Breaking News

Daily Archives: ಮಾರ್ಚ್ 18, 2023

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು ಮುಂಜಾನೆ ೧೧ ಗಂಟೆಗೆ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಘಟಿಕೋತ್ಸವದಲ್ಲಿ ಒಟ್ಟು ೪೭,೧೮೫ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಳ್ಳಲಿದ್ದಾರೆ. ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ೧೧ ಸ್ವರ್ಣ ಪದಕಗಳನ್ನು ನೀಡಲಾಗುವುದು. ೨೭ ಪಿಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೋ. ರಾಮಚಂದ್ರಗೌಡ ಅವರು ತಿಳಿಸಿದರು. …

Read More »

20ರಂದು ಕಾಂಗ್ರೆಸ್ ರ್‍ಯಾಲಿ | ಯುವಜನರಿಗೆ ಸಂದೇಶ ನೀಡಲಿರುವ ರಾಹುಲ್ ಗಾಂಧಿ: ಸತೀಶ

ಬೆಳಗಾವಿ: ‘ಕಾಂಗ್ರೆಸ್‌ನಿಂದ ಈಗಾಗಲೇ ರೈತರ ಹಾಗೂ ಮಹಿಳಾ ಸಮಾವೇಶ ಮಾಡಲಾಗಿದೆ. ಈಗ ಯುವಜನರ ಸಮಾವೇಶಕ್ಕೆ ಬೆಳಗಾವಿಯಲ್ಲಿ ಸಿದ್ಧತೆ ಮಾಡಿದ್ದೇವೆ. ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯದ ಯುವಜನತೆಗೆ ಚುನಾವಣಾ ಸಂದೇಶ ನೀಡಲಿದ್ದಾರೆ’ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.   ಮಾರ್ಚ್‌ 20ರಂದು ನಗರದಲ್ಲಿ ಆಯೋಜಿಸಿದ ಕಾಂಗ್ರೆಸ್‌ ಯುವ ಕ್ರಾಂತಿ ರ್‍ಯಾಲಿಯ ಸಿದ್ಧತೆ ಪಡಿಶೀಲಿಸಿ ಮಾತನಾಡಿದ ಅವರು, ‘ವೇದಿಕೆಯಲ್ಲಿ 2 ಲಕ್ಷ ಕುರ್ಚಿಗಳನ್ನು ಹಾಕಿದ್ದೇವೆ. ರಾಜ್ಯದ ಮೂಲೆಮೂಲೆಯಿಂದ ಅಪಾರ ಸಂಖ್ಯೆಯ …

Read More »

ಚುನಾವಣಾ ಅಕ್ರಮ ತಡೆಗೆ 24X7 ಹದ್ದಿನ ಕಣ್ಣು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ‘ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ಕಣ್ಣಿಡಲು ಹಾಗೂ ಅಕ್ರಮ ಚಟುವಟಿಕೆ ತಡೆಯಲು ತಂಡಗಳು 24X7 ಕಾರ್ಯನಿರ್ವಹಿಸಲಿವೆ. ಇದಕ್ಕಾಗಿ ಪಾಳಿಯಲ್ಲಿ ಕೆಲಸ ಮಾಡು ಮೂರು ತಂಡ ರಚನೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.   ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಮತ್ತು ವಿವಿಧ ತಂಡಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ‘ಯಾವುದೇ ರೀತಿಯ ಅಕ್ರಮ ಅಥವಾ …

Read More »

ನಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು: ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ: ನಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ ಸಮುದಾಯಗಳು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅರಭಾವಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ಸಮೀಪದ ಅರಭಾವಿ ಪಟ್ಟಣದಲ್ಲಿ ಜರುಗಿದ ದಲಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್.ಸಿ/ಎಸ್.ಟಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧರಿರುವುದಾಗಿ ಹೇಳಿದರು. ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗೆ …

Read More »

