Breaking News

Daily Archives: ಮಾರ್ಚ್ 20, 2023

ರಾಜ್ಯದ ರೈತರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಸಿಎಂ ಬೊಮ್ಮಾಯಿ

ಚಿತ್ರದುರ್ಗ : ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದಿಂದ 10 ಹೆಚ್ ಪಿ ವರೆಗೆ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೊಳಲ್ಕೆರೆ ಪಟ್ಟಣದಲ್ಲಿ ಭಾನುವಾರ ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. …

Read More »

ನನ್ನ ಫೋನ್​ ಟ್ಯಾಪ್​ ಆಗಿಲ್ಲ, ಸಿಡಿಆರ್​ ತೆಗೆದುಕೊಳ್ಳುತ್ತಿದ್ದಾರೆ” ಎಂದ ಎಂ.ಬಿ ಪಾಟೀಲ! ಏನಿದು ಸಿಡಿಆರ್?

ವಿಜಯಪುರ‌: ನನ್ನ ಫೋನ್ ಟ್ಯಾಪ್ ಆಗಿಲ್ಲ. ಫೋನ್ ಸಿಡಿಆರ್ ತಗೆದುಕೊಳ್ಳುತ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ ಹೇಳಿದರು. ಸಿಡಿಆರ್ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಬಹಳಷ್ಟು ಜನರಿಗೆ ಸಿಡಿಆರ್ ತೆಗೆಯುವ ಚಾಳಿ ಇದೆ. ಆದ್ರೇ, ಯಾರ ಹೆಸರು ಹೇಳೋದಿಲ್ಲ. ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಹಾಗೇನಾದರೂ ಆದ್ರೇ, ಸರ್ಕಾರ ಜವಾಬ್ದಾರಿ ಎಂದು ಪತ್ರ ಬರೆದಿದ್ದೇನೆ. ಫೋನ್ ಸಿಡಿಆರ್ ನನ್ನ ವಿರೋಧಿಗಳು ಮಾಡುತ್ತಿದ್ದಾರೆ. …

Read More »

ಮನನೊಂದು ನೇಣು ಬಿಗಿದುಕೊಂಡ 13ರ ಬಾಲಕಿ!

ಕೊಡಗು: ಒಂದು ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. 13 ವರ್ಷದ ವೈಷ್ಣವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.     ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದ ಜಿತೇಂದ್ರ-ಅಕ್ಷತ ದಂಪತಿ ಪುತ್ರಿ ವೈಷ್ಣವಿ ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಾಂಗ ಮಾಡುತಿದ್ದಳು. ಕಳೆದ ಒಂದು ವಾರದಿಂದ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದಳು. ವಿದ್ಯಾರ್ಥಿನಿ ವೈಷ್ಣವಿ ಶನಿವಾರ ಸಂಜೆ ಮನೆಯಲ್ಲಿ ನೇಣುಬಿಗಿದುಕೊಂಡು …

Read More »

78 ಯೋಜನೆಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿಯಿಂದ ಅನುಮೋದನೆ; ಸೃಷ್ಟಿಯಾಗಲಿವೆ 13,917 ಉದ್ಯೋಗಗಳು!

ಬೆಂಗಳೂರು: ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಏಕಗವಾಕ್ಷಿ ಸಮಿತಿ, ಬಂಡವಾಳ ಹೂಡಿಕೆ ಮತ್ತು ಉದ್ಯೋಗಾವಾಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆಗೆ ಇಂದು (ಮಾ.19) ಅನುಮೋದನೆ ನೀಡಿದೆ. ಒಟ್ಟು 78 ಯೋಜನೆಗಳಿಂದ 5298.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಇದರ ಪರಿಣಾಮವಾಗಿ, 13917 ಜನರಿಗೆ ಉದ್ಯೋಗಗಳು ಲಭಿಸಲಿವೆ. ಅನುಮೋದನೆ …

Read More »

ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿಗೆ ಈಗ ಚಿನ್ನದ ಬೆಲೆ

ಹಾವೇರಿ/ ವೀರೇಶ ಚೌಕಿಮಠ ಬ್ಯಾಡಗಿ ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿಗೆ ಈಗ ಚಿನ್ನದ ಬೆಲೆ ಬಂದಿದೆ. ಪ್ರತಿ ಕ್ವಿಂಟಾಲ್ ಬ್ಯಾಡಗಿ ಕಡ್ಡಿ (ಕೆಡಿಎಲ್) ಮತ್ತು ಡಬ್ಬಿ ತಳಿಗೆ 60ರಿಂದ 65 ಸಾವಿರ ರೂ.ಗೆ ಏರಿಕೆಯಾಗಿದೆ. ಆದರೆ, ಅತಿವೃಷ್ಟಿ ಮತ್ತು ಅಕಾಲಿಕ ಮಳೆಯಿಂದಾಗಿ ಮೆಣಸಿನಕಾಯಿ ಇಳುವರಿ ಕಡಿಮೆಯಾಗುತ್ತಿದ್ದು, ಇದರ ಪರಿಣಾಮ ವಾರದಿಂದ ವಾರಕ್ಕೆ ದರ ಏರುತ್ತಲೇ ಇದೆ. ಈ ಬೆಳವಣಿಗೆಯಿಂದ ಗ್ರಾಹಕರು ಸೇರಿ ರೈತರಲ್ಲೂ ಆತಂಕ ಸೃಷ್ಟಿಯಾಗಿದೆ. ವಿಶ್ವದಲ್ಲೇ ಮೆಣಸಿನಕಾಯಿ ಮಾರುಕಟ್ಟೆಗೆ …

Read More »