ಹಾಸನ,ಮಾರ್ಚ್14: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ. ಇತ್ತ ತಮ್ಮ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ರಾಜಕೀಯ ನಾಯಕರು ಪಕ್ಷಾಂತರ ಪರ್ವ ಶುರು ಮಾಡಿದ್ದು, ಈಗಾಗಲೇ ಕಾಂಗ್ರೆಸ್ ನತ್ತ ಮುಖ ಮಾಡಿರುವ ಗುಬ್ಬಿ ಶ್ರಿನಿವಾಸರನ್ನ ಮತ್ತೆ ಜೆಡಿಎಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎಂದು ಹೇಳಲಾಗಿದೆ. ಗುಬ್ಬಿ ಕ್ಷೇತ್ರದ ಶ್ರೀನಿವಾಸ ಗೌಡ ಅವರು ಜೆಡಿಎಸ್‌ಗೆ ಬಂದ್ರೆ ಸ್ವಾಗತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದು, …
Read More »Monthly Archives: ಮಾರ್ಚ್ 2023
ಟೋಲ್ ಕಟ್ಟುವುದಿಲ್ಲವೆಂದು ಕೆ ಎಸ್ ಆರ್ ಟಿ ಸಿ ಚಾಲಕ ಆಕ್ರೋಶ
ಮೈಸೂರು : ಬೆಂಗಳೂರು-ಮೈಸೂರು ನೂತನ ಹೆದ್ದಾರಿಯ ಬಿಡದಿ ಟೋಲ್ ಪ್ಲಾಜಾ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಪ್ರತಿಯೊಬ್ಬ ವಾಹನ ಚಾಲಕ ಟೋಲ್ ಪ್ಲಾಜಾ ಸಿಬ್ಬಂದಿ ವಿಧಿಸುತ್ತಿರುವ ದುಬಾರಿ ಶುಲ್ಕದಿಂದ ಸಿಟ್ಟಿಗೇಳುತ್ತಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಓಡುವ ಕೆಎಸ್ ಆರ್ ಟಿಸಿ ಬಸ್ಸಿನ ಚಾಲಕರೊಬ್ಬರು ಸುತಾರಾಂ ಟೋಲ್ ಶುಲ್ಕ ನೀಡುವುದಿಲ್ಲ ಎಂದು ಜಗಳಕ್ಕೆ ಬಿದ್ದಿದ್ದಾರೆ. ಟೋಲ್ ಸಿಬ್ಬಂದಿ ಸಾರ್ ‘ನೀವು ಶುಲ್ಕ ಪಾವತಿಸದಿದ್ದರೆ ನಮ್ಮ ಸಂಬಳದಿಂದ ಕಿತ್ತುಕೊಳ್ಳುತ್ತಾರೆ’ ಎಂದು ಹೇಳಿದರೂ ಬಸ್ ಚಾಲಕನ ಮೇಲೆ ಯಾವುದೇ ಪರಿಣಾಮ …
Read More »ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು – ಪೊಲೀಸರ ಮಧ್ಯೆ ವಾಗ್ವಾದ; ಪಿಎಸ್‌ಐ ಕಾಲರ್ ಎಳೆದು ಹಲ್ಲೆ ಮಾಡಿದ ಶಾಸಕರ ಪುತ್ರ
ರಾಯಚೂರು: ಸಿಂಧನೂರಿನಲ್ಲಿ ನಿರ್ಮಾಣವಾಗಿರುವ ನೂತನ ರಂಗಮಂದಿರಕ್ಕೆ ಪುನೀತ್ ರಾಜ್ಕುಮಾರ್ ಹೆಸರಿಡುವ ವಿಚಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನಡೆದಿದ್ದು, ಪಿಎಸ್‌ಐ ಮಣಿಕಂಠ ಥಳಿತಕ್ಕೊಳಗಾಗಿದ್ದಾರೆ. ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನೂತನ ರಂಗ ಮಂದಿರ ನಿರ್ಮಾಣವಾಗಿದ್ದು, ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ಪುನೀತ್ ರಾಜಕುಮಾರ್ …
Read More »ಬೆಂಗಳೂರು- ಮೈಸೂರು ಹೈವೇಮೋದಿ ಅಪ್ಪನ ಮನೆಯಿಂದ ಹಣ ತಂದು ನಿರ್ಮಾಣ ಮಾಡಿಲ್ಲ: ಎಚ್ ವಿಶ್ವನಾಥ್ ಕಿಡಿ
