ಗಜೇಂದ್ರಗಡ (ಗದಗ ಜಿಲ್ಲೆ): ರೋಣ ಮತಕ್ಷೇತ್ರದ ಶಾಸಕ ಕಳಕಪ್ಪ ಜಿ.ಬಂಡಿ ಅವರ ಚುನಾವಣಾ ವೆಚ್ಚಕ್ಕಾಗಿ ತಾಲ್ಲೂಕಿನ ಹಾಲಕೇರಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು 210 ಕ್ವಿಂಟಲ್ ಕಡಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಹಾಲಕೇರಿ ಗ್ರಾಮದಿಂದ ಐದು ಟ್ರ್ಯಾಕ್ಟರ್‌ಗಳಲ್ಲಿ ತಂದ ಕಡಲೆಯನ್ನು ಪಟ್ಟಣದ ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ನೂರಾರು ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ನಡೆದ ಬಿಜೆಪಿಯ ‘ವಿಜಯ ಸಂಕಲ್ಪ ಯಾತ್ರೆ’ ವೇದಿಕೆ ಕಡೆಗೆ ತಂದರು. ಮೆರವಣಿಗೆಗೆ ಡೊಳ್ಳು ಕುಣಿತ, ಸಂಗೀತ ವಾದ್ಯಗಳು …
Read More »Daily Archives: ಮಾರ್ಚ್ 16, 2023
ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳ: ಸಚಿವ ಶ್ರೀರಾಮುಲು ಹೇಳಿಕೆ
ಬೆಂಗಳೂರು: ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆಯನ್ನು ನಮ್ಮ ಸರ್ಕಾರ ಈಗ ಮಾಡಿದೆ ಎಂದು ಹೇಳಿದ್ದಾರೆ. ಈ ನಿರ್ಧಾರದಿಂದ ರಾಜ್ಯದ ಎಲ್ಲ ನಾಲ್ಕು ರಸ್ತೆ …
Read More »7.50 ಟನ್ ತೂಕದ ವಾಹನಗಳ ಸಂಚಾರಕ್ಕೆ ಅವಕಾಶ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು
ಬೆಂಗಳೂರು: ನಗರದಲ್ಲಿ 7.50 ಟನ್ ತೂಕದವರೆಗಿನ ವಾಹನಗಳ ಸಂಚಾರಕ್ಕೆ ಅವಕಾಶ ಸಿಕ್ಕಿದ್ದು, ಲಾರಿ ಮಾಲೀಕರು ಹಾಗೂ ಏಜೆಂಟರು ತಾವು ಕರೆ ನೀಡಿದ್ದ ಮುಷ್ಕರವನ್ನು ಕೈ ಬಿಟ್ಟಿದ್ದಾರೆ. ನಗರದಲ್ಲಿ ನಿತ್ಯವೂ ಬೆಳಿಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಂಜೆ 4ರಿಂದ 8 ಗಂಟೆವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಇದನ್ನು ಖಂಡಿಸಿದ್ದ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘ, ಮಾರ್ಚ್ 16ರಂದು ತಡರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿತ್ತು. ರಾಜ್ಯ ಸರ್ಕಾರದ ಸೂಚನೆಯಂತೆ …
Read More »ಕುಷ್ಟಗಿಯಲ್ಲಿ ಪ್ರತ್ಯೇಕ ಅಪಘಾತ: ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿ ಮೃತ್ಯು
