Breaking News

Daily Archives: ಮೇ 3, 2023

ನಾಲಾಯಕ್, ವಿಷಕನ್ಯೆ, ಅರೆಹುಚ್ಚ, ವಿಷಸರ್ಪ..: ಬೈಗುಳ ರಾಜಕೀಯಕ್ಕೆ ಚು.ಆಯೋಗ ಹೇಳಿದ್ದೇನು

ಬೆಂಗಳೂರು: ಚುನಾವಣಾ ರಣಕಣದಲ್ಲಿ ಮತ ಪ್ರಚಾರ ಕಾವೇರುತ್ತಿದೆ. ಎಲ್ಲಾ ಅಭ್ಯರ್ಥಿಗಳು ಬಿರುಸಿನ ಕ್ಯಾಂಪೇನ್‌ನಲ್ಲಿ ತೊಡಗಿದ್ದಾರೆ. ಜಿದ್ದಾಜಿದ್ದಿನ ಪೈಪೋಟಿಯ ಹೋರಾಟದಲ್ಲಿ ಅಭ್ಯರ್ಥಿಗಳಿಂದ ಪರಸ್ಪರ ವಿವಾದಾತ್ಮಕ ಹೇಳಿಕೆಗಳೂ ಸದ್ದು ಮಾಡುತ್ತಿವೆ. ರಾಜಕಾರಣಿಗಳು ಒಬ್ಬರ ಮೇಲೊಬ್ಬರು ತೀಕ್ಷ್ಣ ಟೀಕೆಗಳನ್ನು ಮಾಡುತ್ತಿದ್ದಾರೆ.‌ ಬಿಜೆಪಿ ಮತ್ತು ಕಾಂಗ್ರೆಸ್ ‌ನಡುವಿನ ಟೀಕಾಸ್ತ್ರಗಳು ಇನ್ನೂ ಜೋರಾಗಿವೆ. ವಿವಾದಿತ ಹೇಳಿಕೆಗಳ ವಿರುದ್ಧ ಚುನಾವಣಾ ಆಯೋಗಕ್ಕೂ ಪರಸ್ಪರ ದೂರುಗಳನ್ನು ದಾಖಲಿಸಲಾಗುತ್ತಿದೆ. ಬಹಿರಂಗ ಪ್ರಚಾರಕ್ಕೆ ಇನ್ನಿರುವುದು ಆರು ದಿನ. ರಾಜಕೀಯ ಪಕ್ಷಗಳ ನಾಯಕರ ಮಾತಿನ ಭರಾಟೆ …

Read More »

ಸಮಾಜದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಬಜರಂಗದಳ ನಿಷೇಧಿಸುವ ಉದ್ದೇಶ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬಜರಂಗದಳ ಇಡೀ ದೇಶದಲ್ಲಿ ಇರುವ ಸಂಘಟನೆಯಾಗಿದ್ದು, ಕಾಂಗ್ರೆಸ್​ಗೆ ದೇಶದಲ್ಲಿ ಅಧಿಕಾರವೇ ಇಲ್ಲ, ಅದನ್ನು ಹೇಗೆ ನಿಷೇಧಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಬಜರಂಗದಳ ನಿಷೇಧಿಸುವ ಬಗ್ಗೆ ಕಾಂಗ್ರೆಸ್​​​​​​ನವರು ಮಾತುಗಳನ್ನು ಆಡಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್’ನ ಪ್ರಣಾಳಿಕೆ ಮೋಸದ ಪ್ರಣಾಳಿಕೆ, ಜನರನ್ನು ಮರಳು ಮಾಡುವ ಪ್ರಣಾಳಿಕೆ. ಜನರು ಇದನ್ನು ದಿಕ್ಕರಿಸಲಿದ್ದಾರೆ. ನಾವು ಈಗಾಗಲೇ ಮಾಡಿದ …

Read More »

ನಾನು ಮುಖ್ಯಮಂತ್ರಿ ಆಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ:ಸಿದ್ದರಾಮಯ್ಯ

ಬಾಗಲಕೋಟೆ: ನಾನು ಮುಖ್ಯಮಂತ್ರಿ ಆಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಾದಾಮಿ ಪಟ್ಟಣದ ಕಾಳಿದಾಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಮುಖ್ಯಮಂತ್ರಿ ಆಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ. ಭೀಮಸೇನ ಚಿಮ್ಮನಕಟ್ಟಿ ಅವರನ್ನು ಗೆಲ್ಲಿಸಿ. ಬಾದಾಮಿ ಜನತೆಗೆ ನಾನು ಸದಾ ಚಿರಋಣಿ …

