ಅಥಣಿ ಮತಕ್ಷೇತ್ರದ ವಿವಿಧ ಗ್ರಾಮಗಳ ಪಂಚಮಸಾಲಿ ಸಮಾಜದ ಮುಖಂಡರ ಸಭೆಯನ್ನು ಅಥಣಿಯ ಶಿವಣಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ದಿಲ್ಲಿಗೆ ಮೋದಿ ಅಥಣಿಗೆ ಸವದಿ ಘೋಷಣೆ ಹಾಕಿದ ಪಂಚಮಸಾಲಿ ಮುಖಂಡರು. ಈ ವೇಳೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ2023 ಚುನಾವಣೆ ಈಗ ಘೋಷಣೆ ಆಗಿದೆ. ಅಥಣಿ ಮತಕ್ಷೇತ್ರದ ಪಂಚಮಸಾಲಿ ಸಮಾಜದ ಸಭೆಗೆ ನನನ್ನು ಕರೆದಿದ್ದರು. ಮೂರನೆ ತಾರೀಖು ಈ ಸಭೆ ನಿಗದಿಯಾಗಿತ್ತು. …
Read More »Daily Archives: ಏಪ್ರಿಲ್ 28, 2023
ಮೋದಿ ಬಂದ ನಂತರ ಇಡೀ ವಾತಾವರಣವೇ ಬದಲಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ
ಧಾರವಾಡ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 12 ರ್‍ಯಾಲಿಗಳನ್ನು ನಡೆಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಧಾರವಾಡದ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಪರ ಪ್ರಚಾರ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೋದಿ ಬಂದ ಬಳಿಕ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ವಾತಾವರಣ ಬದಲಾಗಲಿದೆ. ಹೀಗಾಗಿ ಕಾಂಗ್ರೆಸ್‌ನವರು ಮೈಕೈ ಪರಚಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ನಿಂದ ಯಾವುದೇ ಅಸ್ತ್ರ ಪ್ರಯೋಗ …
Read More »ಹಿರೇಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ
ಬೆಳಗಾವಿ: ಹಿರೇಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ …
Read More »ಉಚಿತ್ ಬಸ್ ಸೇವೆ ನೀಡುವ ಕಾಂಗ್ರೆಸ್ನ 5ನೇ ಭರವಸೆ ಅವೈಜ್ಞಾನಿಕ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆಯ ನೀಡುವ ಭರವಸೆ ನೀಡಿ ಕಾಂಗ್ರೆಸ್ 5ನೇ ಗ್ಯಾರೆಂಟಿ ಯೋಜನೆ ಘೋಷಿಸಿದೆ. ಈ ಬಗ್ಗೆ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಮಂಗಳೂರು: ರಾಹುಲ್ ಗಾಂಧಿಯಿಂದ ಮಂಗಳೂರಿನಲ್ಲಿ ಕಾಂಗ್ರೆಸ್ನ 5ನೇ ಭರವಸೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇದೊಂದು ಅವೈಜ್ಞಾನಿಕ ಭರವಸೆ ಎಂದು ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು ಕಾಂಗ್ರೆಸ್ ಗೆಲ್ಲೊದೇ ಗ್ಯಾರಂಟಿ ಇಲ್ಲ, ಕಾಂಗ್ರೆಸ್ನದ್ದೇ ಗ್ಯಾರಂಟಿ …
Read More »ಬರಾರಿ ಮಾರ್ಕೆಟ್ನಲ್ಲಿ ಗುಂಡಿನ ಸದ್ದು .ಜೆಡಿಯು ನಾಯಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿರುವ ಘಟನೆ ಬಿಹಾರದ ಕತಿಹಾರ್‌ನಲ್ಲಿ ನಡೆದಿದೆ.
