಒಕ್ಕಲುತನ ಕೈಹಿಡಿಯುತ್ತದೆ’ ಎಂದು ಸಾರುತ್ತಿದ್ದಾರೆ. 14 ಎಕರೆ ಜಮೀನಿನ ಪೈಕಿ 3 ಎಕರೆಯಲ್ಲಿ ಗೋವಿನಜೋಳ, ಕಡಲೆ, 8 ಎಕರೆ ತೋಟದಲ್ಲಿ ಅಲ್ಫಾನ್ಸೋ ಮಾವು ಬೆಳೆದಿದ್ದಾರೆ. 3 ಎಕರೆಯಲ್ಲಿ ಕಾಜು(ಗೇರು), ಪೇರಲ, ನೆಲ್ಲಿಕಾಯಿ, ಅಂಜೂರ, ದಾಳಿಂಬೆ, …
Read More »ಹಿಂಡಲಗಾ: ಸ್ಮಾರ್ಟ್‌ಕ್ಲಾಸ್ ಉದ್ಘಾಟನೆ
ಬೆಳಗಾವಿ: ‘ಜಗತ್ತು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದಂತೆ ಅದಕ್ಕೆ ಪೂರಕವಾಗಿ ನಾವೂ ನಮ್ಮನ್ನು ಹೊಂದಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೂ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮೂಲಕ ಶಿಕ್ಷಣ ಒದಗಿಸಲು ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಹಿಂಡಲಗಾ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹಣ ಮಂಜೂರು ಮಾಡಿಸಿದ ಅನುದಾನದಲ್ಲಿ ನಿರ್ಮಿಸಲಾದ ನೂತನ ಸ್ಮಾರ್ಟ್ ಕ್ಲಾಸ್ …
Read More »ಬೆಳಗಾವಿ| ಪ್ರತಿ ಮನೆಯಲ್ಲೂ ಹೆಣ್ಣಿಗೆ ಸಮಾನತೆ ಸಿಗಲಿ: ಕೃಷ್ಞಕುಮಾರ
ಬೆಳಗಾವಿ: ‘ಕೇವಲ ಭಾಷಣಗಳಲ್ಲಿ ಮಹಾ ಗ್ರಂಥಗಳಲ್ಲಿ ಮಹಿಳೆಯರಿಗೆ ಗೌರವ ನೀಡಿದರೆ ಸಾಲದು. ಪ್ರತಿಯೊಬ್ಬರು ತಮ್ಮ ಮನೆಯಲ್ಲಿರುವ ಹೆಣ್ಣುಮಕ್ಕಳ ಜೊತೆಗೆ ಸಮಾಜದ ಎಲ್ಲ ಮಹಿಳೆಯರನ್ನು ಸೋದರಿಯರಂತೆ ಕಾಣಬೇಕು’ ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಞಕುಮಾರ ಹೆಳಿದರು. ಕೇಂದ್ರ ಕಾರಾಗೃಹದಲ್ಲಿ ಬುಧವಾರ ‘ಅಂತರರಾಷ್ಟ್ರೀಯ ಮಹಿಳಾ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಣ್ಣು ತನ್ನ ಜೀವನದಲ್ಲಿ ಮಗುವಾಗಿ, ಮಗಳಾಗಿ, ಸಹೋದರಿಯಾಗಿ, …
Read More »ಬೆಳಗಾವಿ: ಎಟಿಎಂ ಕಾರ್ಡ್ ಬದಲಿಸಿ ಹಣ ಲೂಟಿ- ಇಬ್ಬರ ಬಂಧನ
ಬೆಳಗಾವಿ: ಬೇರೆಯವರ ಎಟಿಎಂ ಕಾರ್ಡ್ ಬದಲಾಯಿಸಿ, ಹಣ ತೆಗೆದುಕೊಂಡ ಮಹಾರಾಷ್ಟ್ರದ ಇಬ್ಬರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಜ್ ತಾಲ್ಲೂಕಿನ ನೇಸರಿಯ ಅಮೋಲ್ ಶೆಂಡೆ, ಸೊಲ್ಲಾಪುರ ಜಿಲ್ಲೆಯ ಕೇದಾರನಾಥ ನಗರದ ಶ್ರವಣ ಮಿನಜಗಿ ಬಂಧಿತರು. ಇವರಿಬ್ಬರೂ ಬೆಳಗಾವಿಯ ನಿವಾಸಿ ಸೋಮಲಿಂಗ ಅಮ್ಮಣಗಿ ಅವರ ಎಟಿಎಂ ಕಾರ್ಡ್ ಬದಲಿಸಿ, ₹4.03 ಲಕ್ಷ ಹಣ ತೆಗೆದುಕೊಂಡಿದ್ದರು. ಈ ಬಗ್ಗೆ 2022ರ ನ.29ರಂದು ಎಪಿಎಂಸಿ ಠಾಣೆಯಲ್ಲಿ ಪ್ರಕರಣ …
Read More »ರೈತ ಯುವಕರ ಮದುವೆ ಆದ್ರೆ 2 ಲಕ್ಷ ರೂ. ಪ್ರೋತ್ಸಾಹಧನ: ಎಚ್.ಡಿ.ಕುಮಾರಸ್ವಾಮಿ
ಹಾಸನ: ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನು ವಿವಾಹವಾಗುವ ಯುವತಿಯರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು. ಹಾಸನ ಜಿಲ್ಲೆಗೆ ಪಂಚರತ್ನ ಯಾತ್ರೆ ಪ್ರವೇಶ ಮಾಡಿದ ಅರಸೀಕೆರೆ ತಾಲೂಕು ಕರಗುಂದ ಗ್ರಾಮದ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ. ಕಂಕಣಭಾಗ್ಯ ಕೂಡಿ ಬರಲಿ ಎಂದು ಅವಿವಾಹಿತ ರೈತ ಸಮುದಾಯದ ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ …
Read More »ರಾಜ್ಯಾದ್ಯಂತ ಕಾಂಗ್ರೆಸ್ ಪರ ಗಾಳಿ. ಪುಟ್ಟಣ್ಣ ಕಾಂಗ್ರೆಸ್ ಸೇರಿರುವುದೇ ಸಾಕ್ಷಿ: ಸಿದ್ದು
ಬೆಂಗಳೂರು: ರಾಜ್ಯಾದ್ಯಂತ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದ್ದು, ಬಿಜೆಪಿ ಹಿರಿಯ ಮುಖಂಡ ಪುಟ್ಟಣ್ಣ ಅವರು 4 ವರ್ಷದ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿರುವುದೇ ಸಾಕ್ಷಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪುಟ್ಟಣ್ಣ ಅವರನ್ನು ಕಾಂಗ್ರೆಸ್‌ಗೆ ಸ್ವಾಗತಿಸಿ ಮಾತನಾಡಿದ ಅವರು, 4 ಬಾರಿ ಪರಿಷತ್ ಸದಸ್ಯರಾಗಿ, ಉಪಸಭಾಪತಿಯಾಗಿರುವ ಪುಟ್ಟಣ್ಣ ಅತ್ಯಂತ ಹಿರಿಯ ಹಾಗೂ ಅನುಭವಿ. ಶಿಕ್ಷಕರು, ಪದವೀಧರರು ಸೇರಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ …
Read More »