ಸುಳ್ಯ: ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ನೀಡದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವ ಅವರು, ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ …
Read More »Monthly Archives: ಏಪ್ರಿಲ್ 2023
ಹುಬ್ಬಳ್ಳಿ : ಪೂರ್ವ ಕ್ರಾಂತಿಕಿರಣ, ಕುಂದಗೋಳ ಎಂ.ಆರ್.ಪಾಟೀಲ ಸ್ಪರ್ಧೆ
ಹುಬ್ಬಳ್ಳಿ : ಬಿಜೆಪಿ ಪಕ್ಷದ ಟಿಕೆಟ್ ಫೈನಲ್ ಆಗಿದ್ದು, ಇದೀಗ ಬಿಡುಗಡೆಯಾಗಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ.ಕ್ರಾಂತಿ ಕಿರಣಗೆ ಬಿಜೆಪಿ ಟಿಕೆಟ್ , ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್.ಪಾಟೀಲಗೆ ಟಿಕೆಟ್ ದೊರೆತಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆತಂತಾಗಿದೆ. ಗ್ರಾಮೀಣ ಭಾಗದಿಂದ ಶಾಸಕ ಅಮೃತ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸ್ಪರ್ಧೆಗೆ ಟಿಕೆಟ್ ಫೈನಲ್ ಆಗಿದ್ದು, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ …
Read More »ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ?
ಮಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿರ್ಧರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ …
Read More »ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ
ಬೆಳಗಾವಿ: ಅಥಣಿಯ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಸವದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸಿದ್ದು, ಈ ನಿಟ್ಟಿನಲ್ಲಿ ಲಕ್ಷ್ಮಣ ಸವದಿಯವರನ್ನು ಅವರ ಸ್ನೇಹಿತ ಮಾಜಿ ಶಾಸಕ ರಾಜು ಕಾಗೆ ಮೂಲಕವೇ …
Read More »ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ
ಬೆಳಗಾವಿ: ಗೋಕಾಕ್- ವಿಧಾನ ಸಭಾ ಕ್ಷೇತ್ರದ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ ಮಾಡಲಾಗಿದೆ. ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (DCC Bank Belagavi) ರವರು ಯಾವುದೇ ಸಕ್ಷಮ ಪ್ರಾಧಿಕಾರ ಅನುಮತಿ ಪಡೆಯದೆ ಮತ್ತು ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲನೆ ಮಾಡದೇ 5 ಕೋಟಿ ಹಣವನ್ನು ವರ್ಗಾವಣೆ ಮಾಡುವಾಗ ಪೊಲೀಸರು ಹಾಗೂ ಎಫ್ ಎಸ್ ಟಿ …
Read More »ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚ
ನವದೆಹಲಿ : ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಹಲವು ಅಚ್ಛರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚಟ್ ಸಿಕ್ಕಿದೆ. ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಬದಲಿಗೆ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಸವದತ್ತಿಯಲ್ಲಿ ದಿ.ಆನಂದ ಮಾಮನಿ ಪತ್ನಿ ರತ್ನಾ ಮಾಮನಿ, ಹುಕ್ಕೇರಿಯಲ್ಲಿ ಉಮೇಶಕತ್ತಿ ಪುತ್ರ ನಿಖಿಲ್ ಕತ್ತಿ ಹಾಗೂ ಹುಕ್ಕೇರಿಯಲ್ಲಿ ರಮೇಶ ಕತ್ತಿಗೆ ಟಿಕೆಟ್ ನೀಡಲಾಗಿದೆ. …
Read More »ಅಭಿವೃದ್ದಿ ಹರಿಕಾರನಿಗೆ ಮತ್ತೊಮ್ಮೆ ಜನಸೇವೆ ಮಾಡುವ ಅವಕಾಶ…
ಗೋಕಾಕ: ಅರಭಾವಿ ಕ್ಷೇತ್ರದ ಅಭಿವೃದ್ಧಿ ಹರಿಕಾರ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಸರ್ಕಾರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಇಂದು ಅಧಿಕೃತವಾಗಿ ಟಿಕೆಟ್ ನೀಡುವ ಮೂಲಕ ಕಾರ್ಯಕರ್ತರಲ್ಲಿ ಮತ್ತೊಂದು ಉತ್ಸಾಹ ತುಂಬಿದೆ ಸಂಜೆಯಷ್ಟೇ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ ಮಾತು ಸತ್ಯ ವಾಗಿದೆ ಲಕ್ಷಾಂತರ ಜನರ ಅಭಿಮಾನಿ ದೇವರು ಆದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸೋಲಿಸುವ ತಾಕತ್ತು ಯಾರಿಗೂ ಇಲ್ಲ ಎಂಬ ಮಾತು ಜಗ ಜಾಹೀರ ವಾಗಿದೆ ಜನರ ಪ್ರೀತಿ ಅನುಕಂಪ ಪ್ರೀತಿ …
Read More »ಟಿಕೆಟ್ ಸಿಕ್ಕಾಯ್ತ ಇನ್ನೇನು ಗುಲಾಲ ಹಾರಸೋದ ಒಂದೇ ಬಾಕಿ…
ಬೆಳಗಾವಿ: ರಮೇಶ್ ಜಾರಕಿಹೊಳಿ ಗೋಕಾಕ ಬೆಳಗಾವಿ ಅಷ್ಟೇ ಅಲ್ಲ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಕೂಡ ಅವರ್ ಹೆಸರು ಅಜರಾಮರವಾಗಿ ಇದೆ ಎಂಬುದಕ್ಕೆ ಇವತ್ತಿನ ಬಿಡುಗಡೆ ಯಾದ ಪಟ್ಟಿಯೇ ಸಾಕ್ಷಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅನೇಕ ಊಹಾ ಪೋಹ ಗಳು ಇದ್ದರು ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲದೆ ಬೆಂಬಲಿಗರಿಗೆ ಕೂಡ ವಿಧಾನಸಭಾ ಟಿಕೆಟ್ ಕೊಡಿಸುವುದ ರಲ್ಲಿ ಯಶಸ್ವಿ ಯಾಗಿದ್ದಾರೆ ಸಾಹುಕಾರ ಗೆ ಜಯ ಸಿಕ್ಕಿದೆ ಇನ್ನೇನು ಗುಲಾಲ ಹಾರಸೊದ ಒಂದೇ …
Read More »ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದ್ದು, ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸುವುದಾಗಿ ತಿಳಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭ್ಯರ್ಥಿಗಳ ಹೆಸರು ಘೋಷಿಸಿದರು. 52 ಹೊಸ ಮುಖಗಳಿಗೆ ಅವಕಾಶ. ಒಬಿಸಿ -32, ಎಸಿ …
Read More »ಕೆಲಸದ ಆಮಿಷವೊಡ್ಡಿ ವಂಚನೆ: ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸುಧೀರ್ ವಿಚಾರಣೆ
ಬೆಂಗಳೂರು: ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್ ಮನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಅವರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ‘ವಂಚನೆಗೀಡಾಗಿರುವ ಯುವತಿ ಸೇರಿ 21 ಮಂದಿ ದೂರು ನೀಡಿದ್ದಾರೆ. ಅದರನ್ವಯ ಕಂಪನಿಯ ಸಂಸ್ಥಾಪಕರಾದ ಸುಧೀರ್ ಸೇರಿ 23 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ‘ಪ್ರಕರಣ …
Read More »