ಕಳೆದ ರಾತ್ರಿ ಬರಾರಿ ಮಾರ್ಕೆಟ್ನಲ್ಲಿ ಗುಂಡಿನ ಸದ್ದು ಮೊಳಗಿದೆ. ಜನ ನೋಡು ನೋಡುತ್ತಿದ್ದಂತೆ ಜೆಡಿಯು ನಾಯಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿರುವ ಘಟನೆ ಬಿಹಾರದ ಕತಿಹಾರ್‌ನಲ್ಲಿ ನಡೆದಿದೆ. ಕತಿಹಾರ್: ಬಿಹಾರದ ಕತಿಹಾರ್‌ನಲ್ಲಿ ಸ್ಥಳೀಯ ಜೆಡಿಯು ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗುರುವಾರ ಸಂಜೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಜಿಲ್ಲೆಯ ಬರಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಬರಾರಿ ಬಜಾರ್‌ನಲ್ಲಿ ಜೆಡಿಯು ಮುಖಂಡ ಕೈಲಾಶ್ ಮಹತೋ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ …
Read More »ಶಾಮನೂರು ಶಿವಶಂಕರಪ್ಪ ಪರ ಮತಯಾಚನೆ ಒಂಟೆ ಮೇಲೆ ಕೂತು ಮತಯಾಚನೆ ಮಾಡಿದ ಮೊಮ್ಮಗ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಪರ ಮೊಮ್ಮಗ ಸಮರ್ಥ್ ಶಾಮನೂರು ಮತಯಾಚನೆ ಮಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಪರ ಮತಯಾಚಿಸಿದ ಮೊಮ್ಮಗ ಸಮರ್ಥ್ ದಾವಣಗೆರೆ: ಚುನಾವಣಾ ಕಾವು ದಿನೇ ದಿನೇ ಏರುತ್ತಿದೆ. ಮತದಾನಕ್ಕೆ ಕೆಲವು ದಿನಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳು ಹಾಗೂ ಅವರ ಕುಟುಂಬಸ್ಥರು ಕ್ಷೇತ್ರಗಳಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಪ್ರಚಾರ ಮಾಡ್ತಿದ್ದಾರೆ. ತಮಗೆ ಆಶೀರ್ವದಿಸುವಂತೆ ಮತದಾರರ ಪ್ರಭು ಬಳಿ ಮನವಿ ಮಾಡ್ತಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ …
Read More »ಕಾಂಗ್ರೆಸ್ ನಾಯಕರು ಹೀಗೆಲ್ಲ ಮಾತನಾಡಿಯೇ, ʼದೇಶದಲ್ಲಿ ಪಕ್ಷ ದಿವಾಳಿʼಯಾಗಿದೆ : ಶಾಸಕ ಯತ್ನಾಳ್
ಬೆಳಗಾವಿ : ಚುನಾವಣಾ ಹೊಸ್ತಿಲಿನಲ್ಲಿ ʻಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆʼ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಹೀಗೆಲ್ಲ ಮಾತನಾಡಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗ್ತಿದೆ. ಈ ಹಿಂದೆ ಪ್ರಧಾನಿ ಮೋದಿ ಮೋದಿ ಬಗ್ಗೆ ಮಾತಾಡಿ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ …
Read More »ಲಂಚ ಸ್ವೀಕರಿಸುತ್ತಿದ್ದ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಬೆಂಗಳೂರು : ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ(BBMP Health Officer) ಲೋಕಾಯುಕ್ತ ಬಲೆ( Lokayukta Raid)ಗೆ ಬಿದ್ದಿದ್ದಾರೆ. ವಿಧಾನ ಸಭೆ ಚುನಾವಣೆ ಹೊಸ್ತಿಲಿನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಸಿ.ವಿ ರಾಮನ್ ನಗರದ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಸೊಳ್ಳೆ ನಿಯಂತ್ರಕ್ಕಾಗಿ ಶ್ರೀನಿವಾಸ್ ಎಂಬುವರು ಗುತ್ತಿಗೆ ಪಡೆದಿದ್ದರು. ಇದಕ್ಕಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ 80 ಸಾವಿರ …
Read More »ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಮಹಿಳೆಯರಿಗೆ ಸಾರಿಗೆ ಬಸ್ ಪ್ರಯಾಣ ಉಚಿತ: 5ನೇ ಗ್ಯಾರಂಟಿ
ಮಂಗಳೂರು: ಸಾರ್ವಜನಿಕ ಬಸ್ ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ. ಇದು ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆಯಾಗಿದ್ದು, ಈ ಐದೂ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಇಂದು ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದಂತ ಅವರು, ಮೊದಿ ಅವರೇ, ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಹೇಳಿದ್ದೀರಿ. ಈ ಸಂದರ್ಭದಲ್ಲಿ …
Read More »ಏ.29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ
ಬೆಂಗಳೂರು: ಏಪ್ರಿಲ್ 29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 97,15,109 ಮತದಾರರಿದ್ದಾರೆ. ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರಿದ್ದು, ಈ ಪೈಕಿ 50,24,775 …
Read More »