ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) 215 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದೆ. ‘ರಾಜ್ಯಾದ ಮೂಡಿಗೆರೆ, ಆಳಂದ, ಜೇವರ್ಗಿ, ಕೂಡ್ಲಗಿ, ಕೆಜಿಎಫ್, ಸಿರಾ, ಮಡಿಕೇರಿ ಸೇರಿದಂತೆ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಐ ಸ್ಪರ್ಧಿಸುತ್ತಿದ್ದು, ಉಳಿದ 215 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿಪಿಐ ಬೆಂಬಲಿಸಲಿದೆ’ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾಟಿ ಸುಂದರೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. …
Read More »Daily Archives: ಏಪ್ರಿಲ್ 23, 2023
2023: ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆ
ಧಾರವಾಡ: ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಂಡಾಯವೆದ್ದು ಧಾರವಾಡ ಗ್ರಾಮೀಣ-71 ರ ವಿಧಾನಸಭಾ ಮತಕ್ಷೇತ್ರಕ್ಕೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ತವನಪ್ಪ ಅಷ್ಟಗಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಠಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಬಿಜೆಪಿ ವರಿಷ್ಠರು ಮಣೆ ಹಾಕದೇ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಈ ಸಲವೂ ಟಿಕೆಟ್ ನೀಡಿದ್ದರಿಂದ ಅಷ್ಟಗಿ ಮುನಿಸಿಕೊಂಡಿದ್ದರು. ಇದಲ್ಲದೇ ನಿಗಮ ಮಂಡಳಿ …
Read More »ಎಲ್ಲೆಡೆ ವಾಹನಗಳ ತಪಾಸಣೆಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ
ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಧಿಕಾರಿಗಳು ಎಲ್ಲೆಡೆ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ಅಥವಾ ಗಿಫ್ಟ್ ಸಾಗಾಣಿಕೆ ತಡೆಯಲು ಕಟ್ಟೆಚ್ಚರ ವಹಿಸಲಾಗುತ್ತಿದೆ. ಈಚೆಗೆ ಹಾಸನ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಾಹನವನ್ನೂ ತಡೆದು ಪರಿಶೀಲನೆ ನಡೆಸಲಾಗಿದೆ. ನಿನ್ನೆ ಮತ್ತು ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಹೆಲಿಕಾಪ್ಟರನ್ನು ಸಹ ಪರಿಶೀಲನೆ ನಡೆಸಲಾಗಿದೆ. ಅದಕ್ಕೆ ಡಿ.ಕೆ.ಶಿವಕುಮಾರ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ …
Read More »ಪ್ರಚಾರಕ್ಕೆ ಬಂದ ಮುಖ್ಯಮಂತ್ರಿಗಳಿಗೆ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ವ್ಯಕ್ತಿ
ಬೆಂಗಳೂರು: ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಶಂಕರ್ ಪರ ಸಿಎಂ ಬಸವರಾಜ್ ಬೊಮ್ಮಾಯಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಶಂಕರ್ ಪರ ಸಿಎಂ ಬಸವರಾಜ್ ಬೊಮ್ಮಾಯಿ ಮತಯಾಚಿಸಿದ್ದು, ನೆಲಮಂಗಲದ ಐಬಿಯಿಂದ ನಡೆದ ರೊಡ್ ಶೋ ನಲ್ಲಿ ಸಿಎಂ ಭಾಗಿಯಾಗಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾನೆ. ಗ್ಯಾಸ್ ಬೆಲೆ ಏರಿಕೆಯಾಗಿದೆ, …
Read More »ಯಡಿಯೂರಪ್ಪ ಒಂದು ಶಕ್ತಿ -ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ವಿಜಯೇಂದ್ರ
ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನಪ್ರಿಯತೆ ಈಗಲೂ ಕುಗ್ಗಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಯಡಿಯೂರಪ್ಪನವರು ಒಂದು ಶಕ್ತಿ, ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯನ್ನು ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತಿದ್ದು ಪಕ್ಷ ಅಧಿಕಾರಕ್ಕೆ ಬಂದ ನಂತರ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ಶಾಸಕರ ಅಭಿಪ್ರಾಯ ಪಡೆದು ವರಿಷ್ಠರು …
