Breaking News

Daily Archives: ಏಪ್ರಿಲ್ 12, 2023

ಮಾರಿಕಾಂಬಾ ದೇವಾಲಯದಲ್ಲಿ ಬಿ ಫಾರಂ ಅರ್ಪಿಸಿ ಪೂಜೆ ಸಲ್ಲಿಸಿದ

ಶಿರಸಿ: ಮಾಜಿ ‌ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರದ ಬಿ ಫಾರಂಗಳನ್ನು ಮಾರಿಕಾಂಬಾ ದೇವಾಲಯದಲ್ಲಿ ಪೂಜೆ‌ ಮಾಡಿಸಿದ ಘಟನೆ ಬುಧವಾರ ನಡೆಯಿತು. ಬುಧವಾರ ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಜೆಡಿಎಸ್ ರ‍್ಯಾಲಿಗೆ ಚಾಲನೆ ಕೊಡುವ ಮೊದಲು ದೇವಿ ದರ್ಶನ ಪಡೆದು ಬಿ ಫಾರಂ ಪೂಜೆ ಸಲ್ಲಿಸಿದರು‌.   ಬಳಿಕ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಜೆಡಿಎಸ್ ಕಾರ್ಯಕರ್ತರು 50 ಅಡಿಗೂ ಎತ್ತರದ ಅನಾನಸ್ ಹಾರವನ್ನು ಕ್ರೇನ್ ಮೂಲಕ ಮಾಜಿ …

Read More »

ಸಚಿವ ಅಂಗಾರರಿಗೆ ಕೋಕ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ

ಸುಳ್ಯ: ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ನೀಡದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವ ಅವರು, ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ …

Read More »

ಹುಬ್ಬಳ್ಳಿ : ಪೂರ್ವ ಕ್ರಾಂತಿಕಿರಣ, ಕುಂದಗೋಳ ಎಂ.ಆರ್.ಪಾಟೀಲ ಸ್ಪರ್ಧೆ

ಹುಬ್ಬಳ್ಳಿ : ಬಿಜೆಪಿ ಪಕ್ಷದ ಟಿಕೆಟ್ ಫೈನಲ್ ಆಗಿದ್ದು, ಇದೀಗ ಬಿಡುಗಡೆಯಾಗಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ.ಕ್ರಾಂತಿ ಕಿರಣಗೆ ಬಿಜೆಪಿ ಟಿಕೆಟ್ , ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್.ಪಾಟೀಲಗೆ ಟಿಕೆಟ್ ದೊರೆತಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆತಂತಾಗಿದೆ.   ಗ್ರಾಮೀಣ ಭಾಗದಿಂದ ಶಾಸಕ ಅಮೃತ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸ್ಪರ್ಧೆಗೆ ಟಿಕೆಟ್ ಫೈನಲ್ ಆಗಿದ್ದು, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ …

Read More »

ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ?

ಮಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿರ್ಧರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ …

Read More »

ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ

ಬೆಳಗಾವಿ: ಅಥಣಿಯ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಸವದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸಿದ್ದು, ಈ ನಿಟ್ಟಿನಲ್ಲಿ ಲಕ್ಷ್ಮಣ ಸವದಿಯವರನ್ನು ಅವರ ಸ್ನೇಹಿತ ಮಾಜಿ ಶಾಸಕ ರಾಜು ಕಾಗೆ ಮೂಲಕವೇ …

Read More »