Read More »

ಮಂಗಲಾ‌ ಅಂಗಡಿ, ಈರಣ್ಣ ಕಡಾಡಿ, ಮಹಾಂತೇಶ ಕವಟಗಿಮಠ, ಮೇಲೆ ಪ್ರಕರಣ ದಾಖಲ

ಬೆಳಗಾವಿ: ಸಂಸದೆ ಮಂಗಲಾ‌ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಮಾಜಿ ಸಚೇತಕ ಮಹಾಂತೇಶ ಕವಟಗಿಮಠ ಮತ್ತು ಮಲಪ್ರಭಾ ಶುಗರ್ಸ್ ಮಾಜಿ ಅಧ್ಯಕ್ಷ ಮೋಹನ ಸಂಬರಗಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಈ ಕುರಿತು ಕುರಿತು ನಂದಗಡ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾದೆ. ಇವರೆಲ್ಲರೂ ಮಂಗಳವಾರ ರಾತ್ರಿ ಖಾನಾಪುರ ತಾಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ ಲಿಂಗಾಯತ ಸಮಾಜದ 500 ಕ್ಕೂ ಹೆಚ್ಷು ಮುಖಂಡರನ್ನು ಸೇರಿಸಿ ಬಿಜೆಪಿ …

Read More »

ಬೆಳಗಾವಿಗೆ ಎಂಟ್ರಿಕೊಟ್ಟಿದ್ದಾರೆಪ್ರಧಾನಿ ನರೇಂದ್ರ ಮೋದಿ

ಬೆಳಗಾವಿ: ವಿಧಾನಸಭಾ ಚುನಾವಣೆಗೆ ಒಂದು ವಾರ ಮಾತ್ರ ಬಾಕಿ ಇದ್ದು, ಬಿಜೆಪಿ ಪರ ಮತ ಬೇಟೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಎಂಟ್ರಿಕೊಟ್ಟಿದ್ದಾರೆ. ಕೇಸರಿ ಪಾಳಯದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲವಾಡ ಕ್ರಾಸ್ ನಲ್ಲಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕವನ್ನು ದೇಶದಲ್ಲೇ ನಂಬರ್ 1 ರಾಜ್ಯವನ್ನಾಗಿ ಮಾಡುವುದಾಗಿ ಭರವಸೆ ನೀಡಿದರು. ಕಾಂಗ್ರೆಸ್, ಜೆಡಿಎಸ್ ನವರು ಕೇವಲ …

Read More »

ಅನಾರೋಗ್ಯ ಹಿನ್ನೆಲೆ ಕೊನೆಯುಸಿರೆಳೆದ ಖ್ಯಾತ ನಟ

ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ಹಾಗೂ ನಿರ್ದೇಶಕ ಮನೋಬಾಲ (Manobala)ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ನಟ ಮನೋಬಾಲ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಲಿವರ್​​ ಹಾನಿಯಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಳೆದ ಕೆಲ ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ. ತಮಿಳು ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರು, ಚಿತ್ರರಂಗದವರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. …

Read More »

ಕರ್ನಾಟಕ ಚುನಾವಣೆ 2023: 2018ಕ್ಕೆ ಹೋಲಿಸಿದರೆ ಅಪರಾಧ ಹಿನ್ನೆಲೆ ಹೊಂದಿದ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳ.. ADR ವರದಿ

ಬೆಂಗಳೂರು : ಈ ಬಾರಿಯ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಎಲ್ಲ ಪಕ್ಷಗಳಿಂದ ಅಥವಾ ಪಕ್ಷೇತರರಾಗಿ ಒಟ್ಟು 2615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಎಲ್ಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್​ಗಳನ್ನು ದೆಹಲಿಯ ಅಸೋಸಿಯೇಶನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್​ (ಎಡಿಆರ್) ಸಂಸ್ಥೆಯು ಪರಿಶೀಲನೆಗೆ ಒಳಪಡಿಸಿದೆ. ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ, ಹಣಕಾಸು ಹಿನ್ನೆಲೆ, ಅವರ ಶೈಕ್ಷಣಿಕ ಅರ್ಹತೆ ಹೀಗೆ ಹಲವಾರು ಮಾಹಿತಿಗಳನ್ನು ಕ್ರೋಢೀಕರಿಸಿ ಎಡಿಆರ್ ವರದಿಯೊಂದನ್ನು ತಯಾರಿಸಿದೆ. ಈ …

