Breaking News

Monthly Archives: ಮಾರ್ಚ್ 2023

ಕಳ್ಳರನ್ನು ಸಮಾಜ ಸುಧಾರಕರು ಎನ್ನಬೇಕೇ?’ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ‘ಕಳ್ಳರನ್ನು ಕಳ್ಳ ಎಂದು ಕರೆಯದೇ ಸಾಧುಗಳು, ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಹುಲ್‌ ಗಾಂಧಿ ಅವರ ಸಂಸತ್‌ ಸ್ಥಾನದ ಅನರ್ಹತೆಯ ಕ್ರಮ ಖಂಡಿಸಿ, ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.   ‘ಭಾರತ್‌ ಜೋಡೊ ಯಾತ್ರೆಯ ಬಳಿಕ ರಾಹುಲ್‌ ಗಾಂಧಿ ಅವರ ವರ್ಚಸ್ಸು ವೃದ್ಧಿಯಾಗಿದೆ. ಇದು …

Read More »

ಮುಸ್ಲಿಂರ ಓಲೈಕೆಗಾಗಿ ಕಾಂಗ್ರೆಸ್ ಮಾಡಿದ್ದ ಮೀಸಲಾತಿ ರದ್ದು ಮಾಡಿದ್ದೇವೆ: ಜೋಶಿ

ಹುಬ್ಬಳ್ಳಿ: ‘ಮುಸ್ಲಿಮರ ಓಲೈಕೆಗಾಗಿ, ಕಾಂಗ್ರೆಸ್ ಪಕ್ಷ ಅಸಂವಿಧಾನಿಕವಾಗಿ ಧರ್ಮದ ಆಧಾರದ ಮೇಲೆ ಮೀಸಲಾತಿ ಹಂಚಿಕೆ ಮಾಡಿತ್ತು. ಬಿಜೆಪಿ ಅದನ್ನು ರದ್ದು ಪಡಿಸಿ ಅಗತ್ಯವಿರುವ ಸಮಾಜಕ್ಕೆ ಹಂಚಿಕೆ ಮಾಡಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.   ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ನಿರ್ಣಾಯಕ ಪಕ್ಷವಾಗಿ ಅವೈಜ್ಞಾನಿಕವಾಗಿ ಹಂಚಿಕೆಯಾಗಿದ್ದ ಮೀಸಲಾತಿಯನ್ನು ಸರಿಪಡಿಸಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎನ್ನುವುದು ಸಂವಿಧಾನದ ನಿರ್ಮಾತೃರ ಆಶಯವಾಗಿತ್ತು. ಹಾಗೂ ಸುಪ್ರೀಂ …

Read More »

ಲಿಂಗಾಯತ, ವೀರಶೈವರೆಲ್ಲ ಒಂದೇ: 3 ಬಿಅಡಿ 22 ಉಪಜಾತಿ ಸೇರಿಸಲು ಸರ್ಕಾರಕ್ಕೆ ಸಲಹೆ

ಬೆಂಗಳೂರು: ಮೀಸಲಾತಿಯಿಂದ ವಂಚಿತರಾಗುತ್ತಿದ್ದ 22 ಲಿಂಗಾಯತ/ವೀರಶೈವ ಉಪ ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ‘ಪ್ರವರ್ಗ 3ಬಿ’ ಅಡಿ ಸೇರಿಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲಹೆ ನೀಡಿದೆ. ಆದರೆ, ಈ ಪೈಕಿ ಮೂರು (ಕುಡುಒಕ್ಕಲಿಗ/ಕುಡು ಒಕ್ಕಲ, ನೊಳಂಬ ಮತ್ತು ಲಾಳಗೊಂಡ) ಉಪಜಾತಿಗಳನ್ನು ಮಾತ್ರ ಹೊಸದಾಗಿ ಸೃಜಿಸಿರುವ ‘2ಡಿ’ಗೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.   ‘ಪ್ರವರ್ಗ 3ಬಿ’ಗೆ ನೀಡಿದ್ದ ಶೇ 5ರ ಮೀಸಲಾತಿ ಪ್ರಮಾಣವನ್ನು ಶುಕ್ರವಾರ (ಮಾರ್ಚ್‌ 24) ನಡೆದಿದ್ದ …

Read More »

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಪ್ರಾಥಮಿಕ ಹಂತದ ಕಸರತ್ತು ಆರಂಭ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಪ್ರಾಥಮಿಕ ಹಂತದ ಕಸರತ್ತು ಆರಂಭಿಸಿದೆ. ಕ್ಷೇತ್ರವಾರು ಜಿಲ್ಲಾ ಮಟ್ಟದಲ್ಲಿ ಹೆಸರುಗಳನ್ನು ಸೂಚಿಸಲು ಸೋಮವಾರ ರಾತ್ರಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಆಯ್ಕೆಗೆ ಅನುಸರಿಸಬೇಕಾದ ಮಾನದಂಡ ಏನಿರಬೇಕು ಎಂದು ಸೂಚಿಸಲಾಗಿದೆ. ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಮತ್ತು ಪದಾಧಿಕಾರಿ ಹಾಗೂ ಕೇಂದ್ರ ನಾಯಕರು ಈ ಸಂಬಂಧ ಸುದೀರ್ಘ ಸಮಾಲೋಚನೆ ನಡೆಸಿದರು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪ್ರಮುಖರ ಸಮಿತಿ ಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಿ 2-3 …

Read More »

ಹುಕ್ಕೇರಿ ಕ್ಷೇತ್ರದಲ್ಲಿ ನಿಖಿಲ್ ಕತ್ತಿ ಹಾಗೂ ರಮೇಶ್ ಕತ್ತಿ ನಡುವೆ ಟಿಕೆಟ್ ಕಸರತ್ತು..

ಹುಕ್ಕೇರಿ: ಉತ್ತರ ಕರ್ನಾಟಕದ ಅತ್ಯಂತ ಗಟ್ಟಿ ಧ್ವನಿ ಎಂದೇ ಹೆಸರಾಗಿದ್ದ ಉಮೇಶ ಕತ್ತಿ ಅವರ ಅಕಾಲಿಕ ಅಗಲಿಕೆಯಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಖಾಲಿಖಾಲಿ ಎನಿಸುತ್ತಿದೆ. ಕತ್ತಿ ಕುಟುಂಬಕ್ಕೆ ನಿಷ್ಠರಾದ ಮತದಾರರನ್ನು ಸೆಳೆದು ಹೊಸ ಮುಖ ಗೆಲ್ಲುವುದೋ ಅಥವಾ ವಂಶವಾಹಿ ಪರಂಪರೆ ಮುಂದುವರಿಯುವುದೋ ಎಂಬುದೇ ಈಗಿರುವ ಕುತೂಹಲ.   ‘ಉಮೇಶ ಕತ್ತಿ ಅಗಲಿಕೆಯಿಂದ ಅನುಕಂಪದ ಮತಗಳನ್ನು ಪಡೆದು ಗೆಲ್ಲುವ ಅವಶ್ಯಕತೆ ಇಲ್ಲ. ಕತ್ತಿ ಕುಟುಂಬಕ್ಕೇ ಸಾಂ‍ಪ್ರದಾಯಿಕ ಮತಗಳಿವೆ. ಕುಟುಂಬದಲ್ಲಿ ಯಾರು ನಿಂತರೂ ಜನ …

Read More »

ಜವಳಿ ಪಾರ್ಕ್ ನಿಂದ 2 ಲಕ್ಷ ಉದ್ಯೋಗ: C.M ಬೊಮ್ಮಾಯಿ

ಕಲಬುರಗಿ : ಪಿಎಂ ಮಿತ್ರ ಜವಳಿ ಪಾರ್ಕ್ 371 ಜೆ ಆದ ನಂತರ ಆಗಿರುವ ಮೆಗಾ ಯೋಜನೆ. ಒಂದು ಸಾವಿರ ಎಕರೆ ಪ್ರದೇಶದಲ್ಲಿ 10 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ಹೂಡಿಕೆಯಾಗಲಿದ್ದು. ಒಂದು ಲಕ್ಷ ನೇರ ಹಾಗೂ ಒಂದು ಲಕ್ಷ ಪರೋಕ್ಷ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜವಳಿ ಪಾರ್ಕ್ ಈ ಭಾಗದ ಆರ್ಥಿಕ ಪ್ರಗತಿಗೆ ದೊಡ್ಡ ಶಕ್ತಿಯನ್ನು ತುಂಬಿದೆ. …

Read More »

ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆಸಿದ್ದರಾಮಯ್ಯ ಹೊಸ ಬಾಂಬ್

ಮೈಸೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ. ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವರುಣಾದಲ್ಲಿ ನನ್ನನ್ನು ಸೋಲಿಸುವ ನಿಟ್ಟಿನಲ್ಲಿ ಹಾಗು ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವುದು ನಿಜ ಎಂದು ಹೇಳಿದ್ದಾರೆ. 2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಈ ಎರಡೂ ಪಕ್ಷಗಳು ಒಳ ಒಪ್ಪಂದ …

Read More »

ಆಧಾರ್ ಗೆ ಪ್ಯಾನ್ ಸಂಖ್ಯೆ ಲಿಂಕ್ ಮಾದುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.

ನವದೆಹಲಿ: ಆಧಾರ್ ಗೆ ಪ್ಯಾನ್ ಸಂಖ್ಯೆ ಲಿಂಕ್ ಮಾದುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ. ಶಾಶ್ವತ ಖಾತೆ ಸಂಖ್ಯೆ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಜೂನ್ 30, 2023ರವರೆಗೆ ವಿಸ್ತರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ಜೂನ್ 30ರೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಜುಲೈ1, 2023 ರಿಂದ ಲಿಂಕ್ ಮಾಡದ ಎಲ್ಲಾ ಪ್ಯಾನ್ ಕಾರ್ಡ್ ಗಳು ನಿಷ್ಕ್ರಿಯಗೊಳ್ಳುತ್ತವೆ …

Read More »

ಅಂಬೇಡ್ಕರ್, ಕಿತ್ತೂರು ಚೆನ್ನಮ್ಮ ಹಾಗೂ ರಾಯಣ್ಣ ಪುತ್ಥಳಿ ಅನಾವರಣಗೊಳಿಸಿದ: ಬಸವರಾಜ ಬೊಮ್ಮಾಯಿ ಅವರು

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ಆವರಣದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು. ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ, ಸಚಿವರಾದ ಶಶಿಕಲಾ‌ ಜೊಲ್ಲೆ, ಶಂಕರ್ ಪಾಟೀಲ ಮುನೇನಕೊಪ್ಪ, ಮುರುಗೇಶ್ ನಿರಾಣಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಐಹೊಳೆ, ತಾಂಡ …

Read More »

ಬೆಳಗಾವಿ ಜಿಲ್ಲೆಗೆಬಸವರಾಜ ಬೊಮ್ಮಾಯಿ

ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ ಬೆಂಗಳೂರಿನಿಂದ ಕಲಬುರ್ಗಿಗೆ ತೆರಳುವು ಬೊಮ್ಮಾಯಿ ಅಲ್ಲಿ ಪಿಎಂ ಮಿತ್ರ ಪಾರ್ಕ್ ಗೆ ಚಾಲನೆ ನೀಡುವರು. ನಂತರ ಮಧ್ಯಾಹ್ನ 1.30ಕ್ಕೆ ಬೆಳಗಾವಿಗೆ ಆಗಮಿಸಲಿರುವ ಅವರು, ಸುವರ್ಣ ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಜಗಜ್ಯೋತಿ ಬಸವೇಶ್ವರ, ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆಗಳನ್ನು ಅನಾವರಣಗೊಳಿಸಲಿದ್ದಾರೆ. ನಂತರ ಗೋಕಾಕಕ್ಕೆ ತೆರಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ …

Read More »