Breaking News

Monthly Archives: ಮಾರ್ಚ್ 2023

ಶಿಸ್ತು, ಪರಿಶ್ರಮ, ತಾಳ್ಮೆಯಿಂದ ಸಾಧನೆ ಸಾಧ್ಯ

ನಿಪ್ಪಾಣಿ: ‘ಶಿಸ್ತು, ಪರಿಶ್ರಮ, ಸೌಮ್ಯತೆ, ತಾಳ್ಮೆ ಇದ್ದಲ್ಲಿ ವಿದ್ಯಾರ್ಥಿಗಳು ಮುಂದೆ ಹೋಗಿ ಬಯಸಿದ್ದನ್ನೆಲ್ಲ ಸಾಧಿಸುತ್ತಾರೆ. ಅದಕ್ಕೆ ತಕ್ಕಂತೆ ಬೋಧನೆ ಶಾಲೆಯಲ್ಲಿ ಶಿಕ್ಷಕರಿಂದಾಗಬೇಕು, ಸಂಸ್ಕಾರ ಮನೆಯಲ್ಲಿ ಪಾಲಕರಿಂದಾಗಬೇಕು’ ಎಂದು ವಿದ್ಯಾ ಸಂವರ್ಧಕ ಮಂಡಳದ ಸಿಇಒ ಡಾ. ಸಿದ್ಧಗೌಡ ಪಾಟೀಲ ಅಭಿಪ್ರಾಯಪಟ್ಟರು. ಸ್ಥಳೀಯ ವಿಎಸ್‍ಎಂ ಜಿ.ಐ. ಬಾಗೇವಾಡಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿಎಸ್‍ಎಂ ಕನ್ನಡ ಮತ್ತು ಮರಾಠಿ ಕಾನ್ವೆಂಟ್ ಶಾಲೆಯಲ್ಲಿ ಶುಕ್ರವಾರ ಬೀಳ್ಕೊಡುವ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು …

Read More »

2ಎ ಮೀಸಲಾತಿ ನೀಡಬೇಕು ಎಂದುಬೆಳಗಾವಿ ಜಿಲ್ಲೆಯ ವಿವಿಧೆಡೆ ಹೆದ್ದಾರಿ ತಡೆ, ಪ್ರತಿಭಟನೆ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆಯ ಮೇರೆಗೆ, ಜಿಲ್ಲೆಯ ವಿವಿಧೆಡೆ ಪಂಚಮಸಾಲಿ ಸಮುದಾಯುದವರು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ಇದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರೇಬಾಗೇವಾಡಿ ವರದಿ: ಹಿಇಲ್ಲಿನ ಟೋಲ್ ಬಳಿ ಶನಿವಾರ ಅರ್ಧ ತಾಸು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಮುಖ್ಯಮಂತ್ರಿ ನಮ್ಮ ಸಮಾಜಕ್ಕೆ 2ಎ …

Read More »

ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಮರಾಠಿ ನಟ,

ಬೆಳಗಾವಿ: ‘ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಮರಾಠಿ ನಟ, ಸಂಸದ ಅಮೋಲ್ ಕೋಲ್ಹೆ ತಿಳಿಸಿದ್ದಾರೆ.   ಈ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ವಿಡಿಯೊ ಹಾಕಿದ ಅವರು, ‘ಬೆಳಗಾವಿಯಲ್ಲಿ ಮಾರ್ಚ್‌ 5ರಂದು ಆಯೋಜಿಸಿದ ಕಾರ್ಯಕ್ರಮಕ್ಕೆ ಬರುವುದಾಗಿ ನಾನು ವಿಡಿಯೊ ಮೂಲಕ ಪ್ರಚಾರ ಮಾಡಿದ್ದೆ. ಆಗ ‘ಬೆಳಗಾವಿ’ ಎಂಬ ಪದ ಬಳಸಿದ್ದಕ್ಕೆ ಎಂಇಎಸ್‌ …

Read More »

ದ್ದರಾಮಯ್ಯ ಅವರೇ ನಿಮ್ಮ ಆಟ ಕೊನೆಯಾಗಿದೆ. ರಾಜಕೀಯ ಚೆಲ್ಲಾಟ ಬಿಟ್ಟುಬಿಡಿ. :B.S.Y.