Read More »

ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ. ಕಾಂಗ್ರೆಸ್​ಗೆ 141 ಸೀಟು ಬರೋದು ಪಕ್ಕಾ ಎಂದು ಡಿ ಕೆ ಶಿ

ಬೆಂಗಳೂರು: ಬಜರಂಗದಳ ನಿಷೇಧ ಘೋಷಣೆ ವಾಪಸ್ ಪಡೆಯೋದಿಲ್ಲ. ಬಿಜೆಪಿಯವರು ಯಾವ ರೀತಿ ಬೇಕಾದ್ರೂ ನೆರೇಷನ್ ಮಾಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಹಮ್ಮಿಕೊಂಡಿದ್ದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜರಂಗದಳಕ್ಕೂ ಆಂಜನೇಯನಿಗೂ ಏನು ಸಂಬಂಧ? ನಾನು ಕೂಡ ರಾಮ, ಆಂಜನೇಯ, ಶಿವನ ಭಕ್ತ. ನಾನು ಕೂಡ ದಿನ ಹನುಮಾನ್ ಚಾಲೀಸಾ ಪಠಣ ಮಾಡುತ್ತೇನೆ. ಕುಂಬಳಕಾಯಿ ಕಳ್ಳ ಅಂದ್ರೆ ಇವರ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತಾ …

Read More »

ಮೊಬೈಲ್ ಲೈಟ್ ಹಾಕಿಸಿ ನನ್ನ ಸಂದೇಶ ಮನೆಮನೆಗೆ ತಲುಪಿಸಿ ಎಂ‌ದ ಮೋದಿ

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೂಡಬಿದಿರೆ ಕ್ಷೇತ್ರದ ಮೂಲ್ಕಿಯಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾರ್ಯಕರ್ತರಲ್ಲಿ ಮೊಬೈಲ್ ಫ್ಲ್ಯಾಶ್‌‌ ಲೈಟ್ ಹಾಕಿಸಿ ನನ್ನ ಸಂದೇಶ ಮನೆಮನೆಗೆ ಮುಟ್ಟಿಸಿ ಕರೆ ನೀಡಿದ್ದಾರೆ. ನನಗೊಂದು ವೈಯಕ್ತಿಕವಾಗಿ ಸಹಾಯ ಮಾಡುವಿರಾ? ಎಂದು ಜನರನ್ನು ಕೇಳಿದ ಮೋದಿ ಎಲ್ಲರಲ್ಲಿಯೂ ಮೊಬೈಲ್ ಟಾರ್ಚ್ ಬೆಳಗಿಸುವಂತೆ ಕೇಳಿಕೊಂಡರು. ಎಲ್ಲರೂ ಮೊಬೈಲ್ ಟಾರ್ಚ್ ಬೆಳಗಿದ ನಂತರ ಮಾತನಾಡಿದ ಮೋದಿ, ಮನೆಮನೆಗೆ ಹೋಗಿ ದಿಲ್ಲಿಯಿಂದ‌ …

Read More »

ಮಾಜಿ ಅಧಿಕಾರಿ ಬಳಿ 3 ದಿಗ್ಭ್ರಮೆಗೊಳಿಸುವಷ್ಟು ಕಂತೆ-ಕಂತೆ ಹಣ ಪತ್ತೆ: ತಂದೆ – ಮಗ ಅರೆಸ್ಟ್​

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಾಪ್ಕಾಸ್‌ನ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜಿಂದರ್ ಕುಮಾರ್ ಗುಪ್ತಾ ಮತ್ತು ಅವರ ಪುತ್ರ ಗೌರವ್​ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬುಧವಾರ ಬಂಧಿಸಿದೆ.   ಮಂಗಳವಾರ ವಿವಿಧ ಸ್ಥಳದಲ್ಲಿ ನಡೆದ ದಾಳಿ ಸಂದರ್ಭದಲ್ಲಿ 38 ಕೋಟಿ ರೂ.ಗೂ ಹೆಚ್ಚು ನಗದು ಪತ್ತೆಯಾಗಿದ್ದು, ಇದರ ಇಬ್ಬರನ್ನೂ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ.   ವಾಪ್ಕಾಸ್‌ (WAPCOS) ಅನ್ನು ಈ ಹಿಂದೆ ವಾಟರ್ ಅಂಡ್ …

Read More »