ಕುಷ್ಟಗಿ: ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತ್ಯೇಕ ಬೈಕ್ ಅಪಘಾತದಲ್ಲಿ ಓರ್ವ ಯುವಕ ದುರ್ಮರಣಕ್ಕೀಡಾಗಿದ್ದು ಇಬ್ಬರು ಬೈಕ್ ಸವಾರರು ಗಾಯಗೊಂಡಿರುವ ಘಟನೆ ನಡೆದಿದೆ. ಕುಷ್ಟಗಿ – ಗಜೇಂದ್ರಗಡ ರಾಜ್ಯ ಹೆದ್ದಾರಿಯಲ್ಲಿ ಹಿರೇಬನ್ನಿಗೋಳ ಸಮೀಪ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತನಾಗಿದ್ದಾನೆ. ಕುಷ್ಟಗಿಯ ವಿಜಯಕುಮಾರ ಮನ್ನೇರಾಳ (22) ಮೃತ ದುರ್ದೈವಿ. ಮೃತ ಯುವಕ ವಿಜಯಕುಮಾರ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶವಗಾರದಲ್ಲಿರಿಸಲಾಗಿದೆ. ಕಳೆದ ಫೆ.18 …
Read More »ಗಡಿ ಜನರಿಗೆ ಮಹಾರಾಷ್ಟ್ರ “ಆರೋಗ್ಯ ಭಾಗ್ಯ’ ವಿವಾದ
ಬೆಳಗಾವಿ/ಬೆಂಗಳೂರು: ಮಹಾರಾಷ್ಟ್ರ ವಿಚಾರದಲ್ಲಿ ತನ್ನ ಮೊಂಡುತನ ಪ್ರದರ್ಶಿಸುತ್ತ ಬಂದಿರುವ ಮಹಾರಾಷ್ಟ್ರ ಈಗ ಕರ್ನಾಟಕದ 865 ಹಳ್ಳಿ ಮತ್ತು ಪಟ್ಟಣಗಳಲ್ಲಿ ಮಹಾತ್ಮಾ ಜ್ಯೋತಿ ಬಾ ಫುಲೆ ಜನ ಆರೋಗ್ಯ ಯೋಜನೆ ಜಾರಿಗೆ ತರುವುದಾಗಿ ಹೇಳುವ ಮೂಲಕ ಗಡಿ ಕಿಚ್ಚು ಹಚ್ಚಿದೆ. ಮಹಾ ಸರಕಾರದ ಈ ಕ್ರಮದ ವಿರುದ್ಧ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು, ರಾಜಕೀಯ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗಮನಾರ್ಹವೆಂದರೆ, ಸುಪ್ರೀಂ ಕೋರ್ಟ್‌ನಲ್ಲಿ ಗಡಿ ವಿವಾದ ಕುರಿತಂತೆ ವಿಚಾರಣೆ ಹಂತದಲ್ಲಿರುವಂತೆಯೇ ರಾಜ್ಯದ ಐದು …
Read More »ಈ ಬಾರಿ ಬಳ್ಳಾರಿ ಗ್ರಾಮೀಣದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು
ಬಳ್ಳಾರಿ: ಈ ಬಾರಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪ ರ್ಧಿಸುತ್ತೇನೆಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿದ್ದೇನೆ. ಇದೀಗ ಮತ್ತೊಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈ ಕುರಿತು ಪಕ್ಷದ ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ. ಸಂಡೂರು ಅಥವಾ ಬಳ್ಳಾರಿ ಗ್ರಾಮೀಣ ಕ್ಷೇತ್ರ ಎಂಬ ಆಯ್ಕೆಯಿತ್ತು. ಆದರೆ, ಬಹುತೇಕ ಎಲ್ಲರ ಅಪೇಕ್ಷೆಯ ಮೇರೆಗೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು. ಮಾಜಿ …
Read More »ತನ್ನ 15 ವರ್ಷದ ಮಗನ ಜೀವ ಉಳಿಸಲು ತನ್ನ ಕಿಡ್ನಿಯನ್ನೇ ದಾನಮಾಡಿದ ತಾಯಿ
ಬೆಳಗಾವಿ: ತನ್ನ 15 ವರ್ಷದ ಮಗನ ಜೀವ ಉಳಿಸಲು ತನ್ನ ಕಿಡ್ನಿಯನ್ನೇ ದಾನಮಾಡಿದ ತಾಯಿ ಈಗ ಆರ್ಥಿಕ ನೆರವು ನೀಡುವ ದಾನಿಗಳತ್ತ ಮುಖ ಮಾಡಿದ್ದಾರೆ. ದುಡಿದು ಮಗನನ್ನು ಸಲಹುವ ತಾಯಿಯ ಸಂಕಟಕ್ಕೀಗ ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚುವ ಉದಾರ ಹೃದಯಿಗಳ ಅಗತ್ಯ ಬಂದೊದಗಿದೆ. ಅಥಣಿ ತಾಲೂಕಿನ ಮದಬಾವಿಯ ಪ್ರಜ್ವಲ್ ಮಹಾದೇವ ನಿವಾಲಗಿ 9ನೇ ತರಗತಿಯಲ್ಲಿ ಓದುತ್ತಿರುವ ಪ್ರತಿಭಾವಂತ ಬಾಲಕ. ಈತ ಶೋಭಾ- ಮಹಾದೇವ ದಂಪತಿಯ ಏಕಮಾತ್ರ ಪುತ್ರ. ಶೋಭಾ ಅವರು …