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ‘ಸಿದ್ದರಾಮಯ್ಯ ಅವರೇ ನಿಮ್ಮ ಆಟ ಕೊನೆಯಾಗಿದೆ. ರಾಜಕೀಯ ಚೆಲ್ಲಾಟ ಬಿಟ್ಟುಬಿಡಿ. ನರೇಂದ್ರ ಮೋದಿ ಅವರ ಟೀಕೆ ಮಾಡುವುದನ್ನು ಬಿಟ್ಟು ನಿಮ್ಮ ಪರಿಸ್ಥಿತಿ ಎನಾಗಿದೆ, ಕಾಂಗ್ರೆಸ್‌ ಸ್ಥಿತಿ ಏನಾಗಿದೆ ನೋಡಿಕೊಳ್ಳಿ’ ಎಂದು ಶಾಸಕ ಬಿ.ಎಸ್‌. ಯಡಿಯೂರ‍ಪ್ಪ ಕಿಡಿಕಾರಿದರು. ಪಟ್ಟಣದಲ್ಲಿ ಶನಿವಾರ ನಡೆಸಿದ ರೋಡ್‌ ಶೋನಲ್ಲಿ ಮಾತನಾಡಿದ ಅವರು, ‘ಎಲ್ಲ ಚುನಾವಣೆಗಳಲ್ಲೂ ಜನ ನಿಮ್ಮನ್ನು ಮೂಲೆಗುಂಪು ಮಾಡಿದ್ದಾರೆ. ಹಣ ಬಲ, ತೋಳ ಬಲ, ಜಾತಿಯ ವಿಷಬೀಜ ಬಿತ್ತಿ ಚುನಾವಣೆ …

Read More »

ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ಮಾಡಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ಮಾಡಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಎಂದು ಹೇಳಿದ್ದಾರೆ. ಜಿ.ಎಂ.ಸಿದ್ದೇಶ್ವರ್ ಅವರೇ ದಾಳಿ ಮಾಡಿಸಿದ್ದು ಎಂದು ನಮ್ಮ ಪಕ್ಷದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಇಷ್ಟಕ್ಕೂ ಅವರ ಪಕ್ಷದ ವ್ಯವಹಾರ ನಮಗೆ ಯಾಕೆ ಎಂದು ಪ್ರಶ್ನಿಸಿದ್ದಾರೆ. …

Read More »

ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿವರ್ಷ 5 ಲಕ್ಷ ರೂಪಾಯಿ ಅನುದಾನ

ಬೆಳಗಾವಿ: ರಾಜ್ಯದಲ್ಲಿಯೇ ವಿಶಿಷ್ಟವಾಗಿ ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಗುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸುತ್ತಾರೆ. ರಾಜ್ಯೋತ್ಸವವನ್ನ ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅನುಕೂಲವಾಗುವಂತೆ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಪ್ರಕಟಿಸಿದರು. ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳು, ಯೋಜನೆಗಳು ಮತ್ತು ಜಿಲ್ಲೆಯ ಗಡಿ ಭಾಗಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದ್ದು, ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ (ಮಾ.4) ಆಯೋಜಿಸಲಾಗಿದ್ದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ವಿದ್ಯುನ್ಮಾನ ಮತ ಯಂತ್ರಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ …

Read More »

ವಿಧಾನಸಭಾ ಚುನಾವಣೆ; ರಾಜ್ಯ ಬಿಜೆಪಿಯ 12 ನಾಯಕರಿಗೆ ಜವಾಬ್ದಾರಿ ವಹಿಸಿದ ಹೈಕಮಾಂಡ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯದ 12 ನಾಯಕರಿಗೆ ಜಿಲ್ಲಾ ಮಟ್ಟದಲ್ಲಿ ಸಂಘಟನೆ ಜವಾಬ್ದಾರಿ ವಹಿಸಿದೆ. ಈ ಮೂಲಕ ರಾಜ್ಯ ನಾಯಕರಿಗೆ ಗ್ರೌಂಡ್ ಲೆವಲ್ ಜವಾಬ್ದಾರಿಯನ್ನು ಹಂಚಿಕೆ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಹ ಉಸ್ತುವಾರಿ ಡಿ.ಕೆ.ಅರುಣಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಡಿ.ವಿ.ಸದಾನಂದಗೌಡ, …