ಮೈಸೂರು: ಬೆಂಗಳೂರು- ಮೈಸೂರು ಹೈವೇಯನ್ನು ಮೋದಿ ಅಪ್ಪನ ಮನೆಯಿಂದ ಹಣ ತಂದು ನಿರ್ಮಾಣ ಮಾಡಿಲ್ಲ. ಪ್ರತಾಪ್ ಸಿಂಹ ಅಪ್ಪನ ಮನೆಯಿಂದ ಹಣ ತಂದು ಮಾಡಿಲ್ಲ. ಜನರ ತೆರಿಗೆ ಹಣದಿಂದ ನಿರ್ಮಾಣ ಮಾಡಲಾಗಿದೆ. ಆದರೂ ಹೈವೇಗೆ ದುಬಾರಿ ಟೋಲ್ ನಿಗದಿ ಮಾಡಿರೋದು ಸರಿಯಲ್ಲ ಎಂದು ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಕಿಡಿಕಾರಿದರು. ಬೆಂಗಳೂರು ಮೈಸೂರು ಹೈವೇ ಕಾಮಗಾರಿ ಅವೈಜ್ಞಾನಿಕವಾಗಿದೆ. ಹೈವೇ ನಿರ್ಮಾಣದಿಂದ ಮಂಡ್ಯ ಜಿಲ್ಲೆಯ ಜನರಿಗೆ ತೀವ್ರ ತೊಂದರೆಯಾಗಿದೆ. ಹೈವೇ ಕಾಮಗಾರಿ …
Read More »ಸಿಎಂ ಭೇಟಿ: ಅಂಜನಾದ್ರಿಯಲ್ಲಿ ಅಂಗಡಿ ಬಂದ್
ಆಂಜನಾದ್ರಿ (ಗಂಗಾವತಿ): ಅಂಜನಾದ್ರಿಗೆ ಮುಖ್ಯಮಂತ್ರಿ ಭೇಟಿ ನೀಡುವ ಕಾರ್ಯಕ್ರಮ ಮಂಗಳವಾರ ನಿಯೋಜನೆಯಾಗಿದ್ದರಿಂದ ಬೆಟ್ಟದ ಕೆಳಗಿನ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಅಂಜನಾದ್ರಿ ಬೆಟ್ಟದ ಕೆಳಗೆ ಎರಡೂ ಬದಿಗಳಲ್ಲಿ ಪೂಜಾ ಸಾಮಗ್ರಿಗಳ, ತಂಪು ಪಾನೀಯ ಮಾರುವ ಅಂಗಡಿಗಳು ಇವೆ. ಬೆಟ್ಟಕ್ಕೆ ಬರುವ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಈ ಅಂಗಡಿಗಳೇ ಆಸರೆಯಾಗಿದ್ದವು. ಬಿರುಬಿಸಿಲಿನ ನಡುವೆ ಪ್ರವಾಸಿಗರು ಪರದಾಡಬೇಕಾಯಿತು. ಪೂರ್ಣಕುಂಭ ಸ್ವಾಗತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಾಂಸ್ಕೃತಿಕ ಕಲಾ ತಂಡಗಳ ಮೂಲಕ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಪುರೋಹಿತರಾದ …
Read More »ಜಿಎಸ್‌ಟಿ ಕಳ್ಳಲೆಕ್ಕ: ಕರ್ನಾಟಕಕ್ಕೆ 2ನೇ ಸ್ಥಾನ
ಹೊಸದಿಲ್ಲಿ: ಜಿಎಸ್‌ಟಿಯನ್ನು ಸರಿಯಾಗಿ ಪಾವತಿಸದೇ ಕಳ್ಳಲೆಕ್ಕ ತೋರಿಸಿದವರ ಪಟ್ಟಿಯಲ್ಲಿ ಮಹಾರಾಷ್ಟ್ರ ರಾಜ್ಯ ಅಗ್ರಸ್ಥಾನ ಪಡೆದುಕೊಂಡಿದ್ದರೆ, ಕರ್ನಾಟಕ 2ನೇ ಸ್ಥಾನಿಯಾಗಿದೆ. ಕಳೆದ 5 ವರ್ಷದಲ್ಲಿ ವಂಚಿಸಿದ್ದ 3.11ಲಕ್ಷ ಕೋಟಿ ರೂ. ಜಿಎಸ್‌ಟಿಯಲ್ಲಿ, 1.03 ಲಕ್ಷ ಕೋಟಿ ರೂ.ಗಳನ್ನು ಹಿಂಪಡೆಯಲು ಸರಕಾರ ಯಶಸ್ವಿಯಾಗಿದೆ ಎಂದು ಲೋಕಸಭೆಗೆ ಹಣಕಾಸು ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ಮಹಾರಾಷ್ಟ್ರದಲ್ಲಿ 60 ಸಾವಿರ ಕೋಟಿ ರೂ., ಕರ್ನಾಟಕದಲ್ಲಿ 40,507 ಕೋಟಿ ರೂ., ಜಿಎಸ್‌ಟಿಯನ್ನು ವಂಚಿಸಲಾಗಿದೆ. ಇನ್ನು ಗುಜರಾತ್‌ನಲ್ಲಿ 26,156 …
Read More »ಮಾ.17ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಇದೇ ತಿಂಗಳ 17ರಂದು ಹೊರಬೀಳುವ ಸಾಧ್ಯತೆ ಇದೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾ.16ರಂದು ನಗರದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಒಂದು ಸಭೆ ಕರೆಯಲಾಗಿದೆ. ಮರುದಿನ ಅಂದರೆ ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನ ಆಗಲಿದೆ’ ಎಂದು ತಿಳಿಸಿದರು. ಇತ್ತೀಚೆಗೆ ನಿಧನರಾದ ಮಾಜಿ ಸಂಸದ ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ …
Read More »ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.16ರಿಂದ ವಿದ್ಯುತ್ ನೌಕರರ ಮುಷ್ಕರ
ಬೆಂಗಳೂರು: ನೌಕರರು ಮತ್ತು ಅಧಿಕಾರಿ ವರ್ಗದ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಮತ್ತು ಎಲ್ಲ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ)ಗಳ ಉದ್ಯೋಗಿಗಳು ಮಾರ್ಚ್ 16ರಂದು ಕೆಲಸಕ್ಕೆ ಗೈರುಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ವಿದ್ಯುತ್ ಪೂರೈಕೆ ಮತ್ತಿತರ ಸಂಬಂಧಪಟ್ಟ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಈಗಾಗಲೇ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಧಿಕಾರಿಗಳ ಸಂಸ್ಥೆ ಸಲ್ಲಿಸಿದ …
Read More »ಪವರ್ ಸ್ಟಾರ್ ಅಪ್ಪು ʼಗಂಧದ ಗುಡಿʼ ಓಟಿಟಿ ಎಂಟ್ರಿಗೆ ಡೇಟ್ ಫಿಕ್ಸ್
ಬೆಂಗಳೂರು: ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್ ಕನಸಿನ ಪ್ರಾಜೆಕ್ಟ್ ʼಗಂಧದ ಗುಡಿʼ ಓಟಿಟಿ ಪ್ರಿಮಿಯರ್ ಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕದ ವನ್ಯಜೀವನ ಯಾನವನ್ನು ಸುಂದರವಾಗಿ ಕಟ್ಟಿಕೊಟ್ಟ ʼಗಂಧದ ಗುಡಿʼ ಯಲ್ಲಿ ಅಮೋಘ ವರ್ಷ, ಅಪ್ಪು ಅವರ ಪ್ರವಾಸಿ ಪಯಣದ ಕನಸಿಗೆ ಜೊತೆಯಾಗಿದ್ದರು. ʼಗಂಧದ ಗುಡಿʼ ಯಲ್ಲಿ ಅಪ್ಪು ಕರುನಾಡಿನ ಪ್ರಾಣಿ ಸಂಕುಲದ ಪರಿಸರದಲ್ಲಿ ಸರಳವಾಗಿ ಸಂಚರಿಸಿದ್ದರು. ಥಿಯೇಟರ್ ನಲ್ಲಿ 2022 ರ ಅಕ್ಟೋಬರ್ 28 ಬಿಡುಗಡೆಯಾದ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ರೆಸ್ಪಾನ್ಸ್ …
Read More »ಕಾಂಗ್ರೆಸ್ ತೆಕ್ಕೆಗೆ ‘ಆಪರೇಷನ್ ಕಮಲ’ ರೂವಾರಿ ಕದಲೂರು ಉದಯ್‌ಗೌಡ
ಬೆಂಗಳೂರು: ‘ಆಪರೇಷನ್ ಕಮಲ’ದ ಮೂಲಕ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಉದ್ಯಮಿ, ಮದ್ದೂರು ವಿಧಾನಸಭೆ ಕ್ಷೇತ್ರದ ಮುಖಂಡ ಕದಲೂರು ಉದಯ್‌ಗೌಡ ಅವರು ತಮ್ಮ ಬೆಂಬಲಿಗರ ಜೊತೆ ಸೋಮವಾರ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಮುಖಂಡರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಅವರು ಉದಯ್ ಗೌಡ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಉದಯ್ ಯಾವುದೇ ಷರತ್ತು ಇಲ್ಲದೆ ಪಕ್ಷ …
Read More »