Breaking News

Daily Archives: ಏಪ್ರಿಲ್ 1, 2023

ವಿ.ಎಸ್.ಸಾಧುನವರ್ ಒಡೆತನದ ಕಿತ್ತೂರು ರಾಣಿ ಚೆನ್ನಮ್ಮ ಸೊಸೈಟಿ ಮೇಲೆ ಐಟಿ ದಾಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕಾಂಗ್ರೆಸ್ ಮುಖಂಡನ ಒಡೆತನದ ಸೊಸೈಟಿ, ಬ್ಯಾಂಕ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬೈಲಹೊಂಗಲ ಕಾಂಗ್ರೆಸ್ ಮುಖಂಡ ವಿ.ಎಸ್.ಸಾಧುನವರ್ ಒಡೆತನದ ಕಿತ್ತೂರು ರಾಣಿ ಚೆನ್ನಮ್ಮ ಸೊಸೈಟಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿರುವ ಹಣ, ಚಿನ್ನದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸಾಧುನವರ್ 2019 ರ ಲೋಕಸಭಾ ಚುನವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

Read More »

ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು 3 ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು. ಪ್ರವಾಹ ಬಂದ ಸಂದರ್ಭದಲ್ಲಿ ನದಿ ತೀರದ ಗ್ರಾಮಗಳು ಮುಳುಗಡೆಯಾಗಿದ್ದರಿಂದ ಇನ್ನು ಕೆಲವರಿಗೆ ಮನೆಗಳು ಮಂಜೂರಾಗಿಲ್ಲ. ದಂಡಿನ ಮಾರ್ಗ …

Read More »

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …

Read More »

ಕರ್ನಾಟಕ ವಿಧಾನಸಭಾ ಚುನಾವಣೆ-2023 -ನೀತಿ ಸಂಹಿತೆ ಜಾರಿ, ಜಿಲ್ಲೆಯ ಎಲ್ಲೆಡೆ ಕಟ್ಟೆಚ್ಚರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೆ10 ಮತದಾನ ಹಾಗೂ ಮೆ 13 ರಂದು ಮತ ಎಣಿಕೆ ನಡೆಯಲಿವೆ. ಹಾಗಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.29) ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಮತದಾನ ದಿನಾಂಕ ಘೋಷಣೆಯಾಗಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ …

Read More »

ಬುದ್ದಿ ಹೇಳಿದ್ದಕ್ಕೆ ನೇಣು ಬಿಗಿದುಕೊಂಡ 9 ವರ್ಷದ ʼರೀಲ್ಸ್ ಕ್ವೀನ್ʼ

ಓದುವಂತೆ ತಂದೆ ಬುದ್ಧಿವಾದ ಹೇಳಿದ್ದಕ್ಕೆ 9 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ದುರಂತ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮೃತ ಬಾಲಕಿ ತನ್ನ ರೀಲ್ಸ್ ಮೂಲಕ ʼರೀಲ್ಸ್ ಕ್ವೀನ್ʼ ಎಂಬ ಖ್ಯಾತಿ ಗಳಿಸಿದ್ದಳು. ಪ್ರತೀಕ್ಷಾ ಎಂದು ಗುರುತಿಸಲಾದ 4ನೇ ತರಗತಿಯ ಬಾಲಕಿ ಕಳೆದ ಆರು ತಿಂಗಳಲ್ಲಿ ಸುಮಾರು 70 ರೀಲ್‌ಗಳನ್ನು ಮಾಡಿದ್ದಳು. ಅವಳನ್ನು ನೆರೆಹೊರೆಯವರು ‘ರೀಲ್ಸ್ ಕ್ವೀನ್’ ಎಂದು ಕರೆಯುತ್ತಿದ್ದರು. ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ …

Read More »

ಬರೆದಿಟ್ಟುಕೊಳ್ಳಿ ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ ಬರುತ್ತೇವೆ

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಕಾವೇರಿದ್ದು, ದಿನಾಂಕ ನಿಗದಿಯಾದ ಬಳಿಕ ಇದು ಮತ್ತಷ್ಟು ಚುರುಕುಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಇದರ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.   ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರೆದಿಟ್ಟುಕೊಳ್ಳಿ ನೂರಕ್ಕೆ ನೂರರಷ್ಟು ನಾವೇ …

Read More »

ರಾಜ್ಯಾದ್ಯಂತ ಚುನಾವಣಾ ಅಧಿಕಾರಿಗಳ ಭರ್ಜರಿ 17 ಕೆಜಿ ಚಿನ್ನ ಹಾಗೂ ಬೆಳ್ಳಿಯನ್ನ ವಶಕ್ಕೆ ಪಡೆದ ಪೊಲೀಸರು

ಅತ್ತ ಬಣ್ಣ ಬಣ್ಣದ ಗಿಫ್ಟ್​ಗಳನ್ನ ನೀಡಿ ಜನನಾಯಕರು ಮತಬೇಟೆಗೆ ಸಜ್ಜಾಗಿದ್ರೆ ಇತ್ತ ಪೊಲೀಸರು ಅವರನ್ನೇ ಬೇಟೆಯಾಡ್ತಿದ್ದಾರೆ. ರಾಜ್ಯದ ಎಂಟು ದಿಕ್ಕುಗಳ ಮೇಲೂ ಕಣ್ಣಿಟ್ಟಿರೋ ಚುನಾವಣಾ ಆಯೋಗ ಅಕ್ರಮಗಳಿಗೆ ಕಡಿವಾಣಹಾಕಿ ಕೋಟಿ ಕೋಟಿ ಹಣವನ್ನ ಸೀಜ್​ ಮಾಡ್ತಿದೆ.   ರಾಜ್ಯದ ಅಷ್ಠ ದಿಕ್ಕುಗಳಲ್ಲೂ ವಿಧಾನ ಸಭಾ ಚುನಾವಣೆಯ ಕಾವು ಹಬ್ಬಿದೆ. ಮತದಾರರ ಮನವೊಲಿಸಿ ಮತಬೇಟೆಯಾಡಲು ನಾಯಕರು ಗಿಫ್ಟ್​ ಅಸ್ತ್ರದ ಮೊರೆಹೋಗ್ತಿದ್ದಾರೆ. ಹೀಗಾಗಿ ಜನಪ್ರತಿನಿಧಿಗಳ ಗಿಫ್ಟ್​ ದರ್ಬಾರ್​ಗೆ ಬ್ರೇಕ್​ ಹಾಕಿ ಚುನಾವಣಾ ಆಯೋಗ …

Read More »

ಕರ್ನಾಟಕ ವಿಧಾನಸಭಾ ಚುನಾವಣೆ : ಮೇ. 10 ರಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ( Karnataka Assembly Election 2023 ) ದಿನಾಂಕ ಪ್ರಕಟವಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ನಡೆಯಲಿದೆ. ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.   ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸಂಜೀವ್ ಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯೋಗದ ಮುಖ್ಯ …

Read More »

ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತುಮಕೂರು: ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ ಜಯಂತಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುವುದು. ಇಂದು ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ನಡೆಸಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ …

Read More »

BJPಯಿಂದ ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ;

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.     ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.   ಖೂಬಾ ಅವರು ಈ ಹಿಂದೆ ಕೂಡಾ ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು …

Read More »