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ನ ಇಬ್ಬರು ಅಧಿಕಾರಿಗಳು

ಬೆಂಗಳೂರು: ಪವರ್ ಸಪ್ಲೈ ಅಪ್ ಗ್ರೇಡ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಗಳನ್ನು ಸುಮನಹಳ್ಳಿ ಬೆಸ್ಕಾಂ ಎಇಇ ಭಾರತಿ ಹಾಗೂ ಎಇ ಕುನಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಪವರ್ ಸಪ್ಲೈಗಾಗಿ ಅನಂತರಾಜು ಎಂಬುವವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು 25 ಸಾವಿರ ರೂಪಾಯಿ ಹಣ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅನಂತರಾಜು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ …

Read More »

ಮಳೆ: ಮೈಸೂರು ಬೆಂಗಳೂರು ಹೆದ್ದಾರಿಯ ಬಸವನಪುರ ಅಂಡರ್ ಪಾಸ್‌ನಲ್ಲಿ ನಿಂತ ನೀರು

ರಾಮನಗರ: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಉತ್ತಮ ಮಳೆ ಸುರಿದಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬಸವನಪುರ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ಪರದಾಡುವಂತೆ ಆಯಿತು. ಈ ಸಂದರ್ಭ ಲಾರಿಯೊಂದು ಡಿಕ್ಕಿ ಹೊಡೆದು ಕಾರ್ ಜಖಂ ಆಯಿತು.   ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತಿದೆ. ಕಟಾವು ಹಂತಕ್ಕೆ‌ ಬಂದಿರುವ ಮಾವಿನ‌ ಬೆಳೆಗೂ ಮಳೆ ನೀರೆರೆದಿದೆ.

Read More »

ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ರೊಕ್ಕದಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಕಲಬುರಗಿ ಜಿಮ್ಸ್‌ ಆಸ್ಪತ್ರೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಕಲಬುರಗಿ: ಇಲ್ಲಿನ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 36 ವರ್ಷದ ಮಹಿಳೆ ಮೇಲೆ ನಗರದ ಇಸ್ಲಾಮಾಬಾದ್ ಕಾಲೊನಿ ನಿವಾಸಿ ಮೆಹಬೂಬ್ ಪಾಷಾ (40) ಎಂಬಾತ ಅತ್ಯಾಚಾರ ಎಸಗಿದ್ದಾನೆ.   ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರು ಅತ್ಯಾಚಾರದ ದೃಶ್ಯಗಳನ್ನು ಚಿತ್ರೀಕರಿಸಿದ್ದು, ಇದರ ಆಧಾರದ ಮೇಲೆ ಬ್ರಹ್ಮಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಎಂಟು ಗಂಟೆ ಸುಮಾರಿಗೆ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ: R..ಅಶೋಕ್

ಬಳ್ಳಾರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯನವರಿಗೆ ಕೋಲಾರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಕೋಲಾರ, ವರುಣಾ ಮಾತ್ರವಲ್ಲ ಯಾವ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಈ ಬಾರಿ ಗೆಲ್ಲಲ್ಲ. ಚಾಮುಂಡೇಶ್ವರಿ ಕ್ಷೇತ್ರದಿಂದ ಜನ ಅವರನ್ನು ಸೋಲಿಸಿದರು. ಬಾದಮಿಯಿಂದ ಜನ ಓಡಿಸಿದ್ದಾರೆ. ಹೀಗಾಗಿ ರಾಜ್ಯದ ಯಾವ ಭಾಗದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೂ …

Read More »

ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೋಳಿ

    ಗೋಕಾಕ್- ಲಖನ್ ಜಾರಕಿಹೋಳಿ ಅವರು ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷದ ಅವಧಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡ ಅಭಿವೃದ್ಧಿ ಕಮಗಾರಿಗಳ ವಿವರ ಬಿಡುಗಡೆ ಮಾಡಿದ್ದಾರೆ   ವಿಧಾನಪರಿಷತ್ ಸದಸ್ಯರಾದ ನಂತರ ಬಿಡುಗಡೆಯಾದ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು 2ಕೋಟಿ ರೂಪಾಯಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 1ಕೋಟಿ ರೂಪಾಯಿ …

Read More »