ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ ಬಸ್ ಒಂದರಲ್ಲಿ ಮುಂಬೈನಿಂದ ಬರುತ್ತಿದ್ದ ಪ್ರಯಾಣಿಕನಲ್ಲಿದ್ದ ಹಣವನ್ನು ವಶಕ್ಕೆ ಪಡೆದರು. ಈ ಹಣಕ್ಕೆ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಬುಧವಾರ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 3.61 ಕೇಟಿ ರೂ. ನಗದು ಹಾಗೂ 60.47 ಲಕ್ಷ …
Read More »Monthly Archives: ಏಪ್ರಿಲ್ 2023
ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ
ಬೆಂಗಳೂರು: ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ. ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು …
Read More »ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ.. ಚೇತನ್ ಅಹಿಂಸಾ ಏನ್ ಹೇಳಿದ್ರು ಗೊತ್ತಾ?
ಬೆಂಗಳೂರು : ಚೇತನ್ ಅಹಿಂಸಾ ಸದಾ ಒಂದಲ್ಲ ಒಂದು ವಿಚಾರಕ್ಕೆ ಮುನ್ನೆಲೆಗೆ ಬಂದೇ ಬರುತ್ತಾರೆ. ಅದರಲ್ಲೂ ಅವರು ಮಾಡುವ ಟ್ವೀಟ್‌ಗಳು ಸೆನ್ಸೇಷನ್ ಹುಟ್ಟು ಹಾಕುತ್ತವೆ. ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿರುವ ಚೇತನ್, ಇದೀಗ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡಿದ್ದರ ಬಗ್ಗೆಯೂ ಟ್ವೀಟ್ ಮಾಡಿದ್ದಾರೆ. ಸುದೀಪ್ ಬಿಜೆಪಿ ಸೇರಲಿದ್ದಾರೆ, ಚುನಾವಣೆಗೂ ಸ್ಪರ್ಧಿಸಲಿದ್ದಾರೆ ಎಂಬ ಅನೇಕ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದವು. ಇದೆಲ್ಲದಕ್ಕೂ ಇಂದು ಸುದೀಪ್ ಸ್ಪಷ್ಟನೆ ಕೊಟ್ಟಾಗಿದೆ. ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ …
Read More »ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ
ಬೆಂಗಳೂರು: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಡೃ ಸರ್ಕಾರ ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ …
Read More »ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಸಾವು
ಗದಗ: ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಸಾವು ಎಂಬ ಆರೋಪ ಆಗಾಗ ಕೇಳಿ ಬರುತ್ತಲಿರುತ್ತದೆ. ಅಂಥ ಪ್ರಕರಣಗಳ ಪಟ್ಟಿಗೆ ಇಂದು ಇನ್ನೊಂದು ಸೇರ್ಪಡೆ ಆಗಿದೆ. ಇಲ್ಲಿ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಹೊಡೆದಿದ್ದು, ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ ಎಂದೂ ಹೇಳಲಾಗಿದೆ. ಗದಗ ಜಿಮ್ಸ್ನಲ್ಲಿ ಈ ಪ್ರಕರಣ ನಡೆದಿದೆ. ಹೆರಿಗೆಗೆ ಎಂದು ಬಂದಿದ್ದ ಮಹಿಳೆಯನ್ನು ಹೆರಿಗೆಗೆ ಒಳಪಡಿಸದೆ ವಿಳಂಬ ಮಾಡಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ, ಹೆರಿಗೆ ಮಾಡಿಸದೆ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಬಾರಿಸಿದ್ದಾರೆ …
Read More »ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ
ರಾಮನಗರ: ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಪೊಲೀಸರು ರಾಜಸ್ತಾನದಲ್ಲಿ ಬಂಧಿಸಿದ್ದಾರೆ. ಕನಕಪುರದ ಸಾತನೂರು ಬಳಿ ಜಾನುವಾರು ರಕ್ಷಣೆ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನವಾಗಿದೆ. ಜಾನುವಾರು ವ್ಯಾಪಾರಿ ಇದ್ರೀಷ್ ಪಾಷ ಎಂಬುವವರು ಅನುಮಾನಸ್ಪದವಾಗಿ ಮೃತಪಟ್ಟಿದ್ದರು. ಘಟನೆ ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ತಲೆಮರೆಸಿಕೊಂಡಿದ್ದರು. ಆರೋಪಿಗಳ ಬಂಧನಕ್ಕೆ …
Read More »ಬೆಳಗಾವಿ ಉತ್ತರದಲ್ಲಿ ಮುಗಳಿ ಹಾಳ ಅವರ್ ಭರ್ಜರಿ ಪ್ರಚಾರ ಇಬ್ಬರ ಜಗಳದಲ್ಲಿ 3ನೆ ಯವರಿಗೆ ಲಾಭ ಆಗುವ ಸಾಧ್ಯತೆ?
