Breaking News

Monthly Archives: ಮಾರ್ಚ್ 2023

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶ

ಬೆಳಗಾವಿ : ಚುನಾವಣಾ ಆಯೋಗವು ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶವಿದ್ದು, ಏಪ್ರಿಲ್ 10 ರವರೆಗೂ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮಾ.29) ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವ ಮತದಾರರ ಹೆಸರನ್ನು ಮತದಾರರ …

Read More »

ನೀತಿ ಸಂಹಿತೆ ಜಾರಿ: ಯಾವೆಲ್ಲ ನಿಯಮಗಳು ಇರಲಿವೆ

ಬೆಂಗಳೂರು: 16ನೇ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಅಭ್ಯರ್ಥಿಗಳಿಗೆ ಹಾಗೂ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ನೀತಿ ಸಂಹಿತೆಯ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ಫಲಿತಾಂಶ ಬಂದು ಹೊಸ ಸರ್ಕಾರ ರಚನೆಯಾಗುವವರೆಗೆ ಈ ಸಂಹಿತೆಗಳು ಜಾರಿಯಲ್ಲಿರಲಿವೆ.   ಸಾಮಾನ್ಯ ಸಂಹಿತೆಗಳು 1. ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು ಧರ್ಮ, ಜಾತಿ, ಭಾಷೆ ಹಾಗೂ ಸಮುಯದಾಯಗಳ ನಡುವೆ ದ್ವೇಷ ಉಂಟು ಮಾಡುವಂಥ ಯಾವುದೇ ಚಟುವಟಿಕೆಯಲ್ಲಿ ಭಾಗಿಯಾಗುವಂತಿಲ್ಲ. 2. …

Read More »

ಕರ್ನಾಟಕ ಚುನಾವಣೆ 2023 ವಿಶೇಷಗಳೇನು?

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆಗೆ ಚುನಾವಣೆಯನ್ನು ಮೇ 10ಕ್ಕೆ ನಿಗದಿ ಪಡಿಸಿದ್ದು, ಈ ಬಾರಿಯ ಚುನಾವಣೆಯ ವಿಶೇಷಗಳೇನು ಎಂಬ ಮಾಹಿತಿ ಇಲ್ಲಿದೆ. ರಾಜ್ಯದಾದ್ಯಂತ 52,283 ಮತಗಟ್ಟೆಗಳಲ್ಲಿ 24,063 ನಗರ ಪ್ರದೇಶ ಹಾಗೂ 34,219 ಗ್ರಾಮೀಣ ಮತಗಟ್ಟೆಗಳು ಇವೆ. ಸರಾಸರಿ 888 ಮತದಾರರಿಗೊಂದು ಮತಗಟ್ಟೆಯು ಬರುತ್ತದೆ. 12,000 ಸೂಕ್ಷ್ಮ ಮತದಾನ ಕೇಂದ್ರಗಳನ್ನು ಗುರುತಿಸಲಾಗಿದ್ದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಸಾಲಿನ ರಾಜ್ಯ ಚುನಾವಣೆಯ ಮುಖ್ಯ ವಿಶೇಷಗಳೆಂದರೆ: * ರಾಜ್ಯದಲ್ಲಿ …

Read More »

2013, 2018 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಏನಿತ್ತು ಗೊತ್ತಾ?

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಘೋಷಣೆ ಮಾಡಿದೆ. ಆ ಪ್ರಕಾರ ಇಂದಿನಿಂದಲೇ ನೀತಿ ಸಂಹಿತಿ ಜಾರಿಯಾಗಿದ್ದು ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕಡೆಯ ದಿನ, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ. ಏಪ್ರಿಲ್ 24 ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆಯಲು ಕಡೆಯ ದಿನವಾಗಿರುತ್ತದೆ. ಮೇ 10 ರಂದು ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು …

Read More »

ಬಿಜೆಪಿ ಸರ್ಕಾರ ಕಿತ್ತೆಸೆಯಿರಿ, ಬ್ರಾಂಡ್ ಕರ್ನಾಟಕ ನಿರ್ಮಿಸೋಣ: ಸುರ್ಜೆವಾಲ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ. ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ‘ಶಾಂತಿ ಮತ್ತು ಸಮೃದ್ಧಿಯ ಹೊಸ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ’ ಎಂದು ಕರೆ ನೀಡಿದ್ದಾರೆ.   …

Read More »

ಕರ್ನಾಟಕ ವಿಧಾನಸಭಾ ಚುನಾವಣೆ-2023 -ನೀತಿ ಸಂಹಿತೆ ಜಾರಿ, ಜಿಲ್ಲೆಯ ಎಲ್ಲೆಡೆ ಕಟ್ಟೆಚ್ಚರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೆ10 ಮತದಾನ ಹಾಗೂ ಮೆ 13 ರಂದು ಮತ ಎಣಿಕೆ ನಡೆಯಲಿವೆ. ಹಾಗಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.29) ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಮತದಾನ ದಿನಾಂಕ ಘೋಷಣೆಯಾಗಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ …

Read More »

ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನಮಾಡಲು ಅವಕಾಶ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು) ತಮ್ಮ ಮತವಿರುವ ಕ್ಷೇತ್ರದಲ್ಲಿ …

Read More »

ಹಾರೂಗೇರಿ ಕ್ರಾಸ್ ನಲ್ಲಿ ಅಪಾರ ಪ್ರಮಾಣದ ನಗದು, ಹೊಲಿಗೆ ಮಷಿನ್, ಕೂಲರ್ ವಶ

ಬೆಳಗಾವಿ: ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಕೆಲ ಅಭ್ಯರ್ಥಿಗಳು ಅಕ್ರಮದ ಹಾದಿ ಹಿಡಿದಿದ್ದರೆ ಇತ್ತ ಜಿಲ್ಲೆಯ ಪೊಲೀಸ್ ವ್ಯವಸ್ಥೆ ಕೂಡ ಚುರುಕಾಗಿದ್ದು ಇದಕ್ಕೆ ಬ್ರೇಕ್ ಹಾಕುವ ಕಾರ್ಯದಲ್ಲಿ ತೊಡಗಿದೆ.                     ಜಿಲ್ಲೆಯಲ್ಲಿ ಬುಧವಾರ ಲಕ್ಷಾಂತರ ರೂ. ಅಕ್ರಮ ಹಣವನ್ನು ಚೆಕ್ ಪೋಸ್ಟ್ ಕರ್ತವ್ಯದಲ್ಲಿರುವ ಪೊಲೀಸರು ಜಪ್ತಿ ಮಾಡಿದ್ದಾರೆ. ಹಾರೂಗೇರಿ ಕ್ರಾಸ್ ನಲ್ಲಿರುವ ಚೆಕ್ ಪೋಸ್ಟ್ …

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆ?

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನಲ್ಲಿ ಬದಲಾವಣೆ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. …

Read More »

ಆದಾಯ ಮೀರಿ ಆಸ್ತಿ ಗಳಿಕೆ; ರೇಣುಕಾಚಾರ್ಯ ಅರ್ಜಿ ವಜಾ

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು. ಇದರಿಂದ ರೇಣುಕಾಚಾರ್ಯ ಅವರಿಗೆ ಮತ್ತೆ ಕಂಟಕ ಎದುರಾದಂತಾಗಿದೆ. ರೇಣುಕಾಚಾರ್ಯ ವಿರುದ್ಧ ಗುರುಪಾದಯ್ಯ ಮಠದ್‌ ಎಂಬುವರು 2015ರಲ್ಲಿ …

Read More »