Read More »

ಕ್ಯಾಮರಾ ತಗೋಂಡು ಬೆಡ್‌ ರೂಮ್‌ ಬನ್ನಿ: ಸೈಫ್ ಅಲಿ ಖಾನ್

ಬಾಲಿವುಡ್ ತಾರೆಯರು ತಮ್ಮ ಮನೆಗಳು, ಜಿಮ್‌, ರೆಸ್ಟೋರೆಂಟ್‌ ಇಲ್ಲವೇ ಕ್ಲಬ್‌ಗೆ ಹೋದ್ರೂ ಅವರನ್ನು ಪಾಪರಾಜಿಗಳು ಬೆಂಬಿಡದೆ ಹಿಂಬಾಲಿಸುತ್ತಿರುತ್ತಾರೆ.   ‘ಪಾಪ್ ಸಂಸ್ಕೃತಿ’ ಇತ್ತೀಚೆಗೆ ಸ್ವಲ್ಪ ಹೆಚ್ಚಾಗಿದೆ ಅಂತ ಹೇಳಬಹುದು, ಅದರಲ್ಲೂ ವಿಶೇಷವಾಗಿ ಎರಡು ವಾರಗಳ ಹಿಂದೆ ಅಲಿಯಾ ಭಟ್ ಅವರ ಪಕ್ಕದ ಕಟ್ಟಡದ ಟೆರೇಸ್‌ನಿಂದ ಇಬ್ಬರು ಫೋಟೋಗ್ರಾಫರ್‌ಗಳು ಅವರ ಫೋಟೋಗಳನ್ನು ಕ್ಲಿಕ್ ಮಾಡಿದ ಘಟನೆಯ ನಡೆದಿದ್ದು ಎಲ್ಲರಿಗೂ ಗೊತ್ತಿದೆ.   ಇನ್ನು ಇದೇ ರೀತಿ ಗುರುವಾರ ರಾತ್ರಿ,ಸೈಫ್ ಅಲಿ ಖಾನ್ಕೂಡ …

Read More »

ಬೆಂಗಳೂರಲ್ಲಿ ಖತರ್ನಾಕ್‌ ಕಳ್ಳನ ಎಂಟ್ರಿ : ʼಬೈಕ್​ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಖದೀಮ ಅರೆಸ್ಟ್‌ʼ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕಳ್ಳರಿಗೇನು ಕಮ್ಮಿಯಿಲ್ಲ, ಇದೀಗ ಬೈಕ್​ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನುಸಿದ್ದಾಪುರ ಪೊಲೀಸರಿಂದ ಬಂಧಿಸಲಾಗಿದೆ.   ಸಿಲಿಕಾನ್‌ ಸಿಟಿಯಲ್ಲಿ ಬೆಂಗಳೂರಿಲ್ಲಿ ಪಾರ್ಕಿಂಗ್‌ ಇಲ್ಲದೇ ಅದೇಷ್ಟು ಜನರು ಮನೆ ಮುಂದೆ ಬೈಕ್‌ಗನ್ನು ನಿಲ್ಲಿಸುತ್ತಾರೆ. ಇದನ್ನೆ ಬಂಡಾವಳವನ್ನಾಗಿ ಮಾಡಿಕೊಂಡು ರಾತ್ರೋರಾತ್ರಿ ಕಳ್ಳತನ ಮಾಡಿ ಮಾರಾಟ ಮಾಡುವ ಹೊಸ ದಂಧೆಯನ್ನ ಶುರು ಮಾಡಿದ್ದನು.ಈತ ಬೆಂಗಳೂರಿನ ಸಿದ್ದಾಪುರ, ಕಲಾಸಿಪಾಳ್ಯ, ವರ್ತೂರು, ಚಂದ್ರಾಲೇಔಟ್, ಕೆ.ಎಸ್.ಲೇಔಟ್ ಸೇರಿ ಬೈಕ್‌ಗಳನ್ನ ಕಳ್ಳತನ …

Read More »