ಬೆಳಗಾವಿ: ವಿಧಾನ ಸಭಾ ಚುನಾವಣೆ ಬರುತ್ತಿದ್ದಂತೆ ಎಲ್ಲಾಕಡೆ ಪ್ರಚಾರ ಜೋರಾಗಿಯೇ ಇದೆ ಒಂದು ಕಡೆ ಬಿಜೆಪಿ ಯಲ್ಲಿ ಒಳ ಜಗಳ ಇದ್ದರೆ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ ಇಲ್ಲಿ ಜೆಡಿಎಸ್ ನಿಂದ ಮುಗಳಿಹಾಳ ಅವರು ಸ್ಪರ್ಧೆಗೆ ರೆಡಿ ಆಗಿದ್ದಾರೆ ಇವಾಗಿನಿಂದಲೆ ಕ್ಷೇತ್ರಗಳಲ್ಲಿ ತಮ್ಮ ಪ್ರಚಾರ ವನ್ನಾ ಪ್ರಾರಂಭ ಮಾಡಿದ್ದಾರೆ ಬೆಳಗಾವಿ ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ರೈತ ಸಂಘದ ಚುನಪ್ಪ ಪೂಜಾರಿ ಅವರು ಕೂಡ ಸಾಥ್ ನೀಡಿದ್ದಾರೆ ವಿಧಾನ ಸಭೆ …
Read More »ಬುಧವಾರ ಮತ್ತಷ್ಟು ನಗದು ಹಣ ವಶ
ಬೆಳಗಾವಿ : ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಮತ್ತಷ್ಟು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರ ಬೆಳಗಿನ ಜಾವ ಹಿರೇಬಾಗೇವಾಡಿ ಟೋಲ್ ನಾಕಾ ಬಲಿ 2 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಸಂಜೆ ಹಿಟ್ನಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದ ರೂ.11,49,000 ನಗದನ್ನು ಎಸ್‌ಎಸ್‌ಟಿ, ಎಫ್‌ಎಸ್‌ಟಿ, ಎಂಸಿಸಿ ನೋಡಲ್ ಅಧಿಕಾರಿ, ಸಿಪಿಐ, ಹುಕ್ಕೇರಿ ಮತ್ತು ಸಿಪಿಐ ಸಂಕೇಶ್ವರ ತಂಡದ ಸಮನ್ವಯದಲ್ಲಿ ವಶಪಡಿಸಿಕೊಂಡಿದ್ದಾರೆ. …
Read More »ದಾಖಲೆ ರಹಿತ 95ಲಕ್ಷ ರೂ. ನಗದು, 80,252 ರೂ ಮೌಲ್ಯದ 188.28ಲೀ. ಮದ್ಯ ವಶ
ಗದಗ: ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಜಿಲ್ಲೆಯ ವಿವಿಧೆಡೆ ದಾಖಲೆ ರಹಿತ 95 ಲಕ್ಷ ರೂ. ನಗದು ಹಾಗೂ 80,252 ರೂ ಮೌಲ್ಯದ 188.28 ಲೀ. ಮದ್ಯ ವಶಪಡಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ದಂಡಿನ ದುರ್ಗಮ್ಮ ದೇವಸ್ಥಾನದ ಹತ್ತಿರ ತೆರೆಯಲಾದ ಚೆಕ್‌ಪೋಸ್ಟ್ನಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ 95 ಲಕ್ಷ ರೂ. ನಗದು ಪತ್ತೆಯಾಗಿದೆ. ನಗದು ಬ್ಯಾಂಕಿಗೆ ಸಂಬಂಧಿಸಿದ್ದಾಗಿದೆಯೇ …
Read More »ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ
ಬೆಂಗಳೂರು : ಬೆಂಗಳೂರಿನ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಮೃತ ಮಹಿಳೆ ಜಯಮಹಲ್ ಲೇಔಟ್ ನಿವಾಸಿ ಜಯಂತಿ ಎಂದು ತಿಳಿದುಬಂದಿದೆ. ಮೃತ ಮಹಿಳೆ ಗಂಡ ಬ್ಯೂಟಿ ಪಾರ್ಲರ್ ಮಹಿಳೆ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದನು ಎಂದು ಆರೋಪಿಸಲಾಗಿದೆ. ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆಕೆಯ ಶವವನ್ನು ಆಸ್ಪತ್ರೆಗೆ ತಂದು …
Read More »