Read More »ಪಂಚಮಸಾಲಿ: ಸದ್ಯಕ್ಕೆ ಮೀಸಲಾತಿ ಸಿಗದು; ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಸುಳಿವು
ಬೆಂಗಳೂರು: “ಲಿಂಗಾಯತ ಪಂಚಮಸಾಲಿ ಮೀಸಲಾತಿ ಕುರಿತು ಗಡಿಬಿಡಿಯಲ್ಲಿ ವರದಿ ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಿ, ನಿಯಮಾನುಸಾರ ಅಧ್ಯಯನ ನಡೆಸಿ ಅನಂತರ ಸರಕಾರಕ್ಕೆ ಸಲ್ಲಿಸಬೇಕಾಗುತ್ತದೆ’. – ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಮೀಸಲಾತಿ 2ಎಗೆ ಸೇರಿಸುವ ಸಂಬಂಧದ ಪ್ರಕ್ರಿಯೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ನೀಡಿದ ಪ್ರತಿಕ್ರಿಯೆ ಇದು. ಈ ಮೂಲಕ ರಾಜ್ಯದ ಪ್ರಬಲ ಸಮುದಾಯಕ್ಕೆ ಮೀಸಲಾತಿ ಭಾಗ್ಯ ಸದ್ಯಕ್ಕಿಲ್ಲ ಎಂದು ಸುಳಿವು ನೀಡಿದರು. ಲಿಂಗಾಯತ …
Read More »ತಣಿಯದ ಸೋಮಣ್ಣ ಕೋಪ: ದಿಲ್ಲಿಯಲ್ಲೂ ವಿಜಯೇಂದ್ರ ವಿರುದ್ಧ ಆಕ್ರೋಶ
ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದಿಂದ ದಿಲ್ಲಿ ಅಂಗಣ ತಲುಪಿದರೂ ವಸತಿ ಸಚಿವ ವಿ. ಸೋಮಣ್ಣ ಅವರ ಆಕ್ರೋಶ ಇನ್ನೂ ಆರಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ರಾಜ್ಯ ಚುನಾವಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ದಿಲ್ಲಿಯಲ್ಲಿ ಬುಧವಾರ ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು. ‘ನಾನು ಬಂದ …
Read More »ಟಿಕೆಟ್ ಕೊಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ:B.S.Y.
ಗಜೇಂದ್ರಗಡ: ಟಿಕೆಟ್ ಕೊಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಟಿಕೆಟ್ ಹಂಚಿಕೆ ಹೈಕಮಾಂಡ್ ಮಾಡುತ್ತೆ. ಯಾರು ಒಳ್ಳೆಯ ಕೆಲಸ ಮಾಡಿದ್ದಾರೋ, ಜನಾಭಿಪ್ರಾಯ ಯಾರಿಗಿದೆಯೋ ಅಂಥವರಿಗೆ ಅವಕಾಶ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಪಟ್ಟಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯಾರು ಕ್ಷೇತ್ರದಲ್ಲಿ ಉತ್ತಮ ಅಭಿಪ್ರಾಯ ಹೊಂದಿರುತ್ತಾರೋ ಅಂಥವರಿಗೆ ಹೈಕಮಾಂಡ್ ಮನ್ನಣೆ ನೀಡುತ್ತದೆ. ಉತ್ತಮ ಕೆಲಸ …
Read More »