ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವ ಸರ್ಕಾರದ ತೀರ್ಮಾನ ವಿರೋಧಿಸಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯದವರು ಶುಕ್ರವಾರ ಜಿಲ್ಲೆಯ ಹೂವಿನಹಡಗಲಿ ಪಟ್ಟಣ ಹಾಗೂ ಹರಪನಹಳ್ಳಿ ತಾಲ್ಲೂಕಿನ ಮಾಚಿಹಳ್ಳಿ ತಾಂಡಾದಲ್ಲಿ ಪ್ರತಿಭಟನೆ ನಡೆಸಿದರು. ಹಡಗಲಿ ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಸಾವಿರಾರು ಜನರು ರಸ್ತೆ ಮಾರ್ಗ ಬಂದ್ ಮಾಡಿ ಪ್ರತಿಭಟಿಸಿದರು. ದೂಪದಹಳ್ಳಿ ಮರಿಯ್ಮಮದೇವಿ ಮಠದ ಶಿವಪ್ರಕಾಶ್ ಮಹಾರಾಜ್ ಮಾತನಾಡಿ, ‘ಒಳ …
Read More »Daily Archives: ಏಪ್ರಿಲ್ 1, 2023
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಟಿಕೆಟ್ ಖಚಿತವಾಗಿಲ್ಲ- ಲಕ್ಷ್ಮಣ್ ಸವದಿ
ಗದಗ, ಏಪ್ರಿಲ್ 1: ಮುಖ್ಯವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆದಿಯಾಗಿ ಯಾರಿಗೂ ಟಿಕೆಟ್ ಖಚಿತವಾಗಿಲ್ಲ. ಕ್ಷೇತ್ರ ಆಯ್ಕೆ ನಂತರದ ವಿಷಯ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದರು. ಪಕ್ಷದ ಆಂತರಿಕ ಚುನಾವಣೆಯ ಬಳಿಕ ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರಗಳಿಗೂ ಸಂಘಟನಾತ್ಮಕ ವೀಕ್ಷಕರಾಗಿ ನಾಯಕರು ಬಂದಿದ್ದಾರೆ. ಗದಗನಲ್ಲಿಯೂ ಮತದಾನದ ಮೂಲಕ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ. ಪಕ್ಷದ ಪದಾಧಿಕಾರಿಗಳು 3 ಅಭ್ಯರ್ಥಿಗಳ …
Read More »ಚುನಾವಣಾ ಅಖಾಡದಿಂದ ಹಿಂದೆ ಸರಿದ ಯತೀಂದ್ರ ಸಿದ್ದರಾಮಯ್ಯ
ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ ವರುಣಾ ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಮೂಡಿತ್ತು. ಇದೀಗ ಯತೀಂದ್ರ ಸಿದ್ದರಾಮಯ್ಯ ಚುನಾವಣಾ ಅಖಾಡದಿಂದಲೇ ಹಿಂದೆ ಸರಿಯುವ ಮಾತುಗಳನ್ನಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ವರುಣಾ ಅಥವಾ ಬೇರೆ ಯಾವುದೇ …
Read More »ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ..!
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದ್ದು, ಸಿಲಿಂಡರ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಹೌದು, ಗ್ರಾಹಕರು ಹೋಟೆಲ್ ಗಳಲ್ಲಿ ಊಟ, ತಿಂಡಿ ತಿನ್ನಲು ಯೋಚನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ನಿರಂತರವಾಗಿ ಗ್ಯಾಸ್ ಬೆಲೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೋಟೆಲ್ ಮಾಲೀಕರು ತಿಂಡಿ, ಬೆಲೆ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಏರಿಕೆ …
Read More »ಮಹಾವೀರ ಜಯಂತಿ’ಗೆ ‘ಸಾರ್ವತ್ರಿಕ ರಜೆ’ ದಿನಾಂಕ ಬದಲು: ಏ.3ರ ಬದಲು ಏ.4ಕ್ಕೆ ರಜೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಈಗಾಗಲೇ 2023ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ( Public Holiday List ) ಪ್ರಕಟಿಸಲಾಗಿತ್ತು. ಈ ವೇಳೆಯಲ್ಲಿ ಏ.3ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ಘೋಷಿಸಿತ್ತು. ಈ ರಜೆಯನ್ನು ಬದಲಾವಣೆ ಮಾಡಿದೆ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು, 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ …
Read More »ಐಪಿಎಲ್ ನಡವೆಯೇ ಧೋನಿ ಕಾಲು ಸ್ಪರ್ಶಿಸಿ ನಮಸ್ಕರಿಸಿದ ಅರ್ಜಿತ್ ಸಿಂಗ್! ಫೋಟೊ ವೈರಲ್
ಗುಜರಾತ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹದಿನಾರನೇ ಆವೃತ್ತಿಯು ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್) ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ (ಜಿಟಿ) ತಂಡವನ್ನು ಎದುರಿಸುತ್ತಿದೆ. ಜಿಟಿ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ರುತುರಾಜ್ ಗಾಯಕ್ವಾಡ್ 50 ಎಸೆತಗಳಲ್ಲಿ 92 ರನ್ ಗಳಿಸಿದ್ದರಿಂದ CSK ಬೃಹತ್ ಮೊತ್ತವನ್ನು ದಾಖಲಿಸುವ ಹಾದಿಯಲ್ಲಿತ್ತು ಆದರೆ GT ಬೌಲರ್‌ಗಳಿಂದ ಕೆಲವು ಉತ್ತಮ …
Read More »ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಶಿಕ್ಷಕ; ಅಮಾನತ್ತು ಆದೇಶ
ವಿಜಯಪುರ: ಚುನಾವಣಾ ಕರ್ತವ್ಯದಲ್ಲಿ ಲೋಪವೆಸಗಿದ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಬಿದ್ದಿದೆ. ಬರಟಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರುಗಳಾದ ಅಪ್ಪಣ್ಣ ಸವದಿ ಹಾಗೂ ಕಳ್ಳಕವಟಗಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಅಲ್ಲಾಬಕ್ಷ ಇವರನ್ನು ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದದ್ದಕ್ಕೆ ಸೇವೆಯಿಂದ ಅಮಾನತ್ತು ಮಾಡಿ ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ನೀಡಿದ್ದಾರೆ. ಕಳೆದ 23-3-2023ರಿಂದ ಇಲ್ಲಿಯವರೆಗೆ ಅರ್ಜುಣಗಿ ಮತ್ತು ಚಿಕ್ಕಗಲಗಲಿ ಚೆಕ್‍ಪೋಸ್ಟ ಗಳಲ್ಲಿ …
Read More »ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನ್ಯಾಯಾಂಗ ಬಂಧನಕ್ಕೆ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶಾಸಕರು ಜೈಲುಪಾಲಾಗಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಕಸ್ಟಡಿಗೆ ವಹಿಸಿ ಈ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿತ್ತು. ಇಂದು ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ನ್ಯಾಯಾಂಗ …
Read More »ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ಥಳ ಪರಿಶೀಲನೆ ನಡೆಸಿದರು.
ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ಥಳ ಪರಿಶೀಲನೆ ನಡೆಸಿದರು. ಹಿರಿಯ ಪೊಲಿಸ್ ಅಧಿಕಾರಿಗಳೊಂದಿಗೆ ನಗರದ ಆರ್.ಪಿ.ಡಿ. ಕಾಲೇಜಿಗೆ ಶನಿವಾರ(ಏ.1) ಭೇಟಿ ನೀಡಿದ ಅವರು, ಸ್ಟ್ರಾಂಗ್ ರೂಮ್ ಮತ್ತು ಮತ ಎಣಿಕೆ ಕೇಂದ್ರ ಸ್ಥಾಪನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಕಾಲೇಜಿನ ಆವರಣದಲ್ಲಿರುವ ವಿವಿಧ ಕಟ್ಟಡಗಳನ್ನು ಪರಿಶೀಲಿಸಿದ ಅವರು, ಕಳೆದ ಚುನಾವಣೆಯಲ್ಲಿ ಮಾಡಲಾಗಿದ್ದ ವ್ಯವಸ್ಥೆಗಳ …
Read More »ಕಿತ್ತೂರು ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ ಬೈಕ್ ರ್‍ಯಾಲಿ ಬೈಕ್ ರ್‍ಯಾಲಿ
ಕಿತ್ತೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಪಂಚಾಯಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಶನಿವಾರದಂದು ಕಿತ್ತೂರು ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬೈಕ್ ರ್‍ಯಾಲಿ ನಡೆಸಲಾಯಿತು. ಕಿತ್ತೂರು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಬೈಕ್ ರ್‍ಯಾಲಿಗೆ ಕಿತ್ತೂರು ಮತಕ್ಷೇತ್ರದ ಚುನಾವಣಾಧಿಕಾರಿ ರೇಷ್ಮಾ ಹಾನಗಲ್ ಹಾಗೂ ತಾಲೂಕು ಸ್ವೀಪ ಸಮಿತಿ ಅಧ್ಯಕ್ಷ, ತಾಪಂ ಕಾರ್ಯನಿರ್ವಾಹಕ …
Read More »