Read More »ಇಂದು ಸಮಾಜದಲ್ಲಿ ಸತ್ಯ ಹೇಳುವವರಿಗೆ ಭಯ ಹುಟ್ಟಿಸಲಾಗುತ್ತಿದೆ: ಬಸವನಾಡಿನಲ್ಲಿ ರಾಹುಲ್ ಗಾಂಧಿ
ಬಾಗಲಕೋಟೆ: ಬಸವಣ್ಣ ಸತ್ಯದ ಪರವಾಗಿ ಹೋರಾಡಿದವರು. ಇಂದು ಸಮಾಜದಲ್ಲಿ ಸತ್ಯ ಹೇಳುವವರಿಗೆ ಭಯ ಹುಟ್ಟಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಕೂಡಲಸಂಗಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಬಸವಣ್ಣನವರ ಜಯಂತಿಯಲ್ಲಿ ಭಾಗಿಯಾಗಿರುವುದು ಖುಷಿ ಕೊಟ್ಟಿದೆ. ನನ್ನನ್ನು ಆಹ್ವಾನಿಸಿದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವ, ಶರಣ ತತ್ವವನ್ನು ಬಸವಣ್ಣ ರಕ್ಷಣೆ ಮಾಡಿದರು. ಪ್ರಜಾಪ್ರಭುತ್ವ, ಸಂಸತ್ತು ಎಲ್ಲದಕ್ಕೂ ಬಸವಣ್ಣ ಪ್ರೇರಣೆ. ಸಮಾಜದಲ್ಲಿ ಅಂಧತ್ವವಿದ್ದಾಗ ಬಸವಣ್ಣನವರ ಬೆಳಕಿನ ಹಾದಿ ತೋರಿದರು ಎಂದರು. ಇನ್ನೊಬ್ಬರನ್ನು …
Read More »ಬಿಜೆಪಿಯಿಂದ ನನಗೆ ಆಹ್ವಾನ ಬಂದಿತ್ತು:ರಮ್ಯಾ
ಬೆಂಗಳೂರು: ವಿಧಾನಸಭಾ ಚುನಾವಣೆ ಅಖಾಡ ದಿನ ದಿನವೂ ರಂಗೇರುತ್ತಿದೆ. ಕಾಂಗ್ರೆಸ್ ಸ್ಟಾರ್ ಪ್ರಚಾರಕಿ, ಮಾಜಿ ಸಂಸದೆ ನಟಿ ರಮ್ಯಾ, ತಮಗೆ ಬಿಜೆಪಿಯಿಂದ ಆಹ್ವಾನ ಬಂದಿತ್ತು ಎಂದು ಹೇಳಿದ್ದಾರೆ. ಇಂಗ್ಲೀಷ್ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ನಟಿ ರಮ್ಯಾ, ತಮಗೆ ಬಿಜೆಪಿಯ ಉನ್ನತ ನಾಯಕರೊಬ್ಬರು ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದರು. ಅಲ್ಲದೇ ಸಚಿವರನ್ನಾಗಿ ಮಾಡುತ್ತೇವೆ ಎಂದೂ ಆಫರ್ ನೀಡಿದ್ದರು ಎಂದಿದ್ದಾರೆ. ನಾನು ಕೆಲವು ಬಾರಿ ಕಾಂಗ್ರೆಸ್ ವಿರುದ್ಧ ಮಾತನಾಡಿದಾಗ ಬಿಜೆಪಿಯಿಂದ ಆಫರ್ ಬಂದಿತ್ತು. ಆದರೆ ನಾನು …
Read More »ಕೂಡಲಸಂಗಮಕ್ಕೆ ಆಗಮಿಸಿದ ರಾಹುಲ್ ಗಾಂಧಿ; ಕಾಂಗ್ರೆಸ್ ನಾಯಕನ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು
ಬಾಗಲಕೋಟೆ: ಬಾಗಲಕೊಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಕಾಂಗೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಬಸವ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಆಗಮಿಸಿದ್ದು, ಬಸವಣ್ಣನವರ ಐಕ್ಯ ಸ್ಥಳ, ಸಂಗಮೇಶ್ವರ ದೇವಾಲಯಗಳಿಗೆ ಭೇಟಿ ನೀಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ ಹುಬ್ಬಳ್ಳಿಯಿಂದ ಹುನಗುಂದ ಹೆಲಿಪ್ಯಾಡ್ ಗೆ ಬಂದಿಳಿಯುತ್ತಿದ್ದಂತೆ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ನ್ನು ತಪಾಸಣೆ ನಡೆಸಿ ಪರಿಶೀಲನೆ ನಡೆಸಿದರು.
Read More »ಮಾಧ್ಯಮ ಕಣ್ಗಾವಲು ಘಟಕಕ್ಕೆ ಚುನಾವಣಾ ವೀಕ್ಷಕರ ಭೇಟಿ ಜಾಹೀರಾತು, ಪೇಡ್ ನ್ಯೂಸ್ ಮೇಲೆ ನಿಗಾ ವಹಿಸಲು ಸೂಚನೆ
ಬೆಳಗಾವಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಗೋಕಾಕ ಹಾಗೂ ಯಮಕನಮರಡಿ ವಿಧಾನಸಭಾ ಮತಕ್ಷೇತ್ರಗಳ ಸಾಮಾನ್ಯ ವೀಕ್ಷಕರಾದ ಹಿರಿಯ ಐ.ಎ.ಎಸ್. ಅಧಿಕಾರಿ ಎಸ್.ಮಾಲಾರವಿಙ್ಞ ಅವರು ಭೇಟಿ ಪರಿಶೀಲಿಸಿದರು. ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮ ಗಳ ಪ್ರಸಾರವಾಗುವ ಸುದ್ದಿಗಳ ಮೇಲೆ ನಿಗಾ ವಹಿಸಬೇಕು. ಪೇಡ್ ನ್ಯೂಸ್ ಅಥವಾ ಜಾಹೀರಾತು ಕಂಡುಬಂದರೆ ಅದಕ್ಕೆ ಸಂಬಂಧಿಸಿದ ವೆಚ್ಚವನ್ನು ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೆ ಸೇರಿಸಬೇಕು ಎಂದು ನಿರ್ದೇಶನ ನೀಡಿದರು. ಇದಲ್ಲದೇ ನೀತಿಸಂಹಿತೆ ಉಲ್ಲಂಘನೆಗೆ …
Read More »ಚುನಾವಣೆ ಹೊತ್ತಲ್ಲಿ ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ. ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ. ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ : ಹುಬ್ಬಳ್ಳಿಯಲ್ಲಿ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